Breaking News

Daily Archives: ನವೆಂಬರ್ 28, 2023

ಚಿತ್ರ ನಿರ್ದೇಶಕ ರಾಕ್​ಲೈನ್ ವೆಂಕಟೇಶ್‌ ಸಹೋದರನ ಮನೆಯಲ್ಲಿ ಕಳ್ಳತನ ಎಸಗಿದ್ದ ನೇಪಾಳ ಮೂಲದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ವಿದೇಶ ಪ್ರವಾಸಕ್ಕೆ ತೆರಳಿದ್ದ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಎಸಗಿದ್ದ 7 ಜನ ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೇಪಾಳ ಮೂಲದ ಉಪೇಂದ್ರ ಬಹದ್ದೂರ್ ಶಾಹಿ, ನಾರಾ ಬಹದ್ದೂರ್ ಶಾಹಿ, ಖಾಕೇಂದ್ರ ಬಹದ್ದೂರ್ ಶಾಹಿ, ಕೋಮಲ್ ಶಾಹಿ, ಸ್ವಸ್ತಿಕ್ ಶಾಹಿ, ಪಾರ್ವತಿ ಶಾಹಿ ಹಾಗೂ ಶಾದಲ ಶಾಹಿ ಎಂದು ಗುರುತಿಸಲಾಗಿದೆ. ಬಂಧಿತರ ಪೈಕಿ ಆರೋಪಿಯೊಬ್ಬ ಭ್ರಮರೇಶ್ ಮನೆಯ ಪಕ್ಕದಲ್ಲೇ ನಿರ್ಮಾಣ …

Read More »

ರೈಲು ನಿಲ್ದಾಣದಲ್ಲಿ ವಿದ್ಯುತ್ ಕಂಬ ಏರಿದ ಮಾನಸಿಕ ಅಸ್ವಸ್ಥ

ನಂದೂರಬಾರ್ (ಮಹಾರಾಷ್ಟ್ರ) : ನಂದೂರಬಾರ್ ರೈಲು ನಿಲ್ದಾಣದಲ್ಲಿ ಮಾನಸಿಕ ರೋಗಿಯೊಬ್ಬ ವಿದ್ಯುತ್​ ಕಂಬ ಏರಿದ್ದರಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಸುಮಾರು ಒಂದು ಗಂಟೆಯ ನಂತರ ಸುಗಮವಾಗಿ ಆರಂಭವಾಯಿತು. ರೈಲ್ವೆ ನಿಲ್ದಾಣದ ವಿದ್ಯುತ್ ಕಂಬದ ಮೇಲೆ ಮಾನಸಿಕ ಅಸ್ವಸ್ಥ ವ್ಯಕ್ತಿ ಹತ್ತಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ವಿದ್ಯುತ್ ವ್ಯತ್ಯಯದಿಂದ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದೇ ವೇಳೆ ಮುಂಬೈ ದಾನಪುರ್ ಎಕ್ಸ್​ಪ್ರೆಸ್​ ಹಾಗೂ ನವಜೀವನ್ ಎಕ್ಸ್ ಪ್ರೆಸ್ ರೈಲುಗಳನ್ನು ಸುಮಾರು ಎರಡು ಗಂಟೆಗಳ …

Read More »

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ..!

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.   ಪ್ರತಿ …

Read More »

ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರಯನ್ನು ಉದ್ಘಾಟಿಸಿದ ಡಿಸಿಎಂ ಡಿ.ಕೆ .ಶಿ.

ಬೆಂಗಳೂರು : ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಬಹಳ ಹತ್ತಿರವಾದ ಹಿರಿಯ ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರಯನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಉದ್ಘಾಟಿಸಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಇದಕ್ಕೆ ಇತ್ತೀಚೆಗೆ ಗ್ರೀನ್ ಸಿಗ್ನಲ್ ನೀಡಿತ್ತು.ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು …

Read More »

ಮಹಿಳೆಯನ್ನು ಬಲಿ ಪಡೆದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.

ಮೈಸೂರು: ಮಹಿಳೆ ಹಾಗೂ ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಹೆಡಿಯಾಲ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ನಂಜನಗೂಡು ತಾಲೂಕಿನ ಕಾಡಂಚಿನ ಪ್ರದೇಶವಾದ ಬಳ್ಳೂರು ಹುಂಡಿ ಗ್ರಾಮದ ಕಾಡಂಚಿನಲ್ಲಿ ಸೋಮವಾರ ಮಧ್ಯರಾತ್ರಿ ಹುಲಿ ಬೋನಿಗೆ ಬಿದ್ದಿದೆ.   ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 207 ಕಾರ್ಯಾಚರಣೆಯಲ್ಲಿ ತೊಡಗಿದ್ದರು. 50ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಕ್ಯಾಮೆರಾದ ಮೂಲಕವೂ ಹುಲಿ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ಅಂತೆಯೇ ಇಂದು …

