Breaking News

Monthly Archives: ಸೆಪ್ಟೆಂಬರ್ 2023

ಸೋಮವಾರ ಖಾಸಗಿ ಸಾರಿಗೆ ಬಂದ್

ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಖಾಸಗಿ ಪ್ರಯಾಣಿಕ ವಾಹನಗಳ ಮುಷ್ಕರ ನಡೆಯಲಿದೆ. ಬಹುತೇಕ ಆಟೋ, ಕ್ಯಾಬ್, ಬಸ್ ಸೇರಿದಂತೆ ಎಲ್ಲ ವಾಹನಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಶಾಲಾ ಮಕ್ಕಳ ವಾಹನ ಕೂಡಾ ಸಂಚಾ ಸ್ಥಗಿತವಾಗಲಿದೆ ಎಂದು ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು ಹೇಳುತ್ತಿದ್ದಾರೆ. ಆದರೆ ಖಾಸಗಿ ಶಾಲಾ ಒಕ್ಕೂಟಗಳು ಈವರೆಗೆ ಸ್ಪಷ್ಟವಾದ ನಿರ್ಧಾರ ಕೈಗೊಳ್ಳದಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರ ಗೊಂದಲಕ್ಕೆ ಕಾರಣವಾಗಿದೆ. ಕೆಲವು ಖಾಸಗಿ ಶಾಲೆಗಳು ತಮ್ಮದೇ ವಾಹನ ವ್ಯವಸ್ಥೆಯನ್ನು …

Read More »

ಸೋಮವಾರ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲತೆಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್​ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್​ಗಳಿಗೂ ವಿಸ್ತರಣೆ ಮಾಡಬೇಕು ಹಾಗೂ ರಸ್ತೆ ತೆರಿಗೆ ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆಗಳ ಒಕ್ಕೂಟ ಸೋಮವಾರ ಬೆಂಗಳೂರು ಬಂದ್ ಕರೆ ನೀಡಿದೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವ ಬಿಎಂಟಿಸಿ ಹೆಚ್ಚುವರಿ ಬಸ್​​ಗಳ ಜೊತೆಗೆ ಟ್ರಿಪ್​ ಸಂಖ್ಯೆಯಲ್ಲೂ ಏರಿಕೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್​​ಗೆ …

Read More »

ಜಿ20 ಶೃಂಗಸಭೆ ನಡೆದ ‘ಭಾರತ ಮಂಟಪ’ಕ್ಕೆ ನುಗ್ಗಿದ ಮಳೆ ನೀರು

ನವದೆಹಲಿ: ಅಮೆರಿಕ, ಇಂಗ್ಲೆಂಡ್​, ಫ್ರಾನ್ಸ್​ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಆಗಮಿಸಿದ್ದ ಐತಿಹಾಸಿಕ ಜಿ20 ಶೃಂಗಸಭೆ ನಡೆದ ಇಲ್ಲಿನ ಅನುಭವ ಮಂಟಪದೊಳಕ್ಕೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವಿಪಕ್ಷಗಳು ಟೀಕಿಸಿವೆ. ದೆಹಲಿಯಲ್ಲಿ ಸತತ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ನಿರಂತರ ಮಳೆಯ ಕಾರಣ, ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಶೃಂಗಸಭೆ ನಡೆದ ಭಾರತ ಮಂಟಪಕ್ಕೂ ಮಳೆ ನೀರು ನುಗ್ಗಿದೆ. …

Read More »

ಬಹುನಿರೀಕ್ಷಿತ ಯುಐ ಟೀಸರ್ ನಾಳೆ ಬೆಳಗ್ಗೆ 10 ಗಂಟೆಗೆ​ ಅನಾವರಣ

ಕನ್ನಡ ಚಿತ್ರರಂಗದ ರಿಯಲ್​ ಸ್ಟಾರ್​ ಉಪೇಂದ್ರ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಯುಐ’. ಶೀರ್ಷಿಕೆಯಿಂದಲೇ ದಕ್ಷಿಣ ಚಿತ್ರರಂಗದಲ್ಲಿ ಸಖತ್​ ಸದ್ದು ಮಾಡುತ್ತಿದೆ. ಕಥೆ ಕುರಿತು ಕಿಂಚಿತ್ತೂ ಸುಳಿವು ಬಿಟ್ಟುಕೊಟ್ಟಿಲ್ಲ ಚಿತ್ರತಂಡ. ಉಪ್ಪಿ ನಟನೆಯ ಅಥವಾ ನಿರ್ದೇಶನದ ಪ್ರತೀ ಸಿನಿಮಾ ಕೂಡ ವಿಭಿನ್ನ. ಹಾಗಾಗಿ ಉಪ್ಪಿ ಮುಂದಿನ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಬೆಟ್ಟದಷ್ಟಿದೆ. ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಯುಐ ಚಿತ್ರದಲ್ಲಿ ನಟ ಉಪೇಂದ್ರ ನಟಿಸುವುದರ ಜೊತೆಗೆ ಆಯಕ್ಷನ್​ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​

