Breaking News

Daily Archives: ಅಕ್ಟೋಬರ್ 25, 2023

ಕಾನೂನು ಆಯೋಗದ ಜೊತೆ ಕೋವಿಂದ್ ನೇತೃತ್ವದ​ ಸಮಿತಿ ಸಭೆ

ನವದೆಹಲಿ : “ಒಂದು ದೇಶ, ಒಂದು ಚುನಾವಣೆ” ಸಾಧ್ಯತೆ ಬಗ್ಗೆ ಪರಿಶೀಲಿಸಲು ನೇಮಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಗೆ ಕಾನೂನು ಆಯೋಗವು ತನ್ನ ವಿಸ್ತೃತ ವರದಿಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ. ಕೋವಿಂದ್​ ನೇತೃತ್ವದ ಸಮಿತಿಯು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಮಧ್ಯೆ ಕಾನೂನು ಆಯೋಗವು ವರದಿಯನ್ನು ನೀಡಲು ಮುಂದಾಗಿದೆ. ಈ ಸಂಬಂಧ ಚುನಾವಣಾ ಸುಧಾರಣೆ ಕುರಿತು ಚರ್ಚೆ ನಡೆಸಲು ಕಾನೂನು ಆಯೋಗ ಮತ್ತು ಸಮಿತಿ ಬುಧವಾರ ಸಭೆ …

Read More »

ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರ ನನಗೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಜೊತೆ ಡಿಕೆಶಿ ಅವರು ಚರ್ಚೆ ಮಾಡಿಲ್ಲ. ಅವರ ಮೈಂಡ್​ನಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ತಮ್ಮ ಟಿ ಕೆ ಲೇಔಟ್ ನ ಮನೆಯ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಹಬ್ಬ ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಎಲ್ಲ ಪಕ್ಷದ ಶಾಸಕರು, ಜನಪ್ರತಿನಿಧಿಗಳು ಬೆಂಬಲ ನೀಡಿದ್ದಾರೆ. ಎಲ್ಲ …

Read More »

ಹುಲಿ ಉಗುರಿನ ಪೆಂಡೆಂಟ್ ಹಾಕಿದ್ ದರ್ಶನ್ ಅವರಿಗೂ ಹುಲಿ ಉಗುರಿನ ಸಂಕಷ್ಟ

ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎನ್ನುವ ಕಾರಣಕ್ಕಾಗಿ ‘ಬಿಗ್ ಬಾಸ್’ (Bigg Boss Kannada) ಸ್ಪರ್ಧಿ ವರ್ತೂರ್ ಸಂತೋಷ್ (Varthur santhosh) ಮೊನ್ನೆಯಷ್ಟೇ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದರ್ಶನ್ ಅವರಿಗೂ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ಆರ್‌ಆರ್ ನಗರದ ದರ್ಶನ್ (Darshan) ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ವರ್ತೂರ್ ಸಂತೋಷ್ ಬಂಧನವಾಗ್ತಿದ್ದಂತೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳಿಗೂ ಹುಲಿ ಉಗುರಿನ ಕಂಟಕ ಎದುರಾಗಿದೆ. ದರ್ಶನ್ ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ …

Read More »

ದಸರಾಗೆ ತಂದಿದ್ದ ಆನೆಯನ್ನು ವಾಪಸ್​ ಒಯ್ಯುತ್ತಿದ್ದ ವೇಳೆ ವಾಹನ ಅಪಘಾತ.. ಚಾಲಕ ಸ್ಥಳದಲ್ಲೇ ಸಾವು

ಆನೇಕಲ್( ಬೆಂಗಳೂರು): ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದಸರಾ ಮಹೋತ್ಸವಕ್ಕೆ ತಂದಿದ್ದ ಆನೆಯನ್ನು ತಿರುಚ್ಚಿಗೆ ವಾಪಸ್​ ಒಯ್ಯುತ್ತಿದ್ದ ವೇಳೆ ವಾಹನ ತಗ್ಗು ಪ್ರದೇಶಕ್ಕೆ ಹರಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಾನಮಾವು ಅರಣ್ಯ ಪ್ರದೇಶದ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ತಮಿಳುನಾಡಿನ ಪುದುಕ್ಕೊಟ್ಟೈ ಮೂಲದ ಆರೋಗ್ಯ ಸ್ವಾಮಿ ಮೃತ ಚಾಲಕ. ಆದರೆ ಲಾರಿಯಲ್ಲಿದ್ದ ಆನೆಯನ್ನು ರಕ್ಷಿಸಲಾಗಿದೆ. ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಚಾಲಕ …

Read More »

ಸಹೋದರನಿಗೆ 100 ಕೋಟಿ ರೂ. ವಂಚನೆ ಆರೋಪ.. ಮೈಸೂರಿನಲ್ಲಿ ಮುಂಬೈ ಮೂಲದ ಮಹಿಳೆ ಬಂಧನ

ಮುಂಬೈ (ಮಹಾರಾಷ್ಟ್ರ): ಅಂದಾಜು 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾರಾಟ ಮಾಡಿ ಸ್ವಂತ ಸಹೋದರನಿಗೆ ಮೋಸ ಮಾಡಿದ ಆರೋಪದ ಮೇಲೆ ಮುಂಬೈ ಮೂಲದ ಮಹಿಳಾ ಆರೋಪಿಯನ್ನು ಕರ್ನಾಟಕದ ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.   ಸೆಂಟ್ರಲ್ ಮುಂಬೈನ ನಿವಾಸಿ ಅಬಿದಾ ಇಸ್ಮಾಯಿಲ್ ಎಂಬ ಮಹಿಳೆಯೇ ಬಂಧಿತ ಆರೋಪಿ. ಈಕೆ ತನ್ನ ಸಂಬಂಧಿಕರು ಹಾಗೂ ಸಹೋದರನಿಗೆ ಸೇರಿದ ಆಸ್ತಿಯನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಇದರ ಅಂದಾಜು …

Read More »

ಕೆಂಪು ಬಣ್ಣದ ಲ್ಯಾಂಬೋರ್ಗಿನಿ ಕಾರು ಖರೀದಿಸಿದ ನಟಿ ಶ್ರದ್ಧಾ ಕಪೂರ್​.. ಬೆಲೆ ಎಷ್ಟು ಗೊತ್ತಾ ?

