Breaking News

Daily Archives: ಅಕ್ಟೋಬರ್ 14, 2023

ಪಾಕಿಸ್ತಾನ ಜೊತೆ ಆಡುವುದೇ ಒಂದು ವಿಶೇಷ’.. ಭಾರತ ಪಾಕಿಸ್ತಾನ ಕದನಕ್ಕೂ ಮುನ್ನ ಅಭಿಪ್ರಾಯ ಹಂಚಿಕೊಂಡ ರಾಹುಲ್​, ಕೊಹ್ಲಿ, ಪಾಂಡ್ಯ

ಪಾಕಿಸ್ತಾನ ಜೊತೆ ಆಡುವುದೇ ಒಂದು ವಿಶೇಷ ಎಂದು ಭಾರತದ ರನ್​ ಮಷಿನ್​ ವಿರಾಟ್​ ಕೊಹ್ಲಿ ಹೇಳಿದ್ದಾರೆ. ಇದರೊಂದಿಗೆ ಆಲ್​ರೌಂಡರ್​ ಆಟಗಾರ ಹಾರ್ದಿಕ್​ ಪಾಂಡ್ಯ ಮತ್ತು ಕೋಚ್​ ರಾಹುಲ್​ ದ್ರಾವಿಡ್​ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಹಮದಾಬಾದ್, ಗುಜರಾತ್: ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಕದಿನ ವಿಶ್ವಕಪ್ 2023 ರ ಬಹು ನಿರೀಕ್ಷಿತ ಪಂದ್ಯಕ್ಕೆ ಮುನ್ನ, ಮೆನ್ ಇನ್ ಬ್ಲೂ ವೈಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ರನ್​ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.     ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ಭೀಮಾತೀರದಲ್ಲಿ..: ಗ್ರಾಮ ಪಂಚಾಯತಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಕಲಬುರಗಿ : ಕೆಲವು ತಿಂಗಳುಗಳ ಕಾಲ ತಣ್ಣಗಿದ್ದ ಕಲಬುರಗಿಯ ಭೀಮಾತೀರದಲ್ಲಿ ಹಳೆ ದ್ವೇಷಕ್ಕೆ ನೆತ್ತರು ಹರಿದಿದೆ. ಅಫಜಲಪುರ ತಾಲೂಕಿನ ಚೌಡಾಪುರ ಬಸ್ ನಿಲ್ದಾಣ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ ನಡೆದಿದೆ. ಅಫಜಲಪುರ ತಾಲೂಕಿನ ಮದರಾ (ಬಿ) ಗ್ರಾ.ಪಂ.ಅಧ್ಯಕ್ಷ ಗೌಡಪ್ಪಗೌಡ ಪಾಟೀಲ ಕೊಲೆಯಾಗಿದ್ದಾರೆ. ಹಂತಕರು ಪರಾರಿಯಾಗಿದ್ದಾರೆ. ಮದರಾ (ಬಿ) ಗ್ರಾಮದಿಂದ ಇಂದು ಬೆಳಗ್ಗೆ ಕೆಲಸದ ನಿಮಿತ್ತ ಚೌಡಾಪುರಕ್ಕೆ ಆಗಮಿಸಿದ್ದ ಗೌಡಪ್ಪಗೌಡ ಪಾಟೀಲ್, ಬಸ್ ನಿಲ್ದಾಣ ಮುಂಭಾಗದಲ್ಲಿರುವ ಗ್ಯಾರೇಜ್​ನಲ್ಲಿ …

Read More »

ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೆ ಆದೇಶ

ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲದ ಕರಿಛಾಯೆ ಆವರಿಸಿರುವ ನಡುವೆ ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ಮತ್ತೊಂದು ಶಾಕ್​ ಎದುರಾಗಿದೆ. ಮಂಡ್ಯದ ಕೆಆರ್​ಎಸ್​ ಅಣೆಕಟ್ಟೆಯಿಂದ ತಮಿಳುನಾಡಿಗೆ ಅಕ್ಟೋಬರ್ 31 ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಇಂದು ಮತ್ತೊಮ್ಮೆ ಆದೇಶ ನೀಡಿದೆ. ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆ ನಡೆಸಿತು. ಕಳೆದೆರಡು ದಿನಗಳ ಹಿಂದೆ (ಅಕ್ಟೋಬರ್​ 11) …

Read More »

ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 22 ತಾಲೂಕುಗಳನ್ನು ಸೇರಿಸಿ ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು: ಹೆಚ್ಚುವರಿಯಾಗಿ 22 ಬರಪೀಡಿತ ತಾಲೂಕುಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 216 ತಾಲೂಕುಗಳು ಬರಪೀಡಿತವಾಗಿವೆ. 189 ತೀವ್ರ ಬರಪೀಡಿತ ತಾಲೂಕು, 17 ಸಾಧಾರಣ ಬರಪೀಡಿತ ತಾಲೂಕುಗಳಾಗಿವೆ. ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಗೆ ನೀಡಿರುವ ಬೆಳೆ ಹಾನಿ ಸಮೀಕ್ಷೆಯ ವರದಿ ಆಧರಿಸಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪೀಡಿತ ತಾಲೂಕುಗಳ ಪಟ್ಟಿಹೆಚ್ಚುವರಿ 22 ಬರಪೀಡಿತ ತಾಲೂಕುಗಳ …

Read More »

ರೈತರಿಗೆ ನಿತ್ಯ 5 ತಾಸು ವಿದ್ಯುತ್ ಪೂರೈಕೆ ಮಾಡಿ, ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಿ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಕಾಂ ಎಂಡಿಗಳಿಗೆ ಸೂಚನೆ ನೀಡಿದರು.   ಗೃಹ ಕಚೇರಿ ಕೃಷ್ಣಾದಲ್ಲಿಂದು ಇಂಧನ‌ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ರೈತರಿಗೆ …

