Breaking News

Monthly Archives: ಅಕ್ಟೋಬರ್ 2023

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇಂದು ನಡೆದಿದೆ. ಮೂವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನೆರೆದಿದ್ದ ಜನರನ್ನು ಚದುರಿಸಿದರು. ಪೊಲೀಸರ ಮೇಲೂ ಕಲ್ಲು …

Read More »

ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಬಾರಿಗೆ ಕುರುಬ ಸಮಾಜದಿಂದ ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ ನಡೆಯುತ್ತಿದೆ ಎಂದು ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ ಮಾಹಿತಿ ನೀಡಿದ್ದಾರೆ.   ಕಾರ್ಯಕ್ರಮ ನಡೆಯಲಿರುವ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುರುಬ ಸಮಾಜದ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಮತ್ತು …

Read More »

ಈದ್ ಮಿಲಾದ್​ ಮೆರವಣಿಗೆಗೆ ಗಣೇಶ ಮಂಡಳಿಗಳ ಮುಖಂಡರ ಸಾಥ್

ಬೆಳಗಾವಿ : ಬೆಳಗಾವಿಯಲ್ಲಿಂದು ಪ್ರವಾದಿ ಮೊಹಮ್ಮದ್ ಪೈಗಂಬರ್​ ಅವರ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಈದ್‌-ಮಿಲಾದ್‌ ಮೆರವಣಿಗೆ ವಿಜೃಂಭಣೆಯಿಂದ ಜರುಗಿದ್ದು, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮುಖಂಡರೂ ಕೂಡ ಸಾಥ್ ನೀಡುವ ಮೂಲಕ ಭಾವೈಕ್ಯತೆ ಮೆರೆದರು.   ಪ್ರತಿ ವರ್ಷ ಈದ್‌-ಮಿಲಾದ್‌ ದಿನವೇ ಮೆರವಣಿಗೆ ನಡೆಯುತ್ತಿತ್ತು. ಈ ಬಾರಿಯೂ ಸೆಪ್ಟೆಂಬರ್ 28ರಂದು ಹಬ್ಬದ ದಿನವೇ ಮೆರವಣಿಗೆಗೆ ಎಲ್ಲ ರೀತಿ ಸಿದ್ಧತೆಯನ್ನು ಮುಸ್ಲಿಂ ಸಮುದಾಯದವರು ಮಾಡಿಕೊಂಡಿದ್ದರು. ಆದರೆ, ಅದೇ ದಿನ ಸಾರ್ವಜನಿಕ ಗಣೇಶ ಮೂರ್ತಿಗಳ ನಿಮಜ್ಜನೆ …

Read More »

ನಿಮಗೆ ಕಾಂಗ್ರೆಸ್‌ನಲ್ಲಿ 7 ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟುಬೇಕಿತ್ತು?ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ

ಬೆಳಗಾವಿ: ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ, ಮಾಜಿ ಸಚಿವ ಹೆಚ್‌.ವಿಶ್ವನಾಥ್ ಹೇಳಿದರು. “ನಿಮಗೆ ಕಾಂಗ್ರೆಸ್‌ನಲ್ಲಿ ಅವಕಾಶಗಳು ಸಿಕ್ಕಿವೆ. 33 ಸಚಿವರಲ್ಲಿ ಏಳು ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟು ಸ್ಥಾನ ಬೇಕಿತ್ತು” ಎಂದು ಅವರು ಪ್ರಶ್ನಿಸಿದರು. ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆದ …

Read More »

ಗೋಕಾಕ್ ತಾಲೂಕಿನ ಕಡಬಗಟ್ಟಿ ಗುಡ್ಡದ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷ

ಬೆಳಗಾವಿ : ಸಾಮಾನ್ಯವಾಗಿ ದೇವರಿಗೆ ಭಕ್ತರು ಹೂವು, ಹಣ್ಣು, ತೆಂಗಿನಕಾಯಿ ಅರ್ಪಿಸುವುದನ್ನು ನಾವು ನೀವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ. ಈ ದೇವಾಲಯದ ಮತ್ತೊಂದು ವಿಶೇಷ ಎಂದರೆ ಮಂಗಳಮುಖಿಯೊಬ್ಬರು ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ.  ಜಾತ್ರೆ ಮಹೋತ್ಸವದ ಹಿನ್ನೆಲೆ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿದ್ದು, ವಿಶೇಷ ಪೂಜೆ ಸಲ್ಲಿಸಿದರು. ಹೀಗೆ ದೇವಿಗೆ ಭಕ್ತರು ಸಾರಾಯಿ ಕುಡಿಸಿ, ಸಿಗರೇಟು ಸೇದಿಸುತ್ತಿರುವುದು ಗೋಕಾಕ್ ತಾಲೂಕಿನ ಕಡಬಗಟ್ಟಿ …

