ದೆಹಲಿ/ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೃಷಿ ಸಚಿವ ಚೆಲುವರಾಯಸ್ವಾಮಿ ಜೊತೆಗೂಡಿ ಗುರುವಾರ ದೆಹಲಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ, ರಾಜ್ಯದ 223 ತಾಲೂಕುಗಳನ್ನು …
Read More »Daily Archives: ನವೆಂಬರ್ 24, 2023
ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್ ಪಡೆದ ಸರ್ಕಾರ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಡಿಕೆಶಿ ವಿರುದ್ಧ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂದಿನ ಸರ್ಕಾರ ನಿರ್ಣಯ ಮಾಡಿತ್ತು. ಕಾನೂನಾತ್ಮಕವಾಗಿ ಸ್ಪೀಕರ್ ರಿಂದ ನಿರ್ಣಯ ಪಡೆಯಬೇಕಿತ್ತು. ಅದನ್ನು …
Read More »ರಾಜ್ಯ ಸರ್ಕಾರದಿಂದ ದರೋಡೆಕೋರರ ರಕ್ಷಣೆ:H.D.K.
ಬೆಂಗಳೂರು: ದರೋಡೆಕೋರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದ ವಿಚಾರಕ್ಕೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಈ ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಬಹಳ ಇದೆ. ಚರ್ಚೆ ಮಾಡೋಣ, ಇದರ ಬಗ್ಗೆ ಆತುರ ಬೇಡ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತು …
Read More »155 ಪೌರಕಾರ್ಮಿಕರ ಖಾಯಮಾತಿಗೆ ನಿರ್ಧಾರ: ಬೆಳಗಾವಿ ಡಿಸಿ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಹ 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಪಾಲಿಕೆಯಲ್ಲಿ ನೇರ ನೇಮಕಾತಿಯಡಿ ಖಾಲಿ ಇರುವ ಒಟ್ಟು 155 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ ದಿನಾಂಕದ ಪೂರ್ವದಲ್ಲಿ ನಿರಂತರವಾಗಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ/ಹೊರಗುತ್ತಿಗೆ ಮೇರೆಗೆ ಕನಿಷ್ಠ 2 ವರ್ಷಗಳ ಸೇವೆ ಸಲ್ಲಿಸಿರುವ ಮತ್ತು ಹಾಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಅರ್ಜಿಗಳನ್ನು ಪರಿಶೀಲನಾ ಸಮಿತಿಯಿಂದ ಪರಿಶೀಲನೆಗೆ …
Read More »ಅಂಬರೀಶ್ ಪುಣ್ಯಸ್ಮರಣೆಯಂದು ಪುತ್ರನ ಹೊಸ ಸಿನಿಮಾ ಬಿಡುಗಡೆ; ಸುಮಲತಾ, ದರ್ಶನ್ ಭಾವುಕ
ಹಿರಿಯ ನಟ ಅಂಬರೀಶ್ ಇಹಲೋಕ ತ್ಯಜಿಸಿ ಇಂದಿಗೆ ಐದು ವರ್ಷ. 5ನೇ ಪುಣ್ಯಸ್ಮರಣೆಯಂದು ಅವರ ಪುತ್ರ ನಟಿಸಿರುವ ಹೊಸ ಸಿನಿಮಾ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ, ಮಂಡ್ಯದ ಗಂಡು ಹಿರಿಮೆಯ ಡಾ.ಅಂಬರೀಶ್ ಕೊನೆಯುಸಿರೆಳೆದು ಇಂದಿಗೆ 5 ವರ್ಷವಾಗುತ್ತಿದೆ. ಐದನೇ ವರ್ಷದ ಪುಣ್ಯಸ್ಮರಣೆಯ ಈ ದಿನ ಪುತ್ರ ಅಭಿಷೇಕ್ ಅಂಬರೀಶ್ ನಟಿಸಿರುವ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ತೆರೆಕಂಡಿದೆ. ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಗಣ್ಯರು ಅಂಬಿ ಅವರನ್ನು ಸ್ಮರಿಸಿ, ಭಾವುಕ …
