Breaking News

Daily Archives: ನವೆಂಬರ್ 12, 2023

ಎರಡು ರಾಜ್ಯಗಳ ಚುನಾವಣೆಗೆ ಮತ ಹಾಕುವ ಜನರು: ಇವರಿಗೆ ಸಿಗುತ್ತೆ ಎರಡೆರಡು ಸರ್ಕಾರಗಳ ಸೌಲಭ್ಯ!

ಹೈದರಾಬಾದ್​: ಅಪರೂಪದ ವಿದ್ಯಮಾನವೊಂದರಲ್ಲಿ ತೆಲಂಗಾಣ ಮತ್ತು ಮಹಾರಾಷ್ಟ್ರ ಗಡಿಯಲ್ಲಿರುವ ಕೆಲ ಗ್ರಾಮಗಳ ಮತದಾರರು ಎರಡೂ ರಾಜ್ಯಗಳ ಚುನಾವಣೆಗಳಲ್ಲಿ ಮತದಾನ ಮಾಡುತ್ತಾರೆ. ಇವರಿಗೆ ಇಬ್ಬರು ಸಿಎಂಗಳು, ಎರಡು ಚುನಾವಣಾ ಗುರುತಿನ ಚೀಟಿ, ಎರಡು ಪಡಿತರ ಚೀಟಿ, ಎರಡು ಶಾಲೆಗಳು ಸೇರಿದಂತೆ ಎಲ್ಲವೂ ಇಲ್ಲಿ ಎರಡೆರಡು. ಮಹಾರಾಷ್ಟ್ರ ಮತ್ತು ತೆಲಂಗಾಣ ನಡುವಿನ ಗಡಿ ವಿವಾದ ಬಗೆಹರಿಯದ ಹಿನ್ನೆಲೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಲ್ಲಿನ ಜನರು ಎರಡು ರಾಜ್ಯಗಳ ಸರ್ಕಾರಗಳಿಂದ ಸವಲತ್ತುಗಳನ್ನು ಪಡೆದುಕೊಳ್ಳುತ್ತಾರೆ. ಆಂಧ್ರದ …

Read More »

ನೆದರ್ಲೆಂಡ್ಸ್​​​ ವಿರುದ್ಧ ಭಾರತ 160 ರನ್​ಗಳ ಗೆಲುವು

ಬೆಂಗಳೂರು: ಕಿವೀಸ್ ವಿರುದ್ಧದ ಸೆಮೀಸ್​ ಪಂದ್ಯಕ್ಕೂ ಮುನ್ನ ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತ ತಂಡ ನೆದರ್ಲೆಂಡ್ಸ್​ ಜೊತೆಗೆ ಉತ್ತಮ ಅಭ್ಯಾಸ ಪಂದ್ಯವನ್ನಾಡಿತು. 2023ರ ವಿಶ್ವಕಪ್​ನಲ್ಲಿ ಭಾರತ ತಂಡ ಲೀಗ್​ ಹಂತದಲ್ಲಿ ಒಂದೂ ಸೋಲನ್ನು ಕಾಣದೇ ಸೆಮಿ ಫೈನಲ್​ ಪ್ರವೇಶ ಪಡೆದುಕೊಂಡಿತು. ಬ್ಯಾಟಿಂಗ್​ ಮತ್ತು ಬೌಲಿಂಗ್ ತಂಡ ತನ್ನ ಪ್ರದರ್ಶನವನ್ನು ಹಾಗೇ ಮುಂದುವರೆಸಿದೆ.     ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 4 ವಿಕೆಟ್ ​ನಷ್ಟಕ್ಕೆ 410 ರನ್​ …

Read More »

ನ.15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ: ಬಿ.ವೈ ವಿಜಯೇಂದ್ರ

ತುಮಕೂರು: ಮುಂಬರುವ ಬುಧವಾರ 15 ನೇ ತಾರೀಖಿನಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕಾರ ಮಾಡುತ್ತಿದ್ದೇನೆ ಎಂದು ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರಾದ ಜೆ.ಪಿ ನಡ್ಡಾ, ಅಮಿತ್ ಶಾ, ಸಂತೋಷ್ ಸೇರಿದಂತೆ ಎಲ್ಲರೂ ಚರ್ಚೆ ಮಾಡಿ ರಾಜ್ಯಾಧ್ಯಕ್ಷನನ್ನಾಗಿ …

Read More »

ಪೊಲೀಸರ ಮೇಲೆ ಹಲ್ಲೆ 10 ಜನರ ಬಂಧನ

ಕಾರವಾರ (ಉತ್ತರ ಕನ್ನಡ): ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಗರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಶನಿವಾರ ರಾತ್ರಿ ಕಾರವಾರ ನಗರದ ಬೈತಖೋಲ್​​ನಲ್ಲಿ ಬೀಟ್ ಕರ್ತವ್ಯದಲ್ಲಿದ್ದ ನಗರ ಠಾಣೆಯ ಕಾನ್ಸ್ಟೇಬಲ್​ಗಳಾದ ಗಣೇಶ್ ಕುರಿಯವರ ಹಾಗೂ ಹರೀಶ್ ಗವಾಣಿಕರ ಎಂಬುವರ ಮೇಲೆ ಹಲ್ಲೆ ನಡೆದಿದೆ. ಬೈತಖೋಲ್ ಭೂದೇವಿ …

Read More »

ಎನ್​ಡಿಆರ್​ಎಫ್​, ಎಸ್​​ಡಿಆರ್​ಎಫ್​ ನಿಯಮಗಳ ಪ್ರಕಾರ ರೈತರ ಖಾತೆಗೆ ಹಣ ಹಾಕಿ: ಹಾವೇರಿ ರೈತರ ಆಗ್ರಹ

