ಬಸ್‌ನಲ್ಲಿ ನಿಲಲ್ಲು ಜಾಗವಿಲ್ಲದೆ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ತಿಂಗಳಿಂದ ಬಸ್ ನಲ್ಲಿ ವಿದ್ಯಾರ್ಥಿಗಳು ನಿಲ್ಲಲ್ಲು ಜಾಗವಿಲ್ಲ.ಕೇರೂರ ಗ್ರಾಮದಲ್ಲಿ ಬಸ್ ಗಳನ್ನು ನಿಲ್ಲಿಸುತ್ತಿಲ್ಲಾ.ಇದರಿಂದಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ನಮ್ಮ ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದರು.ಚಿಕ್ಕೋಡಿ ಪೊಲೀಸ ಠಾಣಾ …
Read More »Monthly Archives: ಸೆಪ್ಟೆಂಬರ್ 2023
‘ರಾಜ್ಯದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ, ನಾಳೆ ದೆಹಲಿಗೆ ತೆರಳಿ ಮೈತ್ರಿ ಕುರಿತು ಚರ್ಚೆ:B.S.Y.
ಬೆಂಗಳೂರು: ”ಸಿಎಂ ಸಿದ್ದರಾಮಯ್ಯ ಸರ್ಕಾರ ಇಷ್ಟು ಬೇಗ ಜನಪ್ರಿಯತೆ ಕಳೆದುಕೊಳ್ಳುತ್ತದೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಇವತ್ತು ನಾವೆಲ್ಲ ಕುಳಿತು ಚರ್ಚೆ ಮಾಡುತ್ತೇವೆ. ರಾಜ್ಯಾದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತವೆ” ಎಂದರು. ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ವೈ, ”ಲೋಕಸಭೆ ಚುನಾವಣೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ …
Read More »ಒಂದೇ ಕುಟುಂಬದ 15 ಮಂದಿಯಿಂದ ಪರಿಸರಸ್ನೇಹಿ ಗಣಪತಿ ನಿರ್ಮಾಣ: ಗ್ರಾಹಕ ನಿಗದಿಪಡಿಸಿದ ದುಡ್ಡಿಗೆ ಮೂರ್ತಿ ಮಾರಾಟ
ಹಾವೇರಿ: ಇಲ್ಲಿನಗುತ್ತಲ ಪಟ್ಟಣದಲ್ಲೊಂದು ಗಣಪತಿ ತಯಾರಿಸುವ ವಿಶೇಷ ಅನ್ನಿಸುವ ಕುಟುಂಬವಿದೆ. ನೆಗಳೂರುಮಠ ಎಂಬ ಹೆಸರಿನ ಕುಟುಂಬದ ಸುಮಾರು 15 ಮಂದಿ ಗಣಪತಿ ವಿಗ್ರಹ ತಯಾರಿಸುತ್ತಾರೆ. ಮೂರ್ತಿ ಸಿದ್ಧಪಡಿಸುವ ಈ ಕಲಾವಿದರೆಲ್ಲರೂ ಸರ್ಕಾರಿ ನೌಕರಿಯಲ್ಲಿದ್ದಾರೆ. ಗಣೇಶೋತ್ಸವಕ್ಕೆ ಈ ಮನೆಯ ಅಳಿಯಂದಿರು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಒಟ್ಟು ಸೇರಿದರೆ ಇವರ ಸಂಖ್ಯೆ 25 ದಾಟುತ್ತದೆ. ಹಬ್ಬ ಸಮೀಪಿಸುತ್ತಿದ್ದಂತೆ ಸರ್ಕಾರಿ ಕೆಲಸಕ್ಕೆ ರಜೆ ಹಾಕುವ ಇವರು ವಿಘ್ನವಿನಾಶಕನ ತಯಾರಿಯಲ್ಲಿ ಸಂಪೂರ್ಣವಾಗಿ ತೊಡುಗುತ್ತಾರೆ. ಯುಗಾದಿಯಂದು ಗಣೇಶ ಮೂರ್ತಿಗಳ …
Read More »ಗ್ಯಾರಂಟಿ ಯೋಜನೆಗೆ ‘SCSPTSP’ ಅನುದಾನ ಬಳಕೆ: ಈವರೆಗೆ ಬಿಡುಗಡೆಯಾದ ಹಣ ಎಷ್ಟು?
ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನ ಬಳಕೆ ಮಾಡುತ್ತಿದೆ. ಸರ್ಕಾರದ ನಡೆಗೆ ಪ್ರತಿಪಕ್ಷ ಬಿಜೆಪಿ ಹಾಗು ದಲಿತ ನಾಯಕರು ಟೀಕಾಸಮರ ನಡೆಸಿದ್ದಾರೆ. ಸರ್ಕಾರ ಈಗಾಗಲೇ ಎಸ್ಸಿಎಸ್ಪಿಟಿಎಸ್ಪಿ ಅನುದಾನದಿಂದ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಬಿಡುಗಡೆ ಮಾಡಿದೆ. ಈವರೆಗೆ ಬಿಡುಗಡೆಯಾದ ಹಣ ಎಷ್ಟು?, ಎಷ್ಟು ಹಣ ಹಂಚಿಕೆಯಾಗಿದೆ? ನೋಡೋಣ. ಕಾಂಗ್ರೆಸ್ ಸರ್ಕಾರ ತನ್ನ ಶತದಿನಗಳ ಆಡಳಿತದಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ …
Read More »ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವಿಮಾನ ಹಾರಾಟ ಶುರು
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ ಟರ್ಮಿನಲ್ 2ಗೆ ಶಿಫ್ಟ್ ಆಗಿದೆ. 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾರ್ಡನ್ ಟರ್ಮಿನಲ್ ಅತ್ಯಾಧುನಿಕ ತಂತ್ರಜ್ಞಾನವುಳ್ಳದ್ದಾಗಿದೆ. ಕಳೆದ ವರ್ಷ ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಿದ್ದರು. ಜನವರಿ 15ರಿಂದ ಕೆಲ ದೇಶಿಯ ವಿಮಾನಗಳ ಹಾರಾಟ ಮಾತ್ರ ಟಿ2ನಲ್ಲಿ …
Read More »ಡೀಸೆಲ್ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವರದಿ: ಸ್ಪಷ್ಟನೆ ನೀಡಿದ ನಿತಿನ್ ಗಡ್ಕರಿ
ನವದೆಹಲಿ: ”ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್ಸೆಟ್ಗಳ (ಡೀಸೆಲ್ ಜನರೇಟರ್) ಮೇಲೆ ‘ಮಾಲಿನ್ಯ ತೆರಿಗೆ’ ರೂಪದಲ್ಲಿ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವಿಧಿಸಲು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗುತ್ತದೆ” ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂಬುವುದು ವರದಿಯಾಗಿದೆ. ಈ ಕುರಿತು ಖುದ್ದು ಸಚಿವರೇ ಸ್ಪಷ್ಟನೆ ಕೊಟ್ಟಿದ್ದು, ಇಂತಹ ಯಾವುದೇ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ …
Read More »ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ …
Read More »ಬಹಿರಂಗ ಹೇಳಿಕೆ ನೀಡದಂತೆ ಬಿ.ಕೆ.ಹರಿಪ್ರಸಾದ್ಗೆ ಕಾಂಗ್ರೆಸ್ ಹೈಕಮಾಂಡ್ ತಾಕೀತು
ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಶನಿವಾರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ, ಯಾರ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹರಿಪ್ರಸಾದ್ ಹೇಳಿಕೆಗೆ ಆಕ್ಷೇಪ: ಸಿದ್ದರಾಮಯ್ಯರ ವಿರುದ್ಧ ಹರಿಪ್ರಸಾದ್ ಅವರು ಮುಸುಕಿನ ಗುದ್ದಾಟ ನಡೆಸುತ್ತಿರುವುದು ಆಡಳಿತ ಪಕ್ಷದೊಳಗೆ ಅಸಮಾಧಾನ ಉಂಟುಮಾಡಿದೆ. ಬಹಿರಂಗ ಹೇಳಿಕೆ ನೀಡುವ …
Read More »ಅಣ್ಣ ಚಿರು ಸಮಾಧಿ ಬಳಿ ಪತ್ನಿ ಸೀಮಂತ ನೆರವೇರಿಸಿದ ಧ್ರುವ ಸರ್ಜಾ
ಕನ್ನಡ ಚಿತ್ರರಂಗದಲ್ಲಿ ನಟನೆ ಮತ್ತು ಗುಣದಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನಟ ಧ್ರುವ ಸರ್ಜಾ. ಸಿನಿಮಾ ಮತ್ತು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕೆಲ ದಿನಗಳ ಹಿಂದೆ ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಬಳಿ ಮಲಗಿದ್ದ ಧ್ರುವ ಸರ್ಜಾ ಅವರ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಆಯಕ್ಷನ್ ಪ್ರಿನ್ಸ್ ಮನೆಯಲ್ಲಿ ಸೀಮಂತದ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನು ವಿಶೇಷ …
Read More »ನೆದರ್ಲೆಂಡ್ಸ್ ಪ್ರಧಾನಿಯೊಂದಿಗೆ ಡಿಸಿಎಂ ಸಭೆ
ಬೆಂಗಳೂರು: ಅತ್ಯುತ್ತಮ ಕೈಗಾರಿಕಾ ನೀತಿ, ಮೂಲ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನೆದರ್ಲೆಂಡ್ಸ್ ಪ್ರಧಾನಿಯೊಂದಿಗೆ ಕಾಂಗ್ರೆಸ್ ನಾಯಕರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನೆದರ್ಲೆಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಹಾಗೂ ಆ …
Read More »