Read More »ಯುವತಿಯರಿಂದ ನಗ್ನ ವಿಡಿಯೋ ಕಾಲ್ ಮಾಡಿ ವಂಚಿಸುವ ಗ್ಯಾಂಗ್ ಆಯಕ್ಟಿವ್
ಹುಬ್ಬಳ್ಳಿ: ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಸಾಮಾಜಿಕ ಜಾಲತಾಣವನ್ನು ಸದ್ಬಳಕೆ ಮಾಡಿಕೊಂಡು ವಂಚನೆ ಮಾಡುವ ವಂಚಕರ ಜಾಲ ಸದ್ಯ ನಗರದಲ್ಲಿ ಫುಲ್ ಆಯಕ್ಟಿವ್ ಆಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ವಂಚಕ ಜಾಲದಲ್ಲಿ ಸಿಲುಕಿ ಒದ್ದಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಸ್ಕ್ರೀನ್ ಶಾಟ್ ತೆಗೆದುಕೊಂಡು ಸಂತ್ರಸ್ತರನ್ನು ಬ್ಲಾಕ್ಮೇಲ್ ಮಾಡುವ ಮೂಲಕ ಆರೋಪಿಗಳು ವಂಚಿಸುತ್ತಿದ್ದಾರೆ. ವ್ಯಕ್ತಿಯೊಬ್ಬರಿಗೆ ಅಪರಿಚಿತ ಮಹಿಳೆಯೊಬ್ಬಳು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ಇವರ …
Read More »ತಹಶೀಲ್ದಾರ್ ಬಂಧನಕ್ಕೆ ವಾರಂಟ್ ಜಾರಿ
ಹಾಸನ: ಜಮೀನು ವ್ಯಾಜ್ಯ ಪ್ರಕರಣವೊಂದರಲ್ಲಿ ಸಾಕ್ಷ್ಯ ಹೇಳಲು ಕೋರ್ಟ್‌ಗೆ ಹಾಜರಾಗದ ಹಾಸನ ತಹಶೀಲ್ದಾರ್ ಶ್ವೇತಾ ವಿರುದ್ಧ ಸಿಟಿ ಸಿವಿಲ್ ಕೋರ್ಟ್ ಬಂಧನ ವಾರಂಟ್ ಹೊರಡಿಸಿದೆ. ಶ್ವೇತಾ ಅವರನ್ನು ಕರೆದುಕೊಂಡು ಹೋಗಲು ಗುರುವಾರ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಕಚೇರಿಗೆ ಆಗಮಿಸಿದ್ದರು. ಆದರೆ ಶ್ವೇತಾ ಕಚೇರಿಯಲ್ಲಿರಲಿಲ್ಲ. ಪ್ರಕರಣವೇನು?: ಹಾಸನ ತಾಲೂಕಿನ ಹೇಮಾ ಎಂಬವರ ಭೂಮಿ 6/1 ಭಾಗಕ್ಕೆ ಆದೇಶವಾಗಿದ್ದು, ನಂತರ ಹದ್ದುಬಸ್ತ್‌ಗಾಗಿ ಸ್ವಾಧೀನ ಮಾಡಬೇಕು ಎಂದು ಕೋರ್ಟ್ ಆದೇಶಿಸಿತ್ತು. 2014ರಿಂದ ಇಲ್ಲಿವರೆಗೂ ಈ ಕುರಿತು …
Read More »ಅಟ್ರಾಸಿಟಿ ಕೇಸ್ ರದ್ದತಿಗೆ ನಕಾರ: ಆಧುನಿಕ ಯುಗದಲ್ಲೂ ಅಸ್ಪೃಶ್ಯತೆ ಆಚರಣೆಗೆ ಹೈಕೋರ್ಟ್ ಬೇಸರ
ಬೆಂಗಳೂರು: ಆಧುನಿಕ ಯುಗದಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ಕುರಿತು ಆಘಾತ ವ್ಯಕ್ತಪಡಿಸಿರುವ ಹೈಕೋರ್ಟ್, ಸಾರ್ವಜನಿಕ ಸ್ಥಳದಂತಿರುವ ದೇವಾಲಯಕ್ಕೆ ದಲಿತ ಕುಟುಂಬ ಪ್ರವೇಶಕ್ಕೆ ಅಡ್ಡಿಪಡಿಸಿ, ಜಾತಿ ಹೆಸರಿನಲ್ಲಿ ನಿಂದಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿತು. ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸುವಂತೆ ಕೋರಿ ಪಾಂಡುರಗ ಭಟ್ ಸೇರಿದಂತೆ ಇತರೆ ಏಳು ಮಂದಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪಪೀಠ, …
Read More »