Breaking News

Daily Archives: ಅಕ್ಟೋಬರ್ 16, 2023

ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಡಿಕ್ಕಿ: ಐದು ಜನ ಸ್ಥಳದಲ್ಲೇ ಸಾವು

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿಯಾಗಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.   ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಲಗಳ ಪ್ರಕಾರ, ಕಲಬುರಗಿಯಿಂದ ಗಜೇಂದ್ರಗಡ ಮಾರ್ಗವಾಗಿ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಟಾಟಾ ಸುಮೋ ಹೊರಟಿತ್ತು. ಗದಗದಿಂದ ಗಜೇಂದ್ರಗಡಕ್ಕೆ ಬಸ್ ಹೊರಟಿತ್ತು. ಮುಖಾಮುಖಿ ಡಿಕ್ಕಿ ಪರಿಣಾಮ ಬಸ್​ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ …

Read More »

ಸೂಳೆಕೆರೆಗೆ ಜಿಗಿದು ತಾಯಿ ಮಗಳು ಆತ್ಮಹತ್ಯೆ: ಕಾರಣ ಮಾತ್ರ ನಿಗೂಢ!

ದಾವಣಗೆರೆ: ಐದು ವರ್ಷದ ಮಗಳೊಂದಿಗೆ ತಾಯಿಯೊಬ್ಬಳು ಸೂಳೆಕೆರೆಗೆ (ಶಾಂತಿಸಾಗರ) ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ‌ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ನಡೆದಿದೆ. ಕವಿತಾ (27) ಹಾಗೂ ನಿಹಾರಿಕಾ (5) ಆತ್ಮಹತ್ಯೆ ಮಾಡಿಕೊಂಡ ತಾಯಿ ಹಾಗೂ ಮಗಳು. ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ ಎಂಬುವರ ಪತ್ನಿ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ ಮೃತ ಮಗಳು ನಿಹಾರಿಕಾಳೊಂದಿಗೆ …

Read More »

ಚುನಾವಣಾ ಬಾಂಡ್​ಗಳ ವಿಚಾರ.. ಸುಪ್ರೀಂ ಪಂಚ ಪೀಠದಿಂದ ನಡೆಯಲಿದೆ ವಿಚಾರಣೆ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಸಲ್ಲಿಕೆ ಆಗಿರುವ ಎಲ್ಲ ಅರ್ಜಿಗಳನ್ನು ಸುಪ್ರೀಂಕೋರ್ಟ್​​ನ ಪಂಚ ಪೀಠ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್​ ಸೋಮವಾರ ಹೇಳಿದೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಈ ವಿಷಯವನ್ನು ಕನಿಷ್ಠ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ನಿರ್ಧಾರವನ್ನು ಇಂದು ಪ್ರಕಟಿಸಿದೆ. ಚೀಫ್​ ಜಸ್ಟಿಸ್​​ ಪ್ರಸ್ತಾಪಿಸಿದ ವಿಷಯದ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಂವಿಧಾನದ 145 (4) ನೇ ವಿಧಿಗೆ ಸಂಬಂಧಿಸಿದಂತೆ ಈ …

Read More »

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಸಂತ್ರಸ್ತೆಯ ಕಡೆಯವರಿಗೆ ತಿಳಿಸಬೇಕು: ಹೈಕೋರ್ಟ್

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ದಾಖಲಾದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸಮಯದಲ್ಲಿ ಸಂತ್ರಸ್ತರು ಬದುಕುಳಿದಿದ್ದರೆ ಅವರಿಗೆ ಅಥವಾ ದೂರುದಾರರಿಗೆ ವಿಚಾರಣೆಯ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸಿದ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಪೀಠ ಈ ಆದೇಶ ನೀಡಿದೆ. ಅಲ್ಲದೇ, ಪೋಕ್ಸೋ ಪ್ರಕರಣಗಳಲ್ಲಿನ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ವೇಳೆ …

Read More »

ಉದ್ಯೋಗಕ್ಕಾಗಿ ಲಂಚ ಪ್ರಕರಣದಲ್ಲಿ ಭಾಗಿಯಾದ 16 ನೌಕರರನ್ನು ವಜಾಗೊಳಿಸಿದ T.C.S.

