ದಾವಣಗೆರೆ : ತಾಲೂಕಿನ ನಲ್ಕುಂದ ಗ್ರಾಮದ ಗ್ರಾಮಸ್ಥರು ಆಧುನಿಕ ಯುಗದಲ್ಲೂ ಮೂಢನಂಬಿಕೆ ಮೊರೆ ಹೋಗಿದ್ದಾರೆ. ತೊನ್ನು ಹತ್ತಿದ ಮಹಿಳೆಯ ಶವ ಹೊರತೆಗೆದು ಸುಟ್ಟರೆ ಮಳೆ ಬರುತ್ತೆ ಎಂದು ನಂಬಿ ಮಹಿಳೆ (ಲಕ್ಷ್ಮಿದೇವಿ)ಯ ಶವವನ್ನು ಹೊರತೆಗೆದು ಮರು ಅಂತ್ಯ ಸಂಸ್ಕಾರ ಮಾಡಿ, ಮಹಿಳೆಯ ಕುಟುಂಬಸ್ಥರ ಅನುಮತಿಯಂತೆ ಸುಟ್ಟಿದ್ದಾರೆ. ಆದರೆ ಅದೇನಾಯಿತೋ ಗೊತ್ತಿಲ್ಲ, ಕ್ಷಣಾರ್ಧದಲ್ಲೇ ಇಡೀ ನಲ್ಕುಂದ ಗ್ರಾಮ ರಣರಂಗವಾಗಿ ಮಾರ್ಪಟ್ಟಿದೆ. ದಾವಣಗೆರೆ ತಾಲೂಕಿನ ನಲ್ಕುಂದ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನ ಜೀವನ …
Read More »Monthly Archives: ಸೆಪ್ಟೆಂಬರ್ 2023
ಸೂಪರ್ ಸ್ಟಾರ್’ ರಜನಿಕಾಂತ್‌ಗೆ ರಾಜ್ಯಪಾಲ ಹುದ್ದೆ?
ಮಧುರೈ (ತಮಿಳುನಾಡು): ”ಎಲ್ಲವೂ ದೇವರ ಕೈಯಲ್ಲಿದೆ. ರಜಿನಿ ಅವರಿಗೆ ಇದು (ರಾಜ್ಯಪಾಲರ ಹುದ್ದೆ) ಇಷ್ಟವಿಲ್ಲ. ಆದರೆ, ಬಹುಶಃ ಅವರು ಸಿಕ್ಕರೆ ಹಿಂಜರಿಯುವುದಿಲ್ಲ” ಎಂದು ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಹೇಳಿದ್ದಾರೆ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಬಳಿಕ, ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದ್ದಾರೆ. ರಜನಿಕಾಂತ್‌ಗೆ ರಾಜ್ಯಪಾಲರ ಹುದ್ದೆ?: ”ರಜನಿಕಾಂತ್ ರಾಜಕೀಯಕ್ಕೆ ಬರಲು ಯೋಚಿಸಿಲ್ಲ” ಎಂದು ರಜನಿ ಸಹೋದರ ಸತ್ಯನಾರಾಯಣ ರಾವ್ …
Read More »ಲಾಠಿ ಚಾರ್ಜ್ ಘಟನೆ ಬಳಿಕ ಅಧಿಕಾರ ವಹಿಸಿಕೊಂಡ ನೂತನ ಎಸ್ಪಿ.. ಜಲ್ನಾದಲ್ಲಿ ಇಂದಿನಿಂದ ಸೆ. 17ರ ವರೆಗೆ ಕರ್ಫ್ಯೂ ಜಾರಿ
ಜಲ್ನಾ (ಮಹಾರಾಷ್ಟ್ರ) : ಮರಾಠಾ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದೋಷಿ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಅವರ ಸ್ಥಾನಕ್ಕೆ ಈಗ ನೂತನ ಎಸ್ಪಿ ಶೈಲೇಶ್ ಬಳಕವಾಡೆ ಅಧಿಕಾರ ವಹಿಸಿಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಭಿನ್ನಾಭಿಪ್ರಾಯವನ್ನು ಪರಿಹರಿಸಲಿದ್ದೇನೆ ಎಂದು ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಶೈಲೇಶ್ ಬಳಕವಾಡೆ, ನಾನು ಸಾಮಾನ್ಯ ಮನುಷ್ಯನಂತೆ ಕೆಲಸ ಮಾಡುತ್ತೇನೆ. ಅಂತರವಳ್ಳಿ ಸಾರತಿ ಗ್ರಾಮಕ್ಕೆ ತೆರಳಿ ಪ್ರತಿಭಟನಾಕಾರ ಮನೋಜ …
Read More »‘ಸನಾತನ ಧರ್ಮ’ ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್
ಚೆನ್ನೈ: ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ರೋಗಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ‘ತಾನು ನೀಡಿದ ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ರೀತಿಯ ಸವಾಲಿಗೆ ಸಿದ್ಧ’ ಎಂದು ಉದಯನಿಧಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಬರೆದುಕೊಂಡಿರುವ ಯುವ ಸಚಿವ, ಸನಾತನ ಧರ್ಮ ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರವಿದ್ದಂತೆ. ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು. ಸನಾತನ ಜಾತಿ …
Read More »ಲೋಕಸಭಾ ಚುನಾವಣೆ 2024: ಬಾಗಲಕೋಟೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೀಗಿದೆ
ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಇನ್ನು 9 ತಿಂಗಳು ಬಾಕಿ ಇರುವಾಗಲೇ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನಮಂತನ ಬಾಲದಂತೆ ಬೆಳೆಯುತ್ತಿದ್ದು, ನಾನಾ..ನೀನಾ ಎಂಬ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಸೋಲು ಕಂಡಿರುವ ವೀಣಾ ಕಾಶಪ್ಪನವರ ಮತ್ತೆ ಅಖಾಡಕ್ಕಿಳಿಯುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಹಲವರು ತಾವೂ ಕೂಡ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗೆ …
Read More »ಮಂಗಸೂಳಿ ಗ್ರಾಮದ ಆರಾಧ್ಯ ದೈವ ಶ್ರೀ ಮಲ್ಲಯ್ಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾವಿರಾರು ಭಕ್ತರ ವಿಶೇಷ ಪೂಜೆ
ಕಾಗವಾಡದ ತಾಲೂಕಿನ ಮಂಗಸೂಳಿ ಗ್ರಾಮದ ಆರಾಧ್ಯ ದೈವ ಶ್ರೀ ಮಲ್ಲಯ್ಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾವಿರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಶ್ರಾವಣ ಮಾಸದ ನಾಲ್ಕನೇ ಭಾನುವಾರದಂದು ಎರಡೂ ರಾಜ್ಯಗಳ ಗಡಿ ಗ್ರಾಮಗಳ ಭಕ್ತರು ಆಗಮಿಸಿ ದೇವರಿಗೆ ಹರಕೆ ತೀರಿಸಿದರು. ದೇವಸ್ಥಾನದ ಅರ್ಚಕ ಪ್ರಭು ಪೂಜಾರಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಮಂಗಸೂಳಿ ದಕ್ಷಿಣ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಮಲ್ಲಯ್ಯನ ದೇಗುಲಕ್ಕೆ ಹೆಸರುವಾಸಿಯಾಗಿದೆ. ಮಂಗಸೂಳಿ ಎಂಬ …
Read More »ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ : ಪ್ರದೀಪ್ ಶೆಟ್ಟರ್
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ.ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆ ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ತುಳದಿದ್ದೆ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ . ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ. ಮಾಜಿ ಸಚಿವರಾದ ಮುನೇನಕೊಪ್ಪ,ಮಾಧುಸ್ವಾಮಿ,ರೇಣುಕಾಚಾರ್ಯ,ಮಾಜಿ ಶಾಸಕ ಚಿಕ್ಕನಗೌಡರ ಒಂದು ಕಾಲ ಹೊರಗಡೆ ಇಟ್ಟಿದ್ದಾರೆ. ನಾನು ವಿಧಾನಪರಿಷತ್ …
Read More »ಬೆಳಗಾವಿ ಜಿಲ್ಲೆಯಲ್ಲಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.
ಬೆಳಗಾವಿ : ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಬೆಳಗಾವಿ: ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ನಾಗರಿಕ, ಬ್ಯಾಂಕಿಂಗ್ ಸೇವೆಗಳು, ಆರ್ ಟಿಐ ಸೇರಿದಂತೆ ಗ್ರಾಮ ಮಟ್ಟದಲ್ಲಿಯೇ ಎಲ್ಲಾ ನಾಗರಿಕ ಕೇಂದ್ರೀತ ಚಟುವಟಿಕೆಗಳಿಗಾಗಿ ನೆರವು …
Read More »ನಾಗನೂರ: ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ*: ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ತಾಲೂಕಿನ ನಾಗನೂರ ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಬ್ಯಾರೇಜ್ ನಿರ್ಮಾಣದಿಂದ ರೈತರು …
Read More »ಮಾಜಿ ಸಚಿವರು, ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕೊಡಬೇಡಿ.. ಕಾರ್ಯಕರ್ತರನ್ನೇ ಪರಿಗಣಿಸಿ- ಕೈ ಮುಖಂಡರ ಆಗ್ರಹ
ಬೆಂಗಳೂರು: ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪ್ರಚಾರ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಕೈ ಕಾರ್ಯಕರ್ತರು ನಿಗಮ ಮಂಡಳಿಗೆ ಶಾಸಕರನ್ನು ನೇಮಕ ಮಾಡದಂತೆ ಒಕ್ಕೋರಲಿನ ಆಗ್ರಹ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್, ನಿಗಮ ಮಂಡಳಿಗಳ ಅಧ್ಯಕ್ಷ, ಸದಸ್ಯ ಸ್ಥಾನವನ್ನು ಈ ತಿಂಗಳಾತ್ಯಕ್ಕೆ ನೇಮಿಸುವಂತೆ ಸಲಹೆ ನೀಡಿದರು. ಎಲ್ಲರಿಗೂ ಅವಾಕಶ ಸಿಗುವ ನಿಟ್ಟಿನಲ್ಲಿ …
Read More »