ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿರುವ ಖಾಸಗಿ ಲಾಡ್ಜ್ ವೊಂದರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಯುವತಿಯರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕುಡಚಿ ಪಟ್ಟಣದ ಲಾಡ್ಜ್ದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸಿಇಎನ್ ಇನ್ಸ್‌ಪೆಕ್ಟರ್ ಬಿ ಆರ್ ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿ ಗುಜರಾತ್, ಪಶ್ಚಿಮ ಬಂಗಾಳ ಮೂಲದ ತಲಾ ಇಬ್ಬರು ಯುವತಿಯರನ್ನು …
Read More »Monthly Archives: ಸೆಪ್ಟೆಂಬರ್ 2023
ಹುಬ್ಬಳ್ಳಿಯಲ್ಲಿ 12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಹರುಳುಗಳ ಗಣೇಶನ ಮೂರ್ತಿಯನ್ನು ತಯಾರಿಸಿ, ಬೆಂಗಳೂರಿಗೆ ರವಾನಿಸಿದ್ದಾರೆ.
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೆರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ರವಾನಿಸಲಾಗಿದೆ. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ಈ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನ ರಾಜಾಜಿನಗರ 2ನೇ ಹಂತ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘದಿಂದ ಸೆ.18 ರಂದು …
Read More »ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 25 ಲಕ್ಷ ಹಣ ಪಡೆದು ಮೋಸ ಮಾಡಿರುವ ಆರೋಪದಡಿ ಪ್ರಕರಣವೊಂದು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲ
ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ ವಂಚಿಸಿರುವ ಮಾದರಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳದ ಕಾರಾಟಗಿಯ ತಿಮ್ಮಪ್ಪ ರೆಡ್ಡಿ ಎಂಬುವವರು ವಂಚನೆಗೊಳಗಾಗಿದ್ದು, ಇವರು ನೀಡಿದ ದೂರಿನ ಮೇರೆಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ವಿಶಾಲ್ ನಾಗ್, ಗೌರವ್ ಹಾಗೂ ಜೀತು ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಇರುವುದೇನು?: ಕನಕಗಿರಿ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದ್ದು, ಇಲ್ಲಿ ಸ್ಫರ್ಧಿಸಲು ತಿಮ್ಮಪ್ಪ ರೆಡ್ಡಿ ಪತ್ನಿ ಗಾಯತ್ರಿ ತಿಮ್ಮರೆಡ್ಡಿ ಆಕ್ಷಾಂಕಿಯಾಗಿದ್ದರು. ಟಿಕೆಟ್ …
Read More »ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ 18 ಷರತ್ತು ಹಾಕುವ ಮೂಲಕ ಅನುಮತಿ ನೀಡಿದ್ದಾರೆ.
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕೊನೆಗೂ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಅನುಮತಿ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಎರಡು ದಿನ ಕಾಲ ನಿರಂತರ ಹೋರಾಟ ನಡೆಸಿತ್ತು. ಕೊನೆಗೂ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಲವು ಷರತ್ತುಗಳನ್ನು ಹಾಕಿ ಅನುಮತಿ ನೀಡಲಾಗಿದೆ. ಆ ಪ್ರಮಖ ಷರತ್ತುಗಳು ಇಂತಿವೆ: ಅನುಮತಿ ಕುರಿತು ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ಪ್ರತಿಕ್ರಿಯೆ …
Read More »ಮಂಗಳೂರಿನಲ್ಲಿ ಸ್ಪೋಟಗೊಂಡ ಕುಕ್ಕರ್ ಬಾಂಬ್ ಅನ್ನು ಸುಪ್ರಸಿದ್ದ ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸಲು ಯೋಜನೆ ರೂಪಿಸಲಾಗಿತ್ತು ಎಂಬ ಅಂಶ ಬಯಲಾಗಿದೆ.
