ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆಯಿಂದ ಹೊರ ನಡೆದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್ ಮಾಡಿರುವ ಯತ್ನಾಳ್ ಅವರು, “ನ ದೈನ್ಯಂ, ನ ಪಲಾಯನಂ… ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಸರಳವಾಗಿ ಸವಾಲುಗಳು.” ಎಂದು …
Read More »Monthly Archives: ನವೆಂಬರ್ 2023
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 71 ‘ಪೊಲೀಸ್ ಇನ್ಸ್ ಪೆಕ್ಟರ್’ ಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದು ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ …
Read More »ಹೋರಿ ಬೆದರಿಸುವ ಸ್ಪರ್ಧೆ ವೇಳೆ ಗಲಾಟೆ ಯುವಕನ ಮೇಲೆ ಹಲ್ಲೆ
ಹಾವೇರಿ: ತಾಲೂಕಿನ ಕೋಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ದೀಪಾವಳಿ ನಿಮಿತ್ತ ಕೋಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನವೆಂಬರ್ 14ರಂದು ನಡೆದ ಸ್ಪರ್ಧೆ ವೇಳೆ ಯುವಕನೊಬ್ಬ ಬಿಟ್ಟ ಹೋರಿಯನ್ನು ಮತ್ತೊಂದು ಗುಂಪಿನ ಯುವಕ ಹಿಡಿದಿರುವುದೇ ಗಲಾಟೆಗೆ ಕಾರಣವಾಗಿದೆ. ಯುವಕ ಕುಮಾರ್ ಹೋರಿ ಹಿಡಿದಿದ್ದರಿಂದ ಆಕ್ರೋಶಗೊಂಡ ಮತ್ತೋರ್ವ ಯುವಕ, ನ.16 ರಂದು ತನ್ನ ಸ್ನೇಹಿತರನ್ನು ಕರೆದುಕೊಂಡು ಬಂದು ಮನಬಂದಂತೆ ಥಳಿಸಿದ್ದರು. …
Read More »14 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ 8 ಕೋಟಿ 72 ಲಕ್ಷ ರೂ ಆದಾಯ
ಹಾಸನ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ತೆರೆದಿದ್ದು, 14 ದಿವಸಗಳ ಕಾಲ ದರ್ಶನದ ಭಾಗ್ಯ ಇರುವುದರಿಂದ ಭಕ್ತರಿಂದ ಟಿಕೆಟ್, ಲಾಡು ಮಾರಾಟ, ಕಾಣಿಕೆ ಮತ್ತು ಇ-ಹುಂಡಿಯಿಂದ ಸುಮಾರು 8 ಕೋಟಿ 72 ಲಕ್ಷದ 41 ಸಾವಿರದ 531 ರೂ. ಆದಾಯ ಸಂಗ್ರಹ ಆಗುವ ಮೂಲಕ ಹಾಸನಾಂಬೆ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಇತಿಹಾಸ ಸೃಷ್ಟಿಸಿದೆ. ಹಾಸನಾಂಬೆ ದೇವಿ ಮತ್ತು ಶ್ರೀ ಸಿದ್ದೇಶ್ವರ ದೇವಾಲಯದ …
Read More »ತೆಲಂಗಾಣದಲ್ಲಿ ಕಾಂಗ್ರೆಸ್ ಮೋದಿಯವರ ವಾಹನದ ಟೈರ್ ಪಂಕ್ಚರ್ ಮಾಡಿದೆ.: ರಾಹುಲ್ ಗಾಂಧಿ
ವಾರಂಗಲ್ (ತೆಲಂಗಾಣ): ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದರೊಂದಿಗೆ ರಾಜಕೀಯ ಪಕ್ಷಗಳ ನಾಯಕರ ನಡುವೆ ಮಾತಿನ ಸಮರ ತೀವ್ರವಾಗಿದೆ. ತೆಲಂಗಾಣ ವಿಧಾನಸಭಾ ಚುನಾವಣೆಗೆ 15 ದಿನ ಬಾಕಿ ಇದೆ. ಇಂದು ಪೂರ್ವ ವಾರಂಗಲ್‌ನಲ್ಲಿ ರೋಡ್‌ಶೋ ನಡೆಸಿ ಜನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಬಿಆರ್‌ಎಸ್ ಎರಡೂ ಒಂದೇ. ಒಂದು ಪಕ್ಷ ದೆಹಲಿಯಲ್ಲಿ ಮತ್ತು ಇನ್ನೊಂದು ಪಕ್ಷ …
Read More »ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!
ಬೆಂಗಳೂರು: ಈವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ಮಾಡಿ ಕಾಂಗ್ರೆಸ್ ಟೀಕೆ ಗುರಿಯಾಗಿದ್ದ ಬಿಜೆಪಿ ಕೊನೆಗೂ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರಿಗೆ ವಿಪಕ್ಷ ನಾಯಕನಾಗಿ ಪ್ರಮುಖ ಜವಾಬ್ದಾರಿ ನೀಡಿದೆ. ಆದ್ರೆ ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ವಿಪಕ್ಷ ನಾಯಕ ಸಂಬಂಧ ಸರಣಿ ಎಕ್ಸ್ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ವಿರೋಧ …
Read More »ನಾನು, ವಿಜಯೇಂದ್ರ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ, ಲೋಕಸಭೆಯ 28 ಸ್ಥಾನಗಳನ್ನೂ ಗೆಲ್ಲುತ್ತೇವೆ:
ಬೆಂಗಳೂರು: ವಿಜಯೇಂದ್ರ ಹಾಗೂ ನನಗಿಬ್ಬರಿಗೂ ಹೊಸ ಜವಾಬ್ದಾರಿ ಸಿಕ್ಕಿದೆ. ವರಿಷ್ಠರು ಲೋಕಸಭಾ ಕ್ಷೇತ್ರದಲ್ಲಿ ಎಲ್ಲ 28 ಕ್ಷೇತ್ರಗಳು ಎನ್.ಡಿ.ಎ ಮೈತ್ರಿಕೂಟದ ಪಾಲಾಗಬೇಕು ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕು ಎನ್ನುವ ಟಾಸ್ಕ್ ನೀಡಿದ್ದಾರೆ. ನಾವಿಬ್ಬರೂ ಯಾವುದೇ ವಿವಾದಗಳಿಲ್ಲದೇ, ಜೋಡೆತ್ತುಗಳಂತೆ ಕೆಲಸ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ …
Read More »ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಪುನೀತ್ ಹೆಸರಿಡುವಂತೆ ಬಿಬಿಎಂಪಿಗೆ ರಾಜ್ಯ ಸರ್ಕಾರದ ಸೂಚನೆ
ಪುನೀತ್ ರಾಜ್ ಕುಮಾರ್ ಅವರ ಹೆಸರು ನಾಮಕರಣ ಮಾಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ಆದೇಶ ಪತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ನಾಡು ಕಂಡ ಶೇಷ್ಠ ಕಲಾವಿದ, ಹೃದಯ ಶ್ರೀಮಂತ, ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ ಸವಿನೆನಪಿನಲ್ಲಿ ಪುನೀತ್ ರಾಜ್ ಕುಮಾರ್ ಶುದ್ಧ ಕುಡಿಯುವ ನೀರಿನ ಘಟಕ ಎಂದು ಈ …
Read More »ಬ್ಲ್ಯಾಕ್ಮೇಲ್ ಮಾಡುವವರಿಗೆ ನಾನು ಹೆದರಲ್ಲ – ವಿಜಯೇಂದ್ರ, ಬಿಎಸ್ವೈ ಬಗ್ಗೆ ಮಾತಾಡಲ್ಲ: ಯತ್ನಾಳ್
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಹೊಂದಾಣಿಕೆ ರಾಜಕಾರಣ, ಕುಟುಂಬದ ಹಿಡಿತ, ಬ್ಲ್ಯಾಕ್ಮೇಲ್ ರಾಜಕಾರಣವನ್ನೆಲ್ಲಾ ಹೈಕಮಾಂಡ್ ಪ್ರತಿನಿಧಿಗಳ ಮುಂದೆ ಬಯಲು ಮಾಡಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ನಾನು ಧೈರ್ಯವಾಗಿ ಇರುವ ಸತ್ಯವನ್ನೇ ಹೇಳುತ್ತೇನೆ. ಪ್ರತಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ಕೊಡುವಂತೆ ಕೇಳುತ್ತೇನೆ. ಒಂದು ವೇಳೆ ಉತ್ತರ ಕರ್ನಾಟಕಕ್ಕೆ ಅವಕಾಶ ನೀಡದಿದ್ದಲ್ಲಿ ಜನರು ಮುಂದೆ ಉತ್ತರ ನೀಡಲಿದ್ದಾರೆ. ನಾನೂ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ …
Read More »ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆ ಸಿ ಎಂ ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಅಮಾನತು ಆದೇಶಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ), ಹಿಂದಿನ ಮಹಾಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಬೋಜೇಗೌಡ ಅವರು ದಿನಾಂಕ: 19-10-2023ರ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್ ಪ್ರಸ್ತುತ ಕಾರ್ಯಕಾರಿ ಸಮಿತಿ, …
Read More »