ಕಲಬುರಗಿ: ತೃತೀಯ ಲಿಂಗಿಯೊಬ್ಬರು ಎಂಎ ಪದವಿ ಪರೀಕ್ಷೆ ಬರೆಯುವ ಮೂಲಕ ತಮ್ಮ ಸಮುದಾಯಕ್ಕೆ ಪ್ರೇರಣೆಯಾಗಿದ್ದಾರೆ. ಹೌದು ಸುಪ್ರೀಂ ಕೋರ್ಟ್ ತೃತೀಯ ಲಿಂಗಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದ ಬಳಿಕ ದೇಶದಲ್ಲಿ ಮಂಗಳಮುಖಿ ಮಹಿಳೆಯರ ಶಿಕ್ಷಣದಲ್ಲಿ ಧನಾತ್ಮಕ ಅಭಿವೃದ್ಧಿಯಾಗಿದೆ. ತನ್ನ ಪರೀಕ್ಷೆಯಲ್ಲಿ ನಿರತರಾಗಿರುವ ದಿವ್ಯಾಕಲಬುರಗಿಯ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ತೃತೀಯ ಲಿಂಗಿ ದಿವ್ಯಾ ಅವರು ಎಂಎ ರಾಜ್ಯಶಾಸ್ತ್ರದ ಅಂತಿಮ ಪರೀಕ್ಷೆ ಬರೆದು …
Read More »Daily Archives: ನವೆಂಬರ್ 14, 2023
ಕ್ಯಾಪ್ಸಿಕಂ ಬೆಳೆ ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ. ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ.
ಚಿಕ್ಕೋಡಿ : ಭೀಕರ ಬರಗಾಲದ ನಡುವೆ ಬೆಳೆಗಳಿಗೆ ಟ್ಯಾಂಕರ್ ಮುಖಾಂತರ ನೀರು ಹಾಯಿಸಿ ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸಿ ಇತರ ರೈತರಿಗೆ ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಮಾಣಿಕ ಅವಳೆಕರ ಎಂಬ ರೈತ ನೀರಿನ ಅಭಾವದ ನಡುವೆ ಕುಗ್ಗದೇ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಸಿ, ಐದು ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಬಳಸಿ, ಕ್ಯಾಪ್ಸಿಕಂ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ್ದಾರೆ. ಈ …
Read More »ಪೋಷಕರ ಬುದ್ಧಿವಾದಕ್ಕೆ ಮನನೊಂದು 14 ವರ್ಷದ ಬಾಲಕ ಆತ್ಮಹತ್ಯೆ
ಬೆಳಗಾವಿ: ದೀಪಾವಳಿ ಹಬ್ಬದ ರಜೆ ಇದೆ ಎಂದು ಸುಮ್ಮನೆ ಹೊರಗಡೆ ತಿರುಗಾಡಬೇಡ, ಓದಿನ ಕಡೆಯೂ ಗಮನ ಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದದಲ್ಲಿ ಸೋಮವಾರ ನಡೆದಿದೆ. ತಮ್ಮ ಮನೆಯ ಮಹಡಿಯ ಮೇಲಿನ ರೂಮಿನಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಬಾಲಕ ಮೂಡಲಗಿಯ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಇನ್ನು ಒಂದು ದಿನದಲ್ಲಿ ಶಾಲೆ …
Read More »ಇಂದು ಕಿತ್ತೂರು ರಾಣಿ ಚೆನ್ನಮ್ಮನ ಜನ್ಮದಿನ; ಸರ್ಕಾರದಿಂದ ಜಯಂತಿ ಆಚರಿಸಲು ಆಗ್ರಹ
ಬೆಳಗಾವಿ : ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ ರುಚಿ ತೋರಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತಿ ಆಚರಣೆಗೆ ಸರ್ಕಾರಗಳು ನಿರ್ಲಕ್ಷ್ಯ ವಹಿಸಿರುವುದು ಮತ್ತು ಚೆನ್ನಮ್ಮನ ಜನ್ಮದಿನಾಂಕ ಗೊಂದಲಕ್ಕೆ ಇತಿಶ್ರೀ ಹಾಡದಿರುವುದು ಈ ಭಾಗದ ಸಾಹಿತಿಗಳು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. 1778 ನವೆಂಬರ್ 14 ಕನ್ನಡ ನಾಡಿನಲ್ಲಿ ಕೆಚ್ಚೆದೆಯ ಕಿತ್ತೂರು ರಾಣಿ ಚೆನ್ನಮ್ಮ ಜನಿಸಿದ ದಿನ. ಚೆನ್ನಮ್ಮನ ಜನ್ಮ ದಿನಾಂಕದ …
Read More »ಯುವಕನ ಬರ್ಬರ ಕೊಲೆ ಪ್ರಕರಣ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ: ಭಾನುವಾರ ರಾತ್ರಿ ಗೋಕಾಕ್ ಪಟ್ಟಣದಲ್ಲಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಜನ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಕಾಕ್ ಪಟ್ಟಣದ ಆದಿಜಾಂಬವ ನಗರದ ಶಾನೂರ (ಸಂತೋಷ) ಪೂಜೇರಿ 26 ವರ್ಷ ಕೊಲೆಯಾದ ಯುವಕ. ಮೃತ ಶಾನೂರ ಸ್ಥಳೀಯ ಪೆಟ್ರೋಲ್ ಪಂಪ್ನಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ಪೆಟ್ರೋಲ್ ಪಂಪ್ನಲ್ಲಿ ಪೂಜೆ ಮುಗಿಸಿಕೊಂಡು ಮರಳಿ ಮನೆಗೆ ಹೋಗುವ …
Read More »ರಾಯಚೂರು: ಹಣಕ್ಕಾಗಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಹತ್ಯೆಗೈದ ಆರೋಪಿಗಳಿಬ್ಬರ ಬಂಧನ
ರಾಯಚೂರು: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಟ್ಟಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ (ಚಿನ್ನದಗಣಿ) ಕಳೆದ ಅ.26 ರಂದು ಕೆಮಿಕಲ್ ಹಾಗೂ ಮಾರಕಾಸ್ತ್ರಗಳಿಂದ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಮೃತ ಲ್ಯಾಬ್ ಟೆಕ್ನಿಷಿಯನ್ ಮಂಜುಳಾ ಅವರ ಮಗ ಸಚಿನ್ ಪಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ …
Read More »ಈ ನಗರದಲ್ಲಿ ಎಲ್ಲೆಂದರಲ್ಲಿ ಉಗುಳಿದ್ರೆ ಜೋಕೆ; ಉಗಿದ್ರೆ ಬೀಳುತ್ತೆ ದಂಡ!
