Breaking News

Monthly Archives: ಸೆಪ್ಟೆಂಬರ್ 2023

ಹಿರಿಯ ನಟಿ ವಹೀದಾ ರೆಹಮಾನ್​ಗೆ ‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಘೋಷಣೆ

ಭಾರತೀಯ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್​ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. ಭಾರತೀಯ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್​ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಜೀವಮಾನ ಶ್ರೇಷ್ಠ ಸಾಧನೆಗೆ ಈ ಗೌರವ ನೀಡಲಾಗುತ್ತದೆ. ಅನುರಾಗ್ ಸಿಂಗ್ ಠಾಕೂರ್ ಟ್ವೀಟ್​: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ …

Read More »

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಅಭೂತ ಪೂರ್ವ ಸ್ಪಂದನೆ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಾಶ್ ಹುಕ್ಕೇರಿ ಹೇಳಿದರು. ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ನಡೆದ ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ವೇದಿಕೆಗೆ ಆಗಮಿಸಿ ಅಹವಾಲುಗಳನ್ನು ಸಲ್ಲಿಸಿದರು. ಇದಲ್ಲದೇ ಸಭಾಭವನದಲ್ಲಿ ಸ್ಥಾಪಿಸಲಾಗಿದ್ದು ಎಂಟು ಕೌಂಟರ್ ಗಳಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು …

Read More »

ಬರ ಪರಿಹಾರಕ್ಕೆ ಸರ್ಕಾರಕ್ಕೆ ಬೆಳಗಾವಿಯ ಕಡೋಲಿ ರೈತರ ಆಗ್ರಹ

ಬೆಳಗಾವಿ: ಮುಂಗಾರು ಮಳೆ ಕೈ ಕೊಟ್ಟಿದ್ದು ಜಿಲ್ಲೆಯ ಅನ್ನದಾತರು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಆಲೂಗಡ್ಡೆ ಬೆಳೆದಿರುವ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ರೈತರು ಬೆಳೆ ಹಾನಿ ಭೀತಿಯಲ್ಲಿದ್ದು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಒಂದು ವರ್ಷ ಅತಿವೃಷ್ಟಿ, ಮತ್ತೊಂದು ವರ್ಷ ಅನಾವೃಷ್ಟಿ. ಇದು ರೈತರ ಜೀವನವನ್ನು ಕಂಗಾಲು ಮಾಡಿಬಿಟ್ಟಿದೆ. ಮಳೆ ನಂಬಿ ಸಾಲ ಮಾಡಿ ಬಿತ್ತಿದ್ದ ಆಲೂಗಡ್ಡೆ ಬೀಜಗಳು ಭೂಮಿಯಲ್ಲೇ ಕಮರಿವೆ. ಹಾಕಿದ ಗೊಬ್ಬರ ನೀರಿಲ್ಲದ್ದೇ ಮೇಲೆಯೇ ಇದೆ. ಇನ್ನೂ ಒಂದಿಷ್ಟು ಬೆಳೆದರೂ …

Read More »

ಚಿಂಚೋಳಿ ಜನತಾ ದರ್ಶನ ಕಾರ್ಯಕ್ರಮ: 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ, 250 ಸ್ಥಳದಲ್ಲಿಯೇ ವಿಲೇವಾರಿ

ಕಲಬುರಗಿ : ಚಿಂಚೋಳಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಂದಾಜು 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು, ಆಧಾರ್ ಸಂಬಂಧಿತ 250ಕ್ಕೂ ಹೆಚ್ಚು ಅರ್ಜಿ ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗಿದೆ. ಉಳಿದಂತೆ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗುತ್ತದೆ. 2-3 ದಿನದಲ್ಲಿ ಆದ್ಯತೆ ಮೇರೆಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ, ಜೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ. …

Read More »

ಬೆಳಗಾವಿಯಲ್ಲಿ ಸರ್ಕಾರಿ ಬಸ್​ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳ ಗಾಯ

ಬೆಳಗಾವಿ: ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 20 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಬಸ್ ಸಂಚರಿಸುತ್ತಿತ್ತು. 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಪಾಟಾ ಕಟ್ ಆದ ಪರಿಣಾಮ ಬಿಜಗುಪ್ಪಿ ಸಮೀಪದ ರಸ್ತೆ ಪಕ್ಕದ ಜಮೀನಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಬಸ್​ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಘಟನೆ ನಡೆದ ತಕ್ಷಣವೇ 108ಕ್ಕೆ ಕರೆ ಮಾಡಿ ಗಾಯಾಳುಗಳನ್ನು ರಾಮದುರ್ಗ …