ಚಿಕ್ಕೋಡಿ(ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದು ಪಕ್ಷಾತೀತವಾಗಿ ಹೋರಾಟ ಮಾಡಿದ್ದೇವೆ. ಸಮಾಜದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಮಂತ್ರಿಯಾಗಿದ್ದೇನೆ. ಈಗ ಸಮಾಜ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಅವಕಾಶ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ನಿಪ್ಪಾಣಿಯಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿ, ಸರ್ಕಾರ ಪರವಾಗಿ ಮನವಿ ಪತ್ರವನ್ನು ಸ್ವೀಕರಿಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಿನ್ನೆ ಮುಖ್ಯಮಂತ್ರಿಗಳ ಬಳಿ …

Read More »

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಆರನೇ ಹಂತದ ಹೋರಾಟದ ಸಮಾವೇಶದಲ್ಲಿ ಶಾಸಕ ವಿನಯ್ ಕುಲಕರ್ಣಿ ಭಾಗಿ

ಚಿಕ್ಕೋಡಿ (ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ ಮಾಡಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ …

Read More »

ಮೇಕ್ ಇನ್​ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ ‘ಇಂಡಿಯಾ’ ಹೆಸರಿಗೆ ಬೆಚ್ಚಿಬಿದ್ದಿದ್ದಾರೆ: ಸಿಎಂ

ಬೆಂಗಳೂರು: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ …

Read More »

ಶಕ್ತಿ ಯೋಜನೆ’ಯಿಂದ ನಷ್ಟ, ಬಂದ್‌ ಕರೆ: ನಾಳೆ ಆಟೋ, ಕ್ಯಾಬ್‌, ಖಾಸಗಿ ಬಸ್‌ ಸೇವೆ ಇರಲ್ಲ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಿಂದಾಗಿ ನಷ್ಟಕ್ಕೊಳಗಾಗಿದ್ದೇವೆ ಎನ್ನುತ್ತಿರುವ ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು, ನಮಗೆ ಪರಿಹಾರ ಒದಗಿಸಬೇಕು ಮತ್ತು ನಮ್ಮ ಪರ್ಯಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಾಳೆ ನಗರದಲ್ಲಿ ಬಂದ್‌ಗೆ ಕರೆ ಕೊಟ್ಟಿದ್ದಾರೆ.   ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟು ಹಿಡಿದಿವೆ. ಚಾಲಕರಿಗೆ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ಖಾಸಗಿ ವಾಹನಗಳ …

Read More »

ಶೇ.50ರಷ್ಟು ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ: ವಾಹನ ಸವಾರರಿಂದ ₹9 ಕೋಟಿಗೂ ಹೆಚ್ಚು ದಂಡ​ ಸಂಗ್ರಹ​!

ಬೆಂಗಳೂರು: ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ. 50ರಷ್ಟು ರಿಯಾಯಿತಿ ದಂಡ ಪಾವತಿ ನಿನ್ನೆಗೆ (ಶನಿವಾರ) ಕೊನೆಯಾಗಿದ್ದು, ಒಂದೇ ದಿನದಲ್ಲಿ ಸವಾರರು ಒಂದು ಕೋಟಿ ರೂ.ಗೂ ಹೆಚ್ಚು ದಂಡ ಕಟ್ಟಿದ್ದಾರೆ. ರಿಯಾಯಿತಿ ದಂಡ ಜಾರಿಯಾದಾಗಿನಿಂದ ಹಿಡಿದು ನಿನ್ನೆಯವರೆಗೆ 9 ಕೋಟಿ ರೂಪಾಯಿಗೂ ಹೆಚ್ಚು ದಂಡ ಸಂಗ್ರಹವಾಗಿದೆ. ಶುಕ್ರವಾರದವರೆಗೆ 8 ಕೋಟಿ ರೂ.ವರೆಗೆ ದಂಡ ಸಂಗ್ರಹ ಆಗಿತ್ತು‌. ರಿಯಾಯಿತಿ ದಂಡ ಪಾವತಿಸಲು ನಿನ್ನೆಯೇ ಕೊನೆ ದಿನ. ಫೆಬ್ರವರಿ 11ಕ್ಕೂ …

Read More »

ಜಿ20 ಔತಣಕೂಟದಲ್ಲಿ ನಿತೀಶ್, ಸ್ಟಾಲಿನ್, ಮಮತಾ ಭಾಗಿ; ಗೆಹ್ಲೋಟ್​, ಕೇಜ್ರಿವಾಲ್ ಗೈರು

ನವದೆಹಲಿ: ಶನಿವಾರ ಜಿ20 ಶೃಂಗಸಭೆಯ ಅಂಗವಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಮುಖ್ಯಮಂತ್ರಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.   ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಈ ಕಾರ್ಯಕ್ರಮದಲ್ಲಿ ವೃತ್ತಾಕಾರವಾಗಿ ಜೋಡಿಸಿದ ಊಟದ …

Read More »