Breaking News

Daily Archives: ಅಕ್ಟೋಬರ್ 19, 2023

ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗದ 26,000 ರನ್‌ ಗಳಿಕೆ!

ಹೈದರಾಬಾದ್: ಚೇಸ್​ ಮಾಸ್ಟರ್​ ವಿರಾಟ್​ ಕೊಹ್ಲಿ ಹೆಸರಿಗೆ ತಕ್ಕಂತೆ ಮತ್ತೊಂದು ಇನಿಂಗ್ಸ್​ ಕಟ್ಟಿದರು. ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಶತಕ ಸಾಧನೆ ಮಾಡುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಇದರೊಂದಿಗೆ ಅತಿ ವೇಗವಾಗಿ 26 ಸಾವಿರ ರನ್​ ಪೂರೈಸಿದ ಆಟಗಾರ ಎನಿಸಿಕೊಂಡರು. ಈ ಮೂಲಕ ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಅವರ ದಾಖಲೆಯನ್ನೂ ಮುರಿದರು. ಭಾರತದ ಸ್ಟಾರ್ ಬ್ಯಾಟರ್ ಆಗಿರುವ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧ 77 ರನ್ ಗಳಿಸಿದಾಗ …

Read More »

ಘೋಸ್ಟ್​’ ಸಿನಿಮಾದಲ್ಲಿ ಶಿವಣ್ಣ ಆಯಕ್ಟಿಂಗ್​ ನೋಡಿ ಮಗಳು ನಿವೇದಿತಾ ಹೇಳಿದ್ದೇನು?

ಬೆಂಗಳೂರು: ಟೈಟಲ್​, ಕಾಸ್ಟ್, ಟ್ರೇಲರ್​​ನಿಂದಲೇ ಸೌತ್​ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್​ ಸದ್ದು ಮಾಡಿದ್ದ ‘ಘೋಸ್ಟ್’ ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ರಾಜ್ಯಾದ್ಯಂತ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಿ ಭರ್ಜರಿ ಓಪನಿಂಗ್​ ಕೂಡಾ ಪಡೆದುಕೊಂಡಿದೆ. ಮಧ್ಯರಾತ್ರಿಯಿಂದಲೇ ‘ಘೋಸ್ಟ್​’ ಸ್ಪೆಷಲ್​ ಶೋನ ಹಮ್ಮಿಕೊಳ್ಳಲಾಗಿತ್ತು. ಸಿನಿಮಾ ನೋಡಿದ ಶಿವಣ್ಣ ಅಭಿಮಾನಿಗಳು ಹ್ಯಾಟ್ರಿಕ್​ ಹೀರೋನ ಗ್ಯಾಂಗ್​ಸ್ಟರ್​ ಅವತಾರಕ್ಕೆ ಫಿದಾ ಆಗಿದ್ದಾರೆ. ಶಿವಣ್ಣ ಮೂರು ಶೇಡ್​ನಲ್ಲಿ ಕಾಣಿಸಿಕೊಂಡಿರುವ ‘ಘೋಸ್ಟ್’​ ಸಿನಿಮಾವನ್ನು ನಿವೇದಿತಾ ಶಿವ ರಾಜ್​ಕುಮಾರ್​, ಧೀರೇನ್​ ರಾಮ್​ …

Read More »

ದಸರಾ ಪ್ರಯುಕ್ತ 2 ಸಾವಿರಕ್ಕೂ ಹೆಚ್ಚು ಕೆಎಸ್​ಆರ್​ಟಿಸಿ ವಿಶೇಷ ಬಸ್ ಸೌಲಭ್ಯ; ಪೂಜೆ ಸಲ್ಲಿಸಿ ಚಾಲನೆ

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗು ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚು ಬಸ್​ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್​ಆರ್​ಟಿಸಿ) ಕಲ್ಪಿಸಿದ್ದು, ನಿಗಮದ ಎಲ್ಲಾ ವಿಭಾಗಗಳಲ್ಲಿ ದಸರಾ ವಿಶೇಷ ಕಾರ್ಯಾಚರಣೆಗೆ‌ ವಿಧ್ಯುಕ್ತವಾಗಿ‌ ಬಸ್​ಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.   ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ವಾಹನಗಳಿಗೆ …

