Breaking News

Monthly Archives: ಸೆಪ್ಟೆಂಬರ್ 2023

ನೆಲಕ್ಕೆ ಎಸೆದು ನಾಲ್ಕು ತಿಂಗಳ ಮಗುವನ್ನು ಕೊಂದ ಪೊಲೀಸ್​ ಕಾನ್​ಸ್ಟೇಬಲ್​

ಚಿಕ್ಕೋಡಿ: ವೃತ್ತಿಯಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಆಗಿರುವ ವ್ಯಕ್ತಿಯೊಬ್ಬ​ ತನ್ನ 4 ತಿಂಗಳ ಮಗುವನ್ನು ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಮುಡಲಗಿ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್​ ಕಾನ್​ಸ್ಟೆಬಲ್​ ಬಸಪ್ಪ ಬಳುಣಕಿ ತನ್ನ ಮಗುವನ್ನೇ ಕೊಂದ ಆರೋಪಿ. ಈತ ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ …

Read More »

ಒಪಿಎಸ್ ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಶಿಕ್ಷಕರಿಂದ ಬೈಕ್ ರ್ಯಾಲಿ

ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಶಿಕ್ಷಕರ ಫೆಡರೇಶನ್​​ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದ್ದು, ಬುಧವಾರ ಬೆಳಗಾವಿಗೆ ಯಾತ್ರೆಯು ಆಗಮಿಸಿತು. …

Read More »

ಧಾರವಾಡದಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಾನ್​ಸ್ಟೇಬಲ್​ ಸಾವು, ಮಹಿಳಾ ಸಿಬ್ಬಂದಿಗೆ ಗಂಭೀರ ಗಾಯ

ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್​ಸ್ಟೇಬಲ್​ವೊಬ್ಬರು​ ಸ್ಥಳದಲ್ಲೇ ಸಾನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬೈಪಾಸ್‌ನಲ್ಲಿ ಬುಧವಾರ ನಡೆದಿದೆ. ಹುಚ್ಚೇಶ ಹಿರೇಗೌಡರ (37) ಮೃತ ಕಾನ್​ಸ್ಟೇಬಲ್. ಬೈಕ್​ ಹಿಂಬದಿ ಕುಳಿತಿದ್ದ ಮಹಿಳಾ ಕಾನ್​ಸ್ಟೇಬಲ್ ಲಕ್ಷ್ಮೀ ಎಂಬುವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದೆ. ಛಬ್ಬಿ ಗಣೇಶೋತ್ಸವ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಬೈಕ್​ನಲ್ಲಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರು ಪಲ್ಟಿ.. …

Read More »

ಹಾವೇರಿಯಲ್ಲಿ ಅನಾವೃಷ್ಠಿಯಿಂದ ಬೆಳೆ ಹಾಳು.. ಕೇಳುವವರಿಲ್ಲ ರೈತರ ಗೋಳು

ಹಾವೇರಿ : ಜಿಲ್ಲೆಯ ಅನ್ನದಾತರ ಗೋಳು ಕೇಳುವವರಿಲ್ಲದಂತಾಗಿದೆ. ಅನಾವೃಷ್ಠಿಯಿಂದ ಬೆಳೆಗಳು ಹಾಳಾಗಿದ್ದು, ರೈತರು ಅವುಗಳನ್ನ ಹರಗಿ ನಾಶಪಡಿಸುತ್ತಿದ್ದಾರೆ. ಇತ್ತ ಕೆಲ ರೈತರು ಕಬ್ಬನ್ನೇ ನಂಬಿದ್ದು ಮುಂಗಾರು ಕೈಕೊಟ್ಟಿದ್ದರಿಂದ ಕಬ್ಬು ಸಹ ನಿರೀಕ್ಷಿಸಿದ ಪ್ರಮಾಣದಲ್ಲಿ ಇಳುವರಿ ಬರದಂತಾಗಿದೆ. ಜಿಲ್ಲೆಯಲ್ಲಿ ಎರಡು ಸಕ್ಕರೆ ಕಾರ್ಖಾನೆಗಳಿದ್ದು, ಶಿಗ್ಗಾಂವಿ ತಾಲೂಕು ಕೋಣನಕೆರೆ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಈಗಾಗಲೇ ಟನ್ ಕಬ್ಬಿಗೆ 3070 ರೂಪಾಯಿ ನಿಗದಿ ಮಾಡಿದೆ. ಆದರೆ, ತಮ್ಮ ಕಬ್ಬಿಗೆ ಕನಿಷ್ಠ ಟನ್‌ಗೆ 3500 ರೂಪಾಯಿ …

