ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. …
Read More »Monthly Archives: ಸೆಪ್ಟೆಂಬರ್ 2023
IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ
IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಂಡಸ್ಟ್ರೀಯಲ್ ಡೆವಲ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಐಡಿಬಿಐ ಜ್ಯೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆ ನೇಮಕಾತಿಗೆ ಮುಂದಾಗಿದೆ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು …
Read More »ವಿಜಯಪುರದಲ್ಲಿ ನಾಟಕ ಪ್ರದರ್ಶನದ ವೇಳೆ ಕುಸಿದು ಬಿದ್ದು ಮೃತಪಟ್ಟ ವ್ಯಕ್ತಿ
ವಿಜಯಪುರ: ನಾಟಕ ಪ್ರದರ್ಶನದ ವೇಳೆ ದಿಢೀರ್ ಕುಸಿದು ಬಿದ್ದು ಪೋಸ್ಟ್ಮ್ಯಾನ್ ಸಾವನ್ನಪ್ಪಿರುವ ಮನಕಲಕುವ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಶರಣು ಬಾಗಲಕೋಟೆ (24) ಎಂಬುವರೆ ಹೃದಯಾಘಾತದಿಂದ ಸಾವನ್ನಪ್ಪಿದ ಪೋಸ್ಟ್ಮ್ಯಾನ್ ಆಗಿದ್ದಾರೆ. ನಾಟಕ ಪ್ರದರ್ಶನ ವೇಳೆ ಡಾನ್ಸ್ ಮಾಡಲು ವೇದಿಕೆ ಏರಿದ್ದ ಶರಣು ಕೊಟ್ಯಾಳ್ಗೆ ಹೃದಯಾಘಾತವಾಗಿದೆ. ”ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ” ನಾಟಕ ಪ್ರದರ್ಶನ ವೇಳೆ ಈ ಘಟನೆ ನಡೆದಿದೆ. …
Read More »ಕಾವೇರಿ ರಕ್ಷಣಾ ಯಾತ್ರೆಗೆ ಬಿಜೆಪಿ ಸಜ್ಜು: ಬಿಎಸ್ವೈ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದ ವಿರುದ್ಧ ಕಾವೇರಿ ರಕ್ಷಣಾ ಯಾತ್ರೆ ನಡೆಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಹೋರಾಟಕ್ಕೆ ರೂಪುರೇಷೆ ತಯಾರಿಸುತ್ತಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭಗೊಂಡಿದೆ. ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಕಾವೇರಿ …
Read More »8 ದಿನಗಳಲ್ಲಿ ಆಯೋಗದ ಪೀಠಕ್ಕೆ ಕಟ್ಟಡ ಸಿಗುವಂತೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟಬೆಳಗಾವಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ ವಕೀಲರು
ಬೆಳಗಾವಿಯಲ್ಲಿ ರಾಜ್ಯ ಗ್ರಾಹಕ ಆಯೋಗದ ಪೀಠ ಮಂಜೂರಾಗಿ 2 ವರ್ಷ ಕಳೆದರೂ ಕಟ್ಟಡದ ಕೊರತೆಯಿಂದ ಇನ್ನೂ ಕಾರ್ಯ ನಿರ್ವಹಿಸುತ್ತಿಲ್ಲ. ಆದ್ದರಿಂದ ಮುಂದಿನ 8 ದಿನಗಳಲ್ಲಿ ಆಯೋಗದ ಪೀಠಕ್ಕೆ ಕಟ್ಟಡ ಸಿಗುವಂತೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬೆಳಗಾವಿಯ ವಕೀಲರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಗ್ರಾಹಕ ಆಯೋಗದ ಶಾಶ್ವತ ಪೀಠವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕು ಎಂದು ವಕೀಲರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಇದಕ್ಕಾಗಿ ಅನೇಕ ಮೆರವಣಿಗೆಗಳು, ಆಂದೋಲನಗಳು ನಡೆದವು. ಅಂದಿನ …
Read More »ಭೂಸ್ವಾಧೀನಾಧಿಕಾರಿ, ಉಪತಹಶೀಲ್ದಾರ್ಗೆ ತಲಾ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ
ತುಮಕೂರು : ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತಬಸುಮ್ ಜಹೇರಾ ಹಾಗೂ ಬೆಳ್ಳಾವಿ ಉಪ ತಹಶೀಲ್ದಾರ್ ಶಬ್ಬೀರ್ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶ ರಾಮಲಿಂಗೇಗೌಡ ಈ ತೀರ್ಪು ನೀಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಜಯರಾಮ ಎಂಬುವರು 2017ರಲ್ಲಿ …