Read More »

ನಾಲ್ಕು ತಿಂಗಳಲ್ಲಿ 4,248 ಕೋಟಿ ರೂ ಬಾಕಿ ವಸೂಲಿ ಮಾಡಿ: ಅಧಿಕಾರಿಗಳಿಗೆ ಸಚಿವ ಎಂ ಬಿ ಪಾಟೀಲ್ ಗಡುವು

ಬೆಂಗಳೂರು: ಉದ್ಯಮ ಸ್ಥಾಪನೆಯ ಉದ್ದೇಶಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿ (ಕೆಐಎಡಿಬಿ) ಈವರೆಗೆ ಹಂಚಿರುವ ನಿವೇಶನಗಳಿಂದ 4,248 ಕೋಟಿ ರೂ.ಗಳಷ್ಟು ಬೃಹತ್ ಬಾಕಿ ಹಣ ಬರಬೇಕಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಕಟ್ಟುನಿಟ್ಟಾಗಿ ವಸೂಲಿ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗಡುವು ವಿಧಿಸಿದ್ದಾರೆ. ಖನಿಜ‌ ಭವನದಲ್ಲಿ ಕೆಐಎಡಿಬಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈ ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ವಿಫಲರಾದರೆ ಮಂಡಲಿಯ ಕಾರ್ಯದರ್ಶಿಗಳ ವಿರುದ್ಧ …

Read More »

ಭತ್ತದ ಬೆಳೆಯಲ್ಲೇ ಮೂಡಿಬಂದ ಪುನೀತ್ ರಾಜ್‌ಕುಮಾರ್!

ರಾಯಚೂರು: ಪವರ್‌ಸ್ಟಾರ್ ದಿ.ಪುನೀತ್ ರಾಜ್​​ಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ವಿವಿಧ ರೀತಿಯಲ್ಲಿ ವಿಶೇಷ ಪ್ರೀತಿ ತೋರಿರುವುದನ್ನು ಕಂಡಿದ್ದೇವೆ. ಇಲ್ಲೊಬ್ಬ ರೈತ ಅಪ್ಪುವಿನ ಅಪ್ಪಟ ಅಭಿಯಾನಿಯಾಗಿದ್ದು, ಭತ್ತದ ಬೆಳೆಯಲ್ಲೇ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ. ಜಿಲ್ಲೆಯ ಸಿರವಾರ ತಾಲೂಕಿನ ಡೊಣ್ಣಿ ಕ್ಯಾಂಪ್‌ನ ರೈತ ಸತ್ಯನಾರಾಯಣ, ತಮ್ಮ ಭತ್ತದ ಬೆಳೆಯಲ್ಲೇ ಪುನೀತ್ ರಾಜ್​ಕುಮಾರ್ ಭಾವಚಿತ್ರ ಮೂಡಿಸುವ ಮೂಲಕ 2ನೇ ವರ್ಷ ಪುಣ್ಯಸ್ಮರಣೆಗೆ ವಿಭಿನ್ನವಾಗಿ ಪ್ರೀತಿ ವ್ಯಕ್ತಪಡಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಎರಡು …

Read More »

ನಾಡ ಹಬ್ಬ ಹಾಗೂ ಹಬ್ಬಕ್ಕಾಗಿ ಇರುವ ದಸರಾ ರಜೆಯ ಕಾರಣದಿಂದ ಪ್ರಯಾಣಿಕರಿಗಾಗಿ 2000 ಕ್ಕೂ ಅಧಿಕ ಬಸ್​ಗಳ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ವ್ಯವಸ್ಥೆ ಮಾಡಿದೆ.

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗೂ ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚಿನ ಬಸ್​ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಹಬ್ಬಕ್ಕಾಗಿ ಊರಿಗೆ ತೆರಳುವ ಮತ್ತು ರಜೆ ಮುಗಿಸಿ ವಾಪಸ್​ ಆಗಲು ಅನುಕೂಲವಾಗುವಂತೆ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಒದಗಿಸುತ್ತಿದೆ. ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ …

Read More »

ಪಂಚರಾಜ್ಯ ಚುನಾವಣೆಗೆ ಕರ್ನಾಟಕದಿಂದ ಕಾಂಗ್ರೆಸ್ ಹಣ ಕಳಿಸುತ್ತಿದೆ: ಜಿ.ಟಿ.ದೇವೇಗೌಡ

ಬೆಳಗಾವಿ: ಕಾಂಗ್ರೆಸ್ 28 ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದು ತಪ್ಪಲ್ಲ. ಆದರೆ ಪ್ರಧಾನಿ ಮೋದಿ ಅವರ ಜೊತೆಗೆ ಹೋದರೆ ಕೋಮುವಾದಿ ಪಕ್ಷವಂತೆ. ನಮ್ಮದು ಕೇವಲ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ರಾಜ್ಯ, ರಾಷ್ಟ್ರದ ಪ್ರಮುಖ ಪಕ್ಷ ಎನ್ನುವ ಮೂಲಕ ಕೈ ನಾಯಕರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ಕೊಟ್ಟರು. ಬೆಳಗಾವಿಯ ಕೆಪಿಟಿಸಿಎಲ್ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜೆಡಿಎಸ್ ಪುನಶ್ಚೇತನ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವ ಸಂಕಲ್ಪವನ್ನು ನಾವು ಮಾಡಬೇಕಿದೆ. …

Read More »