Breaking News

Daily Archives: ನವೆಂಬರ್ 17, 2023

ಭಾರತ-ಆಸೀಸ್ ಪಂದ್ಯ; ಟಿಕೆಟ್‌ಗಾಗಿ ಮುಗಿಬಿದ್ದ ಯುವಜನತೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಟಿಕೆಟ್‌ಗಳ ಮಾರಾಟ ಪ್ರಕ್ರಿಯೆ ಆಫ್‌ಲೈನ್‌ನಲ್ಲಿ ಪ್ರಾರಂಭವಾಗಿದ್ದು, ಖರೀದಿಗೆ ಯುವಜನತೆ ಮುಗಿಬಿದ್ದ ದೃಶ್ಯ ಕಂಡುಬಂತು. ವಿಶಾಖಪಟ್ಟಣಂ(ಆಂಧ್ರಪ್ರದೇಶ): ನಗರದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ಟಿಕೆಟ್‌ಗಳ ಮಾರಾಟ ಆಫ್‌ಲೈನ್‌ನಲ್ಲಿ ಶುರುವಾಗಿದೆ. ಇದೇ ತಿಂಗಳ 23ರಂದು ನಗರದ ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಆನ್‌ಲೈನ್ ಟಿಕೆಟ್‌ಗಳ ಮಾರಾಟ ಈಗಾಗಲೇ ಪೂರ್ಣಗೊಂಡಿದೆ. ಇಂದಿನಿಂದ ಆಫ್‌ಲೈನ್‌ನಲ್ಲಿ ಸೇಲ್ ನಡೆಯುತ್ತಿದ್ದು, ಕ್ರಿಕೆಟ್‌ ಪ್ರೇಮಿಗಳು ಕೌಂಟರ್‌ಗಳತ್ತ ಮುಗಿಬಿದ್ದರು. …

Read More »

ದಂಡ ಕಟ್ಟಿದ್ದೇನೆ, ಕರೆಂಟ್​ ಕಳ್ಳ ಎನ್ನುವುದನ್ನು ನಿಲ್ಲಿಸಿ: H.D.K.

ಬೆಂಗಳೂರು: “ದೀಪಾವಳಿ ಸಂದರ್ಭದಲ್ಲಿ ನಮ್ಮ ಮನೆಯಲ್ಲಿ ನಡೆದ ಅಚಾತುರ್ಯದ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈಗಾಗಲೇ ನನಗೆ ಕರೆಂಟ್​ ಕಳ್ಳ ಎನ್ನುವ ಲೇಬಲ್​ ಅನ್ನು ಸಿಎಂ, ಡಿಸಿಎಂ ಹಾಗೂ ಅವರ ಪಟಾಲಂ ಸೇರಿ ಇಟ್ಟಿದ್ದಾರೆ. ನನ್ನನ್ನು ಕರೆಂಟ್​ ಕಳ್ಳ ಎನ್ನುವ ಇವರ ಆರೋಪಗಳಿಗೆಲ್ಲ ನಾನು ಹೆದರಲ್ಲ. ನಿಮ್ಮಷ್ಟು ಕಳ್ಳತನ ನಾನು ಮಾಡಿಲ್ಲ. ಬೆಸ್ಕಾಂ ನೀಡಿರುವ ಬಿಲ್​ ಹಾಗೂ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ಕರೆಂಟ್​ ಕಳ್ಳ ಎನ್ನುವುದನ್ನು ನಿಲ್ಲಿಸಬೇಕು” ಎಂದು ಮಾಜಿ …

Read More »

