ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ಇದೀಗ ಯಜಮಾನಿಯರಿಗೆ ಗುಡ್ ನ್ಯೂಸ್ ಏನಪ್ಪ ಅಂದರೆ ಅರ್ಜಿ ಸಲ್ಲಿಸಿದ ಎಲ್ಲರಿಗೂ 10 ದಿನದೊಳಗೆ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ. ಹೌದು, ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ …
Read More »Monthly Archives: ನವೆಂಬರ್ 2023
2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿ:C.M.
ತೆಲಂಗಾಣ : 2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು. . ಕರ್ನಾಟಕ ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ..ಯುವ ನಿಧಿ ಯೋಜನೆಯನ್ನು ಜಾರಿಗೆ ಮಾಡಿದರೆ ನಾವು ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೆ ಜಾರಿಗೊಳಿಸಿದಂತಾಗುತ್ತದೆ …
Read More »ಅಥಣಿಯಲ್ಲಿ ವಿದ್ಯುತ್ ತಗುಲಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕೋಡಿ : ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದ ತಾಯಿ ಹಾಗೂ ಮಗು ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ತಗುಲಿ, ಸ್ಥಳದಲ್ಲಿಯೇ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32) ಹಾಗೂ ಪ್ರೀತಮ್ ಮಲ್ಲಿಕಾರ್ಜುನ ಪೂಜಾರಿ (7) ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿರುವ …
Read More »ನಮ್ಮ ದೇಶದ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ವಿಶ್ವದ ಏಕಮೇವ ರಾಷ್ಟ್ರವಾಗಿದೆ. ನೂರಾರು ಜಾತಿ-ಧರ್ಮಗಳಿದ್ದರೂ ಆಚರಣೆಗಳು ಮಾತ್ರ ಒಂದೇ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ …
Read More »ಹೆಣ್ಣು ಭ್ರೂಣ ಪತ್ತೆ ಇಂಥ ದುಷ್ಕೃತ್ಯಗಳಲ್ಲಿ ಭಾಗಿಯಾಗುವ ಜನರ ವಿರುದ್ಧ ಕಠಿಣ ಕ್ರಮ :C.M.
ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾರತದ ಸಂವಿಧಾನ ದಿನಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು. ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. …
Read More »ಉತ್ತರಕನ್ನಡದಲ್ಲಿ ಈ ಬಾರಿ ಮತ್ತೆ ಸಂಸದ ಅನಂತಕುಮಾರ್ ಹೆಗಡೆ ಸ್ಪರ್ಧಿಸಲ್ಲ ಎಂಬ ಊಹಾಪೋಹ
ಕಾರವಾರ: ಮುಂಬರುವ ಲೋಕಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಮುಖಂಡರು ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿ ಬರಡಾಗಿದ್ದ ಜೆಡಿಎಸ್ ಪಾಲಿಗೆ ಓಯಸಿಸ್ ಸಿಕ್ಕಂತಾಗಿದೆ. ಇಷ್ಟು ದಿನಗಳ ಕಾಲ ಸೈಲೆಂಟ್ ಆಗಿದ್ದ ಜೆಡಿಎಸ್ ನಾಯಕರು ಇದೀಗ ಲೋಕಸಭೆ ಚುನಾವಣೆಗೆ ತಾವೂ ಕೂಡ ಆಕಾಂಕ್ಷಿಗಳೆಂದು ಹೇಳಿಕೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು …
Read More »ಟೈಮ್ ಬಂದಾಗ ಮಾಜಿ, ಹಾಲಿ ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗೋಣ:ಸತೀಶ್ ಜಾರಕಿಹೊಳಿ
