ಪುಣೆ (ಮಹಾರಾಷ್ಟ್ರ): ಸಾಕು ಪ್ರಾಣಿಗಳ ಕ್ಲಿನಿಕ್ (Pet Clinic)ನಲ್ಲಿ ಸಾಕು ನಾಯಿಯೊಂದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಶ್ವಾನದ ಮಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೆಟ್ ಕ್ಲಿನಿಕ್ನ ವೈದ್ಯರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಇಲ್ಲಿನ ಪಾಶಾನ್ ಉಪನಗರದಲ್ಲಿರುವ ಪೆಟ್ ಕ್ಲಿನಿಕ್‌ಗೆ ನವೆಂಬರ್ 17ರಂದು ಸಂಜೆ 35 ವರ್ಷದ ಮಹಿಳೆಯೊಬ್ಬರು ತಮ್ಮ ‘ಹನಿ’ ಎಂಬ ಲ್ಯಾಬ್ರಡಾರ್ ಶ್ವಾನವನ್ನು ಕರೆತಂದಿದ್ದರು. ವಾರ್ಷಿಕ …
Read More »Monthly Archives: ನವೆಂಬರ್ 2023
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡವಾಳ ಬಯಲು: ಎಸ್ ಎ ರಾಮದಾಸ್
ಹಾಸನ: ”ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಬಂಡವಾಳವು ಮೇ ತಿಂಗಳಲ್ಲಿ ನಡೆಯುವ ಲೋಕಾಸಭಾ ಚುನಾವಣೆಯಲ್ಲಿ ಬಯಲಾಗಲಿದೆ” ಎಂದು ಮಾಜಿ ಸಚಿವ ಎಸ್ ಎ ರಾಮದಾಸ್ ಹೇಳಿದ್ದಾರೆ. ಬಿಜೆಪಿ ಕಚೇರಿಗೆ ಭೇಟಿ ನೀಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ರಾಷ್ಟ್ರ ನಾಯಕರು ಅಂತ ಬಂದಾಗ ಅವರ ಘನತೆ, ಗೌರವದಲ್ಲಿ ನಾನೇನು ಮಾತನಾಡುತ್ತಿದ್ದೀನಿ ಎಂಬುದರ ಅರಿವು ಇಟ್ಟುಕೊಂಡು ಮಾತನಾಡುವುದು ಒಳ್ಳೆಯದು. ಇದೇನು ಅವರಿಗೆ ಹೊಸತಲ್ಲ. ಈ ರೀತಿ …
Read More »ಸ್ತಿಗಾಗಿ ತಂದೆಯ ಕಣ್ಣು ಕಿತ್ತ ಮಗ
ಬೆಂಗಳೂರು: ಆಸ್ತಿಗಾಗಿ ಹೆತ್ತ ತಂದೆಯ ಕಣ್ಣುಗಳನ್ನೇ ಕಿತ್ತು ಹಾಕಿದ್ದ ಮಗನಿಗೆ ಇಲ್ಲಿನ ಕೋರ್ಟ್ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿತು. 44 ವರ್ಷದ ಅಭಿಷೇಕ್ ಶಿಕ್ಷೆಗೊಳಗಾದ ಅಪರಾಧಿ. ಬನಶಂಕರಿ ಶಾಕಾಂಬರಿ ನಗರದಲ್ಲಿ ಅಪರಾಧಿಯ ತಂದೆ ಪರಮೇಶ್ವರ್ (66) ವಾಸವಾಗಿದ್ದರು. ಆಸ್ತಿ ಪತ್ರಕ್ಕೆ ಸಹಿ ಹಾಕಿಲ್ಲ ಎಂಬ ಕಾರಣಕ್ಕಾಗಿ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಭಿಷೇಕ್ ಕೊಲೆ ಯತ್ನ ನಡೆಸಿದ್ದ. …
Read More »ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ನೀಡಲಾದ ವಿಧಾನಸೌಧ ಕಚೇರಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಿಜಯೇಂದ್ರ ಹೋಗಿದ್ದರ ಬಗ್ಗೆ ಪ್ರತಿಕ್ರಿಯಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೂಡ ಮಾತನಾಡುತ್ತೇವೆ. …
