ಬೆಳಗಾವಿ: ನಗರದಲ್ಲಿ ಮೂರು ದಿನ ಕಾಲ ಹಮ್ಮಿಕೊಂಡಿರುವ 64ನೇ ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ವೀಕೆಂಡ್ ಇರುವ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಜನ ಆಗಮಿಸಿ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡರು. ಹೌದು, ಬೆಳಗಾವಿ ಹ್ಯೂಮ್ ಪಾರ್ಕ್ನಲ್ಲಿ ಜಿಪಂ, ತೋಟಗಾರಿಕೆ ಇಲಾಖೆ, ಕೃಷಿ , ಗ್ರಾಮೀಣ ಮತ್ತು ಸಣ್ಣ ಉದ್ಯಮ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ 64ನೇ ಫಲಪುಷ್ಪ ಪ್ರದರ್ಶನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ವಿವಿಧ ಹೂವುಗಳಿಂದ ತಯಾರಿಸಿದ್ದ …
Read More »Daily Archives: ಡಿಸೆಂಬರ್ 10, 2023
ಬೆಳಗಾವಿ ಜಿಲ್ಲೆ ವಿಭಜನೆಗೆ ಹೆಚ್ಚಿದ ಕೂಗು; ನಾಳೆ ಅಥಣಿ ಬಂದ್, ಚಿಕ್ಕೋಡಿಯಲ್ಲೂ ಬೃಹತ್ ಪ್ರತಿಭಟನೆ
ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ವಿಭಜನೆ ಮಾಡುವಂತೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಬೆಳಗಾವಿ ಜಿಲ್ಲೆ ವಿಭಜಿಸಿ 1997ರಲ್ಲಿ ಚಿಕ್ಕೋಡಿಯನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಲು ಸರ್ಕಾರ ನಿರ್ಧರಿಸಿತ್ತು. ಜಿಲ್ಲೆ ವಿಭಜಿಸಿದರೆ ಮರಾಠಿಗರ ಪ್ರಾಬಲ್ಯ ಹೆಚ್ಚಾಗುತ್ತದೆ ಎಂದು ಕನ್ನಡ ಪರ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಹೊಸ ಜಿಲ್ಲೆಯನ್ನಾಗಿ ಘೋಷಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಸರಿದಿತ್ತು. ಆದರೆ ಇತ್ತೀಚೆಗೆ ಮತ್ತೆ ಗೋಕಾಕ್ ಮತ್ತು ಅಥಣಿಯನ್ನು ನೂತನ ಜಿಲ್ಲೆಯಾಗಿ ರಚನೆ ಮಾಡಬೇಕೆಂಬ ಕೂಗು …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಡಿಸೆಂಬರ್ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
ಚಿಕ್ಕೋಡಿ (ಬೆಳಗಾವಿ) : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು …
Read More »