Breaking News

Daily Archives: ಸೆಪ್ಟೆಂಬರ್ 27, 2023

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರೋನ್‌ ಹಾರಾಟ: ತನಿಖೆ ಪ್ರಾರಂಭ

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಪ್ರದೇಶದಲ್ಲಿ ಅಪರಿಚಿತ ಡ್ರೋನ್​ ಹಾರಾಟ ಮಾಡಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅಪರಿಚಿತ ಡ್ರೋನ್​ ಹಾರಾಟವನ್ನು ಪತ್ತೆ ಮಾಡಲು ತನಿಖೆಯನ್ನು ಆರಂಭಿಸಲಾಗಿದೆ. ರನ್ ವೇ ಪ್ರದೇಶದಿಂದ 6 ನಾಟಿಕಲ್ ದೂರದಲ್ಲಿ ಡ್ರೋನ್​ ಹಾರಾಟ ಕಂಡು ಬಂದಿದೆ. ಡ್ರೋನ್​ ಹಾರಾಟ ಕಂಡು ಬಂದ ತಕ್ಷಣವೇ ವಿಮಾನದ ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತ ಸಾಕಷ್ಟು ಭದ್ರತೆ ಇದ್ದರೂ …

Read More »

ಕಾವೇರಿ ನೀರು ವಿಚಾರವಾಗಿ ಕಮಲ-ದಳ ಜಂಟಿ ಹೋರಾಟ; ಸರ್ಕಾರಕ್ಕೆ ಬಿಎಸ್​ವೈ, ಹೆಚ್​ಡಿಕೆ ಎಚ್ಚರಿಕೆ ಸಂದೇಶ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಜಂಟಿ ಪ್ರತಿಭಟನೆ ನಡೆಸಿದರು.‌ ಪ್ರತಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಅವರನ್ನು ಡಿಎಂಕೆ ಏಜೆಂಟ್ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಳಿಕ ಇದು ಮೊದಲ ಜಂಟಿ ಹೋರಾಟವಾಗಿದ್ದು, ಧರಣಿಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಹೆಚ್ ಡಿ …

Read More »

ಕನ್ನಡ ಶಾಲೆಯ ಅಭಿವೃದ್ಧಿಗೆ ಟೊಂಕಕಟ್ಟಿ ನಿಂತ ಶಿಕ್ಷಕರು.. ವೇತನದಲ್ಲಿ ಪ್ರತಿ ತಿಂಗಳು 10 ಸಾವಿರ ರೂ. ನೀಡುವ ಗುರುಗಳು

ಮಂಗಳೂರು : ಜಿಲ್ಲೆಯಲ್ಲಿ ಕೆಲವು ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಕನ್ನಡ ಶಾಲೆಗಳಲ್ಲಿ ವಿವಿಧ ಮೂಲ ಸೌಕರ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ತಪ್ಪಿಸಲು ಮಂಗಳೂರಿನ ಅನುದಾನಿತ ಶಾಲೆಯ ಶಿಕ್ಷಕರು ಮಾದರಿ ಕಾರ್ಯವನ್ನು ಮಾಡುತ್ತಿದ್ದಾರೆ. ಮಂಗಳೂರಿನ ಗೋರಿಗುಡ್ಡದ ಯುಬಿಯಂಸಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಿಟ್ಟೆಲ್ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿತ್ತು. ಜೊತೆಗೆ ಶಿಕ್ಷಕರು ನಿವೃತ್ತರಾಗುತ್ತಿದ್ದಂತೆ ಶಿಕ್ಷಕರ ಸಂಖ್ಯೆಯು ಕಡಿಮೆಯಾಗುತ್ತಿತ್ತು. ಈ …

Read More »

ಬಾಕ್ಸಿಂಗ್ಸ್​ನಲ್ಲಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ ನಿಖತ್ ಜರೀನ್.. ಡ್ರೆಸ್ಸೇಜ್ ಇಂಡಿವಿಜುವಲ್​ನಲ್ಲಿ ಪದಕ ನಿರೀಕ್ಷೆ