ಬೆಂಗಳೂರು : ಕೆಲಸಕ್ಕಾಗಿ ಲಂಚ ಪಡೆದ ಆರೋಪಗಳ ಬಗ್ಗೆ ತನಿಖೆ ನಡೆಸಿದ ನಂತರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 16 ಉದ್ಯೋಗಿಗಳನ್ನು ವಜಾಗೊಳಿಸಿದೆ ಮತ್ತು ಆರು ಸಿಬ್ಬಂದಿ ನೇಮಕಾತಿ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಈ ಬಗ್ಗೆ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಮಾಹಿತಿ ನೀಡಿರುವ ಕಂಪನಿ, “ತನಿಖೆಯಲ್ಲಿ 19 ಉದ್ಯೋಗಿಗಳು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ ಮತ್ತು ಇಲ್ಲಿ ವಿವರಿಸಿದಂತೆ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯ ನಿಯಮಾವಳಿಗಳ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು …

Read More »

ಕೋಟಿ ಕೋಟಿ ಹಣ ಪತ್ತೆ ಕೇಸ್ ಇಡಿಗೆ ವಹಿಸಿ: ಯಡಿಯೂರಪ್ಪ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ನಿವಾಸದಲ್ಲಿ ಪತ್ತೆಯಾದ ಕೋಟಿ ಕೋಟಿ ನಗದು ಹಣ ಪ್ರಕರಣವನ್ನು ಇಡಿ ಮತ್ತು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಡಾಲರ್ಸ್ ಕಾಲೊನಿಯಲ್ಲಿರುವ ಖಾಸಗಿ ನಿವಾಸ ದವಳಗಿರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ಹಣ ಸಿಕ್ಕಿದ್ದ ಪ್ರಕರಣದಲ್ಲಿ ತನಿಖೆ ಬಳಿಕ ಹಣದ ಮೂಲ ಗೊತ್ತಾಗಲಿದೆ. ಚುನಾವಣೆಗೆ ಹಣ ಸಂಗ್ರಹ ಮಾಡಿರೋದು ನಿಜ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ …

Read More »

ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಗಲಿಕೆಗೆ ಸಂತಾಪ ಸೂಚಿಸಿದ ಜಾರಕಿಹೊಳಿ ಸಹೋದರರು

ಗೋಕಾಕ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ತೀವ್ರ ನೋವಾಗಿದೆ ಎಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ,ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ , ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.   ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ‌ ನಾವು ಕೂಡ ಭಾಗಿಯಾಗಿದ್ದೇವೆ. ಅರಭಾವಿ …

Read More »

ಬೆಂಗಳೂರಿನಲ್ಲಿ ಮತ್ತೆ ಐಟಿಯಿಂದ ಭರ್ಜರಿ ಬೇಟೆ.. 40 ಕೋಟಿ ಹಣ ಪತ್ತೆ

ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿ ಮುಂದುವರೆದಿದ್ದು, ಕಂತೆ ಕಂತೆ ನಗದು ಹಣ ಪತ್ತೆಯಾಗುತ್ತಲೇ ಇದೆ. ಭಾನುವಾರ ರಾಜಾಜಿನಗರದ ಕೇತಮಾರನಹಳ್ಳಿಯಲ್ಲಿರುವ ಬಿಲ್ಡರ್‌ವೊಬ್ಬರ ಅಪಾರ್ಟ್‌ಮೆಂಟ್ ಮೇಲೆ ನಡೆಸಿದ ದಾಳಿ ವೇಳೆ 40 ಕೋಟಿ ರೂ.ಗಿಂತ ಅಧಿಕ ನಗದು ಸಿಕ್ಕಿದೆ ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ. ಗುತ್ತಿಗೆದಾರ ಸಂತೋಷ ಕೃಷ್ಣಪ್ಪ ಅವರ ಅಪಾರ್ಟ್‌ಮೆಂಟ್ ಮೇಲೆ ನಡೆದ ದಾಳಿಯಲ್ಲಿ ಇಷ್ಟೊಂದು ಹಣ ಪತ್ತೆಯಾಗಿದೆ. ಈ ಹಣ ಹಣ ಪತ್ತೆಯಾಗುತ್ತಿದ್ದಂತೆ 6ಕ್ಕೂ …