ಹಾವೇರಿ: ಜಿಲ್ಲೆಯು ಹಿಂದೆಂದೂ ಕಾಣರಿಯದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿವೆ ಎಂದು ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಆರೋಪಿಸಿದೆ. ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, “ಹಾವೇರಿ ಕೃಷಿ ಪ್ರಧಾನ ಜಿಲ್ಲೆ, ಆದ್ರೆ ಸತತ ಮೂರು ವರ್ಷ ಅತಿವೃಷ್ಟಿ ಇತ್ತು. ಈ ವರ್ಷ ಬರಗಾಲ ಉಂಟಾಗಿದೆ, …

Read More »

ಪ್ರಿಯಾಂಕಾ ಉಪೇಂದ್ರ ಹುಟ್ಟುಹಬ್ಬ: ಡ್ರೋನ್​ ಮೂಲಕ ರಿವೀಲ್ ಆಯ್ತು ‘ಕ್ಯಾಪ್ಚರ್’ ಪೋಸ್ಟರ್

‘ಕ್ಯಾಪ್ಚರ್​’ ಸಿನಿಮಾ ತಂಡ ಪ್ರಿಯಾಂಕಾ ಉಪೇಂದ್ರ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು. ಕನ್ನಡ ಚಿತ್ರರಂಗದ ನಟಿ ಪ್ರಿಯಾಂಕಾ ಉಪೇಂದ್ರ ಅವರಿಗಿಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ರಿಯಲ್​ ಸ್ಟಾರ್​ ಪತ್ನಿಗೆ ಸ್ನೇಹಿತರು, ಅಭಿಮಾನಿಗಳು, ಆತ್ಮೀಯರು ಹಾಗೂ ಸ್ಯಾಂಡಲ್​​ವುಡ್​​ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರುತ್ತಿದ್ದಾರೆ. ಇಂದು ಪ್ರಿಯಾಂಕಾ ಅವರು ಅಭಿಮಾನಿಗಳು ಹಾಗೂ ಕುಟುಂಬಸ್ಥರ ಜೊತೆ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಲ್ಲದೇ, ‘ಕ್ಯಾಪ್ಚರ್​’ ಸಿನಿಮಾ ತಂಡ ಪ್ರಿಯಾಂಕಾ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ …

Read More »

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ:H.D.K.

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ ಬೆಂಗಳೂರು: “ಕರ್ನಾಟಕದಲ್ಲಿ ಕಾಂಗ್ರೆಸ್ ತಂದಿರುವ ಪಂಚ ಗ್ಯಾರಂಟಿಗಳನ್ನು ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಜನತೆ ನಂಬಬಾರದು. ಈ ಗ್ಯಾರಂಟಿಗಳಿಗೆ ಯಾವ ಕಾರಣಕ್ಕೂ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ” ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತೆಲಂಗಾಣದಲ್ಲಿ ನಮ್ಮ ಟೆಂಪರರಿ ಚೀಫ್ ಮಿನಿಸ್ಟರ್, ಡೂಪ್ಲಿಕೇಟ್ ಚೀಫ್ ಮಿನಿಸ್ಟರ್​ಗಳು ಹಾಗೂ …

Read More »

ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಈ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜನರಿಗೆ ಮಾಡಿದ ಮೋಸದಂತೆ ರಾಜಸ್ಥಾನದಲ್ಲಿ ಮಾಡಿದ್ದಾರೆ” ಎಂದು ಕಿಡಿಕಾರಿದರು. “ಕರ್ನಾಟಕ ಸರ್ಕಾರ ಉಚಿತದ ಹೆಸರಿನಲ್ಲಿ ಹೇಳೋದು ಒಂದು ಮಾಡೋದು ಒಂದು ರೀತಿ. …

Read More »

ಯೋಧರೊಂದಿಗೆ ಬೆಳಕಿನ ಹಬ್ಬ ಆಚರಿಸಿದ ಮೋದಿ

ಹಿಮಾಚಲಪ್ರದೇಶ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿವರ್ಷದಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಗಡಿ ಕಾಯುತ್ತಿರುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಹಬ್ಬದ ಶುಭಾಶಯ ಕೋರಿದ್ದಾರೆ. ಹಿಮಾಚಲಪ್ರದೇಶದ ಲೆಪ್ಚಾ ಪೋಸ್ಟ್​ಗೆ ಭಾನುವಾರ ಭೇಟಿ ನೀಡಿದ ಪ್ರಧಾನಿ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದರು. ಐಟಿಬಿಪಿ ಸೇನಾಧಿಕಾರಿಗಳ ಸಮವಸ್ತ್ರದಲ್ಲಿದ್ದ ಪ್ರಧಾನಿ ಭಾರತ್​ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು. ಬಳಿಕ ಮಾತನಾಡಿದ …

Read More »

ಪರಪ್ಪನ ಅಗ್ರಹಾರದಲ್ಲಿರುವ ಚೈತ್ರಾ ಮೇಲೆ ಮಹಿಳಾ ಕೈದಿಗಳಿಂದ ಹಲ್ಲೆ

 (ಬೆಂಗಳೂರು): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆಯಾಗಿದೆ ಎಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರಗೀತೆ ವಿಚಾರಕ್ಕೆ ನಡೆದ ಜಗಳದಲ್ಲಿ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆ ನಡೆದಿದೆ. ಇಂದು ಮಧ್ಯಾಹ್ನ ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಕೈದಿಗಳು ಮತ್ತು ಚೈತ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಕೈದಿಗಳು …

Read More »