Breaking News

Daily Archives: ಸೆಪ್ಟೆಂಬರ್ 26, 2023

ಬಂದ್‌’ಬಸ್ತ್​ಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಸತ್ತ ಇಲಿ!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್​ ನಡೆಸುತ್ತಿವೆ. ಈ ಸಂದರ್ಭದಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ತಿಂಡಿಯಲ್ಲಿ ಇಲಿ ಪತ್ತೆಯಾಗಿದೆ. ಯಶವಂತಪುರ ಸಂಚಾರ ಠಾಣಾ ಸಿಬ್ಬಂದಿಯೊಬ್ಬರು ಪೊಲೀಸ್‌ ಇಲಾಖೆಯಿಂದ ಸರಬರಾಜು ಮಾಡಲಾಗಿದ್ದ ತಿಂಡಿಯ ಪೊಟ್ಟಣ ತೆರೆದಾಗ ಇಲಿ ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ವಿಷಯ ತಿಳಿಸಿದ್ದು, ಯಾರೂ ಸಹ ಆ ಆಹಾರ ಸೇವಿಸದಂತೆ ಸೂಚನೆ ನೀಡಿದ್ದಾರೆ. …

Read More »

ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟರಾದ ಬ್ಯಾಂಕ್ ಜನಾರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರ ಗುರುಪ್ರಸಾದ್ ಈಟಿವಿ ಭಾರತದ ಜೊತೆ ಮಾತನಾಡಿ, ”ತಂದೆಯವರಿಗೆ ಹೃದಯಾಘಾತ ಆಗಿಲ್ಲ. ಕೆಲವು ಮಾಧ್ಯಮಗಳಲ್ಲಿ ಹೃದಯಾಘಾತ ಅಂತಾ ಹೇಳಲಾಗುತ್ತಿದೆ. ಅದು ಸುಳ್ಳು. ಅವರಿಗೆ ಬಿಪಿ ಜಾಸ್ತಿಯಾಗಿ ಆಗಾಗ ಎದೆನೋವು ಕಾಣಿಸಿಕೊಳ್ಳುತ್ತದೆ. ಶುಕ್ರವಾರ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ನಡೆಯುತ್ತಿದೆ. ಹೃದಯಕ್ಕೆ ಎರಡು ಸ್ಟಂಟ್​ಗಳನ್ನು ಹಾಕಲಾಗಿದೆ. ಈಗ ಆರಾಮವಾಗಿದ್ದಾರೆ” ಎಂದು ಮಾಹಿತಿ ನೀಡಿದರು. …

Read More »

ನಿಮಗೆ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಖಡಕ್​ ವಾರ್ನಿಂಗ್​

ಬೆಂಗಳೂರು: ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ …

Read More »