Breaking News

Monthly Archives: ನವೆಂಬರ್ 2023

ಹಿರಿಯ ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕನ ಬಂಧನ

ಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. (45) ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರ್ ಅವರು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಆರೋಪಿ ಕಿರಣ್ ಕಳೆದ ಎಂಟು ವರ್ಷಗಳಿಂದ ಗಣಿ ಇಲಾಖೆ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ‌ನಾಲ್ಕು …

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಈರಣ್ಣ ಕಡಾಡಿ

ಬೆಳಗಾವಿ : ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ಇದೇ ತಿಂಗಳು 10ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅದಕ್ಕೂ ಮಣಿಯದಿದ್ದರೆ ಚಳಿಗಾಲ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕಂಗಾಲದ …

Read More »

ಪೊಲೀಸರ ದಾಳಿ: ಜೂಜಾಟದಲ್ಲಿ ತೊಡಗಿದ್ದ 70 ಮಂದಿ ಬಂಧನ

ಬೈಲಹೊಂಗಲ ಪಟ್ಟದ ಲಾಡ್ಜ್​ವೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದ ಹಲವರನ್ನು ಬಂಧಿಸುವಲ್ಲಿ ಬೆಳಗಾವಿಯ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ.   ಬೆಳಗಾವಿ: ಜಿಲ್ಲಾ ಸಿಇಎನ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ರಾಜಾರೋಷವಾಗಿ ನಡೆಸುತ್ತಿದ್ದ ಅಂದರ್ ಬಾಹರ್ ಜೂಜು ಅಡ್ಡೆ ಮೇಲೆ ದಾಳಿ ಮಾಡಿ 70 ಮಂದಿಯನ್ನು ಬಂಧಿಸಲಾಗಿದೆ. ಬೈಲಹೊಂಗಲ ಪಟ್ಟಣದ ಸಂಸ್ಕೃತ ಬಾರ್ ಆಂಡ್ ಲಾಡ್ಜ್​ನಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ (ಭಾನುವಾರ) ರಾತ್ರಿ ದಾಳಿ ಮಾಡಿದ ಸಿಇಎನ್ ಇನ್ಸ್​ಪೆಕ್ಟರ್​​ ಬಿ.ಆರ್.ಗಡ್ಡೇಕರ …

Read More »

ರಾಜ್ಯದೆಲ್ಲೆಡೆ ಕೃಷಿ ಪಂಪ್​ಸೆಟ್​ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ: ಸಿಎಂ

ಬೆಂಗಳೂರು : ಕೃಷಿ ಪಂಪ್​ಸೆಟ್​ಗೆ ಇನ್ನು ಮುಂದೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೂರು ವಾರಗಳ ಹಿಂದೆ ಇಂಧನ ಇಲಾಖೆಯಲ್ಲಿ ಪರಿಶೀಲನೆ ಮಾಡಲಾಗಿತ್ತು. ಆಗಲೇ ಕೃಷಿ ಪಂಪ್​ಸೆಟ್​ಗೆ ಏಳು ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಆಗ ನಮಗೆ ಐದು ಗಂಟೆ …

Read More »

10 ಕೆಜಿ ಅಕ್ಕಿ ವಿತರಣೆ ಮಾಡೋ ಗುರಿ ಇದೆ.. ಕೇಂದ್ರ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ:ಮುನಿಯಪ್ಪ

ಮೈಸೂರು: “ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತವಾಗಿದ್ದು, ಈಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದರು. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ರಾಜ್ಯದ ಅಯಾ ಭಾಗದ ಜನರ ಆಹಾರ ಪದ್ಧತಿಗೆ …

Read More »

ಮರಳು ಸಮಸ್ಯೆ ಪರಿಹರಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಗುಂಡೂರಾವ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರು ನಗರ ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಮರಳು ಸಮಸ್ಯೆ ಬಗ್ಗೆ ಮಾಡಿರುವ ಆರೋಪಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ …

Read More »

ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ: ಸಚಿವ ಸಂತೋಷ್ ಲಾಡ್

ಹಾವೇರಿ : ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರರಲ್ಲಿ ಮಾತನಾಡಿದ ಅವರು, ಈ ರೀತಿಯ ಹೇಳಿಕೆಗಳಿಗೆ ಸಂಪೂರ್ಣ ತೆರೆ ಎಳೆಯಬೇಕಾಗಿದೆ. ಈ ಕುರಿತಂತೆ ಸಿಎಂ ಮಾತನಾಡುತ್ತಾರೆ. ನಾನಂತೂ ಇದರ ಬಗ್ಗೆ ಮಾತನಾಡುವುದಿಲ್ಲ ಎಂದರು. ಜನರ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾತನಾಡೋಣಾ. ಅಧಿಕಾರ ಹಂಚಿಕೆ, ಬಣ ರಾಜಕೀಯ ಪಕ್ಷ ನೋಡಿಕೊಳ್ಳುತ್ತೆ. ಹೈಕಮಾಂಡ್ ತಾಕೀತು ಮಾಡಿದ ನಂತರ, …

Read More »

ಸತೀಶ್​ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ.: ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ

ಬಾಗಲಕೋಟೆ: “ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ” ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಾಗಲಕೋಟೆ ನವನಗರದ ಕಲಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದ ಸಾನಿಧ್ಯವಹಿಸಿ ಮಾತನಾಡಿದ ಅವರು, “ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸ್ಪಷ್ಟ ಸಂದೇಶವನ್ನು ಕಳುಹಿಸೋಣ” ಎಂದು ಕರೆ ನೀಡಿದರು. “ದಲಿತರು ವೋಟ್​ …

Read More »

ರಾಯಚೂರು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ

ಬಳ್ಳಾರಿ: ಅಗತ್ಯ ಪ್ರಮಾಣದಷ್ಟು ಮಳೆಯಾಗದೆಪರಿಣಾಮಕಲ್ಯಾಣ ಕರ್ನಾಟಕದ ಜಿಲ್ಲೆಗಳು ಬರಗಾಲದಿಂದ ತತ್ತರಿಸಿವೆ. ಹೀಗಾಗಿ ಸಚಿವ ಎನ್‌ ಎಸ್ ಬೋಸರಾಜ್ ಅವರ ಫೌಂಡೇಷನ್ ಮತ್ತು ಶಾಸಕ ಪ್ರಕಾಶ್​ ಕೋಳಿವಾಡ ಅವರ ಪಿಕೆಕೆ ಸಂಸ್ಥೆ ವತಿಯಿಂದ ರಾಯಚೂರಿನಲ್ಲಿ ಮೋಡ ಬಿತ್ತನೆ ಕಾರ್ಯ ಮಾಡಲಾಗುತ್ತಿದೆ. ಇದಕ್ಕಾಗಿ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲಿದೆ. ಸಚಿವ ಎನ್‌ ಎಸ್ ಬೋಸರಾಜ್ ಅವರ ಪುತ್ರ ರವಿ ಬೋಸರಾಜ್ ಮಾತನಾಡಿ, “ಕರ್ನಾಟಕ …

Read More »

ಕಾಂಗ್ರೆಸ್​ನಲ್ಲಿ ಮೂರು ಗುಂಪುಗಳಾಗಿವೆ, ಒಬ್ಬೊಬ್ಬರದು ಒಂದೊಂದು ಗುಂಪು

ಧಾರವಾಡ : ಕಾಂಗ್ರೆಸ್​ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದು ಒಂದೊಂದು ಗುಂಪು. ಪರಮೇಶ್ವರದ್ದು ದಲಿತರ ಗುಂಪು. ಸಿದ್ದರಾಮಯ್ಯನವರದು ಹಿಂದುಳಿದವರ ಗುಂಪು. ಡಿಕೆಶಿಯದ್ದು ಗೌಡರ ಗುಂಪಾಗಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಮೇಶ್ವರ್ ಮನೆಯಲ್ಲಿ ದಲಿತರ ಸಭೆ ಮಾಡುತ್ತಾರೆ‌. ಸಿದ್ದರಾಮಯ್ಯ ಪರವಾಗಿ ಹಿಂದುಳಿದವರ ಸಭೆ ಆಯ್ತು. ಸಿದ್ದರಾಮಯ್ಯ ಪರವಾಗಿ ಡಿನ್ನರ್ ಸಭೆ ಆಗಿತ್ತು. ಆದರೆ ಯಾರೂ ಎಚ್‌.ಕೆ.‌ ಪಾಟೀಲರನ್ನು ಕರೆದಿರಲಿಲ್ಲ. ಅವರೊಬ್ಬ ಪ್ರತಿಷ್ಠಿತ ರಾಜಕಾರಣಿ. …

Read More »