Read More »

ನ್ಯಾಯಾಲಯದ ಆದೇಶವಿದ್ದರೂ, ಪತಿಯೊಂದಿಗೆ ಬಾರದ ಪತ್ನಿ: ವಿಚ್ಛೇದನಕ್ಕೆ ಆಧಾರ- ಹೈಕೋರ್ಟ್

ಬೆಂಗಳೂರು: ಪತಿಯನ್ನು ಸೇರುವಂತೆ ನ್ಯಾಯಾಲಯದ ಆದೇಶವಿದ್ದರೂ ಸಹ ಪತ್ನಿ ಅದನ್ನು ಪಾಲಿಸದಿರುವುದು ವಿವಾಹ ವಿಚ್ಚೇದನಕ್ಕೆ ಆಧಾರವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಆರ್.ಕೃಷ್ಣಕುಮಾರ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ್ ಅವರಿದ್ದ ವಿಭಾಗೀಯಪೀಠ ಇತ್ತೀಚೆಗೆ ಈ ಆದೇಶ ನೀಡಿ, ವಿಚ್ಚೇದನ ಮಂಜೂರು ಮಾಡಿತು. ನ್ಯಾಯಾಲಯ ವೈವಾಹಿಕ ಹಕ್ಕು ಪುನರ್‌ಸ್ಥಾಪನೆ ಸಂಬಂಧ ಏಕಪಕ್ಷೀಯ ಆದೇಶ ಹೊರಡಿಸಿ ಪತಿಯನ್ನು ಸೇರುವಂತೆ ಪತ್ನಿಗೆ ಆದೇಶಿಸಿದೆ. ಪತ್ನಿ ಒಂದುವರೆ ವರ್ಷ ಕಳೆದರೂ ಆದೇಶವನ್ನು …

Read More »

ಮಹಾರಾಷ್ಟದ ಗಡಿ ತಾಲೂಕು ಜತ್ತದಲ್ಲಿ ಕನ್ನಡದ ಶಾಲೆಗಳಲ್ಲಿ ಶಿಕ್ಷರ ಕೊರತೆ

ಚಿಕ್ಕೋಡಿ: ಕರ್ನಾಟಕ ಗಡಿ ಹೊಂದಿರುವ ಮಹಾರಾಷ್ಟ್ರದ ಗ್ರಾಮಗಳಲ್ಲಿ ಕನ್ನಡ ಶಾಲೆಗಳು ದುಸ್ಥಿತಿಯಲ್ಲಿವೆ. ಗಡಿನಾಡು ಕನ್ನಡಿಗರ ಒತ್ತಾಯದ ಮೇರೆಗೆ ದಶಕಗಳ ಹಿಂದೆ ಕನ್ನಡ ಭಾಷೆ ಕಲಿಕೆಯ ಶಾಲೆಗಳ ನಿರ್ಮಾಣ ಮಾಡಲಾಗಿತ್ತು. ಆದರೆ ಆ ಶಾಲೆಗಳಿಗೆ ಶಿಕ್ಷಕರ ಕೊರತೆ ಇರುವುದರಿಂದ ಕ್ರಮೇಣ ಮಕ್ಕಳು ಮರಾಠಿ ಭಾಷೆಗಳತ್ತ ಒಲವು ತೋರುತ್ತಿದ್ದಾರೆ. ಪರಿಣಾಮ, ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವಂತಹ ಕುತಂತ್ರ ನಡೆಸುತ್ತಿದೆ ಎಂದು ಜತ್ತ ತಾಲೂಕಿನ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತ್ತ ತಾಲೂಕಿನಲ್ಲಿ 82 …

Read More »

