ಹೈದರಾಬಾದ್(ತೆಲಂಗಾಣ): ಭಾರತದಲ್ಲಿ ಪ್ರಸ್ತುತ ಹಬ್ಬದ ಸೀಸನ್ ನಡೆಯುತ್ತಿದೆ. ದೀಪಾವಳಿ, ಭಯ್ಯಾ ದೂಜ್ ಮತ್ತು ಛತ್‌ನಂತಹ ಹಬ್ಬಗಳು ಮುಂದಿನ ವಾರ ಬರಲಿವೆ. ನವೆಂಬರ್ 10ರಿಂದ ಸತತ 6 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಿರುತ್ತವೆ. ದೀಪಾವಳಿಯ ಜೊತೆಗೆ ಗೋವರ್ಧನ ಪೂಜೆ, ಬಲಿ ಪ್ರತಿಪದ ಮತ್ತು ಭಾಯಿ ದೂಜ್ ಸಂದರ್ಭದಲ್ಲಿ ದೇಶದ ಅನೇಕ ನಗರಗಳಲ್ಲಿ ನವೆಂಬರ್ 10ರಿಂದ 15ರವರೆಗೆ ಬ್ಯಾಂಕುಗಳಿಗೆ ರಜೆ ಇರಲಿದೆ. ನವೆಂಬರ್ ತಿಂಗಳಲ್ಲಿ ಒಟ್ಟು 15 ದಿನಗಳವರೆಗೆ ಬ್ಯಾಂಕುಗಳು ಮುಚ್ಚಿರುತ್ತವೆ. ಈ …
Read More »Daily Archives: ನವೆಂಬರ್ 10, 2023
ಮಂಡ್ಯ: ಸಹಪಾಠಿಗಳಿಂದಲೇ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್!
ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಬಾಲಕಿ ಮೇಲೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮದ್ದೂರಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಆರೋಪಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವಿಡಿಯೋ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್‌ಗೆ ವಿಡಿಯೋ ಕಳುಹಿಸಿ ಬೆದರಿಕೆ ಹಾಕಿದ್ದಲ್ಲದೇ ಕರೆದಾಗ ಬರುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಇದಾದ ನಂತರ …
Read More »ಬಿಡದಿಗೆ ‘ನಮ್ಮ ಮೆಟ್ರೋ’ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ರಾಮನಗರ: ಬಿಡದಿಯು ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಬಿಡದಿಗೆ ನಮ್ಮ ಮೆಟ್ರೋ ಘೋಷಣೆ ಮಾಡಲಾಗಿದೆ. ಹಾಗೆಯೇ ಇನ್ನು ಮುಂದೆ ಬಿಡದಿ ಪ್ರಾಧಿಕಾರ ಹೆಸರಿಗೆ ಬದಲಾಗಿ ಗ್ರೇಟರ್ ಬೆಂಗಳೂರು ಎಂಬ ಹೊಸ ನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ನಮ್ಮ ಮೆಟ್ರೋ ಮಾಡುವ ಬಗ್ಗೆ ಇಲ್ಲಿನ ಎಂಎಲ್‌ಎ …
Read More »15 ದಿನಗಳೊಳಗಾಗಿ 100 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: “ತಹಶೀಲ್ದಾರ್ ನ್ಯಾಯಾಲಯದಲ್ಲಿರುವ ತಕರಾರು ಅರ್ಜಿಗಳನ್ನು ಜನವರಿ ಒಳಗಾಗಿ ಸಂಪೂರ್ಣವಾಗಿ ನ್ಯಾಯಯುತ ವಿಲೇವಾರಿ ಮಾಡಬೇಕು. ಅಧಿಕಾರಿಗಳು ಈ ಸೂಚನೆಯನ್ನು ಪಾಲಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಕಂದಾಯ ಇಲಾಖೆಯ ನಾಲ್ಕೂ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದಲೂ ಹಲವು ಸೂಚನೆಗಳನ್ನು ನೀಡಿದ್ದಾಗ್ಯೂ ಉತ್ತಮ ನಿರ್ವಹಣೆ ತೋರದ ತಹಶೀಲ್ದಾರ್ಗಳಿಗೆ ಎಚ್ಚರಿಕೆ ನೀಡಿದ ಸಚಿವರು, “ಜನಸಾಮಾನ್ಯರು ಅವರ ದೈನಂದಿನ …
Read More »ದೀಪಾವಳಿ ಹಣತೆಗಳಿಗೆ ಬಣ್ಣದ ಸ್ಪರ್ಶ ನೀಡಿದ ವಿಶೇಷ ಚೇತನರು
ಮಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಹಬ್ಬಕ್ಕೆ ಬಿರುಸಿನ ತಯಾರಿ ನಡೆಯುತ್ತಿದೆ. ದೀಪಾವಳಿ ದಿನ ಪಟಾಕಿ ಸಿಡಿಸುವುದರ ಜೊತೆಗೆ ಹಣತೆಯ ಮೂಲಕ ದೀಪವನ್ನು ಬೆಳಗುವುದು ಸಾಮಾನ್ಯ. ದೀಪಾವಳಿ ದಿನ ಹೀಗೆ ಬೆಳಗುವ ಹಣತೆಗೆ ಮಂಗಳೂರಿನಲ್ಲಿ ವಿಶೇಷ ಚೇತನರು ವಿಶೇಷ ರಂಗು ನೀಡುತ್ತಿದ್ದಾರೆ. ನಗರದ ಶಕ್ತಿನಗರದಲ್ಲಿರುವ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ ಸಾನಿಧ್ಯ ಸ್ಕಿಲ್ ಡೆವಲಪ್ಮೆಂಟ್ ವಿಭಾಗದಲ್ಲಿನ ಇಪ್ಪತ್ತೈದು ವರ್ಷ ಮೇಲ್ಪಟ್ಟ ವಿಶೇಷ ಚೇತನರು ಹಣತೆಗಳಿಗೆ ರಂಗು ರಂಗಿನಿನ ಬಣ್ಣ ಬಳೆಯುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಕುಂಬಾರರಿಂದ …
Read More »ಬೌರಿಂಗ್ ಆಸ್ಪತ್ರೆಯ ಡಾ ಶ್ರೀಕಾಂತ್ ಅಮಾನತುಗೊಳಿಸಿ: ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ಗೆ ದೂರು
ಬೆಂಗಳೂರು : ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಡುವೆ ವೈದ್ಯಸೇವೆ ಬಿಟ್ಟು ಡಿ ದರ್ಜೆ ನೌಕರನಂತೆ ಕೆಲಸ ನಿರ್ವಹಣೆ ಮಾಡುತ್ತಿರುವ ಬೌರಿಂಗ್ ಸಂಸ್ಥೆಯ ಡಾ. ಹೆಚ್. ಎಂ ಶ್ರೀಕಾಂತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ದೂರು ಸಲ್ಲಿಕೆ ಮಾಡಲಾಗಿದೆ. ನಗರದಲ್ಲಿಂದು ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು ದೂರು ಸಲ್ಲಿಕೆ ಮಾಡಿದ್ದು, ರಾಜಧಾನಿ …
Read More »ಅಂಗಾಂಗ ದಾನ ಮಾಡದ ವ್ಯಕ್ತಿಗೆ ಸರ್ಕಾರಿ ಗೌರವ ಸಲ್ಲಿಸಿದ ತಮಿಳುನಾಡು ಸರ್ಕಾರ
ಚೆನ್ನೈ (ತಮಿಳುನಾಡು): ರಸ್ತೆ ಅಪಘಾತದಿಂದ ಮೃತಪಟ್ಟ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಆತನ ಕುಟುಂಬಸ್ಥರು ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ತಿರುಪತಿಯ ಚಿತ್ತೂರು ರಾಘವೇಂದ್ರ ನಗರದ ನಿವಾಸಿಯಾದ ಯುವರಾಜುಲು ನಾಯ್ಡು (61) ಅವರು, ನವೆಂಬರ್ 3 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಾಶತ್ ಅವರು ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 7ರ ಸಂಜೆ 5.52ಕ್ಕೆ ನಿಧನರಾಗಿದ್ದರು. ನಂತರ ಯುವರಾಜುಲು ನಾಯ್ಡು …
Read More »ಬರ ಪರಿಹಾರ ಒದಗಿಸಲು ಸರ್ಕಾರ ರೈತರ ಬೆನ್ನೆಲುಬಾಗಿ ನಿಂತಿದೆ: ಸಚಿವ ಬಿ ನಾಗೇಂದ್ರ
ಬಳ್ಳಾರಿ: ಈ ಬಾರಿಯ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಯಾರೂ ಆತಂಕ ಪಡಬಾರದು. ಸರ್ಕಾರ ಮತ್ತು ಜಿಲ್ಲಾಡಳಿತ ನಿಮ್ಮ ಜತೆಗಿದೆ ಎಂದು ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ ಅವರು ರೈತರಿಗೆ ಧೈರ್ಯ ತುಂಬಿದರು. ಇಂದು ಜಿಲ್ಲೆಯ ಸಿರುಗುಪ್ಪ-ಕುರುಗೋಡು ತಾಲೂಕುಗಳ ವ್ಯಾಪ್ತಿಯ ವಿವಿಧ ಗ್ರಾಮಗಳಾದ ರಾರಾವಿ, ಅಗಸನೂರು, ಬೊಮ್ಮಲಾಪುರ, ಕೊತ್ತಲಚಿಂತೆ, ಮಿಟ್ಟೆ ಸುಗೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ …
Read More »ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಪ್ರತಿಪಕ್ಷ ನಾಯಕರ ಆಯ್ಕೆ
ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿದ್ದಾರೆ. ಈ ವೇಳೆ, ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡ ಅವರು, ರಾಜ್ಯಾಧ್ಯಕ್ಷ ಹುದ್ದೆ ಅಲಂಕರಿಸಿದ ದಿನವೇ, ಪ್ರತಿಪಕ್ಷ ನಾಯಕರ ಆಯ್ಕೆಯ ದಿನಾಂಕದ ಬಗ್ಗೆ ಘೋಷಿಸಿದ್ದಾರೆ. ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಅಭಿಪ್ರಾಯ ಪಡೆದು ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವುದಕ್ಕಾಗಿ ಕೇಂದ್ರದಿಂದ ವೀಕ್ಷಕರು ಆಗಮಿಸಲಿದ್ದು, ಅವರ ನೇತೃತ್ವದಲ್ಲೇ ಎಲ್ಲ ಶಾಸಕರ ಅಭಿಪ್ರಾಯ ಪಡೆದು, ಅವರ ಎದುರಲ್ಲೇ ಹೆಸರು ಘೋಷಣೆ …
Read More »ಕರ್ನಾಟಕ ಬಿಜೆಪಿಯ ನೂತನ ಸಾರಥಿ ವಿಜಯೇಂದ್ರ
ನವದೆಹಲಿ: ಬಹು ದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಕೊನೆಗೂ ಆಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಇದುವರೆಗೆ …
Read More »