ಮೈಸೂರು : ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್ನನ್ನು ಬಂಧಿಸಿದ್ದಾರೆ. 2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು …
Read More »Daily Archives: ಅಕ್ಟೋಬರ್ 19, 2023
ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಮೇಲೆ ಕ್ರಮ ಆಗುತ್ತಾ, ಇಲ್ಲವೋ ಗೊತ್ತಿಲ್ಲ.. ಸಭೆಯಲ್ಲಿ ಭಾಗಿಯಾದ ಬಳಿಕ ಗೊತ್ತಾಗಲಿದೆ: ಕುಮಾರಸ್ವಾಮಿ
ಬೆಂಗಳೂರು : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೋರ್ ಕಮಿಟಿ ಸಭೆ ಕರೆದಿದ್ದಾರೆ. ಕೋರ್ ಕಮಿಟಿ ಅಧ್ಯಕ್ಷರು ಸಭೆಗೆ ಬರಲು ಹೇಳಿದ್ದಾರೆ, ಅದಕ್ಕೆ ಬಂದಿದ್ದೇನೆ. ಸಭೆಯ ಬಳಿಕ ದೇವೇಗೌಡರು ಮಾಹಿತಿಯನ್ನು ಹಂಚಿಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಮೇಲೆ ಕ್ರಮ ಆಗುತ್ತಾ, ಇಲ್ಲವೋ …
Read More »ಭಾರತ – ಬಾಂಗ್ಲಾ ಮುಖಾಮುಖಿ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾ
ಪುಣೆ (ಮಹಾರಾಷ್ಟ್ರ): ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರೋಹಿತ್ ಶರ್ಮಾ ಪಡೆಯ ಭಾರತಕ್ಕೆ ಕ್ಷೇತ್ರ ರಕ್ಷಣೆಯ ಹೊಣೆ ಹೊರೆಸಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಇಂದಿನ ಪಂದ್ಯದ ಆತಿಥ್ಯ ವಹಿಸಿಕೊಂಡಿದೆ. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸತತ ಮೂರು …
Read More »ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ
ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಾಬುರಾವ್ ಪಾಟೀಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಂದಾಪುರದ ಬಸವ ನಗರದಲ್ಲಿರುವ ಮನೆಯ ಮೇಲೆ ಇಂದು ಬೆಳಗ್ಗೆ ಹೈದರಾಬಾದ್ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೆರೆ ರಾಜ್ಯದ ನೋಂದಣಿ ಹೊಂದಿರುವ ಖಾಸಗಿ ಇನ್ನೋವಾ ಕಾರುಗಳಲ್ಲಿ ಅಧಿಕಾರಿಗಳ ತಂಡದವರು ಆಗಮಿಸಿದ್ದಾರೆ. ಸದ್ಯ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡ್ತಿದ್ದಾರೆ. …
Read More »ಬೆಳಗಾವಿ ಸಮಸ್ಯೆಯಿಂದಲೇ ಮೈತ್ರಿ ಸರ್ಕಾರ ಪತನ… ಈಗಲೂ ಅಂತಹದ್ದೇ ಲಕ್ಷಣ ಗೋಚರಿಸ್ತಿದೆ: ಮುನಿರತ್ನ
ಬೆಂಗಳೂರು: ”ಬೆಳಗಾವಿ ರಾಜಕಾರಣದಲ್ಲಿ ಸಮಸ್ಯೆ ಮತ್ತೆ ಉಕ್ಕುತ್ತಿದೆ. ಬೆಳಗಾವಿಯಲ್ಲಿ ಸಮಸ್ಯೆ ಪ್ರಾರಂಭ ಆದರೇನೇ ಸರ್ಕಾರಗಳು ಉರುಳುತ್ತವೆ. ಈಗಲೂ ಅಂತಹದ್ದೇ ಲಕ್ಷಣ ಕಾಣಿಸುತ್ತಿದೆ. ಮಹಾಭಾರತದ ಯುದ್ಧ ಒಂದು ಸಲಕ್ಕೆ ನಿಂತಿಲ್ಲ. ನಡೀತನೇ ಇತ್ತು, ಅದೇ ರೀತಿ ಬೆಳಗಾವಿ ರಾಜಕಾರಣದಲ್ಲಿಯೂ ಶೀತಲ ಸಮರ ನಡೆಯುತ್ತಲೇ ಇದೆ. ಯಾವಾಗ ಏನಾಗಲಿದೆಯೋ ಗೊತ್ತಿಲ್ಲ” ಎಂದು ಮಾಜಿ ಸಚಿವ ಮುನಿರತ್ನ ಅವರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಪತನದ ಹಾದಿಯಲ್ಲಿದೆ ಎನ್ನುವುದನ್ನು ಹೇಳಿದ್ದಾರೆ. ವೈಯಾಲಿ ಕಾವಲ್ನಲ್ಲಿರುವ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …
Read More »ಮಹಾರಾಷ್ಟ್ರದಲ್ಲಿ ಜೋರಾದ ಮರಾಠಾ ಮೀಸಲಾತಿ ಹೋರಾಟ
ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಬೇಡಿಕೆ ಜೋರಾಗಿದೆ. ಇದರ ನಡುವೆ ಮುಂಬೈನಲ್ಲಿ ಮೀಸಲಾತಿಗೆ ಒತ್ತಾಯಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ. ಜಲ್ನಾ ಜಿಲ್ಲೆಯ ಚಿಕಂಗಾವ್ ಮೂಲದ ಸುನೀಲ್ ಬಾಬುರಾವ್ ಕಾವ್ಲೆ ಮೃತ ಎಂದು ಗುರುತಿಸಲಾಗಿದೆ. ಮರಾಠಾ ಮೀಸಲಾತಿಗಾಗಿ ಕೆಲ ದಿನಗಳ ಹಿಂದೆ 150 ಎಕರೆ ಜಾಗದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶಗೊಂಡಿದ್ದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರದಿಂದ ಮುಂಬೈ ಪ್ರವಾಸದಲ್ಲಿದ್ದಾರೆ. ಇಂದು ನವಿ ಮುಂಬೈ ಸೇರಿದಂತೆ ಹಲವು …
Read More »ಬೆಳಗಾವಿ ಜಿಲ್ಲೆಯಲ್ಲಿ ಡಿಕೆಶಿ ಹಸ್ತಕ್ಷೇಪ ಮಾಡುತ್ತಿಲ್ಲ ,ಸುಮ್ಮನೆ ಮಾಧ್ಯಮಗಳು ಏನೆನೋ ಸೃಷ್ಟಿಸುತ್ತಿವೆ”: ಬಾಬಾಸಾಹೇಬ ಪಾಟೀಲ
ಬೆಳಗಾವಿ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಳಗಾವಿ ಪ್ರವಾಸ ಪೂರ್ವ ನಿಯೋಜಿತವಾಗಿರಲಿಲ್ಲ. ನಾನು ನನ್ನ ಕ್ಷೇತ್ರದ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ. ಅವರು ಬೆಳಗಾವಿಗೆ ಬರುವ ಮೊದಲೇ ನಾನು ಬೆಂಗಳೂರಿನಲ್ಲಿದ್ದೆ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಸ್ಪಷ್ಟಪಡಿಸಿದರು. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ಡಿ ಕೆ ಶಿವಕುಮಾರ್ ಅವರನ್ನು ಇಂದು ಭೇಟಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಬೆಂಗಳೂರಿನಿಂದ ಬಂದ ತಕ್ಷಣವೇ ಡಿಕೆಶಿ …
Read More »ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ.: ಸತೀಶ್ ಜಾರಕಿಹೊಳಿ
ಬೆಂಗಳೂರು : ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ. ನನ್ನ ಮೌನ ದೌರ್ಬಲ್ಯವಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಬೆಳಗಾವಿ ಜಿಲ್ಲೆ ಹಸ್ತಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿ, ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪವಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಆಗಿದೆ. ನಾನು ಕೂಡ ಕಾಂಪ್ರಮೈಸ್ ಮಾಡಿಕೊಂಡಿದ್ದೇನೆ. ನಾನು ಅನುಸರಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದರು. ಪಕ್ಷದ ಹಿತದೃಷ್ಟಿಯಿಂದ …
Read More »ಸತೀಶ್ ಜಾರಕಿಹೊಳಿ ಜೊತೆ ಭಿನ್ನಾಭಿಪ್ರಾಯವಿಲ್ಲ,: ಡಿಕೆಶಿ
ಬೆಳಗಾವಿ : ಜನರ ಆಸೆ, ಬಯಕೆ, ನಾನು ಸಿಎಂ ಆಗಬೇಕು ಎನ್ನುವುದು ಇದ್ದೇ ಇರುತ್ತದೆ. ಆ ವಿಚಾರ ಆಮೇಲೆ, ನಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದ ಜನರು ನಮಗೆ ಐದು ವರ್ಷ ಆಡಳಿತ ಮಾಡಲು ಅವಕಾಶ ಕೊಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಯಾವಾಗ ತೀರ್ಮಾನ ಮಾಡುತ್ತದೆಯೋ ಮಾಡಲಿ. ನಾವು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಮೊದಲು …
Read More »ಬೆಂಗಳೂರು ನಗರದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹಸಚಿವ ಡಾ ಜಿ ಪರಮೇಶ್ವರ್
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತಕ್ಕೆ ನಾಲ್ಕೂ ಇಲಾಖೆಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಹೀಗಾಗಿ ಇರುವ ಕಾಯಿದೆಗಳಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡಿ ಅಗ್ನಿ ದುರಂತ ಹಾಗೂ ಪಟಾಕಿ ಅವಘಡಗಳಿಗೆ ಅಂತ್ಯ ಹಾಡುವಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು. ಪಟಾಕಿ ದುರಂತ ರಾಜ್ಯಕ್ಕೊಂದು ಪಾಠ, ಇದರಿಂದ 17 ಮಂದಿ ಈ …
Read More »