Breaking News

Monthly Archives: ನವೆಂಬರ್ 2023

ನಟನೆಯಲ್ಲಿ ಅಭಿ ಸಾಮರ್ಥ್ಯ ಬೇರೇನೇ ಇದೆ.

ಸೂರಿ ನಿರ್ದೇಶನದಲ್ಲಿ ಅಭಿಷೇಕ್‌ ಅಂಬರೀಶ್‌ ನಾಯಕರಾಗಿರುವ “ಬ್ಯಾಡ್‌ ಮ್ಯಾನರ್ಸ್‌’ ಚಿತ್ರ ನ.24ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ ಹಿಟ್‌ಲಿಸ್ಟ್‌ ಸೇರಿದೆ. ನಿರ್ದೇಶಕ ಸೂರಿ ಹೊಸ ಲೋಕವನ್ನು ಕಟ್ಟಿಕೊಟ್ಟಿರೋದು ಕಾಣುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ನಿರ್ದೇಶಕ ಸೂರಿ “ಬ್ಯಾಡ್‌ ಮ್ಯಾನರ್ಸ್‌’ ಬಗ್ಗೆ ಮಾತನಾಡಿದ್ದಾರೆ. ಬ್ಯಾಡ್‌ ಮ್ಯಾನರ್ ಆರಂಭ ಹೇಗೆ? ಅಭಿ ಮಾಡಿರುವ “ಅಮರ್‌’ ಸಿನಿಮಾ ನಂಗೆ ಇಷ್ಟವಾಗಿತ್ತು. ನಾನು ಆ ಸಿನ್ಮಾನ ಅಭಿ ಪೋರ್ಟ್‌ಪೋಲಿಯೋ ಥರಾನೇ ನೋಡಿದ್ದೆ. ತಡಮಾಡದೇ ದರ್ಶನ್‌ ಸರ್‌ಗೆ …

Read More »

ಕರ್ತವ್ಯ ನಿರ್ಲಕ್ಷ್ಯ ಆರೋಪ. ಸಿಪಿಐ ಸಾಗರ್ ಅಮಾನತು

ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ ರೂವಾರಿ ಎನ್ನಲಾಗುತ್ತಿರುವ ಆರ್.ಡಿ. ಪಾಟೀಲ್, ವಾರ್ದ ಅಪಾರ್ಟ್ಮೆಂಟ್ ನಿಂದ ತಪ್ಪಿಸಿಕೊಳ್ಳುವಲ್ಲಿ ಉಂಟಾಗಿರುವ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಿಪಿಐ ಸಾಗರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಆದೇಶವನ್ನು ಕಲ್ಬುರ್ಗಿ ಈಶಾನ್ಯ ವಲಯದ ಐಜಿಪಿ ಹೊರಡಿಸಿದ್ದಾರೆ ಕಲ್ಬುರ್ಗಿ ನಗರದ ವಾರ್ದಾ ಅಪಾರ್ಟ್ಮೆಂಟಿನಲ್ಲಿ ಆರ್ ಡಿ ಪಾಟೀಲ್ ಇರುವ ಮಾಹಿತಿ ಅಫ್ಜಲ್ಪುರ್ ಠಾಣೆಯ ಸಿಪಿಐ ಪಂಡಿತ್ ಸಾಗರ್ ಅವರಿಗೆ ತಲುಪಿತ್ತು. ಆದರೆ, ಅವರು ತಡವಾಗಿ ಅಪಾರ್ಟ್ಮೆಂಟ್ ಗೆ …

Read More »

1500 ಕ್ವಿಂಟಾಲ್ ಅನ್ನ ಭಾಗ್ಯ ಅಕ್ಕಿ ಗೋದಾಮಿನಲ್ಲೇ ಮಾಯ

ರಾಮನಗರ: ಚನ್ನಪಟ್ಟಣದಲ್ಲಿ 1500 ಕ್ವಿಂಟಾಲ್ ಅಕ್ಕಿ ಗೋಲ್ ಮಾಲ್ ಆಗಿರುವುದು ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗೆ ಸಗಟು ಪಡಿತರ ಧಾನ್ಯ ವಿತರಣೆ ಮಾಡುತ್ತಿದ್ದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ಅಪಾರ ಪ್ರಮಾಣದ ಅಕ್ಕಿ ನಾಪತ್ತೆಯಾಗಿದೆ.   ಗೋದಾಮಿನ ಸಿಬ್ಬಂದಿಯಿಂದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಸ್ಥಳಕ್ಕೆಅಹಾರ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. 50 ಲಕ್ಷ ರೂ.ಗೂ ಹೆಚ್ಚು …

