ಚೆನ್ನೈ(ತಮಿಳುನಾಡು): ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಖುಷಿ ಸಂಗತಿ ಹೊರಬಿದ್ದಿದೆ. ಧೋನಿ 2024ರ ಐಪಿಎಲ್‌ನಲ್ಲಿ ಆಡಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಖಚಿತಪಡಿಸಿದೆ. ಮುಂದಿನ ಸೀಸನ್‌ಗಾಗಿ ಶೀಘ್ರದಲ್ಲೇ ಹರಾಜು ಪ್ರಕ್ರಿಯೆ ನಡೆಯಲಿದೆ. ನವೆಂಬರ್ 26ರೊಳಗೆ ತಂಡ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಎಲ್ಲಾ ತಂಡಗಳಿಗೆ ಈ ಹಿಂದೆ ಸೂಚಿಸಿತ್ತು. ಅದರಂತೆ, ಚೆನ್ನೈ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ನಿರೀಕ್ಷೆಯಂತೆ ಧೋನಿ ಹೆಸರೂ ಇದೆ. ಇದರೊಂದಿಗೆ ಮುಂದಿನ …
Read More »Daily Archives: ನವೆಂಬರ್ 27, 2023
ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಐವರು ಆತ್ಮಹತ್ಯೆ:
ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಮುಖ್ಯವಾಗಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಅಂತಾ ಗೃಹ ಸಚಿವರು ತಿಳಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಮೃತದೇಹಗಳ ಅಂತಿಮ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತಪಟ್ಟಿರುವ ಕುಟುಂಬದ ಯಜಮಾನ ಗರೀಬ್ ಸಾಬ್ ಎಂಬವರು ಶಿರಾದಿಂದ ತುಮಕೂರು ನಗರಕ್ಕೆ ವಲಸೆ ಬಂದಿದ್ದರು. …
Read More »ರಾಯಚೂರು: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಪತ್ನಿಯನ್ನೇ ಕೊಂದ ಪತಿ
ರಾಯಚೂರು: ಮದ್ಯ ಸೇವಿಸಲು ಹಣ ನೀಡದ ಪತ್ನಿಯನ್ನು ಭೀಕರವಾಗಿ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿಕ್ಕ ಉಪ್ಪೇರಿ ಗ್ರಾಮದಲ್ಲಿ ನಡೆದಿದೆ. ಸುನಿತಾ (28) ಪತಿಯ ಕೈಯಿಂದ ಹತ್ಯೆಯಾದ ಗೃಹಿಣಿಯಾಗಿದ್ದು, ಬಸವರಾಜ ಕಂಬಳಿ ಕೊಲೆ ಮಾಡಿರುವ ಪತಿ. ಬಸವರಾಜ ಹಾಗೂ ಸುನಿತಾ ಮನಸಾರೆ ಪರಸ್ಪರ ಪ್ರೀತಿಸಿ 2014ರಲ್ಲಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದರು. ಭಾನುವಾರದಂದು ಸಂಜೆ ಸುನಿತಾ ತಮ್ಮ ಹೊಲದಲ್ಲಿ ನೀರು ಕಟ್ಟುತ್ತಿದ್ದರು. ಆಗ ಪತಿ ಬಸವರಾಜ …
Read More »ಅಪಾಯಕಾರಿ ಟ್ರಾನ್ಸ್‌ಫಾರ್ಮರ್ ವೈರ್ಗಳನ್ನು ಸರಿಪಡಿಸುವಂತೆ ಹೆಸ್ಕಾಂಗೆ ಒತ್ತಾಯ
ಬೆಳಗಾವಿ: ಬೆಳಗಾವಿಯ ಎಚ್.ಡಿ.ಕುಮಾರಸ್ವಾಮಿ ಲೇಔಟ್ನಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳ ವೈರ್ಗಳು ನೇತಾಡುತ್ತಿವೆ. ಈ ಪ್ರದೇಶದಲ್ಲಿ ಜನರು ಜೀವಭಯದಲ್ಲಿ ಸಂಚರಿಸುತ್ತಿದ್ದಾರೆ. ಅರೆಕ್ಷಣ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚು ಅನ್ನೋದು ಜನರ ಆತಂಕ. ಇಲ್ಲಿ 15 ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲಾಗಿದ್ದು, ಅವುಗಳು ನೆಲದಿಂದ ಕೇವಲ ಎರಡು ಅಡಿಯಷ್ಟು ಮಾತ್ರ ಎತ್ತರದಲ್ಲಿವೆ. ಟಿಸಿ ಬಾಕ್ಸ್ನ ಬಾಗಿಲುಗಳು ತೆರೆದುಕೊಂಡಿದ್ದು, ವೈರ್ಗಳು ನೇತಾಡುತ್ತಿವೆ. ಟಿಸಿ ಪಕ್ಕದ ಕಟ್ಟಡದಲ್ಲೇ ಅಂಗಡಿ, ಆಸ್ಪತ್ರೆಯೂ ಇದ್ದು, ನೂರಾರು ಜನ ನಿತ್ಯ ಈ …
Read More »ಸಿದ್ದರಾಮಯ್ಯನವರ ಜನತಾ ದರ್ಶನ ಜನಸ್ಪಂದನಕ್ಕೆ ಹರಿದು ಬಂದ ಜನ
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯುತ್ತಿರುವ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಜನಸಮೂಹವೇ ಹರಿದುಬಂದಿದೆ. ಅಹವಾಲು ಸಲ್ಲಿಸಲು ಬೆಳಿಗ್ಗೆಯಿಂದಲೇ ಜನರು ಸರದಿ ಸಾಲಿನಲ್ಲಿ ನಿಂತಿದ್ದು, ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡು ಸರ್ಕಾರಿ ಕದ ತಟ್ಟುತ್ತಿರುವ ಸಾರ್ವಜನಿಕರು ನೇರವಾಗಿ ಸಿಎಂ ಬಳಿ ಪರಿಹಾರಕ್ಕೆ ಮೊರೆ ಇಡುತ್ತಿದ್ದಾರೆ. ಸಿಎಂ ಸಹನೆಯಿಂದ ಜನರ ಸಮಸ್ಯೆ ಆಲಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ವಿಶೇಷಚೇತನರು, ಹಿರಿಯ ನಾಗರಿಕರು, ಮಹಿಳೆಯರು …
Read More »
Laxmi News 24×7