Breaking News

Daily Archives: ನವೆಂಬರ್ 8, 2023

ಪತ್ನಿಯ ಮಂಗಳಸೂತ್ರವನ್ನು ಒತ್ತೆ ಇಟ್ಟು ಭತ್ತ ನಾಟಿ ಮಾಡಿದ್ದ ರೈತ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳೆ ಬಾರದೆ ಕಂಗಾಲು

ಬೆಳಗಾವಿ: ಮುಂಗಾರು ಮಳೆ ಅಭಾವದಿಂದ ಭತ್ತದ ಬೆಳೆ ಸಂಪೂರ್ಣವಾಗಿ ಹಾನಿಯಾಗಿದೆ. ಪತ್ನಿಯ ಮಂಗಳಸೂತ್ರ ಬ್ಯಾಂಕಿನಲ್ಲಿ ಒತ್ತೆ ಇಟ್ಟು ಭತ್ತ ನಾಟಿ ಮಾಡಿದ್ದ ರೈತನಿಗೆ ಇತ್ತ ಭತ್ತವೂ ಇಲ್ಲ, ಅತ್ತ ಬಂಗಾರವೂ ಇಲ್ಲದ ಸ್ಥಿತಿ ಅನುಭವಿಸುತ್ತಿದ್ದಾರೆ. ಅನ್ನಕ್ಕಾಗಿ ಭತ್ತ ಬೆಳೆಯುವ ಅನ್ನದಾತನ ಕರುಣಾಜನಕ‌ ಕಥೆ ಇಲ್ಲಿದೆ. ಒಂದೆಡೆ ಹಾಳಾಗಿರುವ ಭತ್ತವನ್ನು ಕೀಳುತ್ತಿರುವ ರೈತ ಮಹಿಳೆ, ಮತ್ತೊಂದೆಡೆ ಸಹಾಯಕ್ಕಾಗಿ ಸರ್ಕಾರಕ್ಕೆ ಅಂಗಲಾಚುತ್ತಿರುವ ರೈತ ದಂಪತಿ. ಈ ಮನಕಲಕುವ ದೃಶ್ಯ ಕಂಡು ಬಂದಿದ್ದು ಬೆಳಗಾವಿಯ ಶಾಹಪುರ …

Read More »

3 ವರ್ಷ ಜೈಲು: ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಕೇಂದ್ರ ಎಚ್ಚರಿಕೆ

ಹೊಸದಿಲ್ಲಿ: ಡೀಪ್‌ಫೇಕ್‌ ತಂತ್ರಜ್ಞಾನದ ಮೂಲಕ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಫೋಟೋ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೇಂದ್ರ ಸರಕಾರ ಅದಕ್ಕೆ ಏನು ಶಿಕ್ಷೆ ಎನ್ನುವುದನ್ನು ಬಹಿರಂಗ ಪಡಿಸಿದೆ. 2000ನೇ ವರ್ಷದಲ್ಲೇ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಇಂತಹ ಪ್ರಕರಣಗಳಿಗೆ ಶಿಕ್ಷೆ ನಿರ್ಧರಿಸ ಲಾಗಿದೆ. ಇದನ್ನೀಗ ಸರಕಾರವು ಮತ್ತೂಮ್ಮೆ ನೆನಪಿಸುವ ಮೂಲಕ ಸಾಮಾಜಿಕ ಜಾಲತಾಣಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಕಂಪ್ಯೂಟರ್‌ ಸಂಪನ್ಮೂಲ ಬಳಸಿಕೊಂಡು ಒಬ್ಬ ವ್ಯಕ್ತಿ ಯನ್ನು ಇನ್ನೊಬ್ಬ ವ್ಯಕ್ತಿಯೆಂಬಂತೆ ತೋರಿಸಿದರೆ, ಅದಕ್ಕೆ 3 …

Read More »

ರಾಜ್ಯದ 1000 ಸ್ಮಾರಕಗಳನ್ನು ದತ್ತು ಕೊಡುವ ಉದ್ದೇಶವಿದೆ: ಸಚಿವ ಹೆಚ್ ಕೆ ಪಾಟೀಲ್

ಕಲಬುರಗಿ: ರಾಜ್ಯದಲ್ಲಿ ಒಟ್ಟು 1000 ಸ್ಮಾರಕಗಳನ್ನು ದತ್ತು ಕೊಡುವ ಉದ್ದೇಶವಿದ್ದು, ಎರಡು ವರ್ಷದಲ್ಲಿ ಈಡೇರಿಸುವ ಆಸೆ ಇದೆ. ಈ ಎಲ್ಲ ಸ್ಮಾರಕಗಳ ರಕ್ಷಣೆ ಆ ಬಗ್ಗೆ ಪುಸ್ತಕಗಳ ಪ್ರಕಟಣೆ ಸೇರಿದಂತೆ ಜನರಿಗೆ ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ‌ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ನಮ್ಮ ಸ್ಮಾರಕದರ್ಶನ ಹಾಗೂ ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಇತಿಹಾಸಕಾರರು ನಾಗಾವಿ …

