ನಟ ಚಿರಂಜೀವಿ ಸರ್ಜಾ (Chiranjeevi Sarja) ಅವರು ಅಭಿನಯಿಸಿದ ಕೊನೇ ಸಿನಿಮಾ ‘ರಾಜಮಾರ್ತಾಂಡ’ ಈಗ ಬಿಡುಗಡೆ ಆಗುತ್ತಿದೆ. ಅಕ್ಟೋಬರ್ 6ರಂದು ಈ ಚಿತ್ರ ತೆರೆಕಾಣಲಿದೆ. ಆ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಲಾಗಿದ್ದು, ಅದರಲ್ಲಿ ಧ್ರುವ ಸರ್ಜಾ ಭಾಗಿ ಆಗಿದ್ದಾರೆ. ಚಿರು ನಿಧನದ ಬಳಿಕ ಈ ಸಿನಿಮಾಗೆ ಧ್ರುವ ಅವರೇ ಡಬ್ಬಿಂಗ್ ಮಾಡಿಕೊಟ್ಟರು. ಈಗ ‘ರಾಜಮಾರ್ತಾಂಡ’ (Rajamarthanda) ಸಿನಿಮಾದ ಕೆಲಸಗಳು ಪೂರ್ಣಗೊಂಡಿವೆ. ಪ್ರೇಕ್ಷಕರ ಎದುರು ಬರುತ್ತಿರುವ ಈ ಸಂದರ್ಭದಲ್ಲಿ ಎಲ್ಲ ಪ್ರೇಕ್ಷಕರಿಗೂ ಧ್ರುವ ಸರ್ಜಾ ಒಂದು ಮನವಿ ಮಾಡಿಕೊಂಡಿದ್ದಾರೆ. …
Read More »Daily Archives: ಅಕ್ಟೋಬರ್ 3, 2023
ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ, ರೈತ ಸ್ಥಳದಲ್ಲೇ ಸಾವು
ಮೈಸೂರು, ಅ.02: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರಿದಿದೆ (Tiger Attack). ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ (Death). ರೈತ ಗಣೇಶ(55) ಮೃತ ದುರ್ದೈವಿ. ದನ ಮೇಯಿಸುತ್ತಿದ್ದಾಗಲೇ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಅರ್ಧ ತಿಂದು ಹುಲಿ ಬಿಟ್ಟುಹೋಗಿದೆ. ಕೂಡಲೇ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ …
Read More »ಕರ್ನಾಟಕವನ್ನು ಗೂಂಡಾರಾಜ್ಯ ಮಾಡಲು ಈ ಸರಕಾರ ಪಣತೊಟ್ಟಂತಿದೆ : ಪ್ರಲ್ಹಾದ ಜೋಶಿ
ಹುಬ್ಬಳ್ಳಿ, ಅ.02: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ (G Parameshwara) ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಪ್ರಲ್ಹಾದ ಜೋಶಿಯವರು, …
Read More »ಪತ್ನಿ ಅಗಲಿಕೆಯಿಂದ ಮನನೊಂದು ಹೆಡ್ಕಾನ್ಸ್ಟೇಬಲ್ ಆತ್ಮಹತ್ಯೆ
ಶಿವಮೊಗ್ಗ: ಇಲ್ಲಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿನೋಬನಗರದಲ್ಲಿ ನಡೆದಿದೆ. ಜಯಪ್ಪ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ಟೇಬಲ್. ಜಯಪ್ಪ ಅವರು ಮೂಲತಃ ಹಾವೇರಿ ಜಿಲ್ಲೆಯ ಸಾತನೂರು ಗ್ರಾಮದವರಾಗಿದ್ದಾರೆ. ಐದು ದಿನಗಳ ಹಿಂದಷ್ಟೇ ಜಯಪ್ಪ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ ವಯಸ್ಸಾದ ತಾಯಿ ಮತ್ತು ಇಬ್ಬರು ಮಕ್ಕಳಿದ್ದಾರೆ. …
Read More »ಮದ್ಯ ಕುಡಿಯಲು ಹಣ ನೀಡದ್ದಕ್ಕೆ ತಾಯಿಯನ್ನೇ ಕೊಂದ ಪಾಪಿ ಪುತ್ರ..
ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನೇ ಮಗ ಹತ್ಯೆ ಮಾಡಿರುವ ಘಟನೆಜಿಲ್ಲೆಯ ಕಡೂರು ತಾಲೂಕಿನ ಕೆ ಬಿದರೆ ಗ್ರಾಮದಲ್ಲಿ ನಡೆದಿದೆ. ಕಮಲಮ್ಮ (50) ಕೊಲೆಗೀಡಾದ ತಾಯಿ, ಸಂತೋಷ್ (30) ಕೊಲೆ ಆರೋಪಿ. ಹತ್ಯೆ ಮಾಡಿದ ಬಳಿಕ ಗ್ರಾಮದ ತೆಂಗಿನ ನಾರಿನ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕಲ್ಲೇಶಪ್ಪ ಬಳಿಗೆ ಬಂದು ಆತನೇ ವಿಷಯ ತಿಳಿಸಿದ್ದಾನೆ. ಕುಡಿತದ ಚಟಕ್ಕೆ ದಾಸನಾಗಿದ್ದ ಸಂತೋಷ್ ಹಲವು ದಿನಗಳಿಂದ ಮದ್ಯ ಸೇವಿಸಿ ತಾಯಿಯೊಂದಿಗೆ ಜಗಳವಾಡುತ್ತಿದ್ದ. ಇಂದು ಸಹ …
Read More »ಡೋಲಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮಗುವಿಗೆ ಜನ್ಮ ನೀಡಿದ ಮಹಿಳೆ; ಮುಖ್ಯಮಂತ್ರಿ ದತ್ತು ಪಡೆದ ಗ್ರಾಮದಲ್ಲಿ ಘಟನೆ!
ಥಾಣೆ (ಮಹಾರಾಷ್ಟ್ರ) : ಬುಡಕಟ್ಟು ಮಹಿಳೆಯೊಬ್ಬರನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಹೆರಿಗೆ ಆಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಶಾಹಾಪುರ್ ತಾಲೂಕಿನ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ, ಮಹಿಳೆ ಮಾರ್ಗಮಧ್ಯೆ ಮಗುವಿಗೆ ಜನ್ಮ ನೀಡಿದ್ದಾರೆ. ಗ್ರಾಮಕ್ಕೆ ರಸ್ತೆ ಸೌಲಭ್ಯವಿಲ್ಲ: ಕಳೆದ ಬಾನುವಾರ ಪಾಟಿಕಚಾ ಪಾಡ ಗ್ರಾಮದ ಪ್ರಣಾಲಿ ಗುರುನಾಥ್ ವಾಜೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಗ್ರಾಮದಲ್ಲಿ ಸರಿಯಾದ …
Read More »3,000 ಮೀ ಸ್ಟೀಪಲ್‌ಚೇಸ್‌ನಲ್ಲಿ ಭಾರತಕ್ಕೆ ಬೆಳ್ಳಿ, ಕಂಚು; ಆರ್ಚರಿ, ಸ್ಕ್ವಾಷ್ನಲ್ಲಿ ಕ್ವಾರ್ಟರ್ ಫೈನಲ್ಗೆ ಲಗ್ಗೆ
ಹ್ಯಾಂಗ್‌ಝೌ (ಚೀನಾ): ಶೂಟಿಂಗ್ ವಿಭಾಗದ ನಂತರ ಭಾರತ ಅಥ್ಲೆಟಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಏಷ್ಯಾಡ್ನ 9ನೇ ದಿನವಾದ ಇಂದು (ಸೋಮವಾರ) 3,000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಹಾಗು ಕಂಚಿನ ಪದಕ ಗೌರವ ಸಿಕ್ಕಿದೆ. ಪಾರುಲ್ ಚೌಧರಿ 9:27.63 ಸೆಕೆಂಡ್ಗಳ ಸಮಯದಲ್ಲಿ ಗುರಿ ಮುಟ್ಟಿ ಎರಡನೇ ಸ್ಥಾನ ಪಡೆದರು. ಚೊಚ್ಚಲ ಏಷ್ಯನ್ ಗೇಮ್ಸ್ ಆಡುತ್ತಿರುವ ಪ್ರೀತಿ 9:43.32 ಸೆಕೆಂಡ್‌ನಿಂದ ಮೂರನೇ ಸ್ಥಾನ ಅಲಂಕರಿಸಿದರು. ಇದು ಅವರ ವೈಯಕ್ತಿಕ ಅತ್ಯುತ್ತಮ ಸಮಯವಾಗಿದೆ. ಹಾಲಿ ವಿಶ್ವ …
Read More »12th ಫೇಲ್’ ಆದವರನ್ನು ಕರ್ನಾಟಕದಲ್ಲಿ ಪಾಸ್ ಮಾಡಿಸುವ ಜವಾಬ್ದಾರಿ ಹೊತ್ತುಕೊಂಡ ಕೆ.ಆರ್.ಜಿ ಸ್ಟುಡಿಯೋಸ್
ವಿಧು ವಿನೋದ್ ಚೋಪ್ರಾ ಅವರ ’12th ಫೇಲ್’ ಚಿತ್ರವನ್ನು ಕನ್ನಡ ಮತ್ತು ಹಿಂದಿಯಲ್ಲಿ ಅಕ್ಟೋಬರ್ 27ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ಕೆ.ಆರ್.ಜಿ ಸ್ಟುಡಿಯೋಸ್ ಹೊತ್ತುಕೊಂಡಿದೆ. ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ಸದಾ ಮುಂಚೂಣಿಯಲ್ಲಿರುತ್ತದೆ. ವಿನೂತನ ಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸುವಲ್ಲಿಯೂ ಮುಂದಡಿ ಇಡುತ್ತಿದೆ. ‘ಪರಿಂದಾ’, ‘1942 ಎ ಲವ್ ಸ್ಟೋರಿ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವುದರ …
Read More »