ಮಂಗಳೂರು: ಕಳೆದ ವರ್ಷ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡಿದ್ದ ಕುಕ್ಕರ್ ಬಾಂಬ್ನ್ನು ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸಲು ಉದ್ದೇಶಿಸಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ. 2022ರ ನವೆಂಬರ್ 19 ರಂದು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದಿತ್ತು. ಉಗ್ರ ಶಾರೀಕ್ ನಗರದ ಪಡೀಲ್ ನಲ್ಲಿ ರಿಕ್ಷಾವೊಂದನ್ನು ಹತ್ತಿ ಪ್ರಯಾಣ ಬೆಳೆಸುತ್ತಿದ್ದಾಗ ನಾಗುರಿ ಬಳಿ ಆತನ ಬಳಿಯಿದ್ದ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಸಂಚರಿಸುತ್ತಿದ್ದ ರಿಕ್ಷಾ ದಲ್ಲಿ ಕುಕ್ಕರ್ ಬಾಂಬ್ ಸ್ಪೋಟವಾದ ಕಾರಣ ಆರೋಪಿ ಶಾರೀಕ್ ಮತ್ತು ರಿಕ್ಷಾ …
Read More »ರಾಜ್ಯದ ಎಲ್ಲ ವಾಹನಗಳು ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ
ಸುಳ್ಯ (ದಕ್ಷಿಣಕನ್ನಡ) : ಕರ್ನಾಟಕ ಸಾರಿಗೆ ಇಲಾಖೆಯು ಸಾರ್ವಜನಿಕವಾಗಿ ಸೂಚನೆಯೊಂದನ್ನು ಹೊರಡಿಸಿದ್ದು, ಕೂಡಲೇ ಸಾರ್ವಜನಿಕರು ಪಾಲಿಸುವಂತೆ ಮನವಿ ಮಾಡಿದೆ. ಎಲ್ಲ ವಾಹನಗಳ ಮಾಲೀಕರು, ಕರ್ನಾಟಕ ಸರ್ಕಾರ ದಿನಾಂಕ 17-08-2023 ರಂದು ರಾಜ್ಯ ರಸ್ತೆ ಸುರಕ್ಷತಾ ಮತ್ತು ಸಾರಿಗೆ ಆಯುಕ್ತರ ಮೂಲಕ ಹೊರಡಿಸಿದ ಅಧಿಸೂಚನೆಯಂತೇ ಆದೇಶ ಸಂಖ್ಯೆ.TD 193 TDO 2021, ಮತ್ತು ಸುತ್ತೋಲೆ ಸಂಖ್ಯೆ.CT/RGN-1/PR-434/ 2022-23, ಪ್ರಕಾರ ರಾಜ್ಯದ ಎಲ್ಲ ವಾಹನಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಆರು ದಶಕಗಳಿಂದ ಗಣೇಶ ಮೂರ್ತಿ ತಯಾರಿಕೆಯೇ ಈ ಕುಟುಂಬದ ಕುಲ ಕಸಬು: ಈ ಬಾರಿ 3 ಲಕ್ಷಕ್ಕೂ ಅಧಿಕ ಮೂರ್ತಿಗಳು ರೆಡಿ
ಬೆಳಗಾವಿ: ಆ ಕುಂಬಾರ ಕುಟುಂಬ ತಮ್ಮ ಅಜ್ಜನಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಆರು ದಶಕಗಳಿಂದ ಗಣೇಶ ಮೂರ್ತಿ ತಯಾರಿಸುವುದನ್ನೇ ಕುಲ ಕಸುಬನ್ನಾಗಿ ಮಾಡಿಕೊಂಡಿದೆ. ವರ್ಷಪೂರ್ತಿ ಅದೇ ಕಾಯಕದಲ್ಲಿ ತೊಡಗುವ ಇವರು, ಈ ಬಾರಿ ಬರೊಬ್ಬರಿ 3 ಲಕ್ಷಕ್ಕೂ ಅಧಿಕ ಮೂರ್ತಿಗಳನ್ನು ತಯಾರಿಸಿ ದಾಖಲೆ ಮೆರೆದಿದ್ದಾರೆ. ಅದು ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳೇ ಎನ್ನುವುದು ಮತ್ತೊಂದು ವಿಶೇಷತೆ. ರಾಶಿ ರಾಶಿ ಸುಂದರ ಗಣಪತಿಗಳು, ಬೃಹದಾಕಾರದ ಗೋದಾಮುಗಳು, ಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕರು. ಹೌದು …
Read More »ಹಿನ್ನೋಟ: ಇಂದಿಗೆ ಸರಿಯಾಗಿ 64 ವರ್ಷದ ಹಿಂದೆ ತನ್ನ ಉದಯಿಸಿತ್ತು ದೂರದರ್ಶನ
ನವದೆಹಲಿ: ದೂರದರ್ಶನ ವಾಹಿನಿಯಲ್ಲಿ 1987-88ರ ಸಂದರ್ಭದಲ್ಲಿ ಮೂಡಿಬಂದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣ ಮತ್ತು 1988-90ರಲ್ಲಿ ಬಿ.ಆರ್.ಚೋಪ್ರಾ ನಿರ್ದೇಶನದ ಮಹಾಭಾರತ ಕಥಾ ಪ್ರಸಂಗವನ್ನು ಯಾರು ತಾನೇ ಮರೆಯಲು ಸಾಧ್ಯ ಹೇಳಿ?. ಈ ಧಾರವಾಹಿಗಳೊಂದಿಗೆ ದೂರದರ್ಶನ ವಾಹಿನಿ ಕೂಡ ಭಾರತೀಯರೊಂದಿಗೆ ವಿಶೇಷ ಬಂಧ ಹೊಂದಿದೆ. 1987ರಲ್ಲಿ ಆರ್.ಕೆ.ನಾರಾಯಣ್ ಅವರ ಮಾಲ್ಗುಡಿ ಡೇಸ್, 1994ರಲ್ಲಿ ಚಂದ್ರಕಾಂತ್, 1997ರಲ್ಲಿ ಶಕ್ತಿ ಮಾನ್ ಧಾರಾವಾಹಿಗಳು ಅತಿ ಹೆಚ್ಚು ವೀಕ್ಷಣೆ ಪಡೆಯುವುದರೊಂದಿಗೆ ಸರ್ಕಾರಕ್ಕೆ ಹೆಚ್ಚು ಆದಾಯವನ್ನೂ ತಂದುಕೊಟ್ಟಿವೆ. …
Read More »ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯೋ, ತಮಿಳುನಾಡಿನ ಮುಖ್ಯಮಂತ್ರಿಯೋ: B.S.Y.
ಬೆಂಗಳೂರು: ಇಂಡಿಯಾ ಒಕ್ಕೂಟವನ್ನು ಬಲಪಡಿಸಲು ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ. ಈ ಮೂಲಕ ಪರೋಕ್ಷವಾಗಿ ತಮಿಳುನಾಡಿಗೆ ಬೆಂಬಲ ಕೊಡುವ ಮೂಲಕ ಸರ್ಕಾರವು ರಾಜ್ಯದ ಹಿತ ಕಡೆಗಣಿಸಿದೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯೋ ತಮಿಳುನಾಡಿನ ಮುಖ್ಯಮಂತ್ರಿಯೋ ಎನ್ನುವ ಪ್ರಶ್ನೆಯನ್ನು ಅವರೇ ಹಾಕಿಕೊಳ್ಳಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟವನ್ನು ಬಲಪಡಿಸುವ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ನಿತ್ಯ …
Read More »