Breaking News

Monthly Archives: ನವೆಂಬರ್ 2023

ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಹೇಳಿಕೆ

ಮಂಗಳೂರು: ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ, ವಿಪಕ್ಷನಾಯಕನ ಆಯ್ಕೆ ನಡೆದಿರುವ ಬೆನ್ನಲ್ಲೇ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ ತಾರಕ್ಕೇರಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಹಾಗೂ ಸತೀಶ್ ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಇದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಹುದ್ದೆ ಬೇಡಿಕೆ ಇಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹಸ್ತದ ಒಳಗೆ ಹಸ್ತದ ಆಪರೇಷನ್ …

Read More »

ವಿಜಯೇಂದ್ರ ಇನ್ನು ಮಗು, : ಚಲುವರಾಯಸ್ವಾಮಿ

ಮಂಡ್ಯ: “ರಾಜ್ಯದ 226 ತಾಲೂಕುಗಳನ್ನು ಬರಗಾಲಪೀಡಿತ ತಾಲೂಕುಗಳು ಎಂದು ಘೋಷಿಸಿದ್ದೇವೆ. ಈಗ ಹಂತ ಹಂತವಾಗಿ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಪರಿಹಾರ ಕೊಡುವ ಹಂತಕ್ಕೆ ಬಂದಿದ್ದೇವೆ” ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಮಳವಳ್ಳಿಯ ಹಲಗೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಘೋಷಣೆಯನ್ನು ನಾವು ಕಾಯುತ್ತಿದ್ದೇವೆ. ನಂತರ ನಾವು ಕ್ಯಾಬಿನೆಟ್​ನಲ್ಲಿ ರೈತರಿಗೆ ಏನು ಮಾಡಬೇಕು ಎಂದು ತೀರ್ಮಾನ ಕೈಗೊಳ್ಳುತ್ತೇವೆ ” ಎಂದು ಹೇಳಿದರು. “ರಾಜ್ಯದ ಜನರಿಗೆ ವಿವಿಧ ರೀತಿಯಲ್ಲಿ ಪರಿಹಾರ ನೀಡಲು …

Read More »

ಅರ್ಥಪೂರ್ಣವಾಗಿ ಬೆಳಗಾವಿ ಅಧಿವೇಶನ ನಡೆಸಬೇಕಿದೆ- ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆಗಳನ್ನು ನಡೆಸದಂತೆ ಸಂಘಟನೆಗಳ ಮನವೊಲಿಸಲು ಕೋರಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರುಗಳಿಗೆ ಸಲಹಾ ಪತ್ರ ಬರೆದಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023ರಿಂದ ಡಿಸೆಂಬರ್ 15ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊರಟ್ಟಿ ಅವರು ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ …

Read More »

ಬ್ಯಾಡ್ ಮ್ಯಾನರ್ಸ್’ ಸಿನಿಮಾ ಪ್ರಚಾರಾರ್ಥವಾಗಿ ಉತ್ತರ ಕರ್ನಾಟಕಕ್ಕೆ ಭೇಟಿ ಕೊಟ್ಟಿರೋದು ಖುಷಿ: ಅಭಿಷೇಕ್ ಅಂಬರೀಶ್​

ಬೆಳಗಾವಿ: ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಪ್ರಚಾರಾರ್ಥವಾಗಿ ಉತ್ತರ ಕರ್ನಾಟಕಕ್ಕೆ ಭೇಟಿ ಕೊಟ್ಟಿರೋದು ಖುಷಿ ವಿಚಾರ. ಇದೇ 24ಕ್ಕೆ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗುತ್ತಿದ್ದು, ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸುವಂತೆ ನಟ ಅಭಿಷೇಕ್ ಅಂಬರೀಶ್​ ಕೋರಿದರು. ಬೆಳಗಾವಿ ಖಾಸಗಿ ಹೊಟೇಲ್​​ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಅಭಿಷೇಕ್ ಅಂಬರೀಶ್, ಬ್ಯಾಡ್ ಮ್ಯಾನರ್ಸ್​​ನಲ್ಲಿ ಬೆಳಗಾವಿ ಜಿಲ್ಲೆಯವರು ಅಭಿನಯಿಸಿದ್ದಾರೆ. ಕಲಾವಿದರು ಇಲ್ಲಿಗೆ ಬರೋದಿಲ್ಲ ಎಂಬ ದೂರು ಇದೆ. ಹೀಗಾಗಿ ಬೆಳಗಾವಿಗೆ ಬಂದು ಪ್ರಚಾರ …

