ಬಾಗಲಕೋಟೆ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿಯನ್ನು ದೆಹಲಿ ಪೊಲೀಸರು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. 30 ವರ್ಷದ ಸಾಯಿಕೃಷ್ಣ ಜಗಲಿ ವಶಕ್ಕೆ ಪಡೆಯಲಾದ ಟೆಕ್ಕಿ ಆಗಿದ್ದಾರೆ. ಸದ್ಯ ದೆಹಲಿ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ಧಾರೆ. ಪ್ರಕರಣದ ಬಗ್ಗೆ ಎಸ್ಪಿ ಹೇಳಿದ್ದಿಷ್ಟು: ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ದೆಹಲಿಯಿಂದ ನಾಲ್ಕು ಜನ …
Read More »Daily Archives: ಡಿಸೆಂಬರ್ 21, 2023
ಜನವರಿ 26ರಂದು ಫ್ಯಾನ್ಸ್ಗಾಗಿ ಏನೋ ಪ್ಲಾನ್ ಮಾಡ್ತಾರಂತೆ ರಕ್ಷಿತ್ ಶೆಟ್ಟಿ
ಜನವರಿ 26ರಂದು ‘ಬ್ಯಾಚುಲರ್ ಪಾರ್ಟಿ’ ಚಿತ್ರತಂಡದಿಂದ ಹೊಸ ಅಪ್ಡೇಟ್ ಹೊರಬೀಳಲಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋ ಮಾಹಿತಿ ನೀಡಿದೆ. 7 ವರ್ಷಗಳ ಹಿಂದೆ ಕನ್ನಡದಲ್ಲಿ ಬ್ಲಾಕ್ಬಸ್ಟರ್ ಹಿಟ್ ಪಡೆದು, ಇತರೆ ಭಾಷೆಗಳಿಗೂ ಡಬ್ ಆಗಿ ಮೆಚ್ಚುಗೆ ಪಡೆದ ಸಿನಿಮಾ ‘ಕಿರಿಕ್ ಪಾರ್ಟಿ’. ಈ ಭರ್ಜರಿ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರುವ ಆ …
Read More »ಶಿವಮೊಗ್ಗ: ಟಿಸಿ ನೀಡಲು ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ
ಶಿವಮೊಗ್ಗ: ವಿದ್ಯುತ್ ಗುತ್ತಿಗೆದಾರನಿಗೆ ಟಿಸಿ ನೀಡಲು 20 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಮೆಸ್ಕಾಂನ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಆನವಟ್ಟಿಯಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ರಮೇಶ್ ಬಂಧಿತ ಅಧಿಕಾರಿ. ವಿದ್ಯುತ್ ಗುತ್ತಿಗೆದಾರ ಪ್ರದೀಪ್ ಎಂಬವರು ಬೆಟ್ಟದಕೊರ್ಲಿ ನಿವಾಸಿಯಾಗಿದ್ದು, ವಿದ್ಯುತ್ ಗುತ್ತಿಗೆ ಕೆಲಸವನ್ನು ಕಳೆದ 6 ವರ್ಷಗಳಿಂದ ಮಾಡುತ್ತಿದ್ದಾರೆ. ಇವರು ಕ್ಲಾಸ್ -1 ಗುತ್ತಿಗೆದಾರರು. ಕಪ್ಪುಗುಡ್ಡೆ ಗ್ರಾಮ …
Read More »15 ವರ್ಷಗಳ ಹಿಂದೆಯೇ ಆರಂಭಗೊಂಡಿತ್ತು ‘ಸಲಾರ್’ ಪಯಣ: ಇಂಟ್ರೆಸ್ಟಿಂಗ್ ವಿಚಾರಗಳು
Salaar: ಮುಂದಿನ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿರುವ ‘ಸಲಾರ್’ ಸಿನಿಮಾದ ಆಸಕ್ತಿದಾಯಕ ವಿಚಾರಗಳು ಇಲ್ಲಿವೆ. ಬಹುನಿರೀಕ್ಷಿತ ‘ಸಲಾರ್’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಭಾಸ್ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಸಿನಿಮಾ ವೀಕ್ಷಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಭಾರಿ ನಿರೀಕ್ಷೆಗಳ ನಡುವೆ ಸಿನಿಮಾ ವಿಶ್ವದಾದ್ಯಂತ ನಾಳೆ ಮುಂಜಾನೆ ಬಿಡುಗಡೆಯಾಗುತ್ತಿದೆ. ಬಿಗ್ ಪ್ರಾಜೆಕ್ಟ್ ಕುರಿತ ಕೆಲವು ಇಂಟ್ರೆಸ್ಟಿಂಗ್ ವಿಚಾರಗಳನ್ನು ತಿಳಿದುಕೊಳ್ಳೋಣ. 15 ವರ್ಷ ಹಿಂದಿನ ಯೋಚನೆ: ಸಲಾರ್ ಚಿತ್ರಕಥೆಯನ್ನು ಸುಮಾರು 15 ವರ್ಷಗಳ ಹಿಂದೆಯೇ ನಿರ್ಧರಿಸಲಾಗಿತ್ತು. ಆ ಸಂದರ್ಭದಲ್ಲಿ …
Read More »ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು/ನವದೆಹಲಿ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಮಾಜಿ ಸಿಎಂ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸಂಸತ್ ಭವನದ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೂಡಿ ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ …
