Breaking News

Monthly Archives: ಅಕ್ಟೋಬರ್ 2023

ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪ್ರಕರಣದ ಸಾಕ್ಷಿಗಳಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮುರುಘಾ ಶರಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಪಿತೂರಿ ನಡೆಸಿದ ಮತ್ತು ಹಣ ಸುಲಿಗೆಗೆ ಪ್ರಯತ್ನಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಬಸವರಾಜನ್ ಮತ್ತು ಸೌಭಾಗ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರ ಪೀಠ …

Read More »

ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಲು ಚಿಂತನೆ: ಸಚಿವ ಸಂತೋಷ್ ಲಾಡ್

ಬೆಳಗಾವಿ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಬಾಲಕಾರ್ಮಿಕರ ರಕ್ಷಣೆಗೆ ಟಾಸ್‌ಪಾಸ್ಕ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು. ಬಾಲ ಕಾರ್ಮಿಕರು ಕಂಡುಬಂದಲ್ಲಿ ತಕ್ಷಣ ಮಕ್ಕಳ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ …

Read More »

ಹುಬ್ಬಳ್ಳಿಯಲ್ಲಿವೆ ಅನಧಿಕೃತ ವಾಣಿಜ್ಯ ಮಳಿಗೆಗಳು.. ವಾಣಿಜ್ಯ ಸಂಸ್ಥೆ ಕಾಯಿದೆ ಉಲ್ಲಂಘನೆ

ಹುಬ್ಬಳ್ಳಿ: ಹುಬ್ಬಳ್ಳಿಯು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ವಿವಿಧ ವಾಣಿಜ್ಯ ಚಟುವಟಿಕೆಗಳಿಂದಾಗಿ ರಾಜ್ಯದಲ್ಲೇ ಉತ್ತಮ ಹೆಸರು ಮಾಡಿದೆ. ಆದರೆ ಈ ನಗರದಲ್ಲಿ ವಾಣಿಜ್ಯ ಸಂಸ್ಥೆ ಕಾಯಿದೆಗೆ ಬೆಲೆಯೇ ಇಲ್ಲದಂತಾಗಿದೆ. ಯಾಕೆಂದರೆ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ ಇಂದಿಗೂ ಕೆಲ ವಾಣಿಜ್ಯ ಮಳಿಗೆ ಸಂಸ್ಥೆ ಮತ್ತು ಅಂಗಡಿಯವರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ-1961 ಅನ್ವಯ ನೋಂದಣಿ ಮಾಡಿಸಿ, ಪರವಾನಗಿ ಪತ್ರ ಪಡೆದಿಲ್ಲ. ಹೀಗಾಗಿ ಕರ್ನಾಟಕ ಅಂಗಡಿ ವಾಣಿಜ್ಯ ಸಂಸ್ಥೆ ಕಾಯ್ದೆ-1961 …

Read More »

ನಕಲಿ ಕಾರ್ಮಿಕ ಕಾರ್ಡ್​ಗಳ ರದ್ದತಿಗೆ ಸಚಿವ ಸಂತೋಷ್ ಲಾಡ್ ಸೂಚನೆ

ಬೆಳಗಾವಿ: ”ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್​ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನ ಸಹಾಯಗಳನ್ನು ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಅಂಥವರ ನೋಂದಣಿಯನ್ನು ರದ್ದುಗೊಳಿಸಬೇಕು. ಅಲ್ಲದೇ ಮಂಡಳಿಯ ಯಾವುದೇ ಸೌಲಭ್ಯಗಳನ್ನು ಅವರಿಗೆ ನೀಡದಂತೆ ತಡೆಹಿಡಿಯಬೇಕು” ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಕಾರ್ಮಿಕ ಇಲಾಖೆಯ ಪ್ರಾದೇಶಿಕ ಮಟ್ಟದ ಇಲಾಖೆ ಅಧಿಕಾರಿಗಳ …