Read More »

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪ್ರತಿಭಟನೆಯಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಹಾಗಾಗಿ ಬಂದ್​ನಿಂದ ಜನಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ಕಾರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಹೇಳಿಕೆ ನೀಡಿದರು.   ಎರಡು ದಿನಗಳ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪ್ರವಾಸದ ಹಿನ್ನೆಲೆಯಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ, ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಪ್ರತಿಭಟನೆ ಹೇಗೆ ಸಂವಿಧಾನಾತ್ಮಕ …

Read More »

ಬಂದ್‌’ಬಸ್ತ್​ಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಸತ್ತ ಇಲಿ!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್​ ನಡೆಸುತ್ತಿವೆ. ಈ ಸಂದರ್ಭದಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ತಿಂಡಿಯಲ್ಲಿ ಇಲಿ ಪತ್ತೆಯಾಗಿದೆ. ಯಶವಂತಪುರ ಸಂಚಾರ ಠಾಣಾ ಸಿಬ್ಬಂದಿಯೊಬ್ಬರು ಪೊಲೀಸ್‌ ಇಲಾಖೆಯಿಂದ ಸರಬರಾಜು ಮಾಡಲಾಗಿದ್ದ ತಿಂಡಿಯ ಪೊಟ್ಟಣ ತೆರೆದಾಗ ಇಲಿ ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ವಿಷಯ ತಿಳಿಸಿದ್ದು, ಯಾರೂ ಸಹ ಆ ಆಹಾರ ಸೇವಿಸದಂತೆ ಸೂಚನೆ ನೀಡಿದ್ದಾರೆ. …

Read More »

ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟರಾದ ಬ್ಯಾಂಕ್ ಜನಾರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರ ಗುರುಪ್ರಸಾದ್ ಈಟಿವಿ ಭಾರತದ ಜೊತೆ ಮಾತನಾಡಿ, ”ತಂದೆಯವರಿಗೆ ಹೃದಯಾಘಾತ ಆಗಿಲ್ಲ. ಕೆಲವು ಮಾಧ್ಯಮಗಳಲ್ಲಿ ಹೃದಯಾಘಾತ ಅಂತಾ ಹೇಳಲಾಗುತ್ತಿದೆ. ಅದು ಸುಳ್ಳು. ಅವರಿಗೆ ಬಿಪಿ ಜಾಸ್ತಿಯಾಗಿ ಆಗಾಗ ಎದೆನೋವು ಕಾಣಿಸಿಕೊಳ್ಳುತ್ತದೆ. ಶುಕ್ರವಾರ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ನಡೆಯುತ್ತಿದೆ. ಹೃದಯಕ್ಕೆ ಎರಡು ಸ್ಟಂಟ್​ಗಳನ್ನು ಹಾಕಲಾಗಿದೆ. ಈಗ ಆರಾಮವಾಗಿದ್ದಾರೆ” ಎಂದು ಮಾಹಿತಿ ನೀಡಿದರು. …

Read More »

ನಿಮಗೆ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಖಡಕ್​ ವಾರ್ನಿಂಗ್​

ಬೆಂಗಳೂರು: ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ …

Read More »

ಪರಿಹಾರ ನೀಡಲು ಆರಂಭಿಸಿದ ನಂತರ ರೈತ ಆತ್ಮಹತ್ಯೆಗಳು ಹೆಚ್ಚಾಗಿವೆ ಎಂದು ಹೇಳಿಲ್ಲ: ಸಚಿವ ಶಿವಾನಂದ ಪಾಟೀಲ್ ಸ್ಪಷ್ಟನೆ

ಹಾವೇರಿ : ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮತ್ತು ಹಾವೇರಿ ಜಿಲ್ಲೆಯ ರೈತರ ನಡುವಿನ ಜಟಾಪಟಿಗೆ ತೆರೆಬಿದ್ದಿದೆ. ಸೋಮವಾರ ನಡೆದ ರೈತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ನಾನು ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಆರಂಭಿಸಿದ ನಂತರ ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಈ ರೀತಿ ಹೇಳಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಜೊತೆಗೆ ಯಾರದಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದರು. ಈ …

Read More »