Read More »

ಹುಬ್ಬಳ್ಳಿ: ರೈತ ಮಹಿಳೆಯ ಖಾತೆಗೆ ಸೈಬರ್ ಕಳ್ಳರಿಂದ ಕನ್ನ; 64 ಸಾವಿರ ರೂ. ವಂಚನೆ

ಹುಬ್ಬಳ್ಳಿ: ರೈತ ಮಹಿಳೆಯೊಬ್ಬರ ಖಾತೆಯಿಂದ ಹಂತ ಹಂತವಾಗಿ 64 ಸಾವಿರ ರೂಪಾಯಿಯನ್ನು ಸೈಬರ್ ವಂಚಕರು ಲಪಟಾಯಿಸಿರುವ ಘಟನೆ ಬೆಳೆಕಿಗೆ ಬಂದಿದೆ. ಕುಂದಗೋಳ ತಾಲೂಕು ಯರಿನಾರಾಯಣಪುರ ಗ್ರಾಮದ ಮಲ್ಲವ್ವ ಅಶೋಕ ಮುಲ್ಲಹಳ್ಳಿ ಎಂಬ ರೈತ ಮಹಿಳೆ ವಂಚನೆಗೊಳಗಾದವರು. ಇವರು ಯರಗುಪ್ಪಿಯ ಕೆವಿಜಿ ಬ್ಯಾಂಕ್​ನಲ್ಲಿ ಖಾತೆ ಹೊಂದಿದ್ದಾರೆ. ಅರ್ಧ ಎಕರೆ ಜಮೀನು ಹೊಂದಿರುವ ಇವರು ಕೃಷಿ‌ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಖಾತೆಯಲ್ಲಿ ಗೃಹ‌ಲಕ್ಷ್ಮಿ ಸೇರಿದಂತೆ ವಿವಿಧ ಮೂಲದಿಂದ ಉಳಿತಾಯ ಮಾಡಿದ ಹಣವನ್ನು ಇಟ್ಟಿದ್ದರು. …

Read More »

ತೆಲಂಗಾಣದಲ್ಲಿ ಜಾಹೀರಾತು ಪ್ರಕಟ: ಕರ್ನಾಟಕ ಸರಕಾರಕ್ಕೆ ಇಸಿ ನೋಟಿಸ್‌

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ತೆಲಂಗಾಣ ಪತ್ರಿಕೆಗಳಲ್ಲಿ ಸರಕಾರಿ ಜಾಹೀರಾತು ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕರ್ನಾಟಕ ಸರಕಾರಕ್ಕೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ. ತೆಲಂಗಾಣದ ಪತ್ರಿಕೆಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಪ್ರಕಟಣೆಗಳನ್ನು ನೀಡುವುದರ ಅರ್ಥವೇನು? ಎಂದು ಚುನಾವಣಾ ಆಯೋಗ ಪ್ರಶ್ನೆ ಮಾಡಿದ್ದು, ನೀಡಿರುವ ನೋಟಿಸ್‌ಗೆ ನವೆಂಬರ್ 28ರ ಸಂಜೆ 5ಗಂಟೆಯೊಳಗೆ ಉತ್ತರಿಸುವಂತೆ ಆದೇಶ ಜಾರಿಮಾಡಿದೆ. ಕರ್ನಾಟಕ ರಾಜ್ಯ ಸರ್ಕಾರದ ಘೋಷಣೆಗಳ ವಿಷಯವನ್ನು …

Read More »

ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದು ಬಿಜೆಪಿ ಆರೋಪ: ಬಿಜೆಪಿ

ಕಾಂಗ್ರೆಸ್ ಸರ್ಕಾರ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ, ಇದೀಗ ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರೆಂಟಿ ಬಗ್ಗೆ ಜಾಹೀರಾತು ನೀಡಿದ್ದು, ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೊಟೀಸ್ ನೀಡಿದೆ.   ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಸಿಎಂ ಸಿದ್ದು ತೆಲಂಗಾಣದಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದಿದೆ. ತೆರಿಗೆದಾರರ …

Read More »

ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಯಾರಿಗೆ ಒಲಿಯುತ್ತದೆ ಲೋಕಸಭೆ TIKET

ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳಲ್ಲಿ …

Read More »

ಬೆಳಗಾವಿ ವಿಧಾನಮಂಡಲ ಅಧಿವೇಶನ: ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ; ಬಿಜೆಪಿ ಆಗ್ರಹ

ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷ ಬಿಜೆಪಿ ಸೋಮವಾರ ಹೇಳಿದೆ. ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷ ಬಿಜೆಪಿ ಸೋಮವಾರ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿಪಕ್ಷ ನಾಯಕ ಆರ್.ಅಶೋಕ್ ಅವರು, “ಗ್ಯಾರಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ …

Read More »