Breaking News

Monthly Archives: ಸೆಪ್ಟೆಂಬರ್ 2023

ರಾಜ್ಯ ಪೊಲೀಸ್ ಇಲಾಖೆಯಿಂದ ವಿನೂತನ ಪ್ರಯತ್ನ: ಇ-ಎಫ್‌ಐಆರ್​ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್‌ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್‌ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ‌ ಕೊಟ್ಟರು.   ಇ-ಎಫ್‌ಐಅರ್ ದಾಖಲಿಸುವುದು ಹೇಗೆ?: ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್‌ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ‌. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್‌ಸೈಟ್​ಗೆ ಹೋಗಿ …

Read More »

ಪಿಒಪಿ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಮತ್ತು ನಿಮಜ್ಜನೆಯನ್ನು ರಾಜ್ಯಾದ್ಯಂತ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಪ್ಲಾಸ್ಟರ್ ಆಫ್‌ ಪ್ಯಾರಿಸ್ (ಪಿಒಪಿ) ಗಣೇಶ ಹಾಗೂ ಲೋಹಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತ ಯಾವುದೇ ರೀತಿಯ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗು ಅವುಗಳನ್ನು ಯಾವುದೇ ನೀರಿನ ಮೂಲಗಳಲ್ಲಿ ನಿಮಜ್ಜನೆ ಮಾಡುವುದನ್ನು ರಾಜ್ಯಾದ್ಯಂತ ಸಂಪೂರ್ಣವಾಗಿದೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.   ರಾಜ್ಯ ವ್ಯಾಪ್ತಿಯೊಳಗಿನ ಕಡಲು ಅಥವಾ ಸಮುದ್ರ ಮತ್ತು ರಾಜ್ಯದ ನೀರಿನ ಇತರೆ ಮೂಲಗಳಾದ ನದಿ, ತೊರೆ, ಹಳ್ಳ, ಕಾಲುವೆ, ಬಾವಿ ಇವುಗಳು ಮಾಲಿನ್ಯಕ್ಕೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹಮಿಶ್ರಿತ ರಾಸಾಯನಿಕಯುಕ್ತ …

Read More »

ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಅಕ್ರಮಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳದಿದ್ದರೆ ಎಸ್ಪಿ, ಡಿಸಿಪಿ‌ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದ ಸಿಎಂ

ಬೆಂಗಳೂರು: ರಾಜ್ಯದ ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ನಡೆಯುತ್ತಿದ್ದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಎಸ್ಪಿ ಅಥವಾ ಡಿಸಿಪಿ‌ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿಂದು ಐಪಿಎಸ್ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.‌ ಇದಕ್ಕೂ ಮೊದಲು ವಾಹನ ಕಳುವಾದರೆ ಆನ್ ಲೈನ್‌ನಲ್ಲಿ ದೂರು ನೀಡಲು ಇ-ಎಫ್‌ಐಆರ್ ಹಾಗೂ ದಂಡ …

Read More »

ಅಧಿಕಾರಿಗಳು ಫೀಲ್ಡ್‌ಗೆ ಬಂದು ಸರ್ವೆ ಮಾಡಿಲ್ಲ ಎಂದು ರೈತರು ಆರೋಪ,ನಮ್ಮ ತಾಲೂಕುಗಳನ್ನೂ ‘ಬರಪೀಡಿತ’ ಎಂದು ಘೋಷಿಸಿ

ಧಾರವಾಡ: ರಾಜ್ಯದಲ್ಲಿ ಬರದ ಛಾಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಿದ್ದು, ಇದರಿಂದ ಹೊರಗುಳಿದ ಜಿಲ್ಲೆಯ ಕೆಲ ತಾಲೂಕುಗಳ ರೈತರು ಆಕ್ರೋಶಗೊಂಡಿದ್ದಾರೆ.   ಸರ್ಕಾರ ತೀವ್ರ ಮತ್ತು ಸಾಧಾರಣ ಬರ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಜಿಲ್ಲೆಯ ಮೂರು ತಾಲೂಕುಗಳು ಹೊರಗುಳಿದಿವೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿನಿಧಿಸುವ ಕಲಘಟಗಿ, ಅಳ್ನಾವರವನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಇನ್ನು ನವಲಗುಂದ ವಿಧಾನಸಭಾ ವ್ಯಾಪ್ತಿಯ ಅಣ್ಣಿಗೇರಿ ತಾಲೂಕು ಕೂಡ …

Read More »

ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ

ಬೆಂಗಳೂರು : ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕುಮಾರಕೃಪಾ ಅತಿಥಿಗೃಹದ ಬಳಿ ಇಂದು ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿಗೆ ನಿರಾಕ್ಷೇಪಣಾ ಪತ್ರ ತರಲು …

Read More »

ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಿಸುತ್ತಿದ್ದಾರೆ. ಜಾನುವಾರು ಪೋಷಣೆಗೆ ಬದುಕನ್ನೇ ಮುಡಿಪಾಗಿಟ್ಟ ವೈದ್ಯ ದಂಪತಿ