Read More »ಕುಸ್ತಿಗೆ ಕಣ್ಣೀರ ವಿದಾಯ ಹೇಳಿದ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್
ಕ್ರೀಡಾಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಪ್ರಕರಣ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಬೆಂಬಲಿತ ಸಂಜಯ್ ಕುಮಾರ್ ಸಿಂಗ್ ಡಬ್ಲ್ಯುಎಫ್ಐಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ನಿವೃತ್ತಿ ಘೋಷಿಸಿದ್ದಾರೆ. ನವದೆಹಲಿ: 2016ರರಿಯೋಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸಾಕ್ಷಿ ಮಲಿಕ್ ಇಂದು ಕುಸ್ತಿಗೆ ನಿವೃತ್ತಿ ಘೋಷಿಸಿದರು. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ …
Read More »ಯುವನಿಧಿ ಯೋಜನೆ ನೋಂದಣಿಗೆ ಡಿ.26 ರಂದು ಚಾಲನೆ; ಅರ್ಹರು ಯಾರು? ಅರ್ಜಿ ಸಲ್ಲಿಸುವುದೇಗೆ?
ಬೆಂಗಳೂರು: ಕಾಂಗ್ರೆಸ್ ಘೋಷಿತ ‘ಪಂಚ ಗ್ಯಾರಂಟಿ’ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ನೋಂದಣಿ ಪ್ರಕ್ರಿಯೆ ಇದೇ ಡಿಸೆಂಬರ್ 26ರಂದು ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ನಿರುದ್ಯೋಗಿ ಪದವೀಧರರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ರೂಪಿಸಿರುವ ಯುವನಿಧಿ ಯೋಜನೆ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 …
Read More »ಕೋವಿಡ್ ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದ ಸಿಎಂ
ಬೆಂಗಳೂರು: ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಔಷಧ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲ ವಿಷಯವನ್ನೂ ಸಮಿತಿ ನಿರ್ಧರಿಸಲಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೇ ಉಪಸಮಿತಿ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಿದ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಆರೋಗ್ಯ, ವೈದ್ಯಕೀಯ, ಗೃಹ, …
Read More »ಪ್ರಮುಖ3 ಆರೋಪಿಗಳನ್ನ ಕಸ್ಟಡಿಗೆ ತೆಗೆದುಕೊಂಡ ಸಿಐಡಿ ತಂಡ
ಬೆಳಗಾವಿ: ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ. ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ …
Read More »ಮನೆ ಹಕ್ಕುಪತ್ರ ನೀಡುವಂತೆ ಬೈಲಹೊಂಗಲದ ನಿವಾಸಿಗಳು ಎಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಬೆಳಗಾವಿ: ಮನೆಯ ಹಕ್ಕುಪತ್ರಕ್ಕಾಗಿಬೈಲಹೊಂಗಲ ಪಟ್ಟಣದ ಹರಳಯ್ಯ ಕಾಲೋನಿ ನಿವಾಸಿಗಳು ಕಳೆದ 17 ದಿನಗಳಿಂದ ಬೈಲಹೊಂಗಲ ಸಹಾಯಕ ಆಯುಕ್ತಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳೆದ 50 ವರ್ಷಗಳಿಂದ ಹರಳಯ್ಯ ಕಾಲೋನಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದು, ಆದರೆ ಈವರೆಗೂ ಜಿಲ್ಲಾಡಳಿತ, ಕೊಳಗೇರಿ ಅಭಿವೃದ್ಧಿ ಮಂಡಳಿ ಹಕ್ಕು ಪತ್ರ ವಿತರಿಸದೇ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಧರಣಿಗೆ ಕುಳಿತ್ತಿದ್ದಾರೆ. ಈ ಕಾಲೋನಿಯಲ್ಲಿ ಮನೆ ಕಟ್ಟಿಕೊಂಡಿರುವ ಸುಮಾರು 66 ಕುಟುಂಬಗಳು ಮನೆಯ ಹಕ್ಕಪತ್ರಕ್ಕಾಗಿ ಅಲೆದಾಡುತ್ತಿದ್ದಾರೆ. …
Read More »