Breaking News

Daily Archives: ನವೆಂಬರ್ 1, 2023

ಭಾರತೀಯ ನಾಗರಿಕರು ಇದೇ ನವೆಂಬರ್ 10ರಿಂದ ತನ್ನ ದೇಶಕ್ಕೆ ವೀಸಾ ಇಲ್ಲದೆ ಪ್ರಯಾಣಿಸಬಹುದು

ನವದೆಹಲಿ: ಭಾರತೀಯರು ವೀಸಾ ಇಲ್ಲದೆ ತನ್ನ ದೇಶಕ್ಕೆ ಭೇಟಿ ನೀಡಬಹುದು ಎಂದು ಥಾಯ್ಲೆಂಡ್ ಹೇಳಿದೆ. ಭಾರತೀಯರು ನವೆಂಬರ್ 10, 2023 ರಿಂದ ಮೇ 10, 2024 ರವರೆಗೆ ವೀಸಾ ಇಲ್ಲದೆ ಥಾಯ್ಲೆಂಡ್‌ಗೆ ಪ್ರವಾಸ ಕೈಗೊಳ್ಳಬಹುದು ಮತ್ತು ಅಲ್ಲಿ 30 ದಿನಗಳವರೆಗೆ ಉಳಿಯಬಹುದು ಎಂದು ಥಾಯ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.   ತನ್ನ ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಥಾಯ್ಲೆಂಡ್ ಈಗ ಭಾರತ ಮತ್ತು ತೈವಾನ್ ನಾಗರಿಕರಿಗೆ ವೀಸಾರಹಿತ ಪ್ರವಾಸದ ಸೌಲಭ್ಯ …

Read More »

ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಸೋಮವಾರ ಕಾಣಿಸಿಕೊಂಡ ಚಿರತೆ, ಈವರೆಗೆ ಅಧಿಕಾರಿಗಳ ಕಣ್ಣಿಗೆ ಬಿದ್ದಿಲ್ಲ. ಪರಿಣಾಮ ಜನರು ಭಯದಲ್ಲಿಯೇ ಓಡಾಡುಂತಾಗಿದೆ. ಸೆರೆಗಾಗಿ ಎರಡು ಬೋನುಗಳನ್ನು ಇಟ್ಟಿರುವ ಅರಣ್ಯ ಇಲಾಖೆ ಐದು ತಂಡಗಳನ್ನು ನಿಯೋಜಿಸಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಕಡೆಂಜಾ ಅಪಾರ್ಟ್​ಮೆಂಟ್​ ಸಮೀಪ ಚಿರತೆ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಆದರೆ, ಚಿರತೆ ಮಾತ್ರ ಅಧಿಕಾರಿಗಳ ತಪ್ಪಿಸಿಕೊಂಡು ಓಡಾಡುತ್ತಿದೆ. ಮೈಸೂರಿನಿಂದ ವಿಶೇಷ ತಂಡ ಸೇರಿದಂತೆ ಬನ್ನೇರುಘಟ್ಟದ ಅರವಳಿಕೆ …

Read More »

ಗಡಿಜಿಲ್ಲೆ ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿಯ ಇಬ್ಬರು ಹಾಗು ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ದೊರಕಿದೆ.

ಚಾಮರಾಜನಗರ: ನವೆಂಬರ್ 1ರಂದು 50ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಇಂದು ಬೆಂಗಳೂರಿನಲ್ಲಿ ಘೋಷಿಸಿದರು. ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ಸಿಕ್ಕಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಗಣ್ಯರ ವಿವರ ಹೀಗಿದೆ. ಪ್ರೊ.ಸಿ.ನಾಗಣ್ಣ: ಮೈಸೂರು …

Read More »

ಕರ್ನಾಟಕಕ್ಕೆ 50ರ ಸಂಭ್ರಮವಾದ್ರೂ, ಕನ್ನಡ ಭಾಷೆ ಮಾತ್ರ ಬೆಳವಣಿಗೆಯಾಗಿಲ್ಲ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಪ್ರತಿವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೈಸೂರು ರಾಜ್ಯವು ಈಗಿನ ಕರ್ನಾಟಕ 1956ರ ನವೆಂಬರ್ 1ರಂದು ಏಕೀಕರಣವಾಗಿದ್ದು, ಇದರ ಸಂಕೇತವಾಗಿ ರಾಜ್ಯೋತ್ಸವ ಆಚರಿಸುತ್ತೇವೆ. ರಾಜ್ಯ ಸರ್ಕಾರ ಕೂಡ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ಮನೆ ಮನೆಗಳಲ್ಲಿ ರಂಗೋಲಿ ಹಾಗೂ ದೀಪಗಳನ್ನು ಹಚ್ಚುವ ಮೂಲಕ ಅದ್ಧೂರಿಯಾಗಿ ಆಚರಿಸುವಂತೆ ಮನವಿ ಮಾಡಿದೆ. ವಿಶಾಲ ಮೈಸೂರು ರಾಜ್ಯಕ್ಕೆ ನವೆಂಬರ್ 1, 1973ರಂದು ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಈ ಕುರಿತು ಹಿರಿಯ ನಟ …

Read More »