ಸೂರತ್(ಗುಜರಾತ್) : ಸೂರತ್ ನಗರದ ರಸ್ತೆಗಳಲ್ಲಿ ಗುಟ್ಕಾ ತಿಂದು ಉಗುಳುವವರ ವಿರುದ್ಧ ಕ್ರಮಕೈಗೊಳ್ಳಲು ನಗರ ಪಾಲಿಕೆ ಮುಂದಾಗಿದೆ. ಈ ಸಂಬಂಧ ನಗರದ ರಸ್ತೆಗಳಲ್ಲಿ ಗುಟ್ಕಾ, ಪಾನ್ ಮಸಾಲ ತಿಂದು ಉಗುಳುವವರನ್ನು ಪತ್ತೆ ಹಚ್ಚಲು ನಗರದೆಲ್ಲೆಡೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸೂರತ್ ನಗರ ಪಾಲಿಕೆಯು ನಗರವನ್ನು ಅಂದವಾಗಿಡಲು ವಿವಿಧ ಕ್ರಮಗಳನ್ನು ಕೈಗೊಂಡಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲೂ ಸೂರತ್ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ನಗರವನ್ನು ಚಂದಗಾಣಿಸಲು ಇಲ್ಲಿನ ರಸ್ತೆಗಳ ಬದಿಯಲ್ಲಿನ …
Read More »ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ. ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
ಬೆಂಗಳೂರು : ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ವರ್ಗಾವಣೆ ಮಾಡಿರುವುದಾಗಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಂದ್ರ ಕಶ್ಯಪ್ ಅವರು ತಿಳಿಸಿದ್ದಾರೆ. ನ್ಯಾಯಮೂರ್ತಿ ಸುಮಲತಾ ಅವರನ್ನು ಈ ಹಿಂದೆ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಸುಪ್ರೀಂಕೋರ್ಟ್ ಕೊಲಿಜಿಯಂಗೆ …
Read More »ಮನೆಗೆ ವಿದ್ಯುತ್ ಕಂಬದಿಂದ ಅಕ್ರಮ ಕರೆಂಟ್ ಸಂಪರ್ಕ ಪಡೆದ :H.D.K.
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ …
Read More »ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಈಜುಕೊಳ ನಿರ್ಮಾಣ
ಮಂಗಳೂರು : ಕಡಲನಗರಿ ಮಂಗಳೂರಿನಲ್ಲಿ ಹಲವು ಯೋಜನೆಗಳು ಪ್ರಗತಿಯಲ್ಲಿದೆ. ಇದೀಗ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣವಾಗಿದೆ. ಇಲ್ಲಿ ಒಲಿಂಪಿಕ್ಗೂ ತಯಾರಿ ನಡೆಸಲು ತರಬೇತಿ ಸಿಗುತ್ತದೆ ಎಂಬುದು ವಿಶೇಷವಾಗಿದೆ. ನಗರದ ಎಮ್ಮೆಕೆರೆಯಲ್ಲಿ 2.50 ಎಕರೆ ಪ್ರದೇಶದಲ್ಲಿ ಈ ಈಜುಕೊಳ ನಿರ್ಮಾಣಗೊಂಡಿದೆ. ಸಾಧಾರಣವಾಗಿ ಈಜುಕೊಳಗಳು ನೆಲ ಅಂತಸ್ತಿನಲ್ಲಿರುತ್ತವೆ. ಕೆಲವೊಂದು ಬಹುಮಹಡಿಯ ಮೇಲಂತಸ್ತಿನಲ್ಲಿ ಸಣ್ಣ ಮಟ್ಟಿನ ಈಜುಕೊಳ ಇದೆಯಾದರೂ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳಗಳು ನೆಲ ಅಂತಸ್ತಿನಲ್ಲಿರುತ್ತವೆ. ಆದರೆ ಮಂಗಳೂರಿನಲ್ಲಿ …
Read More »