Read More »

ಎಲ್ಲರಿಗೂ ಗ್ಯಾರಂಟಿ ಲಾಭ ತಲುಪಿಸಿ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ” ಗ್ಯಾರಂಟಿಗಳು ಜನರಿಗೆ ತಲುಪುತ್ತಲೇ ಇಲ್ಲ. ಸರ್ಕಾರದ ನುಡಿದಂತೆ ನಡೆಯುತ್ತಿಲ್ಲ” ಎಂದು ಪ್ರತಿಪಕ್ಷಗಳ ಆರೋಪದ ಬೆನ್ನಲ್ಲೇ ನಾಲ್ಕೂ ಯೋಜನೆಗಳ ಇಲಾಖೆಗಳ ಅಧಿಕಾರಿಗಳ ಜತೆಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದಾರೆ. ಯಾರೊಬ್ಬ ಫ‌ಲಾನುಭವಿಯೂ “ಗ್ಯಾರಂಟಿ’ಗಳಿಂದ ವಂಚಿತವಾಗಬಾರದು. ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಬಗೆಹರಿಸಿ, ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಸೇರಿದಂತೆ ನಾಲ್ಕೂ …

Read More »

B.Ed ಆಗದೆ ವೃತ್ತಿಗೆ ಕಂಟಕ- ಅಡಕತ್ತರಿಯಲ್ಲಿ ಅನುದಾನಿತ PU ಉಪನ್ಯಾಸಕರು

ಮಂಗಳೂರು: ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಬಿಎಡ್‌ ಆಗದೆ ಇದ್ದರೂ 2008ರ ಬಳಿಕ ನೇಮಕಗೊಂಡಿರುವ ಉಪನ್ಯಾಸಕರಿಗೆ ಈಗ ವೃತ್ತಿ ಕಂಟಕ ಎದುರಾಗಿದೆ. 2008ರ ಮೊದಲು ಉಪನ್ಯಾಸಕ ರಾಗಿ ಸೇರಿರುವವರಿಗೆ ಬಿಎಡ್‌ನಿಂದ ರಿಯಾಯಿತಿ ಇದೆ. ಜತೆಗೆ ಸರಕಾರಿ ಉಪನ್ಯಾಸಕರಿಗೆ ವೇತನ ಸಹಿತವಾಗಿ ಬಿಎಡ್‌ ಅಭ್ಯಾಸಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಮಾಹಿತಿ ಕೊರತೆಯಿಂದ ಹಾಗೂ 2008ರ ಆಸುಪಾಸಿನಲ್ಲೇ ವೃತ್ತಿಗೆ ಸೇರಿದ ರಾಜ್ಯದ ಸುಮಾರು 1,200ಕ್ಕೂ ಅಧಿಕ (ದಕ್ಷಿಣ ಕನ್ನಡ, ಉಡುಪಿಯಲ್ಲಿ 80) ಅನುದಾನಿತ ಉಪನ್ಯಾಸಕರು …

Read More »

ಬಾಲ್ಯ ವಿವಾಹ ಅಕ್ಷಮ್ಯ ಅಪರಾಧ-ಡಾ| ಮೈತ್ರೇಯಿಣಿ

ಬೆಟಗೇರಿ: ವಿದ್ಯಾರ್ಥಿ ಜೀವನ ಅಮೂಲ್ಯವಾದದು, ಶಾಲಾ ಮಕ್ಕಳು ಕಲಿಕಾ ಬದುಕು ಸದುಪಯೋಗ ಮಾಡಿಕೊಂಡು ಸಾಧನೆ ಮಾಡಬೇಕು. ಪಾಲಕರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೂಡಿಸಲು ಮೊದಲು ಆದ್ಯತೆ ನೀಡಬೇಕು. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ ಎಂದು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ಮತ್ತು ಸಾಹಿತಿ ಡಾ| ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.   ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ. 20ರಂದು ನಡೆದ ಮಾತೆಯರ ಸಮಾಗಮ ಹಾಗೂ ಬಾಲ್ಯ …

