ಬೆಂಗಳೂರು: ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್ 6 ರಂದು ಹೊರಡಿಸಿದ್ದ ನಿರ್ದೇಶನವನ್ನು ಇದೀಗ ಹಿಂಪಡೆದುಕೊಂಡಿದೆ. ಜೂನ್ 6ರಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಮಾಹಿತಿ ಹಕ್ಕಿನ ಅಡಿ ಹೆಚ್ಚು ಬಾರಿ ಅರ್ಜಿಸಲ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸುವಂತೆ ಸೂಚನೆ ನೀಡಿತ್ತು. ಆ ಮೂಲಕ ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರ ಅಧಿಕಾರವನ್ನು …
Read More »Daily Archives: ಅಕ್ಟೋಬರ್ 7, 2023
ದಸರಾ ‘ಯುವ ಸಂಭ್ರಮ’ಕ್ಕೆ ಸಚಿವ ಹೆಚ್.ಸಿ ಮಹದೇವಪ್ಪ ಚಾಲನೆ: ಸಮಾರಂಭಕ್ಕೆ ಸಿಂಹಪ್ರಿಯಾ ಸಾಕ್ಷಿ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಿಸುವ ‘ಯುವ ಸಂಭ್ರಮ’ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಉದ್ಘಾಟಿಸಿದರು. ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ಗಣ್ಯರು ಹಾಗೂ ಅತಿಥಿಗಳು ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ ‘ಯುವ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಿದರು. ಸಮಾರಂಭದ …
Read More »ಬೈಲಹೊಂಗಲ, ಸವದತ್ತಿ, ಯರಗಟ್ಟಿ, ರಾಮದುರ್ಗ ತಾಲೂಕುಗಳಲ್ಲಿ ಕೇಂದ್ರದ ಅಧಿಕಾರಿಗಳ ತಂಡ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಅಧ್ಯಯನ ನಡೆಸಿತು.
ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಇಂದು ಪರಿಶೀಲಿಸಿತು. ಇದಕ್ಕೂ ಮುನ್ನ ನಗರದ ಪ್ರವಾಸಿಮಂದಿರದಲ್ಲಿ ಬೆಳಗ್ಗೆ ಅಜಿತ್ ಕುಮಾರ್ ಸಾಹು ತಂಡ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿತು. ನಂತರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತು. ಮೊದಲಿಗೆ ಬೈಲಹೊಂಗಲ ತಾಲೂಕಿನ ನೇಸರಗಿ ಬಳಿಯ ನಾಗಪ್ಪ …
Read More »ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ: ಭೈರತಿ ಸುರೇಶ್
ಬೆಳಗಾವಿ : ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್ ತುಂಬಾ ಸಂಕಷ್ಟದಲ್ಲಿವೆ ಎಂಬ ಪ್ರಶ್ನೆಗೆ, “ಹಿಂದಿನ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗೆ ಕೆಟ್ಟ ಹೆಸರು ತರಲು ಸರಿಯಾಗಿ ನಿರ್ವಹಣೆ ಮಾಡದೇ ಕ್ಯಾಂಟೀನ್ಗಳನ್ನು ಮುಚ್ಚುವ …
Read More »