Breaking News

Monthly Archives: ಸೆಪ್ಟೆಂಬರ್ 2023

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಜೈಲಿಂದ ಬಿಡುಗಡೆಯಾಗಿದ್ದಾರೆ. ಗೂಂಡಾ ಕಾಯ್ದೆ ರದ್ದಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಕಳೆದ ಆಗಸ್ಟ್ 11ರಂದು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿ‌ಡಲು ಸಾಕಷ್ಟು ಕಾರಣಗಳಿಲ್ಲ ಎಂದು‌ …

Read More »

ನಾನು ನಾನೇ, ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ಎಲ್ಲರೂ ಎರಡನೇ ದೇವರಾಜ ಅರಸು ಅಂತಾರೆ. ಆದರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರರು. ಕೆಲವರು ನನ್ನನ್ನು ಎರಡನೇ ದೇವರಾಜು ಅರಸು ಅಂತಾರೆ. ಅದು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಪಪಡಿಸಿದರು. ಇತ್ತೀಚೆಗೆ ವಿಧಾನ ಪರಿಷತ್ ಬಿ ಕೆ …

Read More »

ಪ್ರಧಾನಿ ಹುಟ್ಟುಹಬ್ಬದ ಹಿನ್ನೆಲೆ ರಕ್ತದಾನ ಶಿಬಿರ, ಆಯುಷ್ಮಾನ್​ ಕಾರ್ಡ್​ ನೋಂದಣಿ, ಮೋದಿ ಕ್ರಿಕೆಟ್ ಕಪ್ ಆಯೋಜನೆ

ಬೆಂಗಳೂರು: ಭಾನುವಾರ( ಸೆ.17) ಪ್ರಧಾನಿ ನರೇಂದ್ರ ಮೋದಿ ಅವರ 73ನೇ ವರ್ಷದ ಜನ್ಮದಿನ ಆಚರಿಸಲಾಯಿತು. ಈ ಪ್ರಯುಕ್ತ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ರಕ್ತದಾನ ಶಿಬಿರ, ಆಯುಷ್ಮಾನ್​ ಭಾರತ್ ಕಾರ್ಡ್​ಗಳ ನೋಂದಣಿ ಹಾಗೂ ಮೋದಿ ಕ್ರಿಕೆಟ್ ಕಪ್ ಆಯೋಜನೆ ಮಾಡಲಾಗಿತ್ತು. ಮೋದಿ ಕ್ರಿಕೆಟ್ ಕಪ್ ಆಯೋಜನೆಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯ ಅವರು, ಪ್ರಧಾನಿ ಮೋದಿಯವರ ಜನ್ಮದಿನದ ಪ್ರಯುಕ್ತ ಇಡೀ ದೇಶಾದ್ಯಂತ ಒಂದು …

Read More »

ಗಣಪನ ಆಗಮನಕ್ಕೆ ಕುಂದಾನಗರಿ ಸಜ್ಜಾಗಿದ್ದು

ಬೆಳಗಾವಿ: ಗಣಪನ ಆಗಮನಕ್ಕೆ ಕುಂದಾನಗರಿ ಸಜ್ಜಾಗಿದ್ದು, ಭರದ ಸಿದ್ಧತೆಯಲ್ಲಿ ಜನರು ತೊಡಗಿದ್ದಾರೆ. ಮಾರುಕಟ್ಟೆ ಪ್ರದೇಶಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆದಿದೆ. ಇನ್ನು, ಪೂಜಾ ಸಾಮಗ್ರಿ ಖರೀದಿಗೆ ಜನ ಅಂಗಡಿಗಳಿಗೆ ಮುಗಿ ಬಿದ್ದಿರುವುದು ಇಂದು ಕಂಡು ಬಂತು. ಹೌದು.. ಇಡೀ ರಾಜ್ಯದಲ್ಲೇ ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವ ಆಚರಿಸಲಾಗುತ್ತದೆ‌. ಈ ಸಲ ಸೆ.18ರಂದು ಕೆಲವರು ಚೌತಿ ಆಚರಿಸುತ್ತಿದ್ದರೆ ಮತ್ತೊಂದಿಷ್ಟು ಜನ 19ರಂದು ಆಚರಿಸಲು ಮುಂದಾಗಿದ್ದಾರೆ. ಹಾಗಾಗಿ ಭಾನುವಾರ ಬೆಳಗಾವಿಯ ಗಣಪತಿ ಗಲ್ಲಿ, ಖಡೇಬಜಾರ್, …