ಸಿ.ಎಂ.ಇಬ್ರಾಹಿಂ ವಜಾಗೊಳಿಸಿದ ದೇವೇಗೌಡರು: ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ

ಬೆಂಗಳೂರು: ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದ್ದು ಹಂಗಾಮಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು, ಸದಸ್ಯರು, ಶಾಸಕರು ಒಳಗೊಂಡಂತೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಜೆಡಿಎಸ್ ರಾಜ್ಯ ಘಟಕ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾಗಿದ್ದು ವಜಾಗೊಂಡ ಸಿ.ಎಂ.ಇಬ್ರಾಹಿಂ ಅಧಿಕಾರ ಕಳೆದುಕೊಂಡಿದ್ದಾರೆ. ಕೋರ್ ಕಮಿಟಿ ಸಭೆ ಬಳಿಕ …

Read More »

ಅರ್ಧ ಶತಕೋಟಿ ಕಂಪ್ಯೂಟರ್​ಗಳಲ್ಲಿ ಓಡುತ್ತಿದೆ ವಿಂಡೋಸ್​ 11 ಓಎಸ್​: ನಿರೀಕ್ಷೆ ಮೀರಿದ ಸಾಧನೆ

ನವದೆಹಲಿ: ಮೈಕ್ರೋಸಾಫ್ಟ್​ನ ವಿಂಡೋಸ್ 11 ಆಪರೇಟಿಂಗ್ ಸಿಸ್ಟಮ್ ಪ್ರಸ್ತುತ 400 ದಶಲಕ್ಷಕ್ಕೂ ಹೆಚ್ಚು ಇನ್​ಸ್ಟಾಲ್ ಆಗಿದ್ದು, 2024 ರ ಆರಂಭದಲ್ಲಿ ಈ ಸಂಖ್ಯೆ 500 ಮಿಲಿಯನ್ ತಲುಪುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ವಿಂಡೋಸ್ 11 ಈಗ ಸುಮಾರು ಅರ್ಧ ಶತಕೋಟಿ ಸಾಧನಗಳಲ್ಲಿ ಸಕ್ರಿಯವಾಗಿದೆ, ಇದು ಕಂಪನಿಯ ನಿರೀಕ್ಷೆಗಳಿಗಿಂತ ಹೆಚ್ಚಾಗಿದೆ ಎಂದು ಮೈಕ್ರೋಸಾಫ್ಟ್ ಆಂತರಿಕ ಡೇಟಾ ಉಲ್ಲೇಖಿಸಿ ವಿಂಡೋಸ್ ಸೆಂಟ್ರಲ್ ವರದಿ ಮಾಡಿದೆ. ವಿಂಡೋಸ್ 10 ಬಿಡುಗಡೆಯಾದ ಒಂದು ವರ್ಷದ ನಂತರ …

Read More »

‘ಡಿಕೆಶಿ ರಾಜೀನಾಮೆ ಪಡೆಯಿರಿ, ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ’: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಆದಾಯ ಮೀರಿದ ಆಸ್ತಿಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರಿಸುವಂತೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರೆಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು …

Read More »

ದೇವೇಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ; ಉಚ್ಚಾಟನೆ ನಿರ್ಧಾರವನ್ನು ಚು.ಆಯೋಗದಲ್ಲಿ ಪ್ರಶ್ನಿಸುವೆ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಪುತ್ರ ವ್ಯಾಮೋಹ ಇರುವುದು ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಕಾದು ನೋಡಿ ಎಂದು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿತರಾದ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.   ಬೆನ್ಸನ್ ಟೌನ್‌ನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜೆಡಿಎಸ್ ನಾಯಕರಿಗೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 2/3ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೊಟೀಸ್ ಕೊಡಬೇಕು. ನಾನು ಚುನಾವಣಾ …

Read More »

ನನ್ನ ಹಾಗು ಸತೀಶಣ್ಣನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಅಸಮಾಧಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ಬಹಳ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದರು. ಜಿಲ್ಲೆಗೆ …

Read More »