ಬೆಳಗಾವಿ: ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಪರಸ್ಪರ ಹೊಡೆದಾಡಿಕೊಂಡು ಅದರಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದಾರೆ. ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ತಿಗಡೊಳ್ಳಿಯ ವಿಜಯ ಆರೇರ್(32) ಕೊಲೆಯಾದ ಯುವಕ. …
Read More »Monthly Archives: ಸೆಪ್ಟೆಂಬರ್ 2023
ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ: ಸುತ್ತೋಲೆ ಹೊರಡಿಸಿದ ಸಿಎಸ್
ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್) ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಕೆಲ ವರ್ಷಗಳ ಹಿಂದೆಯೇ ಆದೇಶಿಸಲಾಗಿತ್ತು. …
Read More »ಶಕ್ತಿ ಯೋಜನೆ ಎಫೆಕ್ಟ್?: ಸಾರಿಗೆ ಇಲಾಖೆಯ ಪ್ರಮುಖ ಯೋಜನೆಗಳಿಗೆ ಬಿಡುಗಡೆಯಾಗದ ಬಿಡಿಗಾಸು
ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯೂ ಒಂದು. ಸಾಮಾನ್ಯ ಸರ್ಕಾರಿ ಬಸ್ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಅನುಷ್ಠಾನದ ಉತ್ಸಾಹದಲ್ಲಿ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ಇತರ ಪ್ರಮುಖ ಯೋಜನೆಗಳನ್ನು ನಿರ್ಲಕ್ಷಿಸಿದೆಯೇ? ಎಂಬ ಅನುಮಾನ ಮೂಡಿದೆ. ‘ಶಕ್ತಿ ಯೋಜನೆ’ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಅನುಷ್ಠಾನ ಮಾಡಿದ ಮೊದಲ ಗ್ಯಾರಂಟಿ ಯೋಜನೆ. 2023-24ರ ಸಾಲಿನಲ್ಲಿ ಮಹತ್ವಾಕಾಂಕ್ಷೆಯ ಈ ಗ್ಯಾರಂಟಿ ಯೋಜನೆಗೆ …
Read More »ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪೋಷಣ್ ಅಭಿಯಾನದ ಅಡಿ ಈ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ ಈ ಹುದ್ದೆ ಭರ್ತಿ ನಡೆಸಲಾಗುವುದು. ಒಟ್ಟು ಐದು ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಹುದ್ದೆ ವಿವರ: ಪೋಷಣ್ ಅಭಿಯಾನ ಯೋಜನೆ ಅಡಿ …
Read More »ದಳಪತಿ ವಿಜಯ್ ನಟನೆಯ ‘ಲಿಯೋ’ ಚಿತ್ರದ ಕನ್ನಡ ಪೋಸ್ಟರ್ ಔಟ್
ಚಿತ್ರತಂಡ ‘ಲಿಯೋ’ ಸಿನಿಮಾದ ಕನ್ನಡ ಪೋಸ್ಟರ್ ಅನ್ನು ಅನಾವರಣಗೊಳಿಸಿದೆ. ಕಾಲಿವುಡ್ ಸೂಪರ್ಸ್ಟಾರ್ ನಟ ದಳಪತಿ ವಿಜಯ್ ಅವರ ‘ಲಿಯೋ’ 2023ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಲೋಕೇಶ್ ಕನಕರಾಜ್ ನಿರ್ದೇಶನದ ಈ ಸಿನಿಮಾವು ಅಕ್ಟೋಬರ್ನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಶೂಟಿಂಗ್ ಅಂತಿಮ ಹಂತಕ್ಕೆ ತಲುಪಿದೆ. ಇದೀಗ ಚಿತ್ರತಂಡ ‘ಲಿಯೋ’ದ ಕನ್ನಡ ಪೋಸ್ಟರ್ ಅನ್ನು ಅನಾವರಣಗೊಳಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ‘ಲಿಯೋ’ ಸಿನಿಮಾದ ಕನ್ನಡ ಪೋಸ್ಟರ್ ಸಖತ್ ವೈರಲ್ ಆಗುತ್ತಿದೆ. ‘ಲಿಯೋ’ ಸಿನಿಮಾದ ನಿರ್ಮಾಣ …
Read More »ಜಲಸಂಪನ್ಮೂಲ ಸಚಿವರು ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ:H.D.K.