ಬೆಳಗಾವಿ: “ಟೈಮ್ ಬಂದಾಗ ಮಾಜಿ, ಹಾಲಿ ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗೋಣ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಕೃಷಿ ಇಲಾಖೆಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ಸೇರಿಸಲು ಸರ್ಕಾರ ಮುಂದಾಗಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕೆಲವು ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಅವಶ್ಯಕತೆ ಇಲ್ಲವೆಂದು, 10 ವರ್ಷಗಳ ಹಿಂದೆಯೇ ಈ ಇಲಾಖೆಗಳನ್ನು ಒಟ್ಟಿಗೆ ಸೇರಿಸಬೇಕೆಂದು ವರದಿ ಕೊಟ್ಟಿದ್ದಾರೆ. ಅದರ …
Read More »ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಮಹಿಳೆ ನಾಪತ್ತೆ
ಕಾರವಾರ (ಉತ್ತರ ಕನ್ನಡ) : ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ನಾಪತ್ತೆಯಾಗಿದ್ದ ಮಹಿಳೆಯೋರ್ವಳ ಬೈಕ್ ಕುಮಟಾದ ಹೆಡ್ ಬಂದರು ಬಳಿ ಪತ್ತೆಯಾಗಿದೆ. ಬೈಕ್ನಲ್ಲಿ ಮಹಿಳೆ ಬರೆದಿಟ್ಟಿದ್ದರು ಎನ್ನಲಾದ ಡೆತ್ನೋಟ್ ಸಹ ಸಿಕ್ಕಿದೆ. ಇದೀಗ ಕಣ್ಮರೆಯಾಗಿರುವ ಮಹಿಳೆಗಾಗಿ ಸಮುದ್ರದಲ್ಲಿ ಹುಡುಕಾಟ ಮುಂದುವರೆದಿದೆ. ಕುಮಟಾ ತಾಲೂಕಿನ ಸಾಂತಗಲ್ ಮೂಲದ ನಿವೇದಿತಾ ನಾಗರಾಜ ಭಂಡಾರಿ ನಾಪತ್ತೆಯಾಗಿರುವ ವಿವಾಹಿತೆ. ಶನಿವಾರ ಮನೆಯಿಂದ ಇಬ್ಬರು ಗಂಡುಮಕ್ಕಳನ್ನು ಸ್ಕೂಟಿ ಮೇಲೆ ಕರೆತಂದಿದ್ದ ಈಕೆ ಕುಮಟಾದ ಪಿಕ್ಅಪ್ ಬಸ್ ನಿಲ್ದಾಣದ …
Read More »ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಸೈಕ್ಲಿಂಗ್ ಚಾಂಪಿಯನ್‍ಶಿಪ್‍ನಲ್ಲಿ ವಿಜಯಪುರ ತಂಡ 35 ಅಂಕ ಗಲಿಸುವ ಮೂಲಕ ಮೊದಲ ಸ್ಥಾನ ಪಡೆದರೆ, ಬಾಗಲಕೋಟೆ ಜಿಲ್ಲಾ ತಂಡಕ್ಕೆ ಎರಡನೇ ಸ್ಥಾನ ಲಭಿಸಿತು.
ಬಾಗಲಕೋಟೆ: ಗ್ರಾಮೀಣ ಕ್ರೀಡೆಯಾದ ಸೈಕಲ್ ಸವಾರಿ ಇಂದು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಬಾಗಲಕೋಟೆ ಸಹ ಸೈಕ್ಲಿಸ್ಟ್ಗಳ ತವರು ಜಿಲ್ಲೆಯಾಗಿ ಪರಿಣಮಿಸಿದೆ. ಇಲ್ಲಿನ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕಿದೆ ಎಂದು ಬೀಳಗಿ ಶಾಸಕ ಜೆ.ಟಿ.ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆನವನಗರದ ಯುನಿಟ್-2ರಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಸೈಕ್ಲಿಂಗ್ ಚಾಂಪಿಯನ್‍ಶಿಪ್ ಪಂದ್ಯಾವಳಿಯ ಎರಡನೇ ದಿನದ(ಶನಿವಾರ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಬಾಗಲಕೋಟೆ ಜಿಲ್ಲೆಯು ತನ್ನದೇ ಆದ ವಿವಿಧ …
Read More »ತಪ್ಪಿಸಿಕೊಳ್ಳಲು ಪ್ರಯತ್ನ ನಟೋರಿಯಸ್ ರೌಡಿಶೀಟರ್ಗೆ ಗುಂಡೇಟು
ಹುಬ್ಬಳ್ಳಿ: ಸ್ಥಳ ಮಹಜರು ಮಾಡಲು ಕರೆತಂದ ವೇಳೆ ಪಿಎಸ್‌ಐ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ನಟೋರಿಯಸ್ ರೌಡಿಶೀಟರ್ ಸತೀಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಗುಂಡೇಟು ತಿಂದ ರೌಡಿಶೀಟರ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ, ನಟೋರಿಯಸ್ ರೌಡಿಶೀಟರ್ ಸತೀಶನನ್ನು ಕರೆದುಕೊಂಡು ಸ್ಥಳ ಮಹಜರಿಗೆ ಹೋದಾಗ, ಆತ ಪಿಎಸ್‌ಐ …
Read More »