Read More »

ಆಂಧ್ರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಥಣಿಯ ಆರು ಮಂದಿ ಸಾವು; ಸ್ವಗ್ರಾಮದಲ್ಲಿ ನೆರವೇರಿತು ಅಂತ್ಯಕ್ರಿಯೆ

ಚಿಕ್ಕೋಡಿ : ಸೆಪ್ಟೆಂಬರ್ 15 ರಂದು ತಿರುಪತಿಯ ತಿಮ್ಮಪ್ಪನ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ಆಗಮಿಸುತ್ತಿದ್ದ ಅಥಣಿ ತಾಲೂಕಿನ ಬಡಚಿ ಗ್ರಾಮದ ಭಕ್ತರ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು. ಇವತ್ತು ಅವರ ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ, ಕಡಪ-ಚಿತ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿ ಐದು ಜನ ಸಾವು ಸಂಭವಿಸಿ 11 ಜನರಿಗೆ ಗಾಯಗಳಾಗಿತ್ತು. ಇದರಲ್ಲಿ ಮೂವರ ಸ್ಥಿತಿ …

Read More »

ಗದಗ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗಣಪತಿಗಳ ವಿಗ್ರಹ ಖರೀದಿ ಭರ್ಜರಿಯಾಗಿ ನಡೆದಿದೆ.

ಗದಗ : ಗಣೇಶ ಹಬ್ಬ ಅಂದ್ರೆ ಸಡಗರ ಸಂಭ್ರಮ ಇದ್ದೇ ಇರುತ್ತೆ.‌ ನಗರದಲ್ಲಿ ಹಬ್ಬಕ್ಕೆ ಮುಂಚಿನ ದಿನವೇ ಖರೀದಿ ಭರಾಟೆ ಬಲು ಜೋರಾಗಿದೆ. ಮಾರ್ಕೆಟ್​ನತ್ತ ಬರುತ್ತಿರೋ ಜನ ತಮಗೆ ಇಷ್ಟವಾದ ಮೂರ್ತಿಗಳನ್ನ ಬುಕ್ ಮಾಡಿದ್ದಾರೆ. ಪರಿಸರ ಸ್ನೇಹಿ ಗಣಪತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸಬೇಕು ಅನ್ನೋ ನಿಟ್ಟಿನಲ್ಲಿ ಗದಗ ಜಿಲ್ಲೆ ತಯಾರಕರು ಒಂದೇ ಸೂರಿನಡಿ ಗಣೇಶ ಮೂರ್ತಿಗಳ ಮಾರಾಟ ಮಾಡೋದಕ್ಕೆ ಮುಂದಾಗಿದ್ದು, ಪರಿಸರ ಸ್ನೇಹಿ ಗಣಪಗಳ ಮಾರಾಟವೂ ಭರ್ಜರಿಯಾಗಿ ನಡೀತಿದೆ. ಗದಗ ನಗರದ ಎಪಿಎಂಸಿ …

Read More »

ಕಳೆದ ವರ್ಷಕ್ಕಿಂತ ತುಟ್ಟಿಯಾದ ಗೌರಿ ಗಣೇಶನ ಮಣ್ಣಿನ ಮೂರ್ತಿಗಳು

ಬೆಂಗಳೂರು: ರಾಜ್ಯಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಚೌತಿಯಲ್ಲಿ ಗೌರಿ ಗಣೇಶ ಮೂರ್ತಿಗಳ ದರ ಹೆಚ್ಚಾಗಿದ್ದು, ಅಲಂಕಾರಿಕ ವಸ್ತು, ಸರಕು ಸಾಗಣೆ ಕಾರಣದಿಂದ ಶೇ. 10 ರಿಂದ 20ರಷ್ಟು ಬೆಲೆ ಜಾಸ್ತಿಯಾಗಿದೆ. ಮನೆಗಳಲ್ಲಿ ಪೂಜಿಸಲ್ಪಡುವ ಚಿಕ್ಕ ಮೂರ್ತಿಗಳಿಂದ, ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲ್ಪಡುವ ದೊಡ್ಡ ಗಾತ್ರದ ಗಣೇಶ ವಿಗ್ರಹಗಳನ್ನು ಭಾನುವಾರ ಜನತೆ ಕೊಂಡೊಯ್ಯುತ್ತಿದ್ದುದು ನಗರಗಳಲ್ಲಿ ಕಂಡುಬಂತು. ಚೌತಿಗಾಗಿ ನಗರದ ಬೀದಿ ಬೀದಿಗಳಲ್ಲಿ ಗಣೇಶ ವಿಗ್ರಹಗಳು ಮಾರಾಟವಾಗುತ್ತಿವೆ. …