ಡಾ.ಪುನೀತ್​ ರಾಜ್​ಕುಮಾರ್​ ಹೆಸರಿನಲ್ಲಿ ಮುಂದಿನ ತಿಂಗಳಿನಿಂದ ‘ಹೃದಯ ಜ್ಯೋತಿ’ ಯೋಜನೆ ಜಾರಿ

ಬೆಂಗಳೂರು: ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಈ ರೀತಿ ಹೃದಯಾಘಾತಕ್ಕೆ ಒಳಗಾದವರಿಗೆ (Golden Hour) ಒಳಗೆ ಚಿಕಿತ್ಸೆ ಕೊಡುವುದು ಬಹಳ ಮುಖ್ಯ. ಹಾಗಾಗಿ, ರಾಜ್ಯ ಸರ್ಕಾರ ಕರ್ನಾಟಕ ರತ್ನ ಡಾ.ಪುನೀತ್ ರಾಜ್​ಕುಮಾರ್ ಹೆಸರಿನಲ್ಲೇ ‘ಹೃದಯ ಜ್ಯೋತಿ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ಪುನೀತ್ …

Read More »

ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಉಚಿತವಾಗಿ ವಿದ್ಯುತ್ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಓದಬೇಕು, ಕನಿಷ್ಠ ಎಸ್‌ಎಸ್‌ಎಲ್​ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಓದಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ರಾಜ್ಯ ಏಕೀಕರಣವಾದಾಗ ಮೈಸೂರು ರಾಜ್ಯ ಎಂದು ಕರೆಯಲಾಯಿತು. …

Read More »

ಕರ್ನಾಟಕ‌ ರಾಜ್ಯೋತ್ಸವ ಆಚರಣೆಗೆ ಬೆಳಗಾವಿಯಲ್ಲಿ ಸಕಲ ಸಿದ್ಧತೆ ನಡೆದಿದೆ. ಕರಾಳ ದಿನಾಚರಣೆಗೆ ಯಾವುದೇ ರೀತಿಯ ಅನುಮತಿ ಇಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ

ಬೆಳಗಾವಿ: ಕರ್ನಾಟಕ‌ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಎಲ್ಲೆಲ್ಲೂ ಹಳದಿ, ಕೆಂಪು ಬಣ್ಣದ ಧ್ವಜಗಳೇ ರಾರಾಜಿಸುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಕನ್ನಡಿಗರ ಸಮಾಗಮಕ್ಕೆ ರಾಣಿ ಚನ್ನಮ್ಮ ವೃತ್ತ ಸಾಕ್ಷಿಯಾಗಲಿದೆ. ಇಡೀ ರಾಜ್ಯದಲ್ಲೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇಲ್ಲಿನ ಗಲ್ಲಿ ಗಲ್ಲಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತಿದ್ದು, ಕನ್ನಡಮ್ಮನ ಹಬ್ಬಕ್ಕೆ ಕುಂದಾನಗರಿಯಲ್ಲಿ ಸಕಲ ತಯಾರಿ‌ ನಡೆದಿದೆ. ರಾಣಿ ಚನ್ನಮ್ಮ ವೃತ್ತವಂತೂ ಅಕ್ಷರಶಃ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಚನ್ನಮ್ಮ …

Read More »

ರಾಜ್ಯೋತ್ಸವಕ್ಕೆ ರಜೆ ಹಾಕಿ ಬೆಂಗಳೂರಿನಿಂದ ಬಂದ ಪೊಲೀಸ್

ಬೆಳಗಾವಿ : ನವೆಂಬರ್ 1 ರಂದು ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತದೆ. ಇಲ್ಲಿನ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ಜಿಲ್ಲೆ ಸೇರಿ ರಾಜ್ಯದ ನಾನಾ ಮೂಲೆಗಳಿಂದ‌ ಕನ್ನಡಿಗರು ಬರುತ್ತಿದ್ದಾರೆ. ಅದರಂತೆ ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಬೆಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್​ ಅಧಿಕಾರಿಯೊಬ್ಬರು ರಜೆ ಹಾಕಿ ಬಂದಿರುವುದು ವಿಶೇಷವಾಗಿದೆ. ಕಳೆದ 10 ವರ್ಷಗಳಿಂದ ತಪ್ಪದೇ ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಈ ವಿಶೇಷ ಕನ್ನಡ ಅಭಿಮಾನಿ ಅಮಿತ್ ರಾಮಚಂದ್ರ ಮಿರಜಕರ್ ಎಂಬುವವರು …

Read More »

ಕೊರತೆಯಿಂದ ಗೋವಿನ ಜೋಳ ಫಸಲಿನ ನೀಡುವ ಹಂತದಲ್ಲಿ ಒಣಗುತ್ತಿದೆ. ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಚಿಕ್ಕೋಡಿ: ಉತ್ತರ ಕರ್ನಾಟಕ ಭಾಗದಲ್ಲಿ ಹೇರಳವಾಗಿ ಮೆಕ್ಕೆಜೋಳ ಬೆಳೆಯುವುದು ವಾಡಿಕೆ. ಸದ್ಯ ಈ ಭಾಗದಲ್ಲಿ ಗಣನೀಯ ಪ್ರಮಾಣದಲ್ಲಿ ಮಳೆ ಕೊರತೆಯಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆಗಳು ರೈತನ ಕಣ್ಣ ಮುಂದೆಯೇ ಒಣಗುತ್ತಿವೆ. ಅನ್ನದಾತ ವಿಲಿವಿಲಿ ಒದ್ದಾಡುವಂತಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಈ ವರ್ಷ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿದ್ದು ಲಕ್ಷಾಂತರ ಹೆಕ್ಟೇರ್​ನಲ್ಲಿ ಬೆಳೆದ ಗೋವಿನ ಜೋಳ ಫಸಲಿನ ಅಂಚಿಗೆ ಬಂದು ಒಣಗುತ್ತಿದ್ದು, ರೈತನನ್ನು ಸಂಕಷ್ಟದಲ್ಲಿ ಸಿಲುಕಿಸಿದೆ. ಅಲ್ಪ ಮಳೆಯಲ್ಲಿ ಕಷ್ಟಪಟ್ಟು …

Read More »