Read More »

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರೈತರು, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಸ್ಯಾಂಡಲ್​ವುಡ್ ನಟರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದು ನೀರು ಹರಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅನ್ನದಾತರು ಹಾಗೂ ವಿವಿಧ ಸಂಘಟನೆಗಳ …

Read More »

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.   ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ …

Read More »

ಸನಾತನ ಧರ್ಮದ ಕುರಿತು ಮತ್ತೊಮ್ಮೆ ಅವಹೇಳನಕಾರಿಯಾಗಿ ಮಾತಾಡಿದ ಉದಯನಿಧಿ!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಇನ್ನೊಮ್ಮೆ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅವರು ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿ ಆಗುವಂತಾಗಿದೆ. ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್​; ಇಲ್ಲಿದೆ ವಿವರ.. ಸನಾತನ ಧರ್ಮ ಡೆಂಘಿ-ಮಲೇರಿಯಾ ಇದ್ದ ಹಾಗೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಉದಯನಿಧಿ, ಆ ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದರು. ಸನಾತನ ಧರ್ಮದ ಕುರಿತು ಉದಯನಿಧಿ ಹೀಗೆ …

Read More »

ಕೂದಲು ಆರಿಸುವ ವಿಚಾರಕ್ಕೆ ಗಲಾಟೆ.. ಬಾಲಕನ ಕೊಂದು ಬಾವಿಗೆಸೆದ ಕಿರಾತಕರು

ಚಿಕ್ಕೋಡಿ : ಕೂದಲು ಆರಿಸುವ ವಿಚಾರಕ್ಕೆ ದುಷ್ಕರ್ಮಿಗಳು ಬಾಲಕನನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಪ್ರಕರಣ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.   ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದ ಲಾಲ್ಯಾನಕೋಡಿಯಲ್ಲಿ ಘಟನೆ ನಡೆದಿದೆ. ಕಾಮಪ್ಪ ಕುಂಚಿಕೊರವ (17) ಕೊಲೆಗೀಡಾದ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿ, ಈತ ಕೂದಲು ಆರಿಸುತ್ತ ಹಾರೂಗೇರಿ ಪಟ್ಟಣಕ್ಕೆ ಆಗಮಿಸಿದ್ದಾನೆ. ಆಗ ಸ್ಥಳೀಯವಾಗಿ ಕೂದಲು …

Read More »

ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಪಾಗಲ್ ಪ್ರೇಮಿ

ಕೋಲಾರ: ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್​ನ ಚಾಂಪಿಯನ್ ರೀಫ್ ನಗರದಲ್ಲಿರುವ ಖಾಸಗಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದಿದೆ.   ದ್ವಿತೀಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ಪ್ರೀತಮ್ ಪ್ರಭು ಎಂಬ ಯುವಕ, ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದರಂತೆ ಇಂದು ಸಹ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ …

Read More »

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು: ಸಿಡಬ್ಲ್ಯೂಎಂಎ ಆದೇಶ ಮರುಪರಿಶೀಲನೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ರಾಜ್ಯ ಸರ್ಕಾರ

ನವದೆಹಲಿ: ನೀರಿನ ತೀವ್ರ ಕೊರತೆ ಇದ್ದರೂ, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಆದೇಶಿಸಿದ್ದು, ಅದನ್ನು ಮರುಪರಿಶೀಲನೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಜೊತೆಗೆ ಇದೊಂದು ವಿಕೃತ ಮತ್ತು ಕಾನೂನುಬಾಹಿರ ಆದೇಶವಾಗಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದೆ. ಮುಂಗಾರು ಮಳೆಯ ಕೊರತೆಯಿಂದಾಗಿ ಅಣೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿಲ್ಲ. ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ರಾಜ್ಯದೆಲ್ಲೆಡೆ ವರುಣನ …

Read More »