ದಾವಣಗೆರೆ : ಬಸನಗೌಡ ಕುಸುಗೂರು ಮತ್ತು ವಿಜಯಲಕ್ಷ್ಮಿ ಬಿ.ಕುಸುಗೂರು ವೃತ್ತಿಯಲ್ಲಿ ವೈದ್ಯ ದಂಪತಿ. ವೃತ್ತಿ ಜೀವನದಲ್ಲಿ ಬಿಡುವು ಮಾಡಿಕೊಂಡು ತಮ್ಮ ಕೈಲಾದಷ್ಟು ಸಮಾಜಸೇವೆ ಮಾಡುತ್ತಿದ್ದಾರೆ. ಕಳೆದ ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಣೆ ಮಾಡುತ್ತಿದ್ದಾರೆ. ಹೀಗೆ ಪೋಷಿಸಿದ ಜಾನುವಾರುಗಳನ್ನು ಬಡ ರೈತರಿಗೆ ಉಚಿತವಾಗಿ ಉಳುಮೆಗೆ ಕೊಡುತ್ತಿದ್ದಾರೆ. ಚನ್ನಗಿರಿ ತಾಲೂಕಿನ ಬಸವಪಟ್ಟಣ ಎಂಬ ಪುಟ್ಟ ಗ್ರಾಮದಲ್ಲಿ ಇವರು ಕುಸುಗೂರು ಡಾಕ್ಟರ್ ಎಂದೇ ಪರಿಚಿತರು. ದಶಕಗಳಿಂದ ವೈದ್ಯ ವೃತ್ತಿ ಮಾಡುತ್ತಾ ಅದರೊಂದಿಗೆ ಜಾನುವಾರುಗಳ …

Read More »

ಬಾಂಗ್ಲಾ ವಿರುದ್ಧ ಸೋಲು ಕಂಡ ಭಾರತ…

ಕೊಲಂಬೊ (ಶ್ರೀಲಂಕಾ): ಯುವ ಆಟಗಾರ ಶುಭಮನ್​ ಗಿಲ್​ ಶತಕದ ಹೊರತಾಗಿಯೂ ಭಾರತ ತಂಡ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಮುಗ್ಗಿಸಿದೆ. ಪ್ರಿನ್ಸ್​ ಗಿಲ್​ ಶತಕವು ತಂಡದ ಜಯಕ್ಕೆ ಕೊಡುಗೆ ಆಗಲಿಲ್ಲ, ಅವರ ಆಟ ವ್ಯರ್ಥ ಪ್ರಯತ್ನದಂತಾಯಿತು. ಭಾರತ 49.5 ಓವರ್​ಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 259 ರನ್​ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ಬಾಂಗ್ಲಾ ಆರು ರನ್​ಗಳ​ ಗೆಲುವು ದಾಖಲಿಸಿತು. ಏಷ್ಯಾ ಕಪ್​ ಟೂರ್ನಿಯ ಆರನೇ ಸೂಪರ್​ 4 ಪಂದ್ಯದಲ್ಲಿ ಐದು ಬದಲಾವಣೆಗಳೊಂದಿಗೆ ಮೈದಾನಕ್ಕಿಳಿದ …

Read More »

5 ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ.

ಹೈದರಾಬಾದ್​: 2024 ರ ಲೋಕಸಭಾ ಚುನಾವಣೆ ಸಮರಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ನಿರ್ಣಾಯಕ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಭರ್ಜರಿಯಾಗೇ ಆರಂಭಿಸಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​​​​​​​​ಗೆ ಮರು ಚೇತರಿಕೆ. ಮೈತ್ರಿಗಳೊಂದಿಗೆ ಸಮನ್ವಯ, ಇಂಡಿಯಾ ಒಕ್ಕೂಟದ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ …

Read More »

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಇಂದು ಭಾರತ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ

ಬೆಂಗಳೂರು : ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ಯ ಅಂಗವಾಗಿ ಇಂದು ಬೆಳಗ್ಗೆ 10:00 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಬಾಂಕ್ವೆಟ್ ಹಾಲ್‌ನಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಏಕಕಾಲದಲ್ಲಿ ಓದುವ ಕಾರ್ಯಕ್ರಮದಲ್ಲಿ ಅಧಿಕಾರಿ, ಸಿಬ್ಬಂದಿ ಹಾಜರಾಗಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ಬಾಂಕ್ವೆಟ್ ಹಾಲ್‌ನಲ್ಲಿ ಭಾರತ …

Read More »

ಕಾಂತಾರ 2′ ಚಿತ್ರಕ್ಕಾಗಿ 11 ಕೆ.ಜಿ ತೂಕ ಇಳಿಸಿಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಬಹುನಿರೀಕ್ಷೆಯ ಕಾಂತಾರ 2 ಸಿನಿಮಾಗಾಗಿ ಡಿವೈನ್ ಸ್ಟಾರ್ ಖ್ಯಾತಿಯ ರಿಷಬ್​ ಶೆಟ್ಟಿ ಸುಮಾರು 11 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಭಾರತೀಯ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ‘ಕಾಂತಾರ’. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ ಕಳೆದ ವರ್ಷ ತೆರೆಕಂಡು ಬ್ಲಾಕ್‌ ಬಸ್ಟರ್ ಹಿಟ್ ಆಗಿ, ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಕರಾವಳಿ ಭಾಗದ ದೈವಾರಾಧನೆ ಕಥೆ ಹೊಂದಿರುವ …

Read More »