ರಾಮನಗರ: ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಿದ್ದರೆ ತಪ್ಪಾಗುತ್ತದೆ ಎಂದು ಜಲಸಂಪನ್ಮೂಲ ಮಂತ್ರಿಗಳು ರಾತ್ರಿಯಿಂದ ನೀರು ಬಿಟ್ಟಿದ್ದಾರೆ. ನಿನ್ನೆಯೇ ಸಚಿವರು ತರಾತುರಿಯಲ್ಲಿ ಈ ನಿರ್ಧಾರ ಮಾಡಿ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹರಿಹಾಯ್ದರು. ರಾಮನಗರ ಜಿಲ್ಲೆ ಬಿಡದಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಿದ್ದು, ಆ ಸಮಯದಲ್ಲಿ ಕಾವೇರಿ ನೀರಾವರಿ ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡು ಒತ್ತಡ …
Read More »ಹಾವೇರಿ: ಒನ್ಟೈಮ್ ಸೆಟಲ್ಮೆಂಟ್ಗೆ ಸ್ಪಂದಿಸದ ಆರೋಪ.. ಬ್ಯಾಂಕ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ
ಹಾವೇರಿ: ಒಟಿಎಸ್ ಸೌಲಭ್ಯದಿಂದ ವಂಚಿತ ರೈತನೊಬ್ಬ ಬ್ಯಾಂಕನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ನಲ್ಲಿ ಬೆಳೆಸಾಲ ಮಾಡಿದ್ದ ಸಂಜೀವ ಕುರುಬರ ಅನ್ನೋ ರೈತ ಸಂಜೀವ್ ಆತ್ಮಹತ್ಯೆಗೆ ಮುಂದಾಗಿದ್ದ. ಸಂಜೀವ್ ಬ್ಯಾಂಕನಲ್ಲಿ 3 ಲಕ್ಷದ 45 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದಾನೆ. ಈ ಸಾಲಕ್ಕೆ ವರ್ಷದಿಂದ ವರ್ಷಕ್ಕೆ ಬಡ್ಡಿ ಹೆಚ್ಚಾಗಿ ಸುಮಾರು 10 ಲಕ್ಷ ರೂಪಾಯಿ ಆಗಿ ಬೆಳೆದಿದೆ. ಒನ್ ಟೈಮ್ ಸೆಟಲಮೆಂಟ್ (ಒಟಿಎಸ್) …
Read More »ನಿವೃತ್ತ ಶಿಕ್ಷಕನಿಂದ ಮಣ್ಣಿನ ಗಣಪತಿ ನಿರ್ಮಾಣ; ತಂದೆಯ ನೆರವಿಗೆ ವಿದೇಶದಿಂದ ಬರುವ ಮಕ್ಕಳು
ವಿಜಯಪುರ: ನಿಮಗೆ ಗಣೇಶನ ಮೂರ್ತಿ ಬೇಕಿದ್ದರೆ ನೀವು ಇವರ ಬಳಿ ಒಂದು ತಿಂಗಳ ಮುಂಚಿತವೇ ಕಾಯ್ದಿರಿಸಬೇಕು. ಮೂರ್ತಿಗಳ ಆಕರ್ಷಕ ವಿನ್ಯಾಸವೇ ಇದಕ್ಕೆ ಕಾರಣ. ಹೌದು, ಇವರ ಹೆಸರು ಮನೋಹರ ಪತ್ತಾರ. ನಿವೃತ್ತ ಚಿತ್ರಕಲಾ ಶಿಕ್ಷಕರು. ಶಿಲ್ಪ ಅಕಾಡೆಮಿ ನಿರ್ದೇಶಕರಾಗಿದ್ದವರು. ತಲೆತಲಾಂತರದಿಂದ ಬಳುವಳಿಯಾಗಿ ಬಂದ ಆಭರಣ ತಯಾರಿಕೆ ಇವರ ಮೂಲ ಕಸುಬು. ಆದರೆ ಇವರ ಕುಟುಂಬ ಆಯ್ದುಕೊಂಡಿದ್ದು ಮಾತ್ರ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಕೆಲಸ. ಇವರ ಪುತ್ರರು ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿದ್ದಾರೆ. ಗಣೇಶ …
Read More »ಲೋಕಸಭಾ ಚುನಾವಣೆ 2024: ಬಾಗಲಕೋಟೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ
ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಇನ್ನು 9 ತಿಂಗಳು ಬಾಕಿ ಇರುವಾಗಲೇ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನಮಂತನ ಬಾಲದಂತೆ ಬೆಳೆಯುತ್ತಿದ್ದು, ನಾನಾ..ನೀನಾ ಎಂಬ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಸೋಲು ಕಂಡಿರುವ ವೀಣಾ ಕಾಶಪ್ಪನವರ ಮತ್ತೆ ಅಖಾಡಕ್ಕಿಳಿಯುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಹಲವರು ತಾವೂ ಕೂಡ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗೆ …
Read More »ಚೈತ್ರಾ ಕುಂದಾಪುರಗೆ ಸೇರಿದ ಕಾರು ಮುಧೋಳದಲ್ಲಿ ಪತ್ತೆ..
ಬಾಗಲಕೋಟೆ: ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣದ ಹಿನ್ನೆಲೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಚೈತ್ರಾ ಕುಂದಾಪುರ ಅವರಿಗೆ ಸೇರಿದ ಕಾರು ಪತ್ತೆಯಾಗಿದೆ. ಈ ಪ್ರಕರಣ ಮುಧೋಳ ಪಟ್ಟಣದವರೆಗೆ ವ್ಯಾಪಿಸಿದ್ದು ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರ್ ಬಿ ತಿಮ್ಮಾಪುರ ಹೇಳಿದ್ದಾರೆ. ಬಾಗಲಕೋಟೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ಡೀಲ್ನಲ್ಲಿ ದೊಡ್ಡ ಜಾಲವೇ ಇರಬಹುದು ಎಂಬ ಭಾವನೆ ನನ್ನದು. ಕುಂದಾಪುರ ಎಲ್ಲಿ, ಮುಧೋಳ ಎಲ್ಲಿ, ಪೊಲೀಸ್ ಇಲಾಖೆ …
Read More »