Read More »

ನವರಾತ್ರಿ ಹಬ್ಬ ಪ್ರಾರಂಭ: ಹೂವುಗಳ ಬೆಲೆ ಗಣನೀಯ ಏರಿಕೆ

ಬೆಂಗಳೂರು: ನಗರದಲ್ಲಿ ಗಣಪತಿ ಹಬ್ಬಕ್ಕೆ ಕುಸಿತ ಕಂಡಿದ್ದ ಹೂವಿನ ಬೆಲೆ ನವರಾತ್ರಿಗೆ ಹೆಚ್ಚಳವಾಗಿದೆ. ಎಲ್ಲೆಡೆ ಹಬ್ಬದ ಸಡಗರ ಆರಂಭವಾಗಿದ್ದು, ಮಾರುಕಟ್ಟೆಯಲ್ಲಿ ಕೆಲವು ಹೂವುಗಳ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಆಯುಧ ಪೂಜೆ, ವಿಜಯದಶಮಿಯ ಸಂದರ್ಭಕ್ಕೆ ಮಲ್ಲಿಗೆ ಮೊಗ್ಗು, ಕನಕಾಂಬರ, ಸೇವಂತಿಗೆ ಹೂವು ಸೇರಿದಂತೆ ಮತ್ತಿತರ ಹೂವಿನ ಬೆಲೆಗಳು ಗ್ರಾಹಕರ ಕೈಸುಡುವ ಸಾಧ್ಯತೆ ಇದೆ. ಕನಕಾಂಬರ ಮಲ್ಲಿಗೆ, ಸೇವಂತಿಗೆ ಮತ್ತು ಕೆಂಪು ಗುಲಾಬಿ ಹೂವುಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಕೆ.ಆರ್‌.ಮಾರುಕಟ್ಟೆಯಲ್ಲಿ ಕನಕಾಂಬರ ಹೂವು …

Read More »

ಒಂದೇ ಗರ್ಭಗುಡಿಯಲ್ಲಿ ನವದುರ್ಗೆಯರು:

ಹಾವೇರಿ : ದೇಶಾದ್ಯಂತ ಶರನ್ನಾವರಾತ್ರಿಯ ಸಂಭ್ರಮ ನಿನ್ನೆಯಿಂದ ಆರಂಭವಾಗಿದೆ. ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಸಹ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇಡೀ ದೇಗುಲವೇ ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದೆ.   ಹೌದು, ಈ ದೇವಸ್ಥಾನದ ಒಂದೇ ಗರ್ಭಗುಡಿಯಲ್ಲಿ 9 ದುರ್ಗೆಯರನ್ನು ಸ್ಥಾಪನೆ ಮಾಡಿರುವುದು ವಿಶೇಷ. ನವರಾತ್ರಿಯ ದಿನಗಳಲ್ಲಿ ಪ್ರತಿನಿತ್ಯ ಒಂದೊಂದು ದುರ್ಗಾ ಮಾತೆಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಮೊದಲ ದಿನ ಶೈಲಪುತ್ರಿ, ಎರಡನೇಯ ದಿನ ಬ್ರಹ್ಮಚಾರಿಣಿ, ಮೂರನೇ ದಿನ ಚಂದ್ರಘಂಟಾ, …

Read More »