Read More »

“ಕೊಲ್ಲಾಪುರಿ ಬ್ರಾಂಡ್​ನ ಚಪ್ಪಲಿ ತಯಾರಾಗುವುದು ಅಥಣಿಯಲ್ಲಿ. ಆದರೆ ಹೆಸರು ಬಂದಿದ್ದು ಮಾತ್ರ ಕೊಲ್ಲಾಪುರ್ ಅಂತ

ಚಿಕ್ಕೋಡಿ(ಬೆಳಗಾವಿ): ದೇಶ, ವಿದೇಶಗಳಲ್ಲಿ ಹೆಸರುವಾಸಿಯಾಗಿರುವ ಕೊಲ್ಲಾಪುರ್ ತೊಗಲಿನ ಚಪ್ಪಲಿ ತಯಾರಕರ ಪರಿಸ್ಥಿತಿ ಸದ್ಯ ದುಸ್ಥಿತಿಯಾಗಿದ್ದು, ಸರ್ಕಾರವು ಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಮೋದ್ಯೋಗ ನಡೆಸುತ್ತಿರುವ ಕುಟುಂಬಗಳ ಕುರಿತು ಚರ್ಚಿಸಿ ನಮಗೆ ನ್ಯಾಯ ಒದಗಿಸಿ ಕೊಡಬೇಕೆಂದು ಕುಶಲಕರ್ಮಿಗಳು ಒತ್ತಾಯಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಧುಬಾವಿ ಗ್ರಾಮ ಹಾಗೂ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಪ್ಪಲಿಯನ್ನು ತಯಾರಿಸಿ ಮಾರುಕಟ್ಟೆಗಳಿಗೆ ಮಾರಾಟ ಮಾಡುತ್ತಾರೆ. ಆದರೆ ಆಧುನಿಕತೆಯಿಂದ ದಿನದಿನಕ್ಕೆ ಚರ್ಮದಿಂದ ತಯಾರಿಸಿದ ಚಪ್ಪಲಿ ಬೇಡಿಕೆ ಕಡಿಮೆಯಾಗುತ್ತಿದ್ದು ಮತ್ತು …

Read More »

ಬೆಳಗಾವಿ ಅಧಿವೇಶನ: ₹300 ಕೋಟಿ ವೆಚ್ಚದಲ್ಲಿ ಶಾಸಕರು, ಅಧಿಕಾರಿಗಳ ವಾಸ್ತವ್ಯಕ್ಕೆ ಪಂಚತಾರಾ ಹೊಟೇಲ್​ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರು: ಪ್ರತಿವರ್ಷ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ ಕೋಟಿ ಕೋಟಿ ಲೆಕ್ಕದಲ್ಲಿ ಹಣ ಖರ್ಚು ಮಾಡಲಾಗುತ್ತದೆ. ಇದೀಗ ಇಂಥ ಖರ್ಚು ಕಡಿಮೆಗೊಳಿಸುವುದು, ವಾಸ್ತವ್ಯದ ಅನಾನುಕೂಲತೆ, ವೆಚ್ಚವನ್ನು ತಗ್ಗಿಸಲು ಬೆಳಗಾವಿ ಸುವರ್ಣಸೌಧದ ಸಮೀಪದಲ್ಲೇ ಪಂಚತಾರಾ ಹೊಟೇಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಡಿ.4 ರಿಂದ ಡಿ.15 ರವರೆಗೆ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕಳೆದ ವರ್ಷ ನಡೆದ ಅಧಿವೇಶನಕ್ಕೆ ಅಂದಾಜು …

Read More »

ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ರದ್ದು

ಹುಬ್ಬಳ್ಳಿ: ಉತ್ತರ ಕರ್ನಾಟಕ ಜನರ ಅಚ್ಚುಮೆಚ್ಚಿನ ರೈಲು ಎಂದೇ ಖ್ಯಾತಿ ಗಳಿಸಿದ್ದ ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲಿನ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವೇಗದೂತದಂತೆ ಬರುತ್ತಿದ್ದ ಈ ರೈಲು ಅಂದರೆ ಎಲ್ಲರಿಗೂ ಅಚ್ಚು-ಮೆಚ್ಚು. ಆದರೆ, ಏಕಾಏಕಿ ಈ ರೈಲು ಸಂಚಾರವನ್ನು ರದ್ದು ಮಾಡಿ ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು-ಹುಬ್ಬಳಿ ಸೂಪರ್ ಫಾಸ್ಟ್ ರೈಲು ಉತ್ತರ ಕರ್ನಾಟಕ ಮಂದಿಗೆ ಅತಿ ವೇಗದ ರೈಲು. ಈ ರೈಲು ಅಂದ್ರೆ ಈ …

Read More »

ನಿಗಮ, ಮಂಡಳಿ ನೇಮಕಾತಿ ಗೊಂದಲ ಸಿಎಂ, ಡಿಸಿಎಂ ನಡುವೆ ಒಮ್ಮತ ಮೂಡಿಸಲು ಸುರ್ಜೇವಾಲ ಕಸರತ್ತು

ಬೆಂಗಳೂರು: ನಿಗಮ, ಮಂಡಳಿ ನೇಮಕಾತಿ ಗೊಂದಲ ಮುಂದುವರಿದಿದೆ. ಮಂಗಳವಾರ ತಡರಾತ್ರಿಯವರೆಗೆ ರಣದೀಪ್ ಸಿಂಗ್ ಸುರ್ಜೇವಾಲ ಖಾಸಗಿ ಹೊಟೇಲ್​ನಲ್ಲಿ ನಿಗಮ, ಮಂಡಳಿಗಳಿಗೆ ನೇಮಕಾತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಸಮಾಲೋಚಿಸಿದ್ದಾರೆ. ಈ ಸಂದರ್ಭದಲ್ಲಿ ಸುರ್ಜೇವಾಲ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅಭಿಪ್ರಾಯ ಆಲಿಸಿದರು. ಸುದೀರ್ಘವಾಗಿ ಚರ್ಚಿಸಿದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ನಿಗಮ, ಮಂಡಳಿ ನೇಮಕಾತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ತೀವ್ರಗೊಂಡಿದೆ. …

Read More »

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ(ಸಿಎಸ್‌) ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಸದ್ಯಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗೋಯಲ್, ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸುವರು. ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಹಿರಿತನದ ಆಧಾರದಡಿ ರಜನೀಶ್‌ ಗೋಯಲ್‌ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ …

Read More »

ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದನ್ನ ಪ್ರಶ್ನಿಸಿ ನಾನು ಕೋರ್ಟ್​ಗೆ ಹೋಗುತ್ತೇನೆ: ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್​ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದು ತಪ್ಪು. ಹಾಗೂ ವಜಾಗೊಳಿಸಬೇಕೆಂದಿದ್ದರೆ ಸಭೆ ಕರೆದು 2/3 ಬೆಂಬಲದೊಂದಿಗೆ ಮಾಡಬೇಕು. ಯಾವುದೇ ನಿಯಮ ಪಾಲನೆ ಮಾಡದೇ ನನ್ನನ್ನು ಏಕಾಏಕಿ ಸ್ಥಾನದಿಂದ ತೆಗೆದು ಹಾಕಿದ್ದಾರೆ. ಈ ಬಗ್ಗೆ ನಾನು ಕೋರ್ಟ್​ಗೆ ಹೋಗುತ್ತೇನೆ ಎಂದು ಹಿರಿಯ ರಾಜಕೀಯ ಮುಖಂಡ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್​ನಿಂದ ಅಮಾನತು ಮಾಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇನ್ನು ಏನು ಉಚ್ಚಾಟನೆ ರೀ, …

Read More »