Read More »

ಕ್ಷೇತ್ರದಲ್ಲಿ ಕೆಲಸ, ಕಾರ್ಯಗಳಿಲ್ಲದೆ ಶಾಸಕರು ಖಾಲಿ ಕುಳಿತಿದ್ದೇವೆ: ರಾಜು ಕಾಗೆ ಅಸಮಾಧಾನ

ಚಿಕ್ಕೋಡಿ (ಬೆಳಗಾವಿ) : ಸರ್ಕಾರ ರಚನೆಯಾಗಿ ನಾಲ್ಕೈದು ತಿಂಗಳಾದರೂ ಇನ್ನೂ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗದೆ ತೊಂದರೆಯಾಗುತ್ತಿದೆ. ಹೀಗಾಗಿ ಶಾಸಕರು ಖಾಲಿ ಕುಳಿತಿದ್ದೇವೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ. ಬುಧವಾರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿ ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಕ್ಷೇತ್ರದ ಜನರು ರಸ್ತೆ, ನೀರಾವರಿ ಯೋಜನೆ, ಸಮುದಾಯ ಭವನ, ಶಾಲೆ, ಗುಡಿ-ಗುಂಡಾರಗಳನ್ನು ಕೇಳುತ್ತಿದ್ದಾರೆ. ಶಾಸಕರ ನಿಧಿಗೆ 50 ಲಕ್ಷ ರೂ ಹಾಕಿದ್ದೇವೆ ಎಂದು ಸರ್ಕಾರ …

Read More »

ಹೊಸಪೇಟೆ: ಮಹಿಳೆಯ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಗಳು 24 ಗಂಟೆಯೊಳಗೆ ಅಂದರ್​

ವಿಜಯನಗರ (ಹೊಸಪೇಟೆ) : ಮಹಿಳೆಯೊಬ್ಬರ ಕತ್ತಿನಿಂದ ಸರ ದೋಚಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು 24 ಗಂಟೆಯೊಳಗೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಹೊಸಪೇಟೆ ನಿವಾಸಿಗಳಾದ ಆಟೋ ಚಾಲಕ ಶ್ರೀನಿವಾಸ್ ಮತ್ತು ಆತನ ಸ್ನೇಹಿತ ವೆಂಕೋಬ ಬಂಧಿತ ಆರೋಪಿಗಳು. ಹೊರವಲಯದ ಕೊಂಡಾನಾಯಕನಹಳ್ಳಿ ಮಹಿಳೆ ವರಮಹಾಲಕ್ಷ್ಮಿ ಅವರು ಅ.1ರಂದು ಆಟೋದಲ್ಲಿ ಚರ್ಚ್ ಗೆ ಹೋಗಿದ್ದರು. ಅದೇ ಆಟೋದಲ್ಲಿ ಮರಳಿ ಮನೆಗೆ ಹೋಗುವಾಗ ಆರೋಪಿ ಶ್ರೀನಿವಾಸ್ ಆತನ ಸ್ನೇಹಿತ ವೆಂಕೋಬ ಎಂಬವನನ್ನು …

Read More »