Read More »ನಾಗರಹೊಳೆ ಅಭಯಾರಣ್ಯದಲ್ಲಿ ಕಳ್ಳ ಬೇಟೆಗಾರರ ಮೇಲೆ ಹದ್ದಿನ ಕಣ್ಣಿಡಲಿವೆ ಗರುಡ ಸಿಸಿಟಿವಿ ಕ್ಯಾಮೆರಾ
ಮೈಸೂರು: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿ ಕಳ್ಳ ಬೇಟೆಗಾರರ ಚಲನವಲನ ಅರಿಯಲು ಹಾಗೂ ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಅತ್ಯಾಧುನಿಕ ತಂತ್ರಜ್ಞಾನದ ಗರುಡ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ನಾಗರಹೊಳೆ ಅಭಯಾರಣ್ಯದಲ್ಲಿ ಸಿಸಿಟಿವಿ ಕ್ಯಾಮೆರಾ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾ ಟವರ್ ನಿರ್ಮಿಸಲಾಗುತ್ತಿದ್ದು, ಈ ಗರುಡ ಸಿಸಿಟಿವಿ ಕ್ಯಾಮೆರಾದ ವಿಶೇಷತೆ, ಕಾರ್ಯವೈಖರಿ ಕುರಿತು …
Read More »ಸುವರ್ಣ ವಿಧಾನಸೌಧದ ಸುತ್ತ ಹುಲುಸಾಗಿ ಬೆಳೆದ ಮೇವು ಕಟಾವಿಗೆ ಅನುಮತಿ ನೀಡುವಂತೆ ರೈತರ ಮನವಿ
ಬೆಳಗಾವಿ : ಈ ಬಾರಿ ರಾಜ್ಯದಲ್ಲಿಕಂಡು ಕೇಳರಿಯದ ಬರಗಾಲದಿಂದ ಅಕ್ಷರಶಃ ರೈತರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಮುಂಗಾರು ಬೆಳೆ ಹಾನಿ ಅನುಭವಿಸಿದ್ದ ರೈತರು, ಇದೀಗ ಹಿಂಗಾರು ಬೆಳೆಗಳ ಹಾನಿ ಭೀತಿ ಎದುರಿಸುತ್ತಿದ್ದಾರೆ. ಅಲ್ಲದೇ ಜಾನುವಾರುಗಳ ಮೇವಿಗೂ ತಾತ್ವಾರ ಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತವು, ಡಿಸೆಂಬರ್ 4ರಿಂದ ಚಳಿಗಾಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಸ್ವಚ್ಛತೆ ಹೆಸರಿನಲ್ಲಿ ಸುವರ್ಣ ವಿಧಾನಸೌಧ ಸುತ್ತಲೂ 10 ಏಕರೆಗೂ ಹೆಚ್ಚು ಪ್ರದೇಶದಲ್ಲಿ …
Read More »ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು: ಬೆಳಗಾವಿ ಎಸ್ಪಿ ಆದೇಶ
ಬೆಳಗಾವಿ: ಕರ್ತವ್ಯದ ವೇಳೆ ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, 112 ಪೆಟ್ರೋಲಿಂಗ್ ವಾಹನದಲ್ಲಿ ಎಣ್ಣೆ, ಮಾಂಸದೂಟ ಮಾಡಿದ್ದ ಸಿಬ್ಬಂದಿ ಎಚ್.ಎಮ್. ಕಮತೆ ಮತ್ತು ದುಮಾಳ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ. ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಎಸ್ಪಿ ಡಾ. ಭೀಮಾಶಂಕರ ಗುಳೇದ …
Read More »‘ಪಾಪಿ’ಗಳಿಂದಾಗಿ ಭಾರತ ತಂಡಕ್ಕೆ ವಿಶ್ವಕಪ್ ಸೋಲಾಗಿದೆ: ಮೋದಿ ಟೀಕಿಸಿದ ಸಿಎಂ ಮಮತಾ ಬ್ಯಾನರ್ಜಿ
