ನವದೆಹಲಿ: ಲಂಕಾಗೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯವನ್ನು ಗೆದ್ದಿದ್ದರೆ, ಅದೃಷ್ಟವಶಾತ್ ಸೆಮೀಸ್ಗೆ ನಾಲ್ಕನೇ ತಂಡವಾಗಿ ಪ್ರವೇಶಿಸುವ ಅವಕಾಶ ಇತ್ತು. ಆದರೆ, ಬಾಂಗ್ಲಾ ಟೈಗರ್ಸ್ ಸಿಂಹಳೀಯರ ಈ ಕನಸನ್ನು ಭಗ್ನ ಮಾಡಿದ್ದಾರೆ. ಶ್ರೀಲಂಕಾ ನೀಡಿದ್ದ 279 ರನ್ಗಳ ಗುರಿಯನ್ನು ಬಾಂಗ್ಲಾದೇಶ 41.1 ಓವರ್ಗೆ 3 ವಿಕೆಟ್ ಉಳಿಸಿಕೊಂಡು ಜಯ ದಾಖಲಿಸಿದೆ. ವಿಶ್ವಕಪ್ನಲ್ಲಿ ಕೇವಲ ಒಂದು ಗೆಲುವು ಸಾಧಿಸಿದ್ದ ಬಾಂಗ್ಲಾದೇಶ ಟೂರ್ನಿಯಿಂದ ಹೊರಬಿದ್ದಿತ್ತು. ಈಗ ಶ್ರೀಲಂಕಾವನ್ನು ಮಣಿಸಿ ಅವರನ್ನು …
Read More »Daily Archives: ನವೆಂಬರ್ 7, 2023
ರಾಜ್ಯದ ಹಲವೆಡೆ ಹಿಂಗಾರು ಮಳೆ ಮಜ್ಜನ; ಯಲಹಂಕದ ಕೋಗಿಲು ಕ್ರಾಸ್ ಜಲಾವೃತ
ಬೆಂಗಳೂರು : ಸೋಮವಾರ ರಾತ್ರಿಯಿಂದ ನಗರದಲ್ಲಿ ಧಾರಾಕಾರವಾಗಿ ಹಿಂಗಾರು ಮಳೆ ಸುರಿಯುತ್ತಿದೆ. ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾದವು. ಹಲವು ಅಂಡರ್ಪಾಸ್ಗಳಲ್ಲಿ ಮೊಣಕಾಲುದ್ದ ನೀರು ತುಂಬಿ ವಾಹನ ಸವಾರರು ಪರದಾಡಿದರು. ಮಲ್ಲೇಶ್ವರಂ, ಶಾಂತಿನಗರ, ಮೈಸೂರು ಬ್ಯಾಂಕ್, ಟೌನ್ ಹಾಲ್, ಯಲಹಂಕ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ನಂತರ ಕೊಂಚ ಬಿಡುವು ನೀಡಿತು. ರಾತ್ರಿಯಾಗುತ್ತಿದ್ದಂತೆ ಮತ್ತೆ ಬಿರುಸಾಯಿತು. ನಗರದ ಹಲವೆಡೆ ಬಿಟ್ಟೂಬಿಡದೆ ಮಳೆಯಾಗುತ್ತಿದೆ. ಯಲಹಂಕದಲ್ಲಿ ಮಳೆ-ಕೋಗಿಲು ಕ್ರಾಸ್ …
Read More »ಬಿಜೆಪಿಗರಿಗೆ ರಾಜ್ಯದ ಜನರ ಮೇಲೆ ಪ್ರೀತಿ, ರೈತರ ಮೇಲೆ ಗೌರವ ಹಾಗೂ ಕಾಳಜಿ ಇದ್ದರೆ ಮೊದಲು ಪರಿಹಾರ ಕೊಡಿಸಲಿ” ಎಂದ ಸಿಎಂ
ಬೆಂಗಳೂರು: ”ಹಳ್ಳಿಗಾಡಿನ ಜನರ ಮೇಲೆ ಪ್ರೀತಿ, ರೈತರ ಮೇಲೆ ಗೌರವ ಹಾಗೂ ಕರ್ನಾಟಕದ ಮೇಲೆ ಕಾಳಜಿ ಇದ್ದರೆ, ಮೊದಲು ಕೇಂದ್ರದಿಂದ ಪರಿಹಾರ ಕೊಡಿಸಲಿ” ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬರ ಅಧ್ಯಯನಕ್ಕೆ ತಿರುಗೇಟು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಇನ್ಫೋಸಿಸ್ ಸಂಸ್ಥೆ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ವಿನ್ಯಾಸಗೊಳಿಸಿರುವ ಗಾಲಿ ಮೇಲಿನ ಲ್ಯಾಬ್ ಎಂಬ ವಿಶೇಷ ಬಸ್ಗೆ ಚಾಲನೆ ನೀಡಿ ಮಾತನಾಡಿದರು. ”ಕೇಂದ್ರದ …
Read More »ರೈತರೇ ಗಮನಿಸಿ : `ಬರ ಪರಿಹಾರ’ ಪಡೆಯಲು `FID’ ಗುರುತಿನ ಸಂಖ್ಯೆ ಕಡ್ಡಾಯ
ಬೆಂಗಳೂರು : ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಕಡ್ಡಾಯವಾಗಿದೆ. ಎಫ್‍ಐಡಿ ಮಾಡಿಸದ ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್‍ಐಡಿ …
Read More »ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ಸಂಜೆ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಅವರು ಹಾಗೂ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನಪ್ರಶಸ್ತಿ ಪ್ರದಾನ ಮಾಡಿ …
Read More »