Breaking News

Daily Archives: ನವೆಂಬರ್ 30, 2023

2ಎ ಮೀಸಲಾತಿಗೆ ಆಗ್ರಹಿಸಿ ಡಿ.5ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಶಾಸಕರ ಸಭೆ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ – ಮಾಜಿ ಶಾಸಕರ ಸಭೆ ಕರೆದಿದ್ದೇವೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲು ನಿರ್ಧರಿಸಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯ ಕಾರಿಣಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಸಭೆಗೆ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಆದ್ದರಿಂದ, ಅಧಿವೇಶನದಲ್ಲಿ ಭಾಗವಹಿಸುತ್ತೇನೆ:

ಬೆಂಗಳೂರು: ತನ್ನ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದಿಂದ ತೀವ್ರ ಅಸಮಾಧಾನಗೊಂಡು ಸಿಎಂಗೆ ಪತ್ರ ಬರೆದಿದ್ದ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನಕ್ಕೆ ಬುಧವಾರ ರಾತ್ರಿ ಪಾಟೀಲರನ್ನು ಕರೆಯಿಸಿಕೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತನಾಡಿ ಸಮಸ್ಯೆ ಪರಿಹರಿಸಿದರು. ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು. …

Read More »

ಪಂಚರಾಜ್ಯ ಚುನಾವಣೆಯಲ್ಲಿ ಕನಿಷ್ಠ ಮೂರು ಕಡೆ ಅಧಿಕಾರ ಹಿಡಿಯುತ್ತೇವೆ : M.B. ಪಾಟೀಲ್​

ವಿಜಯಪುರ : ಪಂಚರಾಜ್ಯ ಚುನಾವಣೆಯಲ್ಲಿ ಐದು ರಾಜ್ಯಗಳ ಪೈಕಿ ಕನಿಷ್ಠ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತೇವೆ. ನಾಲ್ಕನೇ ಕಡೆಯೂ ಅಧಿಕಾರ ಹಿಡಿಯೋ ಸಾಧ್ಯತೆ ಇದೆ. ಎಕ್ಸಿಟ್ ಪೋಲ್ ನೋಡಿ ಗೊತ್ತಾಗುತ್ತದೆ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದ್ದಾರೆ. ಪಂಚ ರಾಜ್ಯ ಚುನಾವಣೆ ವಿಚಾರದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗುತ್ತಾ? ಎಂಬ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮೋದಿ ವರ್ಚಸ್ಸು ಕಡಿಮೆಯಾಗುತ್ತಿದೆ ಎಂದು ನೀವೇ …

Read More »

ಯಾವುದನ್ನೂ ಉಚಿತವಾಗಿ ನೀಡಬಾರದು: ನಾರಾಯಣ ಮೂರ್ತಿ

ಬೆಂಗಳೂರು: ”ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳನ್ನು ಪಡೆಯುವ ಜನರು ಸಮಾಜದ ಒಳಿತಿಗಾಗಿ ಮತ್ತೆ ಕೊಡುಗೆ ನೀಡಬೇಕು” ಎಂದು ಇನ್ಫೋಸಿಸ್ ಸಹಸಂಸ್ಥಾಪಕರಾದ ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.   ಬೆಂಗಳೂರು ಟೆಕ್ ಸಮ್ಮಿಟ್ 2023ರ 26ನೇ ಆವೃತ್ತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಶೇಕಡಾ 20ಕ್ಕೆ ತಲುಪಿದರೆ, ನಾವು ನಿಮಗೆ ಉಚಿತ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ನೀವು ಹೇಳಬೇಕು. ಇದರಿಂದ …

Read More »

ಭ್ರೂಣ ಹತ್ಯೆ ಮಾಡಿದವರು ಜೊತೆಗೆ ಭ್ರೂಣ ಹತ್ಯೆಗೆ ಮಾಡಿಸಿಕೊಂಡವರು ಕಠಿಣ ಶಿಕ್ಷೆ ಆಗಬೇಕು : ಸಚಿವ ವೆಂಕಟೇಶ್

ಚಾಮರಾಜನಗರ : ಭ್ರೂಣ ಹತ್ಯೆಯಂತಹ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು. ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ ಎಂದರು. ಇನ್ನು ಚೀನಾದಲ್ಲಿ ನ್ಯುಮೋನಿಯಾ ಸೋಂಕು ಹೆಚ್ಚಳವಾದ ಸಂಬಂಧ …

Read More »

ಹೆಂಡತಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಗಂಡ

ಮೈಸೂರು : ಪ್ರೀತಿಸಿ ಮದುವೆಯಾದ ಜೋಡಿಯೊಂದರ ಸಂಸಾರದಲ್ಲಿ ಅನುಮಾನ ಎಂಬ ಭೂತ ಜೀವಗಳನ್ನೇ ಬಲಿಪಡೆದಿದೆ. ಗಂಡ ಹೆಂಡತಿಗೆ ಚಾಕುವಿನಿಂದ ಇರಿದು, ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಹೀಗೆ ಹೆಂಡತಿಯ ಮೇಲೆ ಅನುಮಾನದಿಂದ ಆಕೆಗೆ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪ್ರಸನ್ನ ಎಂದು ಗುರುತಿಸಲಾಗಿದೆ. ಚಾಕು ಇರಿತಕ್ಕೆ ಒಳಗಾದವರು ಶ್ವೇತಾ ಎಂಬುದಾಗಿ ತಿಳಿದು ಬಂದಿದೆ. ಇವರಿಬ್ಬರು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ …

