ಬೆಂಗಳೂರು: “ಸಚಿವ ಸ್ಥಾನಕ್ಕೆ ಚಾತಕ ಪಕ್ಷಿ ತರ ಕಾಯುತ್ತಿದ್ದೇನೆ. ಸಚಿವ ಸ್ಥಾನ ಸಿಗುವ ಬಗ್ಗೆ ನೂರಕ್ಕೆ ನೂರು ಭರವಸೆ ಇದೆ” ಎಂದು ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮಗೂ ಶೀಘ್ರದಲ್ಲೇ ಅವಕಾಶ ಸಿಗುತ್ತೆ. ಮತ್ತೆ ಯಾವುದೇ ವಿಚಾರವನ್ನು ನಾನು ಮಾತನಾಡಲ್ಲ. ಶಾಸಕರು ಈ ಬಗ್ಗೆ ಹೇಳಿ ಹೇಳಿಯೇ ಪಕ್ಷಕ್ಕೆ ಸ್ವಲ್ಪ ಹಿನ್ನಡೆ ಆಗ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಮಾತನಾಡಬೇಡಿ ಅಂತ …
Read More »Daily Archives: ಅಕ್ಟೋಬರ್ 30, 2023
ಬೆಂಗಳೂರು: ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ, ಒಂಬತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ
ಬೆಂಗಳೂರು : ಗ್ಯಾರೇಜ್‌ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಒಂಬತ್ತಕ್ಕೂ ಅಧಿಕ ಬಸ್‌ಗಳು ಆಹುತಿಯಾದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ. ಎಸ್ವಿ ಕೋಚ್ ಎನ್ನುವ ಹೆಸರಿನ ಗ್ಯಾರೇಜ್‌ನಲ್ಲಿ ಹೊಸ ಹಾಗೂ ಹಳೆಯ ಬಸ್ ಇಂಜಿನ್‌ಗಳಿಗೆ ಬಾಡಿ ಅಳವಡಿಸುವ ಕೆಲಸ ಮಾಡಲಾಗುತ್ತಿತ್ತು. ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ ಗ್ಯಾರೇಜ್‌ನಲ್ಲಿ ನಿಂತಿರುವ ಬಸ್‌ಗಳಿಗೆ ಆವರಿಸಿದೆ ಎನ್ನಲಾಗ್ತಿದೆ. ನೋಡ ನೋಡುತ್ತಿದ್ದಂತೆ ಐದಕ್ಕೂ ಅಧಿಕ ಬಸ್‌ಗಳು ಅಗ್ನಿಗಾಹುತಿಯಾಗಿದ್ದು, ಮತ್ತಷ್ಟು ವ್ಯಾಪಿಸುವ ಸಾಧ್ಯತೆಯಿದೆ. ಸದ್ಯ ಘಟನಾ ಸ್ಥಳಕ್ಕೆ ಎರಡು …
Read More »ಮುಂಬೈನ ಐಕಾನಿಕ್ ಪ್ರೀಮಿಯರ್ ಪದ್ಮಿನಿ ಟ್ಯಾಕ್ಸಿಗಳಿಗೆ ವಿದಾಯ.. ಇಂದಿನಿಂದ ‘ಕಪ್ಪು ಹಳದಿ’ ಟ್ಯಾಕ್ಸಿಗಳು ಬಂದ್..
