ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, …
Read More »Daily Archives: ನವೆಂಬರ್ 28, 2023
ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್ : ಹೈ ಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕಂಡಿಸಿರುವ ಯತ್ನಾಳ್ ಹೈ ಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್ ನ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ …
Read More »ಗೋಪೂಜೆಯಲ್ಲಿ ಬಂಗಾರದ ಸರ ನುಂಗಿದ್ದ ಹಸು: ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಪಶುವೈದ್ಯರು
ಶಿವಮೊಗ್ಗ: ಗೋಪೂಜೆ ಸಲ್ಲಿಸುವ ಸಮಯದಲ್ಲಿ ಹಸುವೊಂದು ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ್ದ ಘಟನೆ ಹೊಸನಗರ ತಾಲೂಕು ಮತ್ತಿಮನೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪಶುವೈದ್ಯರು ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆ ಚಿನ್ನದ ಸರವನ್ನು ಹೊರತೆಗೆದಿದ್ದಾರೆ. ಮತ್ತಿಮನೆ ಸತ್ಯವತಿ ಶ್ಯಾಮ ಉಡುಪ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಗೋಪೂಜೆಯ ನಂತರ ಇಟ್ಟಿದ್ದ ಸರ ನಾಪತ್ತೆಯಾದಾಗ ಕುಟುಂಬದವರು ದಿಗಿಲುಗೊಂಡಿದ್ದರು. ನಂತರ ಪರಿಶೀಲಿಸಿದಾಗ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು …
Read More »ಟಿ20 ಸರಣಿ ಗೆಲುವಿನತ್ತ ಭಾರತದ ಚಿತ್ತ
ಗುವಾಹಟಿ(ಅಸ್ಸಾಂ): ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಕ್ರಿಕೆಟ್ ಸರಣಿಯ 3ನೇ ಪಂದ್ಯ ಇಲ್ಲಿನ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ. ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿರುವ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಳಗ ಆಸ್ಟ್ರೇಲಿಯಾ ವಿರುದ್ಧದ ಹೊಸ ಹೋರಾಟಕ್ಕೆ ಸಜ್ಜಾಗಿದೆ. ಈ ಪಂದ್ಯದ ಗೆಲುವಿನೊಂದಿಗೆ ಭಾರತ ಸರಣಿ ವಶಪಡಿಸಿಕೊಳ್ಳುತ್ತಾ ಅಥವಾ ಆಸ್ಟ್ರೇಲಿಯಾ ಪುಟಿದೇಳುತ್ತಾ ಎಂಬುದು ಕುತೂಹಲಕಾರಿಯಾಗಿದೆ. ಮೊದಲ ಪಂದ್ಯವನ್ನು …
Read More »ಸೈಬರ್ ಅಪರಾಧ ವಿಭಾಗಕ್ಕೆ ಎಸಿಪಿ ದರ್ಜೆಯ ಅಧಿಕಾರಿಯ ನಿಯೋಜನೆ ಸೇರಿ ಏಳು ಡಿವೈಎಸ್ಪಿ ಮತ್ತು 14 ಮಂದಿ ಇನ್ಸ್ಪೆಕ್ಟರ್ಗಳನ್ನು ಸರ್ಕಾರ ವರ್ಗಾಯಿಸಿದೆ.
ಸೈಬರ್ ಅಪರಾಧ ವಿಭಾಗಕ್ಕೆ ಎಸಿಪಿ ದರ್ಜೆಯ ಅಧಿಕಾರಿಯ ನಿಯೋಜನೆ ಸೇರಿ ಏಳು ಡಿವೈಎಸ್ಪಿ ಮತ್ತು 14 ಮಂದಿ ಇನ್ಸ್ಪೆಕ್ಟರ್ಗಳನ್ನು ಸರ್ಕಾರ ವರ್ಗಾಯಿಸಿದೆ. ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಇದೇ ಮೊದಲ ಬಾರಿಗೆ ಸಿಸಿಬಿಯ ಸೈಬರ್ ವಿಭಾಗಕ್ಕೆ ಸಹಾಯಕ ಪೊಲೀಸ್ ಕಮೀಷನರ್ (ಎಸಿಪಿ) ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಸತ್ಯನಾರಾಯಣ್ ಸಿಂಗ್ ಅವರು ಎಸಿಪಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕುರಿತು ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. ಇನ್ನುಳಿದಂತೆ …
Read More »ಮೈಸೂರಿನ ‘ಚಾಮುಂಡೇಶ್ವರಿ’ಗೆ 5 ವರ್ಷಗಳ ‘ಗೃಹಲಕ್ಷ್ಮಿ ಯೋಜನೆ’ಯ ಹಣ ಜಮಾ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ( Gruha Lakshmi Scheme ) ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ …
Read More »ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ಹೊಸ ಕಾರ್ಯಕ್ರಮ ರೂಪಿಸುತ್ತಿರುವ ರಾಜ್ಯ ಸರ್ಕಾರ
ಬೆಂಗಳೂರು: ಹಲವಾರು ವರ್ಷಗಳಿಂದ ಸರ್ಕಾರದ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರ್ಕಾರ ಹೊಸ ಕಾರ್ಯಕ್ರಮ ರೂಪಿಸುತ್ತಿದೆ. ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ವ್ಯವಸ್ಥೆ ಜಾರಿಯಲ್ಲಿದ್ದು, ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿ ವಿತರಣೆ ಮಾಡಲು ರಾಜ್ಯ ಸರ್ಕಾರ ಈ ವ್ಯವಸ್ಥೆ ಜಾರಿಗೊಳಿಸಿದೆ. ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ …
Read More »ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ
ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳಲು ಪ್ರಯಾಣಿಕರ ಅನುಕೂಲತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರಿನಿಂದ ನೇರ ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ ಮಾಡಲಿದೆ. ಡಿಸೆಂಬರ್ 1 ರಿಂದ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್ ಸಂಚಾರ ಪ್ರಾರಂಭವಾಗಲಿದೆ. ಪ್ರತಿ ನಿತ್ಯ ಬೆಂಗಳೂರು – ನೀಲಕ್ಕಲ್ (ಪಂಪಾ- ಶಬರಿಮಲೈ) ನಡುವೆ ಬಸ್ ಸಂಚಾರ ಇರಲಿದೆ. ವೋಲ್ವೊ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿದೆ. ಪ್ರತಿದಿನ ಮಧ್ಯಾಹ್ನ 1.50 ಗಂಟೆಗೆ ಹೊರಡಲಿರುವ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ.ಅತೀಕ್ ಅವರನ್ನು ನೇಮಿಸಿದ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರದಮುಖ್ಯ ಕಾರ್ಯದರ್ಶಿ (ಸಿಎಸ್) ಹುದ್ದೆಗೆ ಡಾ.ರಜನೀಶ್ ಗೋಯೆಲ್ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾದ ಸಿಎಂ ಅವರ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್.ಕೆ.ಅತೀಕ್ ಅವರನ್ನು ನೇಮಿಸಲಾಗಿದೆ. ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರಿ ಹೊಣೆಯನ್ನು ಎಲ್.ಕೆ.ಅತೀಕ್ ಅವರಿಗೆ ವಹಿಸಲಾಗಿದೆ. ಇದಕ್ಕೂ ಮುನ್ನ ಎಲ್.ಕೆ.ಅತೀಕ್ ಅವರಿಗೆ ಐಎನ್‌ಎಸ್ ಪ್ರಸಾದ್ ನಿವೃತ್ತಿಯಿಂದ ತೆರವಾದ ಹಣಕಾಸು ಇಲಾಖೆಯ …
Read More »