ಹ್ಯಾಂಗ್‌ಝೌ (ಚೀನಾ): ಎರಡು ಬಾರಿಯ ವಿಶ್ವ ಚಾಂಪಿಯನ್ ನಿಖತ್ ಜರೀನ್ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಚೊರೊಂಗ್ ಬಾಕ್ ವಿರುದ್ಧ 5-0 ಅಂತರದಿಂದ ಜಯಗಳಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದರು. ಮಹಿಳೆಯರ 50 ಕೆಜಿ ವರ್ಗದ 16 ರ ಸುತ್ತಿನಲ್ಲಿ ನಿಖತ್ ತನ್ನ ಕೊರಿಯಾದ ಎದುರಾಳಿಯ ಮೇಲೆ ಪ್ರಾಬಲ್ಯ ಸಾಧಿಸಿದರು. ಅಂತಿಮವಾಗಿ ಅವರು 5-0 ಪಾಯಿಂಟ್‌ಗಳಿಂದ ಪಂದ್ಯವನ್ನು ಗೆದ್ದರು. ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ 57-63.5 ಸುತ್ತಿನ 16 ಪಂದ್ಯಗಳಲ್ಲಿ, …

Read More »

ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ.. 244 ಕೋಟಿ ರೂ. ಆದಾಯ ಸಂಗ್ರಹ

ಬೆಂಗಳೂರು : ಬುಧವಾರ ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ನೋಂದಣಿ- ದಸ್ತಾವೇಜು ಪ್ರಕ್ರಿಯೆ ನಡೆದಿರುವುದು ಹಾಗೂ ಗರಿಷ್ಠ ಶುಲ್ಕ ಸಂಗ್ರಹ ಆಗಿರುವುದು ಹೊಸ ದಾಖಲೆಯಾಗಿದೆ.   ಕಳೆದ ಸೋಮವಾರವಷ್ಟೇ 15936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 158.28 ಕೋಟಿ ರೂ. ಆದಾಯ …

Read More »

ಕಳಸ ಸರ್ಕಾರಿ ಆಸ್ಪತ್ರೆಗೆ ಇಲ್ಲ ಒಬ್ಬನೇ ಒಬ್ಬ ಡಾಕ್ಟರ್

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ಒಬ್ಬನೇ ಒಬ್ಬ ವೈದ್ಯನಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಕಳಸ ಗುಡ್ಡಗಾಡು ಪ್ರದೇಶದ ಅತಿ ಹೆಚ್ಚು ಬಡವರು ಹಾಗೂ ಕೂಲಿ ಕಾರ್ಮಿಕರ ಹೊಂದಿರುವಂತಹ ತಾಲೂಕಾಗಿದೆ. ಕಳಸ ತಾಲೂಕು ಕೇಂದ್ರವಾಗಿ ಕೆಲವು ವರ್ಷಗಳೇ ಕಳೆಯುತ್ತಾ ಬಂದರೂ ಇಲ್ಲಿನ ಸಮಸ್ಯೆಗಳಿಗೆ ಮಾತ್ರ ಪರಿಹಾರ ಸಿಕ್ಕಿಲ್ಲ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಅತಿ ಹೆಚ್ಚು ಕೂಲಿ ಕಾರ್ಮಿಕರು, ತೋಟದಲ್ಲಿ ಕೆಲಸ ಮಾಡುವ ಬಡವರು ಈ ತಾಲೂಕು ಕೇಂದ್ರದಲ್ಲಿ ಹೆಚ್ಚಾಗಿ …

Read More »

