ಬೆಳಗಾವಿ: ”ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ. ಅವರು ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಯತ್ನಾಳ್ ಅವರ ಹೇಳಿಕೆ ವಿರುದ್ಧ ಕಿಡಿಕಾರಿದರು. ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಯತ್ನಾಳ್ …
Read More »Daily Archives: ಡಿಸೆಂಬರ್ 8, 2023
ಕಾರವಾರದ ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ
ಬೆಳಗಾವಿ/ ಬೆಂಗಳೂರು : ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ 450 ಹಾಸಿಗೆ ಸಾಮರ್ಥ್ಯವುಳ್ಳ ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತ ಬೇಡಿಕೆ ಸರ್ಕಾರದಿಂದ ಸ್ವೀಕೃತವಾಗಿದ್ದು, ಇದೀಗ ಪರಿಶೀಲನೆಯಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ್ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಇಂದು ಶಾಸಕ ಸತೀಶ್ ಕೃಷ್ಣ ಸೈಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ …
Read More »ವಿಶೇಷಚೇತನರು, ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ಸಮಸ್ಯೆ ಆಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವಿಆರ್ಡಬ್ಬ್ಯೂ, ಯುಆರ್ಡಬ್ಬ್ಯೂ, ಎಂಆರ್ಡಬ್ಲ್ಯೂಗಳ ಸೇವೆಯನ್ನು ಖಾಯಂಗೊಳಿಸುವುದೂ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಇಂದು ಕರ್ನಾಟಕ ರಾಜ್ಯ ವಿಶೇಷಚೇತನರ ಹಾಗೂ ವಿವಿಧೋದ್ಧೇಶ ಮತ್ತು ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. ಸೇವಾ ಭದ್ರತೆ ಕಲ್ಪಿಸಬೇಕು. …
Read More »ಸುವರ್ಣ ಸೌಧಕ್ಕೆ ರೈತರ ಮುತ್ತಿಗೆ ಯತ್ನ
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧ ಬಳಿ ರೈತರು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ಸಮಸ್ಯೆ ಆಲಿಸಿದರು. ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಚನ್ನಮ್ಮ ವೃತ್ತದಿಂದ ಪಾದಯಾತ್ರೆ ಮೂಲಕ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸಂಜೆ 6 …
Read More »ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿದ ಹೆಚ್‌ಡಿಕೆ
ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿಂದು ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಹುಚ್ಚು ರೈತರ ಬಗ್ಗೆ ಇಲ್ಲ ಎಂದು ಹೆಚ್‌ಡಿಕೆ …
Read More »ಕುಡಿಯುವ ನೀರಿಗಾಗಿ ಜಿ.ಪಂ.ಗಳಿಗೆ ಪ್ರತ್ಯೇಕ ಅನುದಾನ: ಪ್ರಿಯಾಂಕ್ ಖರ್ಗೆ
ಬೆಳಗಾವಿ/ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂತರ್ಜಲಮಟ್ಟ ಕುಸಿತಗೊಂಡಿದೆ. ಈ ಕುರಿತಾಗಿ ಅಧ್ಯಯನ ಮಾಡಿ ಸೂಕ್ತ ಶಿಫಾರಸು ಮಾಡಲು ತಜ್ಞರನ್ನು ಒಳಗೊಂಡ ವಾಟರ್ ಆಡಿಟ್ ಕಮಿಟಿ ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಗೆ ತಿಳಿಸಿದರು. ಇಂದು ಬರ ವಿಷಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರಕಾರವು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ. ಎಲ್ಲ ಜಿಲ್ಲಾ …
Read More »ಆರ್ಥಿಕ ಹೊರೆ ಹಿನ್ನೆಲೆ: ಕೃಷಿ ಪಂಪ್ ಸೆಟ್‌ಗಳ ಮೂಲಸೌಕರ್ಯ ವೆಚ್ಚ ಭರಿಸುವ ಪ್ರಸ್ತಾವನೆ ಮುಂದೂಡಿದ ಸಂಪುಟ ಸಭೆ
ಬೆಳಗಾವಿ: ಕೃಷಿ ಪಂಪ್ ಸೆಟ್‌ಗಳಿಗೆ ಮೂಲಸೌಕರ್ಯ ಒದಗಿಸುವ ವೆಚ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಪರಿಷ್ಕರಿಸುವ ಪ್ರಸ್ತಾವನೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಈ ಪ್ರಸ್ತಾವನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿಂದೆ ಕೃಷಿ ಪಂಪ್ ಸೆಟ್‌ಗಳಿಗೆ ಮೂಲಸೌಕರ್ಯ ಕಲ್ಪಿಸಲು, ವೆಚ್ಚವನ್ನು ರೈತರೇ ಭರಿಸಬೇಕು …
Read More »