Read More »

ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಯಾವುದೇ ಸತ್ಯತೆ ಇಲ್ಲ, ತನಿಖೆಗೆ ಸಹಕಾರ ಎಂದ ವಿಮ್ಸ್ ನಿರ್ದೇಶಕ

ಬಳ್ಳಾರಿ: ಇಲ್ಲಿನಟ್ರಾಮಾ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತಮ್ಮ ವಿರುದ್ಧ ಮಾಡಿರುವ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ನಿರ್ದೇಶಕ ಗಂಗಾಧರಗೌಡ, ಇದರಲ್ಲಿ ಯಾವುದೇ ಸತ್ಯಾಸತ್ಯತೆ ಇಲ್ಲ. ಕಾನೂನು ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನಾನು ಪೊಲೀಸ್​ ತನಿಖೆಗೆ ಸಂಪೂರ್ಣ ಸಹಕರಿಸಲು ಸಿದ್ಧ ಎಂದು ತಿಳಿಸಿದ್ದಾರೆ. ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ …

Read More »

ಕನಕದಾಸರು ಸಮಾಜದ ಅಸಮಾನತೆ ತೊಲಗಿಸಲು ಬಯಸಿದ್ದರು: ಸಿಎಂ ಸಿದ್ದರಾಮಯ್ಯ

ಹಾವೇರಿ: ಕನಕದಾಸರು ದಾಸ ಶ್ರೇಷ್ಠರು ಮಾತ್ರ ಅಲ್ಲ,ಸಮಾಜದ ಅಸಮಾನತೆ ತೊಲಗಿಸಲು ಬಯಸಿದ್ದವರು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.   ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ‌ ಕಾಗಿನೆಲೆಯಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನಕ್ಷರತೆಯಿಂದ, ಜಾತಿ ವ್ಯವಸ್ಥೆಯಿಂದ ಅಸಮಾನತೆ ಸಮಾಜದಲ್ಲಿ ಬಂದಿದೆ. ಜಾತಿ ವ್ಯವಸ್ಥೆ ಹುಟ್ಟು ಹಾಕಿಕೊಂಡವರು ನಾವೇ, ಯಾವ ಧರ್ಮದಲ್ಲಿಯೂ ಜಾತಿ ಮಾಡಿ ಅಂಥ ಹೇಳಿಲ್ಲ. ಮನುಷ್ಯರನ್ನು ದ್ವೇಷಿಸು ಅಂತ ಹೇಳಿಲ್ಲ. ಮನುಷ್ಯರನ್ನು ಕ್ರೂರವಾಗಿ ನಡೆಸಿಕೊಳ್ಳಬೇಕೆಂದು ಹೇಳಿಲ್ಲ, …

Read More »

ಆರೋಗ್ಯ ಸೇವೆಗೆ 262 ಆಂಬ್ಯುಲೆನ್ಸ್​ ಸೇರ್ಪಡೆ:ದಿನೇಶ್ ಗುಂಡೂರಾವ್

ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಪೂರೈಸಿದೆ. ಆರೋಗ್ಯ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಬಳಿಕ ಈ ಆರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ತುರ್ತಾಗಿ ಆಗಬೇಕಾದ ಆರೋಗ್ಯ ಸೇವೆಗಳನ್ನು ಸುಧಾರಣೆಯತ್ತ ತರುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಿದ್ದೇನೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಂಬ್ಯುಲೆನ್ಸ್​​ ಮತ್ತು ಡಯಾಲಿಸಿಸ್. ಈ ಎರಡು ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ನಾನು …

Read More »

FDA ಪರೀಕ್ಷಾ ಅಕ್ರಮ: ಕಲಬುರಗಿಯಲ್ಲಿ ಇಬ್ಬರು ಪ್ರಾಂಶುಪಾಲರ ಬಂಧನ

ಕಲಬುರಗಿ: ಅಕ್ಟೋಬರ್​​​ 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್‌ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬೇಟೆ ಮುಂದುವರೆಸಿದ್ದು, ಬುಧವಾರ ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಚಂದ್ರಕಾಂತ್​ ಬುರಕಲ್​ ಮತ್ತು ಅಫಜಲಪುರ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಸಣ್ಣ ಪೂಜಾರಿ ಬಂಧಿತರು. ರಾಯಲ್​ ಪಬ್ಲಿಕ್​ ಶಾಲೆಯ ಕೆಇಎ ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿದ್ದ ಚಂದ್ರಕಾಂತ್, ಅಧಿಕೃತ ಅಭ್ಯರ್ಥಿಗಳ …

Read More »