Breaking News

Daily Archives: ನವೆಂಬರ್ 4, 2023

ಹಾವೇರಿಯಲ್ಲಿ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಮೈದುನ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ. ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಕುಮಾರ್​ಗೌಡ್​​ ತನ್ನ ಸ್ವಂತ ಅಣ್ಣ ಹೊನ್ನೇಗೌಡರ ಹೆಂಡತಿ ಮತ್ತು ಮಕ್ಕಳ ಹತ್ಯೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ಗೀತಾ ಅವರ ಗಂಡ ಹೊನ್ನೇಗೌಡ ದುಬೈನಲ್ಲಿ ಕೆಲಸ …

Read More »

ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ,: ಚೆಲುವರಾಯ ಸ್ವಾಮಿ

ಕೊಡಗು: ಪಕ್ಷದಲ್ಲಿ ಉದ್ಬವಿಸಿರುವ ಸಮಸ್ಯೆಯನ್ನು ಹೈ-ಕಮಾಂಡ್, ಪಕ್ಷದ ಅಧ್ಯಕ್ಷರು, ಸಿಎಂ ತೀರ್ಮಾನ ಮಾಡ್ತಾರೆ. ಅದು ನಮ್ಮ ಕೆಲಸ ಅಲ್ಲ. ಸಣ್ಣಪುಟ್ಟ ಅಸಮಾಧಾನ ಎಲ್ಲಾ‌ ಕಡೆ ಇರುತ್ತೆ ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ, …

Read More »

“ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ..:C.M.

ಗದಗ: ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನೊಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್​ ಸಹ ಇದ್ದರು. ತುಮಕೂರಿನಲ್ಲಿ ಸಚಿವ ಕೆ ಎನ್​ ರಾಜಣ್ಣ ಅವರು, ಜಿ ಪರಮೇಶ್ವರ್​​ಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್​ ಸಿಎಂ …

Read More »

ಭ್ರೂಣ ಪತ್ತೆ ಸ್ಕ್ಯಾನಿಂಗ್​ ಆರೋಪ: ಆಸ್ಪತ್ರೆ ಮೇಲೆ ಎಸಿ ನೇತೃತ್ವದಲ್ಲಿ ದಿಢೀರ್ ದಾಳಿ

ಬೆಳಗಾವಿ: ಗರ್ಭಿಣಿಯರ ಭ್ರೂಣ ಪತ್ತೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆಸ್ಪತ್ರೆಯೊಂದರ ಮೇಲೆ ಬೆಳಗಾವಿ ಎಸಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಸ್ಕ್ಯಾನಿಂಗ್ ರೂಮ್ ಸೀಜ್ ಮಾಡಿದ್ದಾರೆ. ಬೆಳಗಾವಿಯ ಮಾಧವ ನಗರದಲ್ಲಿರುವ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಹಚ್ಚುವ ಯಂತ್ರಗಳ ಕಾಯ್ದೆ ಉಲ್ಲಂಘನೆಯಡಿ ದಾಳಿ ಮಾಡಿ ಅಧಿಕಾರಿಗಳು …

Read More »

ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯ

ಬೆಳಗಾವಿ: ಅಭಿವೃದ್ಧಿ ಸೇರಿ ಮತ್ತಿತರ ವಿಚಾರದಲ್ಲಿ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ‌ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಈ ಭಾಗದ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹೌದು, ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. …

Read More »

ಹೊಸ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು ಮನವಿ

ಗಂಗಾವತಿ(ಕೊಪ್ಪಳ): ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿರಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು ಮನವಿ ಸಲ್ಲಿಸಿದರು. ಹೊಸಪೇಟೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಗವಿಯಪ್ಪ ಅವರ ನಿವಾಸದಲ್ಲಿ ಭೇಟಿಯಾದ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು, ಈ ಬಗ್ಗೆ ಮನವಿ ಸಲ್ಲಿಸಿ ನೂತನ ಜಿಲ್ಲೆಯ ಅಗತ್ಯತೆಯನ್ನು ಸಿಎಂಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸಂಚಾಲಕರಾದ ಸುರೇಶ ಸಿಂಗನಾಳ …

Read More »