ಹೈದರಾಬಾದ್: ಮುಂಬೈನ ಬೀದಿಗಳಲ್ಲಿ ಪ್ರಯಾಣಿಸುವಾಗ ‘ಕಪ್ಪು ಮತ್ತು ಹಳದಿ’ ಟ್ಯಾಕ್ಸಿಗಳ ಚಿತ್ರವು ಖಂಡಿತವಾಗಿಯೂ ಕಣ್ಮುಂದೆ ಬರುತ್ತದೆ. ಅನೇಕ ವರ್ಷಗಳಿಂದ, ಈ ಟ್ಯಾಕ್ಸಿ ಸೇವೆಯನ್ನು ‘ಕಾಲಿ-ಪಿಲಿ’ ಎಂದು ಕರೆಯಲಾಗುತ್ತಿತ್ತು. ಇದು ಸಾಮಾನ್ಯರಿಂದ ಶ್ರೀಮಂತರವರೆಗಿನ ಮುಂಬೈನ ಎಲ್ಲಾ ವರ್ಗದ ಜನರಿಗೆ ಸಾರಿಗೆ ಸಾಧನವಾಗಿತ್ತು. ಈಗ ಕನಸಿನ ನಗರಿಯಲ್ಲಿ ಕಪ್ಪು ಹಳದಿಯ ನೆನಪುಗಳು ಮೂಲೆ ಸೇರುವ ದಿನ ಸಮೀಪಿಸುತ್ತದೆ. ಮಹಾನಗರಿ ಮುಂಬೈಗೂ ಇಲ್ಲಿನ ‘ಕಾಲಿ-ಪಿಲಿ’ ಟ್ಯಾಕ್ಸಿಗೂ ಅವಿನಾಭಾವ ಸಂಬಂಧವಿದ್ದು, ಈಗ ಸುಮಾರು ಆರು ದಶಕಗಳ ನಂತರ …
Read More »ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ
ಸಿದ್ದರಾಮಯ್ಯ ನೇತೃತ್ವದಲ್ಲಿ ಐದು 5 ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ …
Read More »ಪೊಲೀಸ್ ಮನೆಯಲ್ಲಿ ಚಿನ್ನಾಭರಣ ಕದಿಯುವ ವೇಳೆ ಖಾಕಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳರು
ತುಮಕೂರು: ಮನೆಯೊಂದರಲ್ಲಿ ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ಖದೀಮರು ಹಾಡಹಗಲೇ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಶಿರಾ ನಗರದ ವಿದ್ಯಾನಗರದಲ್ಲಿ ಭಾನುವಾರ ನಡೆದಿದೆ. ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗಲೇ ಖತರ್ನಾಕ್ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಹೇಶ್ ಅವರು ಕುಟುಂಬ ಸಮೇತ ಹೊರಗೆ ಹೋಗಿದ್ದರು. ಕಾರೊಂದರಲ್ಲಿ ಬಂದಿದ್ದ ನಾಲ್ವರು ಖದೀಮರು ಮನೆ ಬಾಗಿಲಿಗೆ ಬೀಗ ಹಾಕಿದ್ದನ್ನು ಗಮನಿಸಿದ್ದಾರೆ. ಕೂಡಲೇ …
Read More »ತಾಯಿಯನ್ನೇ ಕೊಲೆ ಮಾಡಿದ ಆರೋಪ: ಪುತ್ರನ ಬಂಧನ
ಮಂಗಳೂರು: ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರ ಎಂಬಲ್ಲಿ ರತ್ನ ಶೆಟ್ಟಿ (60) ಮನೆಯ ಕೊಠಡಿಯೊಳಗೆ ಅಸಹಜವಾಗಿ ಸಾವನ್ನಪ್ಪಿದ್ದರು. ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ರವಿರಾಜ್ ಶೆಟ್ಟಿ(33) ಬಂಧಿತ ಆರೋಪಿ. ರತ್ನ ಶೆಟ್ಟಿ ಅವರು ಕಟೀಲು ದುರ್ಗಾ ನಗರದ ಬಾಲಕೃಷ್ಣ ಎಂಬವರ ಮನೆಯ ಬದಿಯ ಕೊಠಡಿಯಲ್ಲಿ ಮಗ ರವಿರಾಜ್ ಜೊತೆ ವಾಸ್ತವ್ಯವಿದ್ದರು. ಆತ ಗಿಡಿಗೆರೆ ಚರ್ಚ್ ಬಳಿಯ ಬಾಲಕೃಷ್ಣ ಎಂಬವರ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ. …
Read More »ರಾಜ್ಯಾದ್ಯಂತ ವಿವಿಧ ಅಧಿಕಾರಿಗಳಿಗೆ ಲೋಕಾ ಶಾಕ್: ಬೆಂಗಳೂರು ಸೇರಿ 90 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತೀವ್ರ ಶೋಧ ಕಾರ್ಯ..
ಬೆಂಗಳೂರು: ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇಂದು (ಸೋಮವಾರ) ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಬರೋಬ್ಬರಿ 90 ಕಡೆಗಳಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. …
Read More »