Read More »

ಪಂಚ ಗ್ಯಾರಂಟಿ: ಇಲ್ಲಿವರೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನದ ಸಂಪೂರ್ಣ ವಿವರ

ಬೆಂಗಳೂರು: ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ.‌ ಗ್ಯಾರಂಟಿಗಳ ಜಾರಿಗೆ ತೊಡಕಾಗದಂತೆ ಅನುದಾನ ಬಿಡುಗಡೆ ಮಾಡುತ್ತಿದೆ. ಆಗಸ್ಟ್​ವರೆಗೆ ಜಾರಿಯಾಗಿರುವ 4 ಗ್ಯಾರಂಟಿಗಳಿಗೆ ನೀಡಿರುವ ಅನುದಾನದ ಮಾಹಿತಿ ನೋಡೋಣ. 2023-24ರ ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸರ್ಕಾರ ಸುಮಾರು 40,000 ಕೋಟಿ ರೂ.‌ ಅನುದಾನ ಹಂಚಿಕೆ ಮಾಡಿದೆ. ಈ ಗ್ಯಾರಂಟಿಗಳಿಗಾಗಿ ಎಸ್‌ಸಿಎಸ್ ಪಿಟಿಎಸ್‌ಪಿಯಡಿ 11,144 ಕೋಟಿ ರೂ. ಅನುದಾನ ಹಂಚಿದೆ. ಉಳಿದಂತೆ, ಇತರೆ ಇಲಾಖೆಗಳ ಅನುದಾನಗಳನ್ನು ಹೊಂದಿಸಿ 5 ಗ್ಯಾರಂಟಿಗಳಿಗೆ …

Read More »

ಗಣಪನ ಕೊರಳೇರಲು ಸಿದ್ಧಗೊಳ್ತಿವೆ ಬಗೆಬಗೆ ಏಲಕ್ಕಿ ಮಾಲೆ

ಹಾವೇರಿ: ಗಣೇಶೋತ್ಸವಕ್ಕೆ ಇಲ್ಲಿಯ ಉಸ್ಮಾನಸಾಬ್​ ಎಂಬವರು ವಿವಿಧ ಬಗೆಯ ಏಲಕ್ಕಿ ಮಾಲೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಒಂದೆಳೆಯ ಮಾಲೆಗಳಿಂದ ಹಿಡಿದು 25 ಎಳೆಗಳಿರುವ ಮಾಲೆಗಳನ್ನು ಇವರು ತಯಾರಿಸುತ್ತಾರೆ. ಕಳೆದ ಹಲವು ವರ್ಷಗಳಿಂದ ಈ ಕೆಲಸದಲ್ಲಿ ತೊಡಗಿದ್ದಾರೆ. ತಾಯಿಯಿಂದ ಬಂದ ಕಲೆಯನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದಾರೆ. ವಿಶಿಷ್ಠ ಏಲಕ್ಕಿ ಮಾಲೆ ತಯಾರಿಕೆಗಾಗಿ ಇವರ ತಾಯಿಗೆ ‘ಕರ್ನಾಟಕ ರಾಜ್ಯೋತ್ಸವ’ ಪ್ರಶಸ್ತಿ ಲಭಿಸಿತ್ತು. ಉಸ್ಮಾನಸಾಬ್ ಮಾತನಾಡಿ​, “ಸಾರ್ವಜನಿಕ ಗಣೇಶೋತ್ಸವಗಳಿಗಾಗಿ ಮುಂಚಿತವಾಗಿ ಆರ್ಡರ್‌ಗಳು ಬಂದಿವೆ. ಈಗಾಗಲೇ ದೊಡ್ಡ …

Read More »

ರಾಜ್ಯ ಸರ್ಕಾರ ಪತನವಾಗುತ್ತದೆ. ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ: ಯತ್ನಾಳ್

ಹುಬ್ಬಳ್ಳಿ : ಜನವರಿಯಲ್ಲಿ ರಾಜ್ಯದಲ್ಲಿ ಬದಲಾವಣೆಯಾಗಲಿದೆ.‌ ರಾಜ್ಯ ಸರ್ಕಾರ ಪತನವಾಗುತ್ತದೆ. ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ. ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು ಎಂದು …

Read More »