ಕೋಲ್ಕತ್ತಾ (ಪಶ್ಚಿಮಬಂಗಾಳ): ಟೀಂ ಇಂಡಿಯಾ ಸೋಲಿಗೆ ಅಪಶಕುನ (ಪನೌತಿ)ಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಹೀಯಾಳಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿಕ, ಇದೀಗ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸರದಿಯಾಗಿದೆ. ‘ಪಾಪಿಗಳು’ ಭಾಗಿಯಾಗಿದ್ದ ಪಂದ್ಯ ಬಿಟ್ಟು ಉಳಿದೆಲ್ಲಾ ಮ್ಯಾಚ್ಗಳಲ್ಲಿ ಭಾರತ ತಂಡ ಗೆದ್ದಿದೆ. ಅಹಮದಾಬಾದ್ ಬದಲಿಗೆ, ಈಡನ್ ಗಾರ್ಡನ್ಸ್ ಅಥವಾ ವಾಂಖೆಡೆಯಲ್ಲಿ ಪಂದ್ಯ ಆಯೋಜಿಸಿದ್ದರೆ ನಾವು ವಿಶ್ವಕಪ್ ಗೆಲ್ಲುತ್ತಿದ್ದೆವು ಎಂದು ಟೀಕಿಸಿದ್ದಾರೆ. ಇಲ್ಲಿನ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ …
Read More »ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೆ ಸೋಮಣ್ಣರಿಂದ ಆಹ್ವಾನ: ನಾನು, ರಾಜಣ್ಣ ಹೋಗುತ್ತಿದ್ದೇವೆ ಎಂದ ಸಚಿವ ಪರಮೇಶ್ವರ್
ತುಮಕೂರು: ಡಿಸೆಂಬರ್ 6ರಂದು ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಮಠದ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ನಮ್ಮನ್ನು ಆಹ್ವಾನ ಮಾಡಿದ್ದಾರೆ, ನಾನು ಮತ್ತು ರಾಜಣ್ಣ ಹೋಗುತ್ತಿದ್ದೇವೆ ಎಂದು ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮಣ್ಣ, ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಅನ್ನೋ ವಿಚಾರವು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ನಡೆಯುತ್ತೆ. ನಮ್ಮ ಹಂತದಲ್ಲಿ ನಡೆಯೋದಿಲ್ಲ ಎಂದರು. ಬಳಿಕ ತುಮಕೂರು ಲೋಕಸಭಾ ಚುನಾವಣೆ ಕುರಿತ ಪಕ್ಷದ ಸಭೆ …
Read More »ಕ್ರಿಕೆಟ್ ಮ್ಯಾಚ್ನಲ್ಲಿ ಜಗಳ; ಗಲಾಟೆ ಬಿಡಿಸಲು ಹೋದವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ದೊಡ್ಡಬಳ್ಳಾಪುರ : ಕ್ರಿಕೆಟ್ ಮ್ಯಾಚ್ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು, ಈ ಗಲಾಟೆಯನ್ನು ಬಿಡಿಸಲು ಹೋದ ಯುವಕನ ಮೇಲೆಯೇ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಬಳಿ ನಿನ್ನೆ (ಬುಧವಾರ) ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಅರವನಹಳ್ಳಿ ಗುಡ್ಡದಹಳ್ಳಿಯ ಪೃಥ್ವಿರಾಜ್ (26) ಗಂಭೀರವಾಗಿ ಗಾಯಗೊಂಡಿದ್ದಾನೆ. ಕರೇನಹಳ್ಳಿಯ ಉಲ್ಲಾಸ್ ಎಂಬ ಯುವಕ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಭಾನುವಾರ ಉಲ್ಲಾಸ್ ಮತ್ತು …
Read More »