ಹೃದಯಾಘಾತದಿಂದ ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ ಹೃದಯಾಘಾತದಿಂದ ಸ್ವಾಮೀಜಿ ಲಿಂಗೈಕ್ಯ, ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಸ್ವಾಮೀಜಿ ಲಿಂಗೈಕ್ಯ, ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ(೬೪) ಲಿಂಗೈಕ್ಯ, ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಗೋಕಾಕನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಸೇವಕರು, ಚಿಕಿತ್ಸೆ ಫಲಕಾರಿಯಾಗದೆ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನ, ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹ,
Read More »Daily Archives: ಅಕ್ಟೋಬರ್ 15, 2023
ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.ಕೋರಿಕೆ
ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ವಿಧಾನಸೌಧ ಬೆಂಗಳೂರು. ವಿಷಯ- ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು. ನಮ್ಮ ಬೇಡಿಕೆ ಕಿತ್ತೂರು ಉತ್ಸವಕ್ಕೆ ಐದು ಕೋಟಿ,ಬೆಳಗಾವಿ ರಾಜ್ಯೋತ್ಸವಕ್ಕೆ ಎರಡು ಕೋಟಿ ಅನುದಾನ ನೀಡುವ ಕೋರಿಕೆ ಸನ್ಮಾನ್ಯರೇ. ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವವನ್ನು ಬಿಂಬಿಸುವ ಕಿತ್ತೂರು ಉತ್ಸವಕ್ಕೆ ಐದು ಕೋಟಿ ರೂ ಅನುದಾನ, ಹಾಗೂ ಬೆಳಗಾವಿ ನಗರದಲ್ಲಿ ನಡೆಯುವ …
Read More »ಇಂಗಳಿ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 29 ಲಕ್ಷ ಅನುದಾನ?:ಶಶಿಕಲಾ ಜೊಲ್ಲೆ
ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ದೇವರು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿಶೇಷ ಪ್ರಯತ್ನದಿಂದ ರೂ. 29 ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಗ್ರಾಮದ ಬಿಜೆಪಿ ಕಾರ್ಯಕರ್ತರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೊದಲಿಗೆ ಶ್ರೀ ಬೀರೇಶ್ವರ ಸಹಕಾರಿ ಇಂಗಳಿ ಶಾಖೆಯ ನಿರ್ದೇಶಕ ಪ್ರಕಾಶ ಮಿರ್ಜಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಂಕರ ಪವಾರ ಮಾತನಾಡಿ, …
Read More »ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ
ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ಶರ ನವರಾತ್ರಿ ಹಬ್ಬದ ಅಂಗವಾಗಿ ಘಟಸ್ಥಾಪನೆ ಮಾಡಲಾಯಿತು. ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ ,ಅಭಿಷೇಕ ನೆರವೆರಿಸುವ ಮೂಲಕ ಘಟಸ್ಥಾಪನೆ ಮಾಡಲಾಯಿತು. ಸವದತ್ತಿ ಎಲ್ಲಮ್ಮಾ ದೇವಸ್ಥಾನಕ್ಕೆ ಆಗಮಿಸಿ ದೀಪಕ್ಕೆ ಎಣ್ಣೆ ಹಾಕಿದ ನಂತರ ಭಕ್ತರು ತಮ್ಮ ಮನೆಗಳಲ್ಲಿ ಘಟಸ್ಥಾಪನೆ ಮಾಡುವ ಪ್ರತೀತಿ ಇರುವದರಿಂದ ಇಂದು ಬೆಳಗಿನ ಜಾವ ಸಾವಿರಾರು ಜನ ದೇವಿ ದರ್ಶನ ಮಾಡಿ …
Read More »ನಾಡಹಬ್ಬದ ಮಹತ್ವ ಕಡಿಮೆಯಾಗಬಾರದೆಂದು ಸಾಂಪ್ರದಾಯಿಕ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಬರಗಾಲದ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಿಸುತ್ತಿಲ್ಲ. ಆದ್ರೆ ದಸರಾ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಾಂಪ್ರದಾಯಿಕವಾಗಿ ನಾಡಹಬ್ಬವನ್ನು ಸರ್ಕಾರ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮುಖ್ಯಮಂತ್ರಿ ಅವರು ಭಾಷಣ ಮಾಡಿದರು. ಈ ವೇಳೆ, ದುರಾದೃಷ್ಟವಶಾತ್ ಈ ಬಾರಿ ಮಳೆಯಾಗಲಿಲ್ಲ. ಬರಗಾಲ ಬಂದಿದೆ. …
Read More »ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ: ಡೆತ್‌ನೋಟ್ ಆಧರಿಸಿ ಏಳು ಜನರ ವಿರುದ್ಧ ಎಫ್ಐಆರ್ ದಾಖಲು
ಕೊಪ್ಪಳ: ಗುತ್ತಿಗೆದಾರರ ಉಪಗುತ್ತಿಗೆ ಕೆಲಸ ಮಾಡಿಕೊಂಡು ಹಣಕಾಸಿನ ತೊಂದರೆಗೆ ಸಿಲುಕಿದ್ದ ಪರಿಣಾಮ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನು ಬರೆದಿಟ್ಟಿದ್ದ ಡೆತ್‌ನೋಟ್ ಆಧರಿಸಿ ಏಳು ಜನರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಶನಿವಾರ ಎಫ್ ಐಆರ್ ದಾಖಲಿಸಲಾಗಿದೆ. ಕೊಪ್ಪಳದ ಬಿ ಟಿ ಪಾಟೀಲ ನಗರದ ನಿವಾಸಿ ರಾಜೀವ ಬಗಾಡೆ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವ. ಕಳೆದ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದರು. ಮನೆಯವರು ಗಮನಿಸಿ ಅವರನ್ನು ಹುಬ್ಬಳ್ಳಿಯ …
Read More »ಐವರು ಮತದಾರರಿರುವ ಈ ಮತಗಟ್ಟೆ ದೇಶದಲ್ಲೇ ಅತಿ ಚಿಕ್ಕದು; ಎಲ್ಲಿದೆ ಗೊತ್ತಾ?