ಮುಂಬೈ : ನಟಿ ಶ್ರದ್ಧಾ ಕಪೂರ್​ ಬಾಲಿವುಡ್​ನ ಬಹುಬೇಡಿಕೆಯ ನಟಿ. ತನ್ನ ಅಮೋಘ ನಟನೆ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಈ ನವರಾತ್ರಿ ಶುಭ ಸಂದರ್ಭದಲ್ಲಿ ಶ್ರದ್ಧಾ ಕಪೂರ್​ ತಮ್ಮ ಸಂತಸ ಇಮ್ಮಡಿಗೊಳಿಸಿದ್ದಾರೆ. ಬಾಲಿವುಡ್​ ನಟರಲ್ಲಿ ಹಲವರು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಬಾಲಿವುಡ್​ ಬಾದ್​ ಶಾ ಶಾರುಖ್​ ಖಾನ್, ಸಲ್ಮಾನ್​ ಖಾನ್​, ಅಕ್ಷಯ ಕುಮಾರ್​ ಸೇರಿದಂತೆ ಹಲವು ನಟರಲ್ಲಿ ಐಷಾರಾಮಿ ಕಾರುಗಳಿವೆ. ಜೊತೆಗೆ ಕೆಲವೇ ಕೆಲವು ಬಾಲಿವುಡ್​ ನಟಿಯರು …

Read More »

ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆ ಛಿದ್ರ ಮಾಡಲು ಸಾಧ್ಯವಿಲ್ಲ, ಅದೇನು ಕಲ್ಲುಬಂಡೆಯೇ?: ಡಿಕೆಶಿಗೆ ಹೆಚ್​ಡಿಕೆ ತಿರುಗೇಟು

ಬೆಂಗಳೂರು: ಬಡವರ ಹೊಟ್ಟೆ ಮೇಲೆ ಹೊಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ ಬುದ್ಧಿವಂತಿಕೆ, ‘ಅಸಾಮಾನ್ಯ’ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ. ಡಿಸಿಎಂ ಹೇಳಿಕೆ ಬಗ್ಗೆ ಎಕ್ಸ್​ನಲ್ಲಿ …

Read More »

ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ

ಹುಕ್ಕೇರಿ ನಗರದಲ್ಲಿ ಕಳೆದ 9 ದಿನಗಳಿಂದ ಜರಗುತ್ತಿರುವ ನವರಾತ್ರಿ ಉತ್ಸವಕ್ಕೆ ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ ಎಳೆಯಲಾಯಿತು. ನವರಾತ್ರಿ ಅಂಗವಾಗಿ ಹುಕ್ಕೇರಿ ನಗರದ ಹಿರೇಮಠದಲ್ಲಿ ಒಂಬತ್ತು ದಿನಗಳ ಕಾಲ ಗುರುಶಾಂತೇಶ್ವರನಿಗೆ ಅಭಿಷೇಕ,ಮಹಾ ಚಂಡಿಕಾಹೋಮ, ಅದ್ಯಾತ್ಮೀಕ ಪ್ರವಚನ ದೊಂದಿಗೆ ಭಾವೈಕ್ಯ ದಸರಾ, ಕೃಷಿ ದಸರಾ, ಮಹಿಳಾ ದಸರಾ, ಜಾನಪದ ದಸರಾ, ಮಕ್ಕಳ ದಸರಾ, ಯುವ ದಸರಾ ಕಾರ್ಯಕ್ರಮಗಳಲ್ಲಿ ನಾಡಿನ ವಿವಿಧ ಮಠಾಧೀಶರು, …

Read More »

ನಾನು ಮದುವೆ ಸಮಯದಲ್ಲಿ ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ನೈಜವಾದುದ್ದಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸ್ಪಷ್ಟನೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಹೇಳಿದ್ದಾರೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ …

Read More »

ಹುಲಿ‌ ಉಗುರು ಪ್ರಕರಣ.. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ: ಸಚಿವ ಈಶ್ವರ ಖಂಡ್ರೆ

ಕಲಬುರಗಿ: ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ವನ್ಯ ಪ್ರಾಣಿಗಳ ಚರ್ಮ, ದಂತ, ಕೊಂಬು ಸಂಗ್ರಹ ಅಥವಾ ಸಾಗಾಣಿಕೆಗೆ ಅವಕಾಶ ಇಲ್ಲ. ಅದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಯಾವುದೇ ಪ್ರಕರಣಗಳಲ್ಲಿ ಭಾಗಿಯಾದರೆ, ಅವರ ಹಿಂದೆ ಎಂತಹ ಪ್ರಭಾವಿಗಳಿದ್ದರೂ ಬಿಡುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಇತ್ತೀಚೆಗೆ ಹುಲಿ ಉಗುರು ಧರಿಸಿರುವ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಕಲಬುರಗಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಹುಲಿ …

Read More »