Breaking News

Daily Archives: ನವೆಂಬರ್ 14, 2023

ಜೂಜಾಟದ ವೇಳೆ ದಾಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿದ ಗುಂಪು

ಧಾರವಾಡ : ದೀಪಾವಳಿ ನಿಮಿತ್ತ ಜೂಜಾಡುತ್ತಿದ್ದ ಗುಂಪಿನ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು‌ ಮಾಡಲಾಗಿದೆ‌. ನರೇಂದ್ರ ಗ್ರಾಮದಲ್ಲಿ ಜೂಜಾಟ ನಡೆಯುವ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ನಾಗರಾಜ್ ಪಾಟೀಲ ನೇತೃತ್ವದಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ, ಜೂಜುಕೋರರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ …

Read More »

ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ: ‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್​

ವಿನಯ್​ ರಾಜ್​ಕುಮಾರ್​ ನಟನೆಯ ‘ಗ್ರಾಮಾಯಣ’ ಚಿತ್ರತಂಡ ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋವೊಂದನ್ನು ರಿಲೀಸ್​ ಮಾಡಿದೆ. ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ: ‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್​ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಸ್ಟಾರ್‌ಡಮ್​ ಗಿಟ್ಟಿಸಿಕೊಂಡಿರುವ ನಟ ವಿನಯ್ ರಾಜ್​ಕುಮಾರ್. ಸದ್ಯ ‘ಪೆಪೆ’ ಹಾಗೂ ‘ಗ್ರಾಮಾಯಣ’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿನಯ್​ ರಾಜ್​ಕುಮಾರ್ ಅವರ​ ತಾತ ಹುಟ್ಟಿದ ಮನೆ ಅಂದ್ರೆ ಡಾ.ರಾಜ್​ಕುಮಾರ್​ ಅವರ ಮನೆ ಗಾಜನೂರಿನಲ್ಲಿ ಬಹಳ ವಿಶೇಷವಾಗಿ …

Read More »

ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಡಿ.ಕೆ. ಶಿವಕುಮಾರ್​ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಗರದ ತಮ್ಮ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದೊಂದು ನೆಗೆಟಿವ್​​ ಸರ್ಕಾರವಾಗಿ ಪರಿವರ್ತನೆಯಾಗಿದೆ. ಹಳ್ಳಿಗಳಿಗೆ, ರೈತರಿಗೆ ಸಮರ್ಪಕ …

Read More »

ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ

ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್‌ ಮಾಲೀಕರಾದ, ರಾಮತೀರ್ಥ‌ನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯಿರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ‌ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ …

Read More »