ರಾಯಪುರ (ಛತ್ತೀಸ್ಗಢ) : ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯ. ಹೀಗಾಗಿ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸರ್ಕಾರ, ಚುನಾವಣಾ ಆಯೋಗ, ಸಂಘಸಂಸ್ಥೆಗಳು ಜನರಲ್ಲಿ ಭಿನ್ನವಿಸಿಕೊಳ್ಳುತ್ತವೆ. ಓರ್ವ ಮತದಾರ ಇದ್ದರೂ, ಅಲ್ಲಿ ಚುನಾವಣಾಧಿಕಾರಿಗಳು ಕೆಲಸ ಮಾಡಿ ಅವರ ಮತವನ್ನು ಪಡೆದುಕೊಳ್ಳುತ್ತಾರೆ. ಇಂಥದ್ದೇ ಒಂದು ಮತಗಟ್ಟೆ ಛತ್ತೀಸ್ಗಢದಲ್ಲಿದೆ. ಇಲ್ಲಿ ಕೇವಲ 5 ಮತದಾರರಿದ್ದು, ಇದು ದೇಶದಲ್ಲಿಯೇ ಅತಿ ಚಿಕ್ಕ ಮತಗಟ್ಟೆ ಎಂಬ ಖ್ಯಾತಿ ಹೊಂದಿದೆ. ಛತ್ತೀಸ್‌ಗಢದ ಮೊದಲ ವಿಧಾನಸಭಾ ಕ್ಷೇತ್ರವಾದ ಭರತ್‌ಪುರ್ ಸೋನ್‌ಹತ್‌ನ ಶೆರಾದಂಡ್ ಎಂಬ …
Read More »ರಾಶಿ ಭವಿಷ್ಯ ನಿಮ್ಮ ಪರಿಶ್ರಮಕ್ಕೆ ಫಲ ಸಿಗುವ ಶುಭ ದಿನ
ಮೇಷ: ಈ ವಾರದಲ್ಲಿ ವ್ಯವಹಾರದಲ್ಲಿ ಸಾಕಷ್ಟು ಸಕ್ರಿಯರಾಗಲಿದ್ದೀರಿ. ದೂರದ ಊರುಗಳಿಗೆ ಪ್ರಯಾಣಿಸಲು, ಹೊಸ ವ್ಯಕ್ತಿಗಳನ್ನು ಸಂಪರ್ಕಿಸಲು ಮತ್ತು ಹಳೆಯ ಸಂಬಂಧಗಳನ್ನು ಪರಿಶೋಧಿಸಲು ನೀವು ಯತ್ನಿಸಲಿದ್ದು ನಿಮ್ಮ ವ್ಯವಹಾರಕ್ಕೆ ಒಳ್ಳೆಯ ಡೀಲ್ ಅಂತಿಮಗೊಳಿಸಲಿದ್ದೀರಿ. ಉದ್ಯೋಗಿಗಳು ಸಹ ತಮ್ಮ ಕೆಲಸದಲ್ಲಿ ನಿರತರಾಗಲಿದ್ದಾರೆ. ಕೆಲವು ಎದುರಾಳಿಗಳು ತಮ್ಮ ತಲೆ ಎತ್ತಬಹುದು. ಆದರೆ ನೀವು ತಾಳ್ಮೆಯಿಂದ ಇದ್ದು ನಿಮ್ಮ ವ್ಯವಹಾರಕ್ಕೆ ಮಾತ್ರವೇ ಗಮನ ನೀಡಬೇಕು. ಕಾಲ ಕಳೆದಂತೆ ಪರಿಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ವೈವಾಹಿಕ ಬದುಕಿನಲ್ಲಿ ಒತ್ತಡ ಕಾಣಿಸಿಕೊಳ್ಳಬಹುದು. …
Read More »ನಿಂತಿದ್ದ 2 ಖಾಸಗಿ ಬಸ್ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲು
ಕಲಬುರಗಿ: ಖಾಸಗಿ ಕಂಪನಿಗೆ ಸೇರಿದ ಎರಡು ಸ್ಲೀಪರ್ ಬಸ್ಗಳಿಗೆ ಬೆಂಕಿ ತಗುಲಿ ಧಗಧಗಿಸಿ ಸುಟ್ಟು ಕರಗಲಾದ ಘಟನೆ ಕಲಬುರಗಿ ನಗರದ ಹಾಗರಗಾ ರಸ್ತೆಯ ಮಹೆಫಿಲ್ ಎ ಖಾಸ್ ಡಾಬಾದ ಬಳಿ ಶನಿವಾರ ನಡೆದಿದೆ. ಅಕ್ಕಪಕ್ಕದಲ್ಲಿ ನಿಂತಿದ್ದ ಎರಡು ಬಸ್ಗಳು ಬೆಂಕಿಯ ಕೆನ್ನಾಲೆಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿವೆ. ಹೀಗಾಗಿ ದಟ್ಟವಾದ ಹೊಗೆ ಆವರಿಸಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವ …
Read More »