ಜಮೀರ್ ಹೇಳಿಕೆ ಖಂಡನೀಯ, ಇಂಥ ತಪ್ಪಾಗದಂತೆ ಎಚ್ಚರಿಕೆ ವಹಿಸಲಿ: ವಿಜಯೇಂದ್ರ

ಬೆಂಗಳೂರು: “ಜಮೀರ್ ಅಹಮದ್ ಯಾವುದೋ ಒಂದು ಸಮುದಾಯದ ಜವಾಬ್ದಾರಿ ತಗೊಂಡಿಲ್ಲ. ನೀವು ನಿಮ್ಮ ಅಂತರಾಳದ ಮಾತು ಆಡಿದ್ದೀರಿ. ಈ ಹೇಳಿಕೆ ನಿಜಕ್ಕೂ ದುರದೃಷ್ಟಕರ. ಇನ್ನು ಮುಂದೆ ಈ ರೀತಿ ಮಾತಾಡದಂತೆ ಎಚ್ಚರಿಕೆ ವಹಿಸಿ” ಎಂದು ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದರು. ಜಮೀರ್ ಅಹಮ್ಮದ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಕುರಿತು ಶಿವಾನಂದ ವೃತ್ತದಲ್ಲಿರುವ ಅಪಾರ್ಟ್​ಮೆಂಟ್​​ನಲ್ಲಿ …

Read More »

ಈ ಸಾರಿ ವರ್ಲ್ಡ್​ ಕಪ್​ ನಮ್ದೇ’: ರಜಿನಿಕಾಂತ್​ ವಿಶ್ವಾಸ

ಅಹಮದಾಬಾದ್(ಗುಜರಾತ್)​: ತಮಿಳು ಸೂಪರ್ ​ ಸ್ಟಾರ್ ರಜಿನಿಕಾಂತ್ ಅವರು ಕ್ರಿಕೆಟ್​ನ ಕಟ್ಟಾ ಅಭಿಮಾನಿ. ತಮ್ಮ ನೆಚ್ಚಿನ ಕ್ರಿಕೆಟಿಗರ ಬಗ್ಗೆಯೂ ಆಗಾಗ ಅವರು ಮಾತನಾಡುತ್ತಾರೆ. ಇತ್ತೀಚೆಗೆ ನಡೆದ ಭಾರತ-ನ್ಯೂಜಿಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಕುಟುಂಬಸಮೇತರಾಗಿ ಆಗಮಿಸಿ ಸಂಭ್ರಮಿಸಿದ್ದರು. ಮುಂಬೈನಿಂದ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವಕಪ್ ಫೈನಲ್​ ಕುರಿತು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡರು. ರಜಿನಿಕಾಂತ್​ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಕುರಿತು ಮಾತನಾಡುತ್ತಾ, ನಾವು ಮೊದಲು ಸ್ವಲ್ಪ ಹೊತ್ತು ಟೆನ್ಷನ್ ಆಗಿದ್ದೆವು. ಪ್ರತಿ ವಿಕೆಟ್ …

Read More »

ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ಶಾಲಾ ವಿದ್ಯಾರ್ಥಿ’ಗಳಿಗೆ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆಯನ್ನು ನಿವಾರಿಸೋ ನಿಟ್ಟಿನಲ್ಲಿ ಶೀಘ್ರವೇ ಪೌಷ್ಠಿಕಾಂಶ ಯುಕ್ತ ಆಹಾರ ನೀಡೋದಾಗಿ ಸರ್ಕಾರ ಹೇಳಿತ್ತು. ಅದರ ಭಾಗವಾಗಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸೋದಕ್ಕೆ ನಿರ್ಧರಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡೀದಂತ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ. ಇದಲ್ಲದೇ ಡಿಸೆಂಬರ್ …

Read More »

ವಿಧಾನಸಭೆ ಚುನಾವಣೆ: ಮಧ್ಯಪ್ರದೇಶದ 230, ಛತ್ತೀಸ್​ಗಢದ 70 ಕ್ಷೇತ್ರಗಳಿಗೆ ಮತದಾನ

ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಇಂದು ಮಹತ್ವದ ದಿನ. ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ. ಇದರೊಂದಿಗೆ ಮಿಜೋರಾಂ ಸೇರಿ ಮೂರು ರಾಜ್ಯಗಳ ಮತ ಸಮರಕ್ಕೆ ತೆರೆ ಬೀಳಲಿದೆ. ರಾಜಸ್ಥಾನ (ನ.25) ಹಾಗೂ ತೆಲಂಗಾಣದಲ್ಲಿ (ನ.30) ಮತದಾನ ಇನ್ನಷ್ಟೇ ನಡೆಯಬೇಕಿದೆ.     ನವೆಂಬರ್​ 7ರಂದು ಮಿಜೋರಾಂನ ಎಲ್ಲ 40 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ 78ರಷ್ಟು …

Read More »