Read More »

ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ: ಬಸವರಾಜ್ ಹೊರಟ್ಟಿ

ಬೆಳಗಾವಿ: ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು. ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ. ಅನೇಕ ಸರಕಾರಿ ಕಚೇರಿಗಳು ಕೂಡ ಸ್ಥಳಾಂತರಗೊಂಡಿವೆ. ಇದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಸದ್ಯಕ್ಕೆ …

Read More »

ರಾಯಲ್‌ ಚಾಲೆಂಜರ್ಸ್‌ ತಂಡ ಕ್ರಿಕೆಟ್‌ ಚಾಂಪಿಯನ್‌

ಮೂಡಲಗಿ: ಮಾರ್ನಿಂಗ್‌ ಸ್ಟಾರ್‌ ಕ್ರಿಕೆಟರ್ಸ್‌ ಹಾಗೂ ಲಯನ್ಸ್‌ ಕ್ಲಬ್‌ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‌ಎಸ್‌ಆರ್‌ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 5 ದಿನಗಳ ಮೂಡಲಗಿ ಪ್ರಿಮಿಯರ್‌ ಲೀಗ್‌ -2023 ಕ್ರಿಕೆಟ್‌ ಟೂರ್ನಿಯಲ್ಲಿ ಪಟ್ಟಣದ ರಾಯಲ್‌ ಚಾಲೆಜರ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್‌ ತಂಡ ಪಡೆದು ರೂ. 30,001 ಮತ್ತು ಪಾರಿತೋಷಕ ಪಡೆದುಕೊಂಡರೆ, ಮೂಡಲಗಿ ಸ್ಟ್ರೈಕರ್ಸ ತಂಡವು …

Read More »

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ಕ್ಕೆ ನೋಂದಣಿಗೆ ನ.15ರ ವರೆಗೆ ಅವಕಾಶ

ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದಾಗಿದೆ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಪರೀಕ್ಷೆ-1 ಕ್ಕೆ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್‌ ನಲ್ಲಿ ಶಾಲಾ ಲಾಗಿನ್‌ ಮೂಲಕ ಪಡೆಯಲು ತಿಳಿಸಲಾಗಿದೆ. ಈ ಹಿಂದೆ ಆನ್ ಲೈನ್ …

Read More »

ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಮುಂದಿನ ವರ್ಷ?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಡಲು 30 ಇಲಾಖೆಗಳಿಂದ ಪ್ರಸ್ತಾವನೆ ಬಂದಿದ್ದು, ಸುಮಾರು ಮೂರು ಸಾವಿರ ಹುದ್ದೆಗಳು ಇವೆ. ಈ ಹುದ್ದೆಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಮುಂದಿನ ವರ್ಷದಲ್ಲಿ ನಡೆಸಬೇಕಾಗಿರುವ ನೇಮಕಾತಿ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ನೇಮಕಾತಿ ಬಗ್ಗೆ ಮಾಹಿತಿ …

Read More »

ಮಹಿಳೆಯರಿಗೆ ಸರ್ಕಾರದಿಂದ ಹೊಸ ಉಳಿತಾಯ ಯೋಜನೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಗ್ಯಾರಂಟಿ ಯೋಜನೆಯಡಿ ಮಹಿಳೆಯರ ಹಣಕಾಸಿನ ನೆರವಿನ ಉಳಿತಾಯಕ್ಕೆ ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದ್ದು, ಶೀಘ್ರದಲ್ಲೇ ಆಯಪ್​ವೊಂದನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಪ್ರತಿ ಕುಟುಂಬ ಪ್ರತಿ ತಿಂಗಳು ಅಂದಾಜು 4 ಸಾವಿರದಿಂದ 5 ಸಾವಿರ ರೂ. ಹಣಕಾಸು ನೆರವು ಪಡೆಯುತ್ತಿದ್ದು, ಜನರಲ್ಲಿ ಉಳಿತಾಯ ಮನೋಭಾವ ಬೆಳೆಸಿ ಆರ್ಥಿಕ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 93 ಲಕ್ಷ ಮಹಿಳೆಯರು ಪ್ರತಿ ತಿಂಗಳು 2,000 ರೂ.ಪಡೆಯುತ್ತಿದ್ದು, ಉಚಿತ ಬಸ್ …

Read More »