Breaking News

Monthly Archives: ಅಕ್ಟೋಬರ್ 2023

ನಾಲ್ಕು ತಿಂಗಳಲ್ಲಿ 4,248 ಕೋಟಿ ರೂ ಬಾಕಿ ವಸೂಲಿ ಮಾಡಿ: ಅಧಿಕಾರಿಗಳಿಗೆ ಸಚಿವ ಎಂ ಬಿ ಪಾಟೀಲ್ ಗಡುವು

ಬೆಂಗಳೂರು: ಉದ್ಯಮ ಸ್ಥಾಪನೆಯ ಉದ್ದೇಶಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿ (ಕೆಐಎಡಿಬಿ) ಈವರೆಗೆ ಹಂಚಿರುವ ನಿವೇಶನಗಳಿಂದ 4,248 ಕೋಟಿ ರೂ.ಗಳಷ್ಟು ಬೃಹತ್ ಬಾಕಿ ಹಣ ಬರಬೇಕಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಕಟ್ಟುನಿಟ್ಟಾಗಿ ವಸೂಲಿ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗಡುವು ವಿಧಿಸಿದ್ದಾರೆ. ಖನಿಜ‌ ಭವನದಲ್ಲಿ ಕೆಐಎಡಿಬಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈ ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ವಿಫಲರಾದರೆ ಮಂಡಲಿಯ ಕಾರ್ಯದರ್ಶಿಗಳ ವಿರುದ್ಧ …

Read More »

ಭತ್ತದ ಬೆಳೆಯಲ್ಲೇ ಮೂಡಿಬಂದ ಪುನೀತ್ ರಾಜ್‌ಕುಮಾರ್!

ರಾಯಚೂರು: ಪವರ್‌ಸ್ಟಾರ್ ದಿ.ಪುನೀತ್ ರಾಜ್​​ಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ವಿವಿಧ ರೀತಿಯಲ್ಲಿ ವಿಶೇಷ ಪ್ರೀತಿ ತೋರಿರುವುದನ್ನು ಕಂಡಿದ್ದೇವೆ. ಇಲ್ಲೊಬ್ಬ ರೈತ ಅಪ್ಪುವಿನ ಅಪ್ಪಟ ಅಭಿಯಾನಿಯಾಗಿದ್ದು, ಭತ್ತದ ಬೆಳೆಯಲ್ಲೇ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ. ಜಿಲ್ಲೆಯ ಸಿರವಾರ ತಾಲೂಕಿನ ಡೊಣ್ಣಿ ಕ್ಯಾಂಪ್‌ನ ರೈತ ಸತ್ಯನಾರಾಯಣ, ತಮ್ಮ ಭತ್ತದ ಬೆಳೆಯಲ್ಲೇ ಪುನೀತ್ ರಾಜ್​ಕುಮಾರ್ ಭಾವಚಿತ್ರ ಮೂಡಿಸುವ ಮೂಲಕ 2ನೇ ವರ್ಷ ಪುಣ್ಯಸ್ಮರಣೆಗೆ ವಿಭಿನ್ನವಾಗಿ ಪ್ರೀತಿ ವ್ಯಕ್ತಪಡಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಎರಡು …

Read More »

ನಾಡ ಹಬ್ಬ ಹಾಗೂ ಹಬ್ಬಕ್ಕಾಗಿ ಇರುವ ದಸರಾ ರಜೆಯ ಕಾರಣದಿಂದ ಪ್ರಯಾಣಿಕರಿಗಾಗಿ 2000 ಕ್ಕೂ ಅಧಿಕ ಬಸ್​ಗಳ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ವ್ಯವಸ್ಥೆ ಮಾಡಿದೆ.

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗೂ ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚಿನ ಬಸ್​ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಹಬ್ಬಕ್ಕಾಗಿ ಊರಿಗೆ ತೆರಳುವ ಮತ್ತು ರಜೆ ಮುಗಿಸಿ ವಾಪಸ್​ ಆಗಲು ಅನುಕೂಲವಾಗುವಂತೆ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಒದಗಿಸುತ್ತಿದೆ. ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ …

Read More »

ಪಂಚರಾಜ್ಯ ಚುನಾವಣೆಗೆ ಕರ್ನಾಟಕದಿಂದ ಕಾಂಗ್ರೆಸ್ ಹಣ ಕಳಿಸುತ್ತಿದೆ: ಜಿ.ಟಿ.ದೇವೇಗೌಡ

ಬೆಳಗಾವಿ: ಕಾಂಗ್ರೆಸ್ 28 ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದು ತಪ್ಪಲ್ಲ. ಆದರೆ ಪ್ರಧಾನಿ ಮೋದಿ ಅವರ ಜೊತೆಗೆ ಹೋದರೆ ಕೋಮುವಾದಿ ಪಕ್ಷವಂತೆ. ನಮ್ಮದು ಕೇವಲ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ರಾಜ್ಯ, ರಾಷ್ಟ್ರದ ಪ್ರಮುಖ ಪಕ್ಷ ಎನ್ನುವ ಮೂಲಕ ಕೈ ನಾಯಕರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ಕೊಟ್ಟರು. ಬೆಳಗಾವಿಯ ಕೆಪಿಟಿಸಿಎಲ್ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜೆಡಿಎಸ್ ಪುನಶ್ಚೇತನ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವ ಸಂಕಲ್ಪವನ್ನು ನಾವು ಮಾಡಬೇಕಿದೆ. …

Read More »

ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಚೆನ್ನಮ್ಮನ ಕಿತ್ತೂರು ಸಂಸ್ಥಾನದ ಇತಿಹಾಸ

ಬೆಳಗಾವಿ: ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊದಲ ಸೋಲಿನ ರುಚಿ ತೋರಿಸಿದ ಕೆಚ್ಚೆದೆಯ ಸಂಸ್ಥಾನ ಇದು. ಶೌರ್ಯ, ಸಾಹಸ, ಸ್ವಾಭಿಮಾನ, ಸ್ವಾತಂತ್ರ್ಯ, ತ್ಯಾಗ, ಬಲಿದಾನಗಳೇ ಇಲ್ಲಿನ ಸೈನಿಕರ‌ ಜೀವಾಳ. ಪುರುಷಪ್ರಧಾನ ಸಮಾಜದಲ್ಲಿ ಓರ್ವ ಮಹಿಳೆ ಆಡಳಿತದ ಚುಕ್ಕಾಣಿ ಹಿಡಿದ ವೀರವನಿತೆಯ ನೆಲ.   ನಮ್ಮ ನಾಡಿನಲ್ಲಿ ಅನೇಕ ಸಂಸ್ಥಾನಗಳು ಆಡಳಿತ ನಡೆಸಿವೆ. ಆದರೆ, ಅವುಗಳ ಸಾಲಿನಲ್ಲಿ ಭಿನ್ನ ಮತ್ತು ಮಾದರಿಯಾಗಿ ನಿಲ್ಲುವುದು ಕಿತ್ತೂರು ಸಂಸ್ಥಾನ. ಅಧಿಕಾರದ ಆಸೆಗಾಗಿ ಬ್ರಿಟಿಷರ …

Read More »

ಬೆಳಗಾವಿ: ಚಿನ್ನದಂಗಡಿ ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದ ಐಟಿ ಅಧಿಕಾರಿ ಪೊಲೀಸ್ ಬಲೆಗೆ

ಬೆಳಗಾವಿ : ಚಿನ್ನದ ವ್ಯಾಪಾರಿಯೊಬ್ಬರ ಬಳಿ ಲಂಚ ಸ್ವೀಕರಿಸುತ್ತಿದ್ದ ಆದಾಯ ತೆರಿಗೆ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಗಾವಿಯಲ್ಲಿ ಇಂದು ನಡೆದಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ ಬಂಕಾಪುರ ಎಂಬ ಚಿನ್ನಾಭರಣ ಅಂಗಡಿ ಮಾಲೀಕನಿಗೆ ಹಣ ನೀಡುವಂತೆ ಐಟಿ ಅಧಿಕಾರಿ ಅವಿನಾಶ ಟೊನಪೆ ಕಿರುಕುಳ ನೀಡಿದ್ದರು. ಇದರಿಂದ ಚಿಂತಾಕ್ರಾಂತರಾದ ಚಿನ್ನಾಭರಣ ವ್ಯಾಪಾರಿ, ಎಸಿಪಿ ನಾರಾಯಣ ಭರಮನಿ ಅವರಿಗೆ ವಿಷಯ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಲಂಚಬಾಕ ಐಟಿ …

Read More »

ಕಿತ್ತೂರು ಉತ್ಸವ: ಪ್ರಚಾರ ಸಮಿತಿ ಸಭೆ

ಕಿತ್ತೂರು ಉತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ವ್ಯಾಪಕ ಪ್ರಚಾರವನ್ನು ಕೈಗೊಳ್ಳುವುದರ ಜತೆಗೆ ಕಳೆದ ಬಾರಿಯಂತೆ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ನೇರಪ್ರಸಾರ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಿತ್ತೂರು ಉತ್ಸವ ಪ್ರಚಾರ ಉಪ ಸಮಿತಿ ಅಧ್ಯಕ್ಷರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹೇಳಿದರು. ಕಿತ್ತೂರ ಉತ್ಸವ-2023 ರ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನ ಪ್ರವಾಸಿಮಂದಿರದಲ್ಲಿ ಶುಕ್ರವಾರ(ಅ.13) ನಡೆದ ಪ್ರಚಾರ ಉಪ ಸಮಿತಿ ಸದಸ್ಯರು ಹಾಗೂ ಮಾಧ್ಯಮ …

Read More »

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಸದಸ್ಯೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ ಮುಕ್ತಾಬಾಯಿ ಬೀಸೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಗ್ರಾಪಂ ಸದಸ್ಯೆ ಮುಕ್ತಾಬಾಯಿಗೆ ಏಳು ವರ್ಷ ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 37 ಸಾವಿರ ರೂಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಇನ್ನು ಮುಕ್ತಾಬಾಯಿಗೆ ಸಹಾಯ ಮಾಡಿದ ಆರೋಪದ …

Read More »

ಬರುವ ರವಿವಾರದಿಂದಲೇ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳನ್ನು ಆರಂಭಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ಕೆಲಸ- ಕಾರ್ಯಗಳನ್ನು …

Read More »

ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯದ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡದ ಇಬ್ಬರು ವಿಜ್ಞಾನಿಗಳಿಗೆ ಸ್ಥಾನ

ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‍ಫೋರ್ಡ್​ ವಿಶ್ವವಿದ್ಯಾನಿಲಯ ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ವಿಜ್ಞಾನಿಗಳಿಬ್ಬರು ಸ್ಥಾನ ಪಡೆದುಕೊಂಡಿದ್ದಾರೆ.   ಡಾ. ಎಸ್​. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಅವರು ಸ್ಥಾನಗಿಟ್ಟಿಸಿಕೊಂಡಿದ್ದು, ಅವರ ಮೌಲ್ಯಿಕ ಸಂಶೋಧನೆಗಳ ಸಾಧನೆಯಿಂದ ಧಾರವಾಡ ಐಐಟಿಗೆ ಕೀರ್ತಿ ಬಂದಿದ್ದು, ಅವರನ್ನು ಧಾರವಾಡ ಐಐಟಿಯ ಎಲ್ಲ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ …

Read More »