Read More »ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಳಂಬ ಮಾಡುತ್ತಿರುವದನ್ನು ಖಂಡಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಿಯೋಗ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿದರು. ಈದ್ಗಾ ಮೈದಾನಲ್ಲಿ ಅನುಮತಿ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಅರವಿಂದ ಬೆಲ್ಲದ ನೇತೃತ್ವದ ನಿಯೋಗ ಕೂಡಲೇ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇಲ್ಲದಿದ್ದರೆ ಇಲ್ಲಿಂದ ಎದ್ದು ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈದ್ಗಾ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಮುಂಚೆಯೇ ಅನುಮತಿ ನೀಡಬೇಕು. ಪಾಲಿಕೆ …
Read More »ಬಳ್ಳಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 9 ಜನರಿಗೆ ಗಾಯ
ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 9ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಶಿವಪುರದ ಬಳಿ ನಡೆದಿದೆ. ಬಳ್ಳಾರಿಯಿಂದ ಹಡ್ಲಗಿ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸಾರಿಗೆ ಬಸ್ ರಸ್ತೆ ಬದಿಯ ಗದ್ದೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಸುಮಾರು 50 ಕ್ಕೂ ಹೆಚ್ಚು ಜನರು ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದು, ಅದರಲ್ಲಿ 9 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೋಕಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೋಕಾ …
Read More »ಇಂದಿರಾ ಕ್ಯಾಂಟಿನ್ಗಳ ಯಾವುದೇ ಬಿಲ್‌ಗಳನ್ನು ಬಾಕಿ ಉಳಿಸಿಕೊಂಡಿಲ್ಲ: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಇಂದಿರಾ ಕ್ಯಾಂಟಿನ್ಗಳ ಬಿಲ್‌ಗಳನ್ನು ಕಾನೂನಾತ್ಮಕವಾಗಿ ಪಾವತಿ ಮಾಡಲಾಗಿದೆ. ಯಾವುದೇ ರೀತಿಯ ಬಿಲ್‌ಗಳನ್ನು ಬಾಕಿ ಉಳಿಸಿಕೊಂಡಿಲ್ಲ. ಕೆಲವು ಸಣ್ಣಪುಟ್ಟ ಬಿಲ್‌ಗಳು ಮಾತ್ರ ಬಾಕಿ ಇದ್ದು, ಬಹುತೇಕ ಕ್ಲಿಯರ್ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು. ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಹಾಗೂ ಟಿಕೆಟ್ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಚೈತ್ರ ಕುಂದಾಪುರ ಅವರ ಆರೋಪಕ್ಕೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪ್ರತಿಕ್ರಿಯಿಸಿರುವ ತುಷಾರ್ ಗಿರಿನಾಥ್, 2019ರ ರಾಜ್ಯ ಲೆಕ್ಕ ಪರಿಶೋಧನಾ ಆಡಿಟ್ …
Read More »ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದ ನೈರುತ್ಯ ರೈಲ್ವೆ
ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ. ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ. 1,909.77 ಕೋಟಿ ಆದಾಯ ಗಳಿಸಿದೆ. ಇದಲ್ಲದೆ 8.27 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 37.6 ರಷ್ಟು ಹೆಚ್ಚಾಗಿದೆ. ಇದರ ಜೊತೆಗೆ ನ 270 ಆಟೋಮೊಬೈಲ್ ರೇಕ್ಗಳನ್ನು …
Read More »