Read More »

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ 4 ರೈತ ಕುಟುಂಬಗಳ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ ಧನಾದೇಶ …

Read More »

ಸಿಎಂ ಸ್ಥಾನದ ಬಯಕೆ ಹೊಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ರೀತಿ …

Read More »

ಭದ್ರಾವತಿ ಬಳಿ ಲಾರಿ ಓವರ್​ಟೇಕ್ ವೇಳೆ ಭೀಕರ ಅಪಘಾತ: ಬೈಕ್​ನಲ್ಲಿದ್ದ ಮೂವರು ಬಾಲಕರ ದುರ್ಮರಣ

ಶಿವಮೊಗ್ಗ: ಲಾರಿ ಹಾಗೂ ಎರಡು ಬೈಕ್​​ಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕು ಕಲ್ಲಿಹಾಳ್ ಹಾಗೂ ಅರಹತೊಳಲು ಗ್ರಾಮದ ನಡುವೆ ಕಳೆದ ರಾತ್ರಿ ನಡೆದಿದೆ. ಮರದ ತುಂಡು ತುಂಬಿಕೊಂಡು ಹೊರಟಿದ್ದ ಲಾರಿಗೆ ಬೈಕ್​ಗಳು ಮಧ್ಯದಿಂದ ಬಂದು ಡಿಕ್ಕಿ ಹೊಡೆದಿವೆ ಎಂದು ತಿಳಿದುಬಂದಿದೆ. ಒಂದು ಬೈಕ್​​ನಲ್ಲಿದ್ದ ಮೂವರು ಅಪ್ರಾಪ್ತರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರನ್ನು ಭದ್ರಾವತಿ ತಾಲೂಕು ಜಂಬರಘಟ್ಟ ಗ್ರಾಮದ ಶಶಾಂಕ್(17), ಯಶವಂತ್(17) ಹಾಗೂ ವಿಕಾಸ್(17) …

Read More »

ವಾಣಿಜ್ಯ ಸಿಲಿಂಡರ್​ ಬೆಲೆ 209 ರೂ ಏರಿಕೆ.. ಹೋಟೆಲ್​ ಉದ್ಯಮಿಗಳಿಗೆ ಶಾಕ್​

ನವದೆಹಲಿ : ವಾಣಿಜ್ಯ ಅಡುಗೆ ಅನಿಲ (ಎಲ್‌ಪಿಜಿ) ದರ 19 ಕೆಜಿ ಸಿಲಿಂಡರ್‌ಗೆ 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಇದರಿಂದ ಹೋಟೆಲ್​ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಸದ್ಯ ಗೃಹಬಳಕೆಯ ಎಲ್‌ಪಿಜಿಯ ಬೆಲೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ. 903 ರಷ್ಟಿದೆ. ಇದೇ ವೇಳೆ ವಿಮಾನಯಾನ ಇಂಧನದ ಬೆಲೆಯನ್ನು ಹೆಚ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ದೇಶದಲ್ಲಿ ದಸರಾ, ದೀಪಾವಳಿ ಸೇರಿದಂತೆ ಹಬ್ಬದ ಸೀಸನ್ …

Read More »

ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿಯವರಿಗೆ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ಪ್ರದಾನ

ಟೊರೊಂಟೊ : ಖ್ಯಾತ ಲೇಖಕಿ, ಸಮಾಜ ಸೇವಕಿ, ಇನ್ಫೊಸಿಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ನೀಡಿ ಗೌರವಿಸಿದೆ. 50,000 ಡಾಲರ್ ಮೌಲ್ಯದ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ಪ್ರತಿ ವರ್ಷ ತಾವು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಪ್ರಮುಖ ಛಾಪು ಮೂಡಿಸಿದ ಭಾರತೀಯರಿಗೆ ನೀಡಲಾಗುತ್ತದೆ. “ಸುಧಾ ಮೂರ್ತಿ ಅವರಿಗೆ ಗ್ಲೋಬಲ್ ಇಂಡಿಯನ್ ಪ್ರಶಸ್ತಿ …

Read More »