ಲೋಕಸಭೆ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್​ ಮೈತ್ರಿ.. ದಳ ಅವಕಾಶವಾದಿ ಪಕ್ಷ: ಕಾಂಗ್ರೆಸ್ ಟೀಕೆ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಜನತಾ ದಳ (ಜಾತ್ಯತೀತ) ಮತ್ತು ಬಿಜೆಪಿ ಮಾಡಿಕೊಂಡಿರುವ ಮೈತ್ರಿಗೆ ಆರಂಭದಲ್ಲೇ ವಿಘ್ನ ಶುರುವಾಗಿದೆ. ಮೈತ್ರಿ ಪ್ರಕಟವಾದ ಕೆಲವೇ ದಿನಗಳಲ್ಲಿ ಹಲವಾರು ಮುಸ್ಲಿಂ ನಾಯಕರು ಜೆಡಿಎಸ್​ ತೊರೆದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಈ ಹೊಂದಾಣಿಕೆ ಮುಂದಿನ ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಕಾಂಗ್ರೆಸ್​ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್-ಬಿಜೆಪಿ ಮೈತ್ರಿ ಚುನಾವಣೆಯಲ್ಲೂ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿ …

Read More »

ಚಿಕ್ಕೋಡಿ: ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿ ವಿಶಿಷ್ಟ ರೀತಿಯಲ್ಲಿ ಹರಕೆ ತೀರಿಸಿದ ಭಕ್ತ

ಚಿಕ್ಕೋಡಿ(ಬೆಳಗಾವಿ): ದೇವರಿಗೆ ಹರಕೆ ತೀರಿಸುವುದು ಎಂದರೆ ಉರುಳು ಸೇವೆ ಮಾಡುವುದು, ಪಾದಯಾತ್ರೆ ಮಾಡುವುದು, ಉಪವಾಸ, ಬರಿಗಾಲಲ್ಲಿ ಬೆಟ್ಟ ಹತ್ತುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೋರ್ವ ಭಕ್ತ ತನ್ನ ಹರಕೆಯನ್ನು ವಿಶಿಷ್ಟವಾಗಿ ತೀರಿಸುವ ಮೂಲಕ ಗಮನ ಸೆಳೆದಿದ್ದಾನೆ. ಈ ಯುವಕ ಬರೋಬ್ಬರಿ 48 ಕಿ.ಮೀ ದೂರ ಟ್ರ್ಯಾಕ್ಟರ್​ಗೆ ಟ್ರಾಲಿ ಜೋಡಿಸಿಕೊಂಡು ರಿವರ್ಸ್ ಡ್ರೈವ್ ಮಾಡಿಕೊಂಡು ಹೋಗಿ ಹರಕೆ ತೀರಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ನಿವಾಸಿ 25 ವರ್ಷದ ಮಹೇಶ ಅಥಣಿ …

Read More »

ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಧಾರವಾಡ : ರಾಷ್ಟ್ರಧ್ವಜ ತಯಾರಿಸುವ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಿಕ್ಕಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಘ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿಗೆ ಬಾಜನವಾಗಿದ್ದು, ಅಕ್ಟೋಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ. ಐದು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿ ಇದಾಗಿದೆ‌. ವಿಶ್ರಾಂತ ನ್ಯಾಯಮೂರ್ತಿ ಬಿ ವೀರಪ್ಪ ಅಧ್ಯಕ್ಷತೆ ಸಮಿತಿಯಿಂದ ಪ್ರಶಸ್ತಿ ಆಯ್ಕೆಯಾಗಿದೆ. ಸಂಘ ಐದು ದಶಕಗಳಿಂದ …

Read More »

ಮದ್ಯದ ಅಂಗಡಿಗಳನ್ನು ತೆರೆಯಲು ಪರವಾನಗಿ ನೀಡುವುದನ್ನು ವಿರೋಧಿಸಿ ಎಐಎಂಎಸ್‌ಎಸ್‌ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 1000ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಅಬಕಾರಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್)ಯು ಖಂಡಿಸಿದ್ದು, ಬೆಂಗಳೂರು ಜಿಲ್ಲಾ ಸಮಿತಿಯಿಂದ ಬುಧವಾರ ನಗರದ ಫ್ರೀಡಂಪಾರ್ಕನಲ್ಲಿ ಪ್ರತಿಭಟನೆ ನಡೆಸಲಾಯಿತು.   ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಎಂಎಸ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಎ ಶಾಂತ ಅವರು, ಈಗಾಗಲೇ ಮದ್ಯಪಾನದಂತಹ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದಿವೆ. ಇಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳು ಹಾಗೂ …

Read More »