Breaking News

Monthly Archives: ಅಕ್ಟೋಬರ್ 2023

ಓವರ್ ಟೇಕ್‌ ಭರದಲ್ಲಿ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರ: ಬಿಎಂಟಿಸಿ ಬಸ್ ಹರಿದು ಸಾವು

ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್​​ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಅಟ್ಟೂರಿನ ಮದರ್ ಡೈರಿ ಬಳಿ ದುರಂತ ಸಂಭವಿಸಿದ್ದು, ಅವಘಡದಲ್ಲಿ ಸ್ಕೂಟರ್ ಸವಾರ ಭರತ್ ರೆಡ್ಡಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಸ್ಕೂಟಿಎಂಜಿನಿಯರಿಂಗ್‌ ಮುಗಿಸಿದ್ದ ಭರತ್, ಸಿವಿಲ್‌ ಕಂಟ್ರಾಕ್ಟರ್ …

Read More »

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪಿಎಂ ಕಿಸಾನ್ ಯೋಜನೆ’ ಹಣ 3,000 ರೂ.ಗೆ ಏರಿಕೆ ಸಾಧ್ಯತೆ!

ನವದೆಹಲಿ : ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಕಂತು ಹೆಚ್ಚಾಗಬಹುದು. ಪ್ರಸ್ತುತ, ಈ ಯೋಜನೆಯಡಿ, ಸರ್ಕಾರವು ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳನ್ನು ನೀಡುತ್ತದೆ.ಈ ಮೊತ್ತವನ್ನು 2000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತದೆ.   ವರದಿಯ ಪ್ರಕಾರ, ಕಳೆದ ವರ್ಷ ರೈತರ ಈ ಯೋಜನೆಯಡಿ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳನ್ನು ಉಳಿಸಿದೆ. ಅನರ್ಹ ಫಲಾನುಭವಿಗಳನ್ನು …

Read More »

ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿತರ ಪಟ್ಟಿ ಹೆಚ್ಚಾಗುತ್ತಿದೆ.

ಧಾರವಾಡ: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ. ಇನ್ನೇನಿದ್ರು ಲೋಕಸಭಾ ಚುನಾವಣೆ ಮೇಲೆ ಎಲ್ಲ ಪಕ್ಷಗಳ ಕಣ್ಣುಗಳು ನೆಟ್ಟಿವೆ. ಜೊತೆಗೆ ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್​ಗಾಗಿ ಆಕಾಂಕ್ಷಿತರು ಈಗಲೇ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ಗಾಗಿ ಕೂಡ ಆಕಾಂಕ್ಷಿಗಳು ಬಹಿರಂಗವಾಗಿಯೇ ಸ್ಪರ್ಧಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈಗಿನಿಂದಲೇ ಸಂಸತ್ ಚುನಾವಣೆಗೆ ಸಿದ್ಧತೆಗಳು ಶುರುವಾಗಿವೆ. ಹೀಗಾಗಿ ಸಹಜವಾಗಿ ಆಕಾಂಕ್ಷಿಗಳು ಮುನ್ನಲೆಗೆ ಬರುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧೆಗಿಳಿಯಲು …

Read More »

ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ:

ಗದಗ, (ಅಕ್ಟೋಬರ್ 05): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದೆ. ಮಂಗಳೂರು ಮೂಲದ ಉದ್ಯಮಿಗೆ ವಂಚನೆ ಬೆನ್ನಲ್ಲೇ ಗದಗ ಜಿಲ್ಲೆಯಲ್ಲೂ ಅಭಿನವ ಹಾಲಶ್ರೀ(Abhinava Halashri) ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈಗ ಬೆಂಗಳೂರಿನ ಜೈಲಿನಲ್ಲಿದ್ದ ಹಾಲಶ್ರೀ ಸ್ವಾಮೀಯನ್ನು ಮುಂಡರಗಿ ಪೊಲೀಸ್ರು ಬಾಡಿ ವಾರಂಟ್ ಮೇಲೆ ಆಚೆ ಕರೆದುಕೊಂಡು ಬಂದು ಎಲ್ಲೆಡೆ ಸ್ಥಳ ಮಹಜರು …

Read More »

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರ ಸಾವು, ಮೆಡಿಕಲ್​ ಶಾಪ್​ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ​

ಮೈಸೂರು, ಅ.05: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ (Accident) ಘಟನೆ ಮೈಸೂರು ಜಿಲ್ಲೆ ಹೆಚ್​.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್​​ನಲ್ಲಿದ್ದ ಸೋಮಶೇಖರ್​(30), ನಾಗೇಶ್​​(28) ಮೃತಪಟ್ಟಿದ್ದಾರೆ. ಮೈಸೂರಿನಿಂದ ಹೆಚ್​.ಡಿ.ಕೋಟೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ (HD Kote Police Station) ಪ್ರಕರಣ ದಾಖಲಾಗಿದೆ. ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವಕ …

Read More »

ಬೆಳ್ಳಂಬೆಳಗ್ಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

ಶಿವಮೊಗ್ಗ, (ಅಕ್ಟೋಬರ್ 05): ಶಿವಮೊಗ್ಗದಲ್ಲಿ (Shivamogga) ಡಿಸಿಸಿ ಬ್ಯಾಂಕ್ ಅಧ್ಯಕ್ಷ R.M.ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ (ED Raid) ಮಾಡಿದೆ. ಇಂದು (ಅಕ್ಟೋಬರ್ 05) ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.

Read More »

ನಾಳೆಯಿಂದ ಕೇಂದ್ರ ತಂಡದಿಂದ ಬರ ಪರಿಸ್ಥಿತಿ ಅಧ್ಯಯನ, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ ಆಗಮಿಸುತ್ತಿದ್ದು, ಅಕ್ಟೋಬರ್ 5ರಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧೆಡೆ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ. ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಮೂರು ತಂಡಗಳು ಬೆಳಗ್ಗೆ 9:30 ರಿಂದ 10:30ರ …

Read More »

ಮದುವೆಯಾದ ಮಗಳಿಗೆ ತಂದೆಯ ಹುದ್ದೆಯನ್ನು ಅನುಕಂಪದ ಆಧಾರದಲ್ಲಿ ನೀಡಲಾಗದು: ಹೈಕೋರ್ಟ್

ಬೆಂಗಳೂರು : ಮದುವೆಯಾಗಿ ಪತಿಯೊಂದಿಗೆ ವಾಸಿಸುತ್ತಿರುವ ಮಹಿಳೆ ತನ್ನ ತಂದೆಯ ಉದ್ಯೋಗಕ್ಕೆ ಅನುಕಂಪದ ಆಧಾರದ ಮೇಲೆ ಅರ್ಹಳು ಎಂದು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಎಲ್‌ಐಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಆ ಹುದ್ದೆಯನ್ನು ತನಗೆ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ …

Read More »

ಖಲಿಸ್ತಾನಿಗಳ ಬೆದರಿಕೆ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ನಾಳೆಯಿಂದ ಏಕದಿನ ಕ್ರಿಕೆಟ್ ವಿಶ್ವಕಪ್ ಹಬ್ಬ ಆರಂಭವಾಗುತ್ತಿದ್ದು, ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಮೊದಲ ಪಂದ್ಯದ ಮೂಲಕ ವಿಶ್ವಕಪ್ ಪಂದ್ಯಾವಳಿಗೆ ವಿಧ್ಯುಕ್ತ ಚಾಲನೆ ಸಿಗಲಿದೆ. ಅಕ್ಟೊಬರ್ 5ರಿಂದ ನವೆಂಬರ್ 19ರವರೆಗೆ ದೇಶದ 10 ಕ್ರೀಡಾಂಗಣದಲ್ಲಿ 48 ಪಂದ್ಯಗಳು ನಡೆಯಲಿವೆ. ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆ ನಡೆಸಲಾಗುತ್ತಿದೆ. ಪಂದ್ಯ ನಡೆಯುವ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸ್ …

Read More »

ಬಿಪಿ ಶುಗರ್ ಇದ್ದವರ ಮನೆಗೆ ಪ್ರತಿ ತಿಂಗಳು ಉಚಿತವಾಗಿ ಮಾತ್ರೆಗಳು ರವಾನೆ

ಬೆಳಗಾವಿ: ಮುಂದಿನ ಎರಡು ತಿಂಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಗೃಹ ಆರೋಗ್ಯ’ ಮತ್ತು ‘ಆಶಾ ಕಿರಣ’ ಎಂಬ ಎರಡು ಹೊಸ ಹೊಸ ಯೋಜನೆಗಳನ್ನು ಆರಂಭಿಸುತ್ತಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರತಿಯೊಬ್ಬರ ಆರೋಗ್ಯ ತಪಾಸಣೆಗಾಗಿ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸುವ ಗೃಹ ಆರೋಗ್ಯ ಯೋಜನೆ ಮತ್ತು ಆಶಾಕಿರಣ ಯೋಜನೆಗಳನ್ನು ಜಾರಿಗೆ …

Read More »