Read More »

ಮರಳು ತುಂಬಿದ ಟ್ರ್ಯಾಕ್ಟರ್ ತರಬೇಡಿ ಎಂದಿದ್ದಕ್ಕೆ ರೈತರ ಮೇಲೆ ಹಲ್ಲೆ ?

ಹಾವೇರಿ : ಜಮೀನಿನ ಪೈಪ್​ಲೈನ್ ಮೇಲೆ ಮರಳು ಟ್ರ್ಯಾಕ್ಟರ್​ ತರಬೇಡಿ ಎಂದಿದ್ದಕ್ಕೆ ರೈತನ ಮೇಲೆ ಹಲ್ಲೆ ಮಾಡಿರುವ ಆರೋಪ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದಲ್ಲಿ ಕೇಳಿಬಂದಿದೆ. ಹಲ್ಲೆಗೊಳಗಾದ ರೈತನನ್ನ 33 ವರ್ಷದ ಗೋಪಾಲಕೃಷ್ಣ ಐರಣಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ನೀರು ಹಾಯಿಸಲು ಹೋದಾಗ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಗೋಪಾಲಕೃಷ್ಣ ಅವರು ಆರೋಪಿಸಿದ್ದಾರೆ. ಜಮೀನಿನಲ್ಲಿನ ಪೈಪ್​ಲೈನ್ ಒಡೆಯುತ್ತವೆ. ಮರಳು ತುಂಬಿದ …

Read More »

ಹಳೆ ವಿದ್ಯಾರ್ಥಿಗಳಿಂದ ಶಾಲೆಯ ದುರಸ್ತಿ ಒಂದು ಕೋಟಿ 18 ಲಕ್ಷ ರೂಪಾಯಿ ಹಣ ನೀಡಿದ ಮಾಜಿ ವಿದ್ಯಾರ್ಥಿಗಳು

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಐತಿಹಾಸಿಕ ಹಿನ್ನೆಲೆ ಇರುವ ಗ್ರಾಮ. ಇಲ್ಲಿಯ ಕಾಂತೇಶ ದೇವಸ್ಥಾನ ವಿಶ್ವಪ್ರಸಿದ್ದಿಯಾಗಿದೆ. ಈ ಗ್ರಾಮದಲ್ಲಿ135 ವರ್ಷಗಳ ಹಿಂದೆ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಇತ್ತು. ಈ ಶಾಲೆ ಕಳೆದ ಕೆಲವರ್ಷಗಳಿಂದ ಮಳೆಗಾಲದಲ್ಲಿ ಸೋರಲಾರಂಭಿಸಿದೆ. ಮಳೆಯಿಂದ ಶಾಲೆ ಹಾಳಾಗಲಾರಂಭಿಸಿದೆ. ಪರಿಣಾಮ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಮಳೆಯಿಂದ ಹಾಳಾದ ಶಾಲೆಯೊಳಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹೋಗಲು ಹೆದರಲಾರಂಭಿಸಿದ್ದಾರೆ. ಪರಿಣಾಮ ಶಾಲೆಯ ಅಕ್ಕಪಕ್ಕದಲ್ಲಿದ್ದ ಮರಗಳ ನೆರಳಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ …

Read More »

ಆಸ್ತಿ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರವಾಗಿ ಹತ್ಯೆ

ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ. ಬಗಡಗೇರಿ ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ದಾಸಪ್ಪನವರ ಹತ್ಯೆಯಾದವರು. ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ: ಇತ್ತೀಚಿಗೆ, ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ …

Read More »

ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್​​ ನೋಟಿಸ್

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …

Read More »