ಬಾಗಲಕೋಟೆ, ಅಕ್ಟೋಬರ್ 04: ಆ ನಗರದ ಸುತ್ತಮುತ್ತ ಗುಡ್ಡಬೆಟ್ಟಗಳಿವೆ. ಕೆಲವರ ಖಾಸಗಿ ಜಮೀನುಗಳು ಕೂಡ ಬೆಟ್ಟದ ರೀತಿಯಲ್ಲೇ ಇವೆ. ಆದರೆ ಇಂತಹ ಜಾಗದಲ್ಲಿ ಮಣ್ಣು ಗಣಿಗಾರಿಕೆ (mud mining) ಎಗ್ಗಿಲ್ಲದೆ ಸಾಗುತ್ತಿದೆ. ಕೆಲವರು ನಿಯಮ ಪಾಲಿಸಿದರೆ ಬಹುತೇಕರು ನಿಯಮ ಉಲ್ಲಂಘಿಸಿ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ, ಸೀಮಿಕೇರಿ ಗದ್ದನಕೇರಿ ವ್ಯಾಪ್ತಿಯಲ್ಲಿ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಸರಕಾರಿ ಜಾಗೆಯಲ್ಲಿ ಬೆಟ್ಟ ಗುಡ್ಡ ಅಗೆದು ಮಣ್ಣು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಖಾಸಗಿ ಜಮೀನುಗಳ …
Read More »Daily Archives: ಅಕ್ಟೋಬರ್ 4, 2023
ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್ಪಿಜಿ ಸಿಲಿಂಡರ್ ಸಬ್ಸಿಡಿ 300 ರೂ.ಗೆ ಹೆಚ್ಚಳ
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್ಪಿಜಿ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಈ ಮಾಹಿತಿ ನೀಡಿದರು. 14.2 ಕೆಜಿಯ ಸಿಲಿಂಡರ್ ಬೆಲೆ ಮಾರುಕಟ್ಟೆಯಲ್ಲಿ 903 ರೂ. ಇದೆ. ಸದ್ಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿಯೊಂದಿಗೆ 703 …
Read More »ಮೊಮ್ಮಗಳ ಸಿಟಿ ಸ್ಕ್ಯಾನ್ ಮಾಡಿಸಲು ಆಸ್ಪತ್ರೆಗೆ ರಿವಾಲ್ವರ್ ತಂದ ಬಿಹಾರ ಶಾಸಕ
ಸಂಯುಕ್ತ ಜನತಾದಳ (ಜೆಡಿಯು) ಶಾಸಕರೊಬ್ಬರು ತಮ್ಮ ಮೊಮ್ಮಗಳನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಾಗ ಆತ್ಮರಕ್ಷಣೆಗಾಗಿ ನೀಡಿರುವ ರಿವಾಲ್ವರ್ ಅನ್ನು ಸಾರ್ವಜನಿಕವಾಗಿ ಕೈಯಲ್ಲಿ ಹಿಡಿದುಕೊಂಡು ಓಡಾಡಿದ್ದು, ಆತಂಕದ ಜೊತೆಗೆ ಅಚ್ಚರಿಗೂ ಕಾರಣವಾಗಿದೆ. ಜೆಡಿಯು ಶಾಸಕ ಗೋಪಾಲ್ ಮಂಡಲ್ ಎಂಬವರು ಮಂಗಳವಾರ ಸಂಜೆ ಭಾಗಲ್‌ಪುರದ ಜವಾಹರ್ ಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಅನಾರೋಗ್ಯಕ್ಕೀಡಾಗಿದ್ದ ತಮ್ಮ ಮೊಮ್ಮಗಳನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದರು. ಭದ್ರತಾ ಸಿಬ್ಬಂದಿಯೂ ಜೊತೆಗಿದ್ದರು. ಆದರೂ, ಶಾಸಕರು ಕೈಯಲ್ಲಿ …
Read More »ಡಿಪ್ಲೊಮಾ ಸಿಇಟಿ ಬೇಡಿಕೆಗೆ ಎಬಿವಿಪಿ ಪ್ರತಿಭಟನೆ
ಡಿಪ್ಲೊಮಾ ವಿದ್ಯಾರ್ಥಿಗಳಿಗೆ ನಿಯಮಾನುಸಾರ 3 ಹಂತದ ಸಿಇಟಿ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪಿಜಿಸಿಇಟಿ ನಡೆಸುತ್ತಿರುವುದು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಎಬಿವಿಪಿ ಟಿಳಕವಾಡಿಯ ಆರ್‌ಪಿಡಿ ಕ್ರಾಸ್‌ನಲ್ಲಿ ಇಂದು ಪ್ರತಿಭಟನೆ ನಡೆಸಿತು. ಡಿಪ್ಲೊಮಾ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆ ಫಲಿತಾಂಶ ವಿಳಂಬವಾಗಿದೆ. ಈಗ ತರಾತುರಿಯಲ್ಲಿ ಅವರಿಗೆ …
Read More »ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಸಚಿನ್ ತೆಂಡೂಲ್ಕರ್ ‘ಜಾಗತಿಕ ರಾಯಭಾರಿ’
ನವದೆಹಲಿ: ಭಾರತ ಆತಿಥ್ಯದ 2023ರ ವಿಶ್ವಕಪ್ ಕ್ರಿಕೆಟ್ಗೆ ಸಚಿನ್ ತೆಂಡೂಲ್ಕರ್ ಅವರನ್ನು ಜಾಗತಿಕ ರಾಯಭಾರಿಯಾಗಿ ಹೆಸರಿಸಲಾಗಿದೆ. ಕ್ರಿಕೆಟ್ ದೇವರೆಂದೇ ಕರೆಯಲ್ಪಡುವ ಸಚಿನ್ ಅವರಿಗೆ ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಶೇಷ ಗೌರವ ನೀಡಿದೆ. ಈ ಹಿಂದೆ ಸಚಿನ್, 2013 ಮತ್ತು 2015 ವಿಶ್ವಕಪ್ನ ಅಂಬಾಸಿಡರ್ ಆಗಿ ನೇಮಕವಾಗಿದ್ದರು. ಉದ್ಘಾಟನಾ ಪಂದ್ಯದ ವೇಳೆ ಸಚಿನ್ ವಿಶ್ವಕಪ್ ಟ್ರೋಫಿಯನ್ನು ಮೈದಾನಕ್ಕೆ ತರಲಿದ್ದಾರೆ. ಹಾಗೆಯೇ ವಿಶ್ವಕಪ್‌ಗೆ ಚಾಲನೆಯನ್ನೂ ನೀಡಲಿದ್ದಾರೆ. …
Read More »ಬಿಜೆಪಿ ಸರಕಾರ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ: ಡಿ.ಕೆ.ಶಿ.
ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು ಬಿಜೆಪಿಯವರಿಗೆ ತಮ್ಮ ಮನೆ …
Read More »ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಕಿತ್ತೂರು ಉತ್ಸವ:ಸತೀಶ್ ಜಾರಕಿಹೊಳಿ
ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ ಮೂರು ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು” ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಬುಧವಾರ(ಅ.4) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ದಿನಗಳ ಉತ್ಸವವನ್ನು …
Read More »ನಮ್ಮ ಸರ್ಕಾರದ ಅವಧಿಯಲ್ಲೇ ಬೆಳಗಾವಿ ಇಎಸ್ ಐ ಆಸ್ಪತ್ರೆ ಮರು ನಿರ್ಮಾಣ:ಸಚಿವ ಸಂತೋಷ ಲಾಡ್
ಬೆಳಗಾವಿಯ ಇಎಸ್ ಐ ಆಸ್ಪತ್ರೆಯನ್ನು ಅತ್ಯಾಧುನಿಕ ಮಾದರಿಯನ್ನಾಗಿ ನಿರ್ಮಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಶೀಘ್ರದಲ್ಲಿಯೇ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದುಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಬೆಳಗಾವಿಯಲ್ಲಿ ಬುಧವಾರ ನಡೆದ ಕಾರ್ಮಿಕ ಇಲಾಖೆ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಯಾಬಿನೆಟ್ ದರ್ಜೆ ಸಚಿವರಿಗೆ ಆಯಾ ಇಲಾಖೆ ಬಗ್ಗೆ ಗಮನ ಹರಿಸುವಂತೆ ನಮ್ಮ ನಾಯಕ ಸಿದ್ದರಾಮಯ್ಯ ತಾಖಿತ್ ಮಾಡಿದ್ದಾರೆ ಅದಕ್ಕಾಗಿ ನಾವು ನಮ್ಮ …
Read More »ತೆರಿಗೆ ವಂಚನೆ ಆರೋಪ: ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆಗಳ ಪರಿಶೀಲನೆ
ಬೆಂಗಳೂರು : ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ, ಉದ್ಯಮಿಗಳ ಒಡೆತನದ ಸಂಸ್ಥೆಗಳ ಮೇಲೂ ದಾಳಿ ಮಾಡಲಾಗಿದೆ. ಚೆನ್ನೈ, ದೆಹಲಿಯಿಂದ ರಾತ್ರೋರಾತ್ರಿ ಬೆಂಗಳೂರಿಗೆ ಬಂದಿರೋ ಐಟಿ ಅಧಿಕಾರಿಗಳು, ವಿಜಯನಗರ ಬಿಟಿಎಂ, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ …
Read More »70 ವರ್ಷಗಳ ಹಳೆಯ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಪ್ರವೇಶ
ಉತ್ತರಕಾಶಿ (ಉತ್ತರಾಖಂಡ): ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯದಲ್ಲಿ 70 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಪ್ರವೇಶ ನೀಡಲಾಗಿದೆ. ಮತ್ತೊಂದೆಡೆ, ಎರಡು ದಶಕಗಳ ನಂತರ ವಿದ್ಯಾರ್ಥಿನಿಯರು ಸಹ ಮಹಾವಿದ್ಯಾಲಯಕ್ಕೆ ಮರಳಿದ್ದಾರೆ. ಉತ್ತರಕಾಶಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಮೊದಲು ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗಾಗಿ 1953ರಲ್ಲಿ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯ ಸ್ಥಾಪಿಸಲಾಗಿದೆ. ದಿವಂಗತ ಬ್ರಹ್ಮಸ್ವರೂಪಾನಂದ ಅವರು ಆಗ ಕಾಲದಲ್ಲಿ 5ರಿಂದ 8 ವಿದ್ಯಾರ್ಥಿಗಳೊಂದಿಗೆ ಈ …
Read More »