ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ ಗೋಕಾಕ : ದೀಪಾವಳಿ ಹಬ್ಬದ ನಿಮಿತ್ತ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರಿಂದ ನಗರ ಸಭೆ ಪೌರ ಕಾರ್ಮಿಕರಿಗೆ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ಅನೇಕ ನೌಕರರಿಗೆ ಸಿಹಿ ವಿತರಿಸಿದರು.
Read More »Monthly Archives: ನವೆಂಬರ್ 2023
ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ. ಹಳೆ ವೈಷಮ್ಯದಿಂದ ಹತ್ಯೆ ಶಂಕೆ.
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ 9:30ರ ಸುಮಾರಿಗೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳ ಗುಂಪು, ಸಹದೇವ್ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಡಿದ್ದಾರೆ. ಕೊಲೆಯಾದ ವ್ಯಕ್ತಿ ಕೋಣನಕುಂಟೆ …
Read More »ದಾರಿತಪ್ಪಿ ಎರಡು ರಾತ್ರಿ, ಹಗಲು ಕಾಡಿನಲ್ಲಿ ವಾಸ: ಸುರಕ್ಷಿತವಾಗಿ ಮನೆ ಸೇರಿದ 85 ವರ್ಷದ ವೃದ್ಧೆ
ಶಿವಮೊಗ್ಗ: ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧೆ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಹೊಸನಗರ ತಾಲೂಕಿನ ಸಾದಗಲ್ಲು ಗ್ರಾಮದಲ್ಲಿ ನಡೆದಿದೆ. ಶಾರದಮ್ಮ (85) ಎಂಬ ವೃದ್ಧೆಯು ಹೊಸನಗರ ತಾಲೂಕಿನ ಸಾದಗಲ್ಲು ಗ್ರಾಮದ ನಿವಾಸಿ. ಇವರು ಕಳೆದ ಭಾನುವಾರ ಮನೆ ಹಿಂಭಾಗದ ತೋಟಕ್ಕೆಂದು ಹೋಗಿ ನಾಪತ್ತೆಯಾಗಿದ್ದರು. ಭಾನುವಾರ ರಾತ್ರಿಯಾದರೂ ಮನೆಗೆ ಶಾರದಮ್ಮ ಬಾರದ ಕಾರಣ ಮನೆಯವರು ಹುಡುಕಾಟ ಪ್ರಾರಂಭಿಸಿದ್ದರು. ಆದರೆ ಎಲ್ಲೂ ಪತ್ತೆ ಆಗಿರಲಿಲ್ಲ. ನಂತರ ಕುಟುಂಬಸ್ಥರು ಬೆಳಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು …
Read More »ಹುಬ್ಬಳ್ಳಿ: ಗುಡಗೇರಿ ಠಾಣೆಯ ಎಎಸ್‌ಐ ಆತ್ಮಹತ್ಯೆ
ಹುಬ್ಬಳ್ಳಿ: ಎಎಸ್‌ಐ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡ ಎಎಸ್‌ಐ ಆಗಿದ್ದಾರೆ. ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು. ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ತಕ್ಷಣ ಕುಟುಂಬಸ್ಥರು ಅವರನ್ನು ಲಕ್ಷೇಶ್ವರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟೊತ್ತಿಗಾಗಲೇ …
Read More »ಬೆಂಗಳೂರಿಗೆ ಕುಡಿಯಲು 24 ಟಿಎಂಸಿ ಕಾವೇರಿ ನೀರು ಮೀಸಲಿರಿಸಿ ಆದೇಶ: ಡಿ.ಕೆ. ಶಿವಕುಮಾರ್
ಬೆಂಗಳೂರು/ ನವದೆಹಲಿ: ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಕಾವೇರಿ ನೀರನ್ನು ಮೀಸಲಿಡಲು ಮತ್ತು ಬಿಡಬ್ಲ್ಯೂಎಸ್ಎಸ್ಬಿ ಅದನ್ನ ಬಳಸಿಕೊಳ್ಳಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು. “2018ರಲ್ಲಿ ಸುಪ್ರೀಂಕೋರ್ಟ್ ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 24 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ಎಂದು ನಿಗದಿ ಮಾಡಿತ್ತು. ಆದರೆ, …
Read More »ಕೊಪ್ಪಳದಿಂದ ಹೊಸಪೇಟೆ ಕಡೆ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಮುನಿರಾಬಾದ್ ಬಳಿ ತುಂಗಭದ್ರಾ ನದಿ ಸೇತುವೆ ಮೇಲಿಂದ ಕೆಳಗುರಳಿ ಬಿದ್ದಿದೆ.
ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ನದಿ ಸೇತುವೆ ಮೇಲಿಂದ ಲಾರಿ ಉರುಳಿ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಕೊಪ್ಪಳದಿಂದ ಹೊಸಪೇಟೆ ಕಡೆ ಹೊರಟಿದ್ದ ಲಾರಿ ಅತಿಯಾದ ವೇಗದಿಂದಾಗಿ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಚಾಲಕ ಜಾರ್ಕಂಡ್ ರಾಜ್ಯದ ಭರತ ಸಿಂಗ್ (42) ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ …
Read More »ಅಧಿಕೃತ ದಾಖಲೆಗಳನ್ನ ತೋರಿಸಲಿ, ತಪ್ಪು ಸಾಬೀತಾದರೆ ಹುದ್ದೆ ತೊರೆಯುತ್ತೇನೆ: ಷಡಕ್ಷರಿ ಪ್ರತಿಕ್ರಿಯೆ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ತಮ್ಮ ವರ್ಗಾವಣೆ ಕುರಿತಂತೆ ಈ ಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ. ವರ್ಗಾವಣೆ ಹಾಗೂ ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಅವರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ. ”ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳ ಅಧಿಕೃತ ದಾಖಲಾತಿ ತೋರಿಸಲಿ. ಒಂದೊಮ್ಮೆ ತಪ್ಪು ಎಸಗಿರುವುದು ಸಾಬೀತಾದರೆ ಹುದ್ದೆಯನ್ನೇ ತೊರೆಯುತ್ತೇನೆ ಎಂದು ಸವಾಲು ಕೂಡಾ ಹಾಕಿದ್ದಾರೆ. ಈ ವರ್ಗಾವಣೆ ಬಗ್ಗೆ ಮುಖ್ಯಮಂತ್ರಿ ಅವರನ್ನ …
Read More »ನವೆಂಬರ್ 26 ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ನವೆಂಬರ್ 26 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 ಅನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದ್ದು, ಡಿಸೆಂಬರ್ 31 ರಂದು ನಡೆಸಲು ಚಿಂತನೆ ನಡೆಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಮೂಲಕ ತಿಳಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 (ಕೆ ಸೆಟ್-2023) ಅನ್ನು ನವೆಂಬರ್ 26 ರಂದು ನಿಗದಿಪಡಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. …
Read More »ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹಾವೇರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಅಪರಾಧ ಸಾಬೀತಾದ ಹಿನ್ನೆಲೆ ಅಣ್ಣಪ್ಪ ಕಬ್ಬೂರು ಎಂಬಾತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ 80 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆರೋಪಿ ಅಣ್ಣಪ್ಪ ಕಬ್ಬೂರು 2019ರ ಸೆ.27ರಂದು …
Read More »ಚಳಿಗಾಲ ಅಧಿವೇಶನಕ್ಕೆ ಬರುವ ಜನಪ್ರತಿನಿಧಿಗಳೇ ನಮ್ಮ ಆತಿಥ್ಯ ಸ್ವೀಕರಿಸಿ: ರೈತರ ವಿಶೇಷ ಮನವಿ
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನಕ್ಕೆ ಬರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಆತಿಥ್ಯ ನೀಡಲು ಜಿಲ್ಲೆಯ ರೈತರು ಸಜ್ಜಾಗಿದ್ದಾರೆ. ಭೀಕರ ಬರಗಾಲ ಹಿನ್ನೆಲೆ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿವೇಶನ ಮುಗಿಯೋವರೆಗೂ ನಮ್ಮ ಮನೆಯಲ್ಲಿ ಇರುವಂತೆ ಬಹಿರಂಗ ಆಹ್ವಾನ ಕೊಟ್ಟಿದ್ದಾರೆ. ಕಂಡು ಕೇಳರಿಯದ ಬರಗಾಲ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಕ್ಷೇತ್ರಗಳಿಗೆ ಅನುದಾನ ನೀಡಲು ಸರ್ಕಾರ ಪರದಾಡುತ್ತಿದೆ. ಈ ನಡುವೆ ಬೆಳಗಾವಿಯ …
Read More »