4ನೇ ಬಾರಿಗೆ ಚಿನ್ನದ ಅಂಬಾರಿ ಹೊರಲು ರೆಡಿಯಾಗುತ್ತಿರುವ ಕ್ಯಾಪ್ಟನ್​ ಅಭಿಮನ್ಯು: ವಿಡಿಯೋ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿದೆ. ನಾಲ್ಕನೇ ಬಾರಿಗೆ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರಲು ಸಿದ್ದವಾಗುತ್ತಿರುವ ಕ್ಯಾಪ್ಟನ್​ ಅಭಿಮನ್ಯು ಆನೆಯನ್ನು ವಿಶೇಷ ಆತಿಥ್ಯದೊಂದಿಗೆ ತಯಾರು ಮಾಡಲಾಗುತ್ತಿದೆ. ಈಗಾಗಲೇ 3 ಬಾರಿ ಅಂಬಾರಿ ಹೊತ್ತಿರುವ ‘ಆಪರೇಷನ್ ಕಿಂಗ್’ ಅಭಿಮನ್ಯು ಸೈ ಎನ್ನಿಸಿಕೊಂಡಿದ್ದಾನೆ. ಈ ಬಾರಿಯೂ ಗಣಪಡೆಯನ್ನು ಮುನ್ನಡೆಸುತ್ತಿದ್ದು, ಪ್ರತಿನಿತ್ಯ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಸೆಪ್ಟೆಂಬರ್ 5ರಂದು ಮೊದಲ ಹಂತದ ಗಜಪಡೆಯ ನೇತೃತ್ವ ವಹಿಸಿದ್ದ ಅಭಿಮನ್ಯು ಅರಮನೆ ಆವರಣ ಪ್ರವೇಶ ಮಾಡಿತ್ತು. …

Read More »

ಮೈಸೂರು ದಸರಾ : ಅಕ್ಟೋಬರ್​ 6 ರಿಂದ 13ರ ವರೆಗೆ ಯುವ ಸಂಭ್ರಮ.. ಎಸ್​ಪಿ ಸೀಮಾ ಲಾಟ್ಕರ್

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ಅಕ್ಟೋಬರ್​​ 6 ರಿಂದ 13ರ ವರೆಗೆ ಯುವ ಸಂಭ್ರಮ ಆಯೋಜಿಸಲಾಗಿದೆ ಎಂದು ಯುವ ಸಂಭ್ರಮ ಉಪಸಮಿತಿ ವಿಶೇಷಾಧಿಕಾರಿ, ಎಸ್‍ಪಿ ಸೀಮಾ ಲಾಟ್ಕರ್ ತಿಳಿಸಿದರು.   ನಗರದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ದಸರಾ ಮಹೋತ್ಸವದಲ್ಲಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪ್ರತಿಭೆ ಅನಾವರಣಕ್ಕೆ ಯುವ ಸಂಭ್ರಮ ವೇದಿಕೆ ಕಲ್ಪಿಸುತ್ತದೆ. ಅದರಂತೆ ಈ ಬಾರಿಯೂ …

Read More »

ಬಿಜೆಪಿ ಅವಧಿಯಲ್ಲಿ ಸಾವಿರಾರು ಕೋಮುಗಲಭೆ ಪ್ರಕರಣ ಕೈಬಿಡಲಾಗಿದೆ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಕೋಮು ವಿವಾದಕ್ಕೆ ಸಂಬಂಧಿಸಿದ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಸಾವಿರಾರು ರೌಡಿಶೀಟರ್‌ಗಳನ್ನೂ ಬೀದಿಗೆ ಬಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.   ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯವರಿಗೆ ತಮ್ಮ ಮನೆಯ ಹುಳುಕು, ದೋಸೆ ತೂತು ಕಾಣುತ್ತಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ …

Read More »

2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಕಳೆದುಕೊಳ್ಳಲಿದೆ:ಸಂತೋಷ್​ ಲಾಡ್

ಬೆಳಗಾವಿ : ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ, ಜೆಡಿಎಸ್ ನಾಯಕರು ಟೀಕಿಸುತ್ತಿದ್ದಾರೆ. ಆದರೆ, ಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಕಳೆದುಕೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್ ಭವಿಷ್ಯ ನುಡಿದಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದ್ಧವಾಗಿ ನಮ್ಮ ಸರ್ಕಾರ ರಚನೆ ಆಗಿದೆ. ಸರ್ಕಾರ ಹೇಗೆ ಪತನ ಆಗಲಿದೆ ಎಂಬ ಬಗ್ಗೆ ಅವರನ್ನೇ ನೀವು ಕೇಳಬೇಕು